ಯೆಶಾಯ 59:4 - ಕನ್ನಡ ಸತ್ಯವೇದವು J.V. (BSI)4 [ಇವರಲ್ಲಿ] ಯಾರೂ ನ್ಯಾಯವಾಗಿ ನ್ಯಾಯಾಸ್ಥಾನಕ್ಕೆ ಹೋಗುವದಿಲ್ಲ, ಯಾರೂ ಸತ್ಯವಾಗಿ ವಾದಿಸುವದಿಲ್ಲ; ಇವರು ಶೂನ್ಯವಾಗಿರುವದನ್ನು ನಂಬಿಕೊಂಡು ಅಬದ್ಧವನ್ನಾಡುತ್ತಾರೆ; ಹಿಂಸೆಯನ್ನು ಗರ್ಭಧರಿಸಿ ಶ್ರಮೆಯನ್ನು ಹೆರುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಇವರಲ್ಲಿ ಯಾರೂ ನ್ಯಾಯಸ್ಥಾನಕ್ಕೆ ನ್ಯಾಯವಾಗಿ ಹೋಗುವುದಿಲ್ಲ, ಯಾರೂ ಸತ್ಯವಾಗಿ ವಾದಿಸುವುದಿಲ್ಲ; ಇವರು ಶೂನ್ಯವಾಗಿರುವುದನ್ನು ನಂಬಿಕೊಂಡು ಸುಳ್ಳನ್ನಾಡುತ್ತಾರೆ; ಹಿಂಸೆಯನ್ನು ಗರ್ಭಧರಿಸಿ ಶ್ರಮೆಯನ್ನು ಹೆರುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ನ್ಯಾಯಸ್ಥಾನದಲ್ಲಿ ನ್ಯಾಯಾನುಸಾರ ವಾದಿಸುವವನು ಯಾರೂ ಇಲ್ಲ; ಸತ್ಯಾನುಸಾರ ತೀರ್ಪುಕೊಡುವವನು ಯಾರೂ ಇಲ್ಲ; ನೀವು ಶೂನ್ಯವಾದುದ್ದನ್ನೇ ನಂಬುತ್ತೀರಿ, ಅಬದ್ಧವಾದುದನ್ನೇ ಆಡುತ್ತೀರಿ, ಕೇಡನ್ನು ಬಸಿರಿಸಿ ಅಕ್ರಮವನ್ನು ಹೆರುತ್ತೀರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ನೆರೆಯವನ ಬಗ್ಗೆ ಯಾರೂ ಸತ್ಯವನ್ನಾಡುವದಿಲ್ಲ. ಜನರು ನ್ಯಾಯಾಲಯಗಳಲ್ಲಿ ಪರಸ್ಪರ ವ್ಯಾಜ್ಯ ಮಾಡುವರು. ತಾವು ಗೆಲ್ಲಬೇಕೆಂಬ ಉದ್ದೇಶದಿಂದ ಸುಳ್ಳುಸಾಕ್ಷಿಯ ಮೇಲೆ ಅವಲಂಬಿಸುವರು. ಅವರು ಒಬ್ಬರ ಮೇಲೊಬ್ಬರು ಸುಳ್ಳು ಹೇಳುತ್ತಾರೆ; ಅವರು ಕೇಡಿನಿಂದ ತುಂಬಿದವರಾಗಿದ್ದು ಕೇಡನ್ನೇ ಹೆರುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ನೀತಿಗೋಸ್ಕರ ಕರೆಯುವವನು ಯಾವನೂ ಇಲ್ಲ, ಸತ್ಯಕ್ಕೋಸ್ಕರ ನ್ಯಾಯ ವಿಚಾರಿಸುವವನು ಒಬ್ಬನೂ ಇಲ್ಲ. ವ್ಯರ್ಥತ್ವದಲ್ಲಿ ವಿಶ್ವಾಸ ಇಡುತ್ತಾರೆ. ಸುಳ್ಳನ್ನು ಮಾತನಾಡುತ್ತಾರೆ. ಕೇಡನ್ನು ಗರ್ಭಧರಿಸಿ, ಅಕ್ರಮವನ್ನು ಹೆರುತ್ತಾರೆ. ಅಧ್ಯಾಯವನ್ನು ನೋಡಿ |