Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 59:5 - ಕನ್ನಡ ಸತ್ಯವೇದವು J.V. (BSI)

5 ಹಾವಿನಂತೆ [ಕೇಡಿನ] ಮೊಟ್ಟೆಗಳನ್ನು ಮರಿಮಾಡುತ್ತಾರೆ, ಜಾಡರ ಹುಳದಂತೆ ಬಲೆಯನ್ನು ನೇಯುತ್ತಾರೆ; ಆ ಮೊಟ್ಟೆಗಳನ್ನು ತಿನ್ನುವವನಿಗೆ ಮರಣವಾಗುವದು, ಒಡೆದುಬಿಡುವವನಿಗೆ ವಿಷದ ಮರಿಹೊರಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಹಾವಿನಂತೆ ಕೇಡಿನ ಮೊಟ್ಟೆಗಳನ್ನು ಮರಿಮಾಡುತ್ತಾರೆ, ಜೇಡರ ಹುಳದಂತೆ ಬಲೆಯನ್ನು ನೇಯುತ್ತಾರೆ; ಆ ಮೊಟ್ಟೆಗಳನ್ನು ತಿನ್ನುವವನಿಗೆ ಮರಣ ಉಂಟಾಗುವುದು, ಅದನ್ನು ಒಡೆದುಬಿಡುವುದರಿಂದ ವಿಷದ ಮರಿ ಹೊರಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಹಾವಿನಂತೆ ಮೊಟ್ಟೆಗಳನ್ನು ಮರಿ ಮಾಡುತ್ತೀರಿ, ಜೇಡರ ಹುಳುವಿನಂತೆ ಬಲೆಯನ್ನು ನೇಯುತ್ತೀರಿ. ಆ ಮೊಟ್ಟೆಗಳನ್ನು ತಿನ್ನುವವನು ಸಾಯುತ್ತಾನೆ, ಅವನ್ನು ಹೊಡೆದುಬಿಡುವವನು ವಿಷದ ಮರಿಗಳು ಹೊರಬರುವಂತೆ ಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ವಿಷದ ಹಾವಿನ ಮೊಟ್ಟೆಯಿಂದ ವಿಷದ ಹಾವಿನ ಮರಿಗಳು ಹೊರಬರುವಂತೆ ಅವರ ದುಷ್ಟತನವು ಹೊರಬರುವದು. ಆ ಮೊಟ್ಟೆಯನ್ನು ನೀವು ತಿಂದರೆ ಸಾಯುವಿರಿ. ಆ ಮೊಟ್ಟೆಯನ್ನು ಒಡೆದರೆ ವಿಷದ ಹಾವು ಹೊರಬರುವದು. ಜನರು ಹೇಳುವ ಸುಳ್ಳು, ಜೇಡರ ಬಲೆಯಂತಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಹಾವಿನಂತೆ ಮೊಟ್ಟೆಗಳನ್ನು ಮರಿಮಾಡುತ್ತಾರೆ. ಜೇಡರ ಹುಳದಂತೆ ಬಲೆಯನ್ನು ನೇಯುತ್ತಾರೆ. ಅದರ ಮೊಟ್ಟೆಗಳನ್ನು ತಿನ್ನುವವನು ಸಾಯುವನು. ಒಡೆದುಬಿಡುವವನಿಗೆ ವಿಷದ ಮರಿ ಹೊರಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 59:5
6 ತಿಳಿವುಗಳ ಹೋಲಿಕೆ  

ಆದರೆ ಅವನು ಫರಿಸಾಯರಲ್ಲಿಯೂ ಸದ್ದುಕಾಯರಲ್ಲಿಯೂ ಅನೇಕರು ತನ್ನಿಂದ ಸ್ನಾನಮಾಡಿಸಿಕೊಳ್ಳುವದಕ್ಕೆ ಬರುವದನ್ನು ಕಂಡು ಅವರಿಗೆ - ಎಲೈ ಸರ್ಪಜಾತಿಯವರೇ, ಮುಂದೆ ಕಾಣಬರುವ ದೈವಕೋಪದಿಂದ ತಪ್ಪಿಸಿಕೊಳ್ಳುವದಕ್ಕೆ ನಿಮಗೆ ಉಪದೇಶ ಮಾಡಿದವರಾರು?


ಸರ್ಪಜಾತಿಯವರೇ, ನೀವು ಕೆಟ್ಟವರಾಗಿರಲಾಗಿ ಒಳ್ಳೆಯ ಮಾತುಗಳನ್ನಾಡುವದಕ್ಕೆ ನಿಮ್ಮಿಂದ ಹೇಗಾದೀತು? ಹೃದಯದಲ್ಲಿ ತುಂಬಿರುವದೇ ಬಾಯಲ್ಲಿ ಹೊರಡುವದು.


ಎಲೈ, ಎಲ್ಲಾ ಫಿಲಿಷ್ಟಿಯರೇ, ನಿಮ್ಮನ್ನು ಹೊಡೆದ ಕೋಲು ಮುರಿದುಹೋಯಿತೆಂದು ಉಲ್ಲಾಸಗೊಳ್ಳದಿರಿ; ಹಾವಿನ ಬೀಜದಿಂದ ಮಹಾ ನಾಗವುಂಟಾಗುವದು, ಆ ಬೀಜದ ಸಂತತಿಯು ಹಾರುವ ಅಗ್ನಿಮಯಸರ್ಪವೇ.


ಆಮೇಲೆ ಹಾವಿನಂತೆ ಕಚ್ಚುತ್ತದೆ, ಹೌದು, ನಾಗದ ಹಾಗೆ ಕಡಿಯುತ್ತದೆ.


ಅವನ ಭರವಸವು ಭಂಗವಾಗುವದು, ಅವನ ಆಶ್ರಯವು ಜಾಡಹುಳದ ಮನೆಯಂತಿರುವದು.


ಹಾರುವ ಹಾವು ಅಲ್ಲಿ ಗೂಡುಮಾಡಿಕೊಂಡು ಮೊಟ್ಟೆಯಿಕ್ಕಿ ಮರಿಮಾಡಿ ತನ್ನ ಮರೆಯಲ್ಲಿ ಕೂಡಿಸಿಕೊಳ್ಳುವದು; ಹೌದು, ಹದ್ದುಗಳು ಅಲ್ಲಿ ಜೋಡಿಜೋಡಿಯಾಗಿ ಸೇರಿಕೊಳ್ಳುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು