Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 6:12 - ಕನ್ನಡ ಸತ್ಯವೇದವು J.V. (BSI)

12 ದೇಶದಲ್ಲಿ ಹಾಳು ಹೆಚ್ಚಿ ಪಟ್ಟಣಗಳು ಜನರಿಲ್ಲದೆ ಮನೆಗಳು ನಿವಾಸಿಗಳಿಲ್ಲದೆ ಧ್ವಂಸವಾಗಿ ಭೂವಿುಯು ತೀರಾ ಹಾಳಾಗುವ ತನಕ ಹೀಗಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಯೆಹೋವನು ಮನುಷ್ಯರನ್ನು ದೂರಮಾಡುವವರೆಗೂ, ಅವರನ್ನು ದೇಶದ ಮಧ್ಯದಿಂದ ತೊಲಗಿಸಿಬಿಡುವವರೆಗೂ ಅದು ಹೀಗೆ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 “ನಾನು ಜನರನ್ನು ದೂರ ತೊಲಗಿಸಿ, ನಾಡನ್ನು ನಾಶಗೊಳಿಸಿ, ನಗರಗಳನ್ನು ನಿರ್ಜನಗೊಳಿಸಿ, ಮನೆಗಳನ್ನು ಬರಿದಾಗಿಸಿ, ಧರೆಯನ್ನು ಪೂರ್ತಿಯಾಗಿ ನಾಶಗೊಳಿಸುವ ತನಕ ಪರಿಸ್ಥಿತಿ ಹೀಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಜನರು ಬಹುದೂರ ಹೋಗುವಂತೆ ಯೆಹೋವನು ಮಾಡುವನು. ದೇಶದೊಳಗೆ ನಿರ್ಜನವಾದ ಸ್ಥಳಗಳು ಬೇಕಾದಷ್ಟು ಇರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಯೆಹೋವ ದೇವರಾದ ನಾನು ಮನುಷ್ಯರನ್ನು ದೂರ ಮಾಡುವವರೆಗೂ, ಅವರನ್ನು ದೇಶದ ಮಧ್ಯದಿಂದ ತೊಲಗಿಸಿಬಿಡುವವರೆಗೂ ಅದು ಹೀಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 6:12
15 ತಿಳಿವುಗಳ ಹೋಲಿಕೆ  

ಪಟ್ಟಣದವರೆಲ್ಲರೂ ಸವಾರರ ಮತ್ತು ಬಿಲ್ಲುಗಾರರ ಆರ್ಭಟಕ್ಕೆ ಹೆದರಿ ಓಡುತ್ತಾರೆ; ಇತ್ತ ಪೊದೆಗಳಲ್ಲಿ ಅವಿತುಕೊಳ್ಳುತ್ತಾರೆ, ಅತ್ತ ಬಂಡೆಗಳನ್ನು ಹತ್ತುತ್ತಾರೆ; ಪ್ರತಿಯೊಂದು ಪಟ್ಟಣವು ಯಾವ ನಿವಾಸಿಯೂ ಇಲ್ಲದೆ ನಿರ್ಜನವಾಗುತ್ತದೆ.


ಭೂಮಂಡಲದ ಚತುರ್ದಿಕ್ಕುಗಳಲ್ಲಿರುವ ಎಲ್ಲಾ ಜನಾಂಗಗಳಲ್ಲಿಯೂ ಯೆಹೋವನು ನಿಮ್ಮನ್ನು ಚದರಿಸುವನು; ಅಲ್ಲಿ ನಿಮಗಾದರೂ ನಿಮ್ಮ ಪಿತೃಗಳಿಗಾದರೂ ಗೊತ್ತಿಲ್ಲದ ಮರದ ದೇವರುಗಳನ್ನೂ ಕಲ್ಲಿನ ದೇವರುಗಳನ್ನೂ ಪೂಜಿಸುವಿರಿ.


ನೀನು ನಮ್ಮನ್ನು ಸಂಪೂರ್ಣವಾಗಿ ಮರೆತಿರುವದೇಕೆ? ಏಕೆ ನಮ್ಮನ್ನು ಇಷ್ಟು ಕಾಲ ಕೈಬಿಟ್ಟಿದ್ದೀ.


ಹಿಜ್ಕೀಯನ ಮಗನೂ ಯೆಹೂದದ ಅರಸನೂ ಆದ ಮನಸ್ಸೆಯು ಯೆರೂಸಲೇವಿುನಲ್ಲಿ ನಡಿಸಿದ್ದಕ್ಕೆ ಪ್ರತಿಫಲವಾಗಿ ನಾನು ಅವರನ್ನು ಲೋಕದ ಸಮಸ್ತರಾಜ್ಯಗಳಿಗೆ ಭಯಾಸ್ಪದವಾಗುವಂತೆ ಮಾಡುವೆನು.


ನಾನು ನನ್ನ ಮನೆಯನ್ನು ತೊರೆದು ನನ್ನ ಸ್ವಾಸ್ತ್ಯವನ್ನು ನಿರಾಕರಿಸಿದ್ದೇನೆ; ನನ್ನ ಪ್ರಾಣಪ್ರಿಯಳನ್ನು ಅವಳ ಶತ್ರುಗಳ ಕೈಗೆ ಒಪ್ಪಿಸಿದ್ದೇನೆ.


ಯೆಹೋವನೇ, ನಿನ್ನ ಜನವನ್ನು ಹೆಚ್ಚಿಸಿದ್ದಿ, ಹೌದು ನಿನ್ನ ಪ್ರಜೆಯನ್ನು ವೃದ್ಧಿಗೊಳಿಸಿದ್ದಿ; ನೀನು ದೇಶದ ಮೇರೆಗಳನ್ನೆಲ್ಲಾ ವಿಸ್ತರಿಸಿ ಮಹಿಮೆಗೊಂಡಿದ್ದಿ.


ಅವನು ಇವರನ್ನು ಅಲ್ಲಿಯೇ ಕೊಲ್ಲಿಸಿದನು. ಹೀಗೆ ಯೆಹೂದ್ಯರು ಸೆರೆಯವರಾಗಿ ತಮ್ಮ ದೇಶವನ್ನು ಬಿಟ್ಟು ಹೋಗಬೇಕಾಯಿತು.


ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಪಟ್ಟಣದಲ್ಲಿ ಉಳಿದವರನ್ನೂ ಮೊದಲೇ ಬಾಬೆಲಿನ ಅರಸನ ಮರೆಹೊಕ್ಕವರನ್ನೂ ಬೇರೆ ಎಲ್ಲಾ ಜನರನ್ನೂ ಸೆರೆಯೊಯ್ದನು.


ಯಾಕಂದರೆ ಇಸ್ರಾಯೇಲ್ಯರನ್ನು ತಳ್ಳುವದರಿಂದ ಲೋಕವು ದೇವರ ಸಂಗಡ ಸಮಾಧಾನವಾಗುವದಕ್ಕೆ ಮಾರ್ಗವಾದ ಮೇಲೆ ಅವರನ್ನು ಸೇರಿಸಿಕೊಳ್ಳುವದರಿಂದ ಏನಾಗುವದು? ಸತ್ತವರು ಜೀವಿತರಾಗಿ ಎದ್ದುಬಂದಂತಾಗುವದಲ್ಲವೇ.


ನನ್ನ ಕಿವಿಯಲ್ಲಿ ಸೇನಾಧೀಶ್ವರನಾದ ಯೆಹೋವನ ಒಂದು ಮಾತು ಬಿದ್ದಿತು, ನೋಡಿರಿ - ಸೊಗಸಾದ ಅನೇಕ ದೊಡ್ಡ ಮನೆಗಳು ವಾಸಿಸುವವರೇ ಇಲ್ಲದೆ ಖಂಡಿತವಾಗಿ ಹಾಳಾಗುವವು.


ಮನುಷ್ಯರನ್ನು ಅಪರಂಜಿಗಿಂತಲೂ ಮಾನವರನ್ನು ಓಫೀರಿನ ಬಂಗಾರಕ್ಕಿಂತಲೂ ಅಪರೂಪವಾಗುವಂತೆ ಮಾಡುವೆನು.


ಅವನು ಇವರನ್ನು ಅಲ್ಲಿಯೇ ಕೊಲ್ಲಿಸಿದನು. ಹೀಗೆ ಯೆಹೂದ್ಯರು ಸೆರೆಯವರಾಗಿ ತಮ್ಮ ದೇಶವನ್ನು ಬಿಟ್ಟುಹೋಗಬೇಕಾಯಿತು.


ಜನಪಶುಗಳನ್ನೂ ಆಕಾಶದ ಪಕ್ಷಿಗಳನ್ನೂ ಸಮುದ್ರದ ಮೀನುಗಳನ್ನೂ ನಾಶಪಡಿಸುವೆನು; ವಿಗ್ರಹಗಳೆಂಬ ವಿಘ್ನಗಳನ್ನೂ ಅವುಗಳಿಗೆ ಎಡವುವ ದುಷ್ಟರನ್ನೂ ಸಂಹರಿಸುವೆನು; ಭೂವಿುಯ ಮೇಲಿಂದ ನರಸಂತಾನವನ್ನು ಕಿತ್ತುಹಾಕುವೆನು; ಇದು ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು