Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 6:4 - ಕನ್ನಡ ಸತ್ಯವೇದವು J.V. (BSI)

4 ಕೂಗುವವನ ಶಬ್ದಕ್ಕೆ ದ್ವಾರದ ಅಸ್ತಿವಾರವು ಕದಲಿತು; ಧೂಮವು ಮಂದಿರದಲ್ಲೆಲ್ಲಾ ತುಂಬಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಕೂಗುವವನ ಶಬ್ದಕ್ಕೆ ದ್ವಾರದ ಅಸ್ತಿವಾರವು ಕದಲಿದವು ಮತ್ತು ಧೂಮವು ಆಲಯದಲ್ಲೆಲ್ಲಾ ತುಂಬಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಆ ಶಬ್ದಕ್ಕೆ ದೇವಾಲಯದ ಅಸ್ತಿವಾರವೇ ಕಂಪಿಸಿತು. ಧೂಮವು ಆಲಯವನ್ನೆಲ್ಲ ತುಂಬಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಅವರ ಗಟ್ಟಿಯಾದ ಸ್ವರಕ್ಕೆ ಬಾಗಿಲಿನ ನಿಲುವುಗಳು ಅಲುಗಾಡುತ್ತಿದ್ದವು; ಆಲಯವು ಹೊಗೆಯಿಂದ ತುಂಬಿಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಕೂಗುವವನ ಸ್ವರಕ್ಕೆ ದ್ವಾರದ ನಿಲುವುಗಳು ಕದಲಿದವು; ಧೂಮವು ಆಲಯವನ್ನೆಲ್ಲ ತುಂಬಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 6:4
12 ತಿಳಿವುಗಳ ಹೋಲಿಕೆ  

ದೇವರ ತೇಜಸ್ಸಾನ್ನಿಧ್ಯದಿಂದಲೂ ಆತನ ಶಕ್ತಿಯಿಂದಲೂ ಉಂಟಾದ ಹೊಗೆಯಿಂದ ಪವಿತ್ರಸ್ಥಾನವು ತುಂಬಿದ ಕಾರಣ ಆ ಏಳು ಮಂದಿ ದೇವದೂತರ ಕೈಯಲ್ಲಿದ್ದ ಏಳು ಉಪದ್ರವಗಳು ತೀರುವ ತನಕ ಆ ಪವಿತ್ರಸ್ಥಾನದೊಳಗೆ ಪ್ರವೇಶಿಸುವದಕ್ಕೆ ಯಾರಿಂದಲೂ ಆಗಲಿಲ್ಲ.


ಆಗ ಪರಲೋಕದಲ್ಲಿರುವ ದೇವಾಲಯವು ತೆರೆಯಿತು; ಆತನ ಆಲಯದಲ್ಲಿ ಆತನ ಒಡಂಬಡಿಕೆಯ ಮಂಜೂಷವು ಕಾಣಿಸಿತು; ಇದಲ್ಲದೆ ವಿುಂಚುಗಳೂ ವಾಣಿಗಳೂ ಗುಡುಗುಗಳೂ ಭೂಕಂಪವೂ ದೊಡ್ಡ ಆನೆಕಲ್ಲಿನ ಮಳೆಯೂ ಉಂಟಾದವು.


ಆಗ ಕೆರೂಬಿಗಳ ರೆಕ್ಕೆಗಳ ಶಬ್ದವು ಸರ್ವಶಕ್ತನಾದ ದೇವರು ಮಾತಾಡುವ ಧ್ವನಿಯಷ್ಟು ಗಂಭೀರವಾಗಿ ಹೊರಗಣ ಪ್ರಾಕಾರದ ಪರ್ಯಂತವೂ ಕೇಳಿಸಿತು.


[ಮಂಜೂಷವನ್ನು ಒಳಗಿಟ್ಟ] ಯಾಜಕರು ದೇವಾಲಯದಿಂದ ಹೊರಗೆ ಬಂದಕೂಡಲೆ ಒಬ್ಬನೋ ಎಂಬಂತೆ ಸ್ವರವೆತ್ತಿ ಯೆಹೋವನನ್ನು ಕೀರ್ತಿಸುವದಕ್ಕಾಗಿ ತುತೂರಿ ಊದುವವರೂ ಗಾಯನ ಮಾಡುವವರೂ ಅಲ್ಲಿ ನಿಂತಿದ್ದರು. ತುತೂರಿ ತಾಳ ಮೊದಲಾದ ವಾದ್ಯಗಳ ಧ್ವನಿಯೂ ಯೆಹೋವನು ಒಳ್ಳೆಯವನು, ಆತನ ಕೃಪೆಯು ಶಾಶ್ವತವಾಗಿರುವದು ಎಂದು ಕೃತಜ್ಞತಾಸ್ತುತಿ ಮಾಡುವವರ ಸ್ವರವೂ ಕೇಳಿಸಿದೊಡನೆ ಮೇಘವು ಯೆಹೋವನ ಆಲಯದಲ್ಲಿ ತುಂಬಿಕೊಂಡಿತು.


ಆಗ ಮೇಘವು ದೇವದರ್ಶನದ ಗುಡಾರವನ್ನು ಮುಚ್ಚಿತು; ಯೆಹೋವನ ತೇಜಸ್ಸು ಗುಡಾರವನ್ನು ತುಂಬಿತು.


ಕರ್ತನು ಯಜ್ಞವೇದಿಯ ಪಕ್ಕದಲ್ಲಿ ನಿಂತಿರುವದನ್ನು ಕಂಡೆನು; ಆತನು ಹೀಗೆ ಅಪ್ಪಣೆಕೊಟ್ಟನು - ಹೊಸ್ತಿಲುಗಳು ಕದಲುವಂತೆ ಕಂಬಗಳ ಬೋದಿಗೆಗಳನ್ನು ಬಲವಾಗಿ ಹೊಡೆ; ಅವುಗಳನ್ನು ಒಡೆದುಬಿಟ್ಟು ಎಲ್ಲರ ತಲೆಯ ಮೇಲೆ ಬೀಳಿಸು; ಉಳಿದವರನ್ನು ಖಡ್ಗದಿಂದ ಸಂಹರಿಸುವೆನು; ಅವರಲ್ಲಿ ಯಾರೂ ಓಡಿಹೋಗರು, ಯಾರೂ ತಪ್ಪಿಸಿಕೊಳ್ಳರು.


ಆತನ ಮೂಗಿನಿಂದ ಹೊಗೆಯು ಬಂತು; ಆತನ ಬಾಯಿಂದ ಅಗ್ನಿಜ್ವಾಲೆ ಹೊರಟು ಸಿಕ್ಕಿದ್ದೆಲ್ಲವನ್ನು ದಹಿಸಿ ಕೆಂಡವನ್ನಾಗಿ ಮಾಡಿತು.


ಅವು ಮುಂದರಿಯುವಾಗ ಅವುಗಳ ರೆಕ್ಕೆಗಳ ಶಬ್ದವು ಜಲಪ್ರವಾಹದ ಘೋಷದಂತೆ, ಸರ್ವಶಕ್ತನ ಧ್ವನಿಯ ಹಾಗೆ, ಆರ್ಭಟಿಸುವ ಸೈನ್ಯದ ಕೋಲಾಹಲದೋಪಾದಿಯಲ್ಲಿ ನನಗೆ ಕೇಳಿಸಿತು; ಅವು ನಿಂತಾಗ ರೆಕ್ಕೆಗಳನ್ನು ಮುದುರಿಕೊಂಡವು.


ಗರ್ಭಗೃಹ, ಪ್ರಾಕಾರದಲ್ಲಿನ ದ್ವಾರಮಂಟಪಗಳು, ಹೊಸ್ತಲುಗಳು, ತೆರೆಯಲಾಗದ ಕಿಟಕಿಗಳು, ಹೊಸ್ತಲಿನ ಎದುರಿಗೆ ಮೂರಂತಸ್ತಾಗಿ ಸುತ್ತಲು ಕಟ್ಟಲ್ಪಟ್ಟ ಗೋಡೆಯಟ್ಟಗಳು, ಇವುಗಳನ್ನೂ ಅಳೆದನು;


ಬಳಿಕ ಆ ಪುರುಷನು ಬಡಗಣ ಹೆಬ್ಬಾಗಿಲ ಮಾರ್ಗವಾಗಿ ನನ್ನನ್ನು ದೇವಸ್ಥಾನದ ಮುಂದುಗಡೆಗೆ ಕರತಂದನು; ಆಹಾ, ನಾನು ನೋಡಲಾಗಿ ಯೆಹೋವನ ತೇಜಸ್ಸು ಯೆಹೋವನ ಆಲಯವನ್ನು ತುಂಬಿಕೊಂಡಿತ್ತು; ಅದನ್ನು ನೋಡಿ ಅಡ್ಡಬಿದ್ದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು