ಯೆಶಾಯ 59:9 - ಕನ್ನಡ ಸತ್ಯವೇದವು J.V. (BSI)9 ಆದಕಾರಣ [ಯೆಹೋವನ] ನ್ಯಾಯನಿರ್ಣಯವು ನಮಗೆ ದೂರವಾಗಿದೆ. [ಆತನ] ರಕ್ಷಣಧರ್ಮದ ಕಾರ್ಯವು ನಮಗೆ ಸಂಧಿಸುವದಿಲ್ಲ; ಬೆಳಕನ್ನು ಎದುರುನೋಡುತ್ತಿರುವ ನಮ್ಮನ್ನು ಕತ್ತಲೆಯೇ ಆವರಿಸಿದೆ, ಜ್ಯೋತಿಯನ್ನು ನಿರೀಕ್ಷಿಸುತ್ತಿರುವ ನಾವು ಅಂಧಕಾರದಲ್ಲೇ ನಡೆಯುತ್ತೇವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಆದಕಾರಣ ಯೆಹೋವನ ನ್ಯಾಯನಿರ್ಣಯವು ನಮಗೆ ದೂರವಾಗಿದೆ. ಆತನ ರಕ್ಷಣಾಧರ್ಮದ ಕಾರ್ಯವು ನಮಗೆ ಲಭಿಸುವುದಿಲ್ಲ; ಬೆಳಕನ್ನು ಎದುರುನೋಡುತ್ತಿರುವ ನಮ್ಮನ್ನು ಕತ್ತಲೆಯೇ ಆವರಿಸಿದೆ, ಜ್ಯೋತಿಯನ್ನು ನಿರೀಕ್ಷಿಸುತ್ತಿರುವ ನಾವು ಅಂಧಕಾರದಲ್ಲೇ ನಡೆಯುತ್ತೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಆಗ ಜನರು ಹೀಗೆನ್ನುತ್ತಾರೆ : ಈ ಕಾರಣದಿಂದಲೇ ನ್ಯಾಯನಿರ್ಣಯವು ನಮ್ಮಿಂದ ದೂರವಾಗಿದೆ, ಸದ್ಧರ್ಮವು ನಮಗೆ ದೊರಕದೆ ಇದೆ. ಬೆಳಕಿಗಾಗಿ ಕಾದಿರುವ ನಮ್ಮನ್ನು ಕತ್ತಲು ಆವರಿಸಿದೆ. ಜ್ಯೋತಿಯನ್ನು ನಿರೀಕ್ಷಿಸುತ್ತಿರುವ ನಮ್ಮನ್ನು ಅಂಧಕಾರವೇ ಬೆನ್ನಟ್ಟುತ್ತಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಎಲ್ಲಾ ನ್ಯಾಯನೀತಿಗಳು ಇಲ್ಲವಾಗಿವೆ. ನಮ್ಮ ಬಳಿಯಲ್ಲಿ ಅಂಧಕಾರವು ಇರುವದರಿಂದ ನಾವು ಬೆಳಕಿಗಾಗಿ ಕಾಯಬೇಕಾಗಿದೆ. ಪ್ರಕಾಶಮಾನವಾದ ಬೆಳಕಿಗಾಗಿ ಆಶಿಸುತ್ತಿರುವಾಗ ನಮಗೆ ಸಿಕ್ಕಿದ್ದು ಕೇವಲ ಕತ್ತಲೆಯೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಆದಕಾರಣ ನ್ಯಾಯ ನಿರ್ಣಯವು ನಮಗೆ ದೂರವಾಗಿದೆ. ನೀತಿಯು ನಮ್ಮನ್ನು ತಲುಪುವುದಿಲ್ಲ, ಬೆಳಕನ್ನು ಎದುರು ನೋಡುತ್ತಿರುವ ನಮ್ಮನ್ನು ಕತ್ತಲೆಯೇ ಆವರಿಸಿದೆ; ಜ್ಯೋತಿಯನ್ನು ನಿರೀಕ್ಷಿಸುತ್ತಿರುವ ನಾವು ಅಂಧಕಾರದಲ್ಲಿಯೇ ನಡೆಯುತ್ತೇವೆ. ಅಧ್ಯಾಯವನ್ನು ನೋಡಿ |