ಯೆಶಾಯ 6:2 - ಕನ್ನಡ ಸತ್ಯವೇದವು J.V. (BSI)2 ಆತನ ಸುತ್ತ ಸೆರಾಫಿಯರು ಇದ್ದರು; ಪ್ರತಿಯೊಬ್ಬನು ಆರಾರು ರೆಕ್ಕೆಯುಳ್ಳವನಾಗಿ ಎರಡರಿಂದ ತನ್ನ ಮುಖವನ್ನು, ಎರಡರಿಂದ ತನ್ನ ಕಾಲುಗಳನ್ನು ಮುಚ್ಚಿಕೊಂಡು ಎರಡನ್ನು ಬಡಿಯುತ್ತಾ ನೆಲಸೋಕದೆ ನಿಂತಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಆತನ ಸುತ್ತಲು ಸೆರಾಫಿಯರು ಇದ್ದರು. ಪ್ರತಿಯೊಬ್ಬನು ಆರಾರು ರೆಕ್ಕೆಯುಳ್ಳವನಾಗಿ, ಎರಡರಿಂದ ತನ್ನ ಮುಖವನ್ನು, ಎರಡರಿಂದ ತನ್ನ ಕಾಲುಗಳನ್ನು ಮುಚ್ಚಿಕೊಂಡು, ಇನ್ನೆರಡು ರೆಕ್ಕೆಗಳಿಂದ ಹಾರುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಅವರ ಸುತ್ತಲು ಸೆರಾಫಿಯರೆಂಬ ತೇಜಸ್ವಿಗಳು ಇದ್ದರು. ಪ್ರತಿಯೊಬ್ಬರಿಗೂ ಆರಾರು ರೆಕ್ಕೆಗಳಿದ್ದವು. ಎರಡು ರೆಕ್ಕೆಗಳಿಂದ ಅವರ ಮುಖ ಮುಚ್ಚಿತ್ತು. ಇನ್ನೆರಡು ರೆಕ್ಕೆಗಳಿಂದ ಅವರ ಪಾದಗಳು ಮುಚ್ಚಿದ್ದವು. ಮತ್ತೆರಡು ರೆಕ್ಕೆಗಳನ್ನು ಬಡಿಯುತ್ತಾ ನೆಲಸೋಕದೆ ನಿಂತಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಆರು ರೆಕ್ಕೆಗಳುಳ್ಳ ಸೆರಾಫಿಯರು ಯೆಹೋವನ ಸುತ್ತ್ತಲೂ ನಿಂತಿದ್ದರು. ಆ ದೇವದೂತರು ಎರಡು ರೆಕ್ಕೆಗಳಿಂದ ತಮ್ಮ ಮುಖಗಳನ್ನು ಮುಚ್ಚಿಕೊಂಡಿದ್ದರು; ಎರಡು ರೆಕ್ಕೆಗಳಿಂದ ತಮ್ಮ ಕಾಲುಗಳನ್ನು ಮುಚ್ಚಿಕೊಂಡಿದ್ದರು; ಉಳಿದ ಎರಡು ರೆಕ್ಕೆಗಳಿಂದ ಹಾರಾಡುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಅವರ ಮೇಲೆ ಸೆರಾಫಿಯರು ನಿಂತಿದ್ದರು. ಪ್ರತಿಯೊಬ್ಬನಿಗೂ ಆರು ರೆಕ್ಕೆಗಳಿದ್ದವು. ಎರಡರಿಂದ ತನ್ನ ಮುಖವನ್ನು, ಎರಡರಿಂದ ತನ್ನ ಕಾಲುಗಳನ್ನು ಮುಚ್ಚಿಕೊಂಡು ಇನ್ನೆರಡು ರೆಕ್ಕೆಗಳಿಂದ ಹಾರುತ್ತಿದ್ದರು. ಅಧ್ಯಾಯವನ್ನು ನೋಡಿ |