Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 6:5 - ಕನ್ನಡ ಸತ್ಯವೇದವು J.V. (BSI)

5 ಆಗ ನಾನು - ಅಯ್ಯೋ, ನನ್ನ ಗತಿಯನ್ನು ಏನು ಹೇಳಲಿ! ನಾಶವಾದೆನಲ್ಲಾ; ನಾನು ಹೊಲಸು ತುಟಿಯವನು, ಹೊಲಸು ತುಟಿಯವರ ಮಧ್ಯದಲ್ಲಿ ವಾಸಿಸುವವನು; ಇಂಥ ನನ್ನ ಕಣ್ಣುಗಳು ರಾಜಾಧಿರಾಜನನ್ನು, ಸೇನಾಧೀಶ್ವರನಾದ ಯೆಹೋವನನ್ನು ಕಂಡವು ಎಂದು ಕೂಗಿಕೊಳ್ಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆಗ ನಾನು, “ಅಯ್ಯೋ, ನನ್ನ ಗತಿಯನ್ನು ಏನು ಹೇಳಲಿ ನಾಶವಾದೆನಲ್ಲಾ! ನಾನು ಹೊಲಸು ತುಟಿಯವನು. ಹೊಲಸು ತುಟಿಯವರ ಮಧ್ಯದಲ್ಲಿ ವಾಸಿಸುವವನು. ಇಂಥ ನನ್ನ ಕಣ್ಣುಗಳು ರಾಜಾಧಿರಾಜನನ್ನು, ಸೇನಾಧೀಶ್ವರನಾದ ಯೆಹೋವನನ್ನು ಕಂಡೆವಲ್ಲಾ!” ಎಂದು ಕೂಗಿಕೊಳ್ಳಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆಗ ನಾನು “ಅಯ್ಯೋ, ನನ್ನ ಗತಿಯೇನು? ನನ್ನ ಕಥೆ ಮುಗಿಯಿತು. ಅಶುದ್ಧ ವದನದವನು ನಾನು. ಅಶುದ್ಧ ವದನದವರ ಮಧ್ಯೆ ಬಾಳುವವನು. ನನ್ನ ಕಣ್ಣುಗಳು ರಾಜಾಧಿರಾಜನನ್ನು, ಸೇನಾಧೀಶ್ವರ ಸರ್ವೇಶ್ವರನನ್ನು ಕಂಡೆವಲ್ಲಾ !” ಎಂದು ಕೂಗಿಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆಗ ನಾನು ಬಹು ಭಯಗೊಂಡು, “ಅಯ್ಯೋ, ನಾನು ನಾಶವಾಗುತ್ತಿದ್ದೇನೆ. ನಾನು ದೇವರೊಂದಿಗೆ ಮಾತನಾಡುವಷ್ಟು ಯೋಗ್ಯನಲ್ಲ. ದೇವರೊಂದಿಗೆ ಮಾತಾಡಲು ಯೋಗ್ಯರಲ್ಲದ ಜನರೊಂದಿಗೆ ನಾನು ಜೀವಿಸುತ್ತಿದ್ದೇನೆ. ಆದರೂ ನಾನು ಸರ್ವಶಕ್ತನಾದ ಯೆಹೋವನನ್ನು, ರಾಜಾಧಿರಾಜನನ್ನು ನೋಡಿದೆನು” ಎಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆಗ ನಾನು, “ಅಯ್ಯೋ, ನಾನು ನಾಶವಾದೆನಲ್ಲಾ! ಏಕೆಂದರೆ, ನಾನು ಅಶುದ್ಧ ತುಟಿಯವನು. ನಾನು ಅಶುದ್ಧ ತುಟಿಯುಳ್ಳವರ ಮಧ್ಯದಲ್ಲಿ ವಾಸಿಸುವವನು. ನನ್ನ ಕಣ್ಣುಗಳು ರಾಜಾಧಿರಾಜರೂ ಸೇನಾಧೀಶ್ವರ ಯೆಹೋವ ದೇವರನ್ನು ಕಂಡವು!” ಎಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 6:5
33 ತಿಳಿವುಗಳ ಹೋಲಿಕೆ  

ಅದಕ್ಕೆ ನಾನು - ಅಯ್ಯೋ, ಕರ್ತನಾದ ಯೆಹೋವನೇ, ನಾನು ಮಾತು ಬಲ್ಲವನಲ್ಲ, ಬಾಲಕನು ಎಂದು ಬಿನ್ನವಿಸಿದೆನು.


ಮೋಶೆ ಯೆಹೋವನಿಗೆ - ಸ್ವಾಮೀ, ನಾನು ಮಾತಾಡುವದರಲ್ಲಿ ಜಾಣನಲ್ಲ, ಫರೋಹನು ನನ್ನ ಮಾತನ್ನು ಹೇಗೆ ಕೇಳಾನು ಅಂದನು.


ಮತ್ತು ಯೆಹೋವನು - ಈ ಜನರು ಮಾತಿನಿಂದ ನನ್ನನ್ನು ಸಮೀಪಿಸಿ ತುಟಿಯಿಂದ ನನ್ನನ್ನು ಸನ್ಮಾನಿಸುತ್ತಾರೆ, ಮನಸ್ಸನ್ನೋ ದೂರಮಾಡಿಕೊಂಡು ಬಾಯಿಪಾಠವಾಗಿ ಕಲಿತಿರುವ ಮನುಷ್ಯರ ಆಜ್ಞೆಗೆ ಸರಿಯಾದ ಭಯಭಕ್ತಿಯನ್ನು ಮಾತ್ರ ನನ್ನಲ್ಲಿಟ್ಟಿದ್ದಾರೆ;


ಆದರೆ ಮೋಶೆ ಯೆಹೋವನಿಗೆ - ಸ್ವಾಮೀ, ನಾನು ಮೊದಲಿನಿಂದಲೂ ನೀನು ದಾಸನ ಸಂಗಡ ಮಾತಾಡಿದ ಮೇಲೆಯೂ ವಾಕ್ಚಾತುರ್ಯವಿಲ್ಲದವನು; ನನ್ನ ಮಾತೂ ನಾಲಿಗೆಯೂ ಮಂದವಾಗಿವೆ ಎಂದು ಹೇಳಲು ಯೆಹೋವನು ಅವನಿಗೆ -


[ಪ್ರಶ್ನೆ ಕೇಳುವದಕ್ಕೆ] ಬರುವ ಜನರಂತೆ ಅವರು ನಿನ್ನ ಬಳಿಗೆ ಬಂದು ನನ್ನ ಭಕ್ತರಾಗಿ ನಿನ್ನ ಮುಂದೆ ಕೂತುಕೊಂಡು ನಿನ್ನ ಮಾತುಗಳನ್ನು ಕೇಳುತ್ತಾರೆ, ಆದರೆ ಕೈಕೊಳ್ಳುವದಿಲ್ಲ; ಬಾಯಿಂದ ಬಹುಪ್ರೀತಿಯನ್ನು ತೋರಿಸುತ್ತಾರೆ. ಅವರ ಮನಸ್ಸೇನೋ ತಾವು ದೋಚಿಕೊಂಡದರ ಮೇಲೆ ಹೋಗುತ್ತದೆ.


ಅದಕ್ಕೆ ಮೋಶೆ ಯೆಹೋವನ ಸನ್ನಿಧಿಯಲ್ಲಿ - ಇಗೋ, ಇಸ್ರಾಯೇಲ್ಯರೇ ನನ್ನ ಮಾತನ್ನು ಕೇಳಲಿಲ್ಲ. ಫರೋಹನು ಕಿವಿಗೊಟ್ಟಾನೇ? ನಾನು ಮಾತಾಡುವದರಲ್ಲಿ ಜಾಣನಲ್ಲ ಅಂದನು.


ಆತನು ಯೆಹೋವನ ದೂತನೆಂದು ಗಿದ್ಯೋನನು ತಿಳಿದು ಭಯಪಟ್ಟು - ಅಯ್ಯೋ ಕರ್ತನೇ, ಯೆಹೋವನೇ, ಯೆಹೋವನ ದೂತನನ್ನು ಮುಖಾಮುಖಿಯಾಗಿ ನೋಡಿಬಿಟ್ಟೆನಲ್ಲಾ ಎಂದು ಕೂಗಿದನು.


ಅದರೆ ಆತನು ಅವನಿಗೆ - ನೀನು ನನ್ನ ಮುಖವನ್ನು ನೋಡುವದಕ್ಕಾಗದು; ಮನುಷ್ಯರಲ್ಲಿ ಯಾವನೂ ನನ್ನನ್ನು ನೋಡಿ ಜೀವಿಸಲಾರನು ಎಂದು ಹೇಳಿದನು.


ನಾವು ಸಾಯಬೇಕು. ದೇವರನ್ನು ಕಣ್ಣಾರೆ ಕಂಡೆವಲ್ಲಾ ಅನ್ನಲು


ನಾನು ಅದರ ಪ್ರಧಾನರು, ಮಂತ್ರಿಗಳು, ಅಧಿಪತಿಗಳು, ಅಧಿಕಾರಿಗಳು, ಬಲಿಷ್ಠರು, ಇವರೆಲ್ಲರಿಗೂ ತಲೆಗೇರ ಕುಡಿಸುವೆನು; ಅವರು ಎಂದಿಗೂ ಎಚ್ಚರಗೊಳ್ಳದೆ ದೀರ್ಘನಿದ್ರೆಮಾಡುವರು ಎಂದು ಸೇನಾಧೀಶ್ವರನಾದ ಯೆಹೋವನಾಮಧೇಯದ ರಾಜಾಧಿರಾಜನು ಅನ್ನುತ್ತಾನೆ.


ನೀವು ಭೂಷಿತರಾಜನನ್ನು ಕಣ್ಣಾರೆ ದರ್ಶನ ಮಾಡುವಿರಿ. ಅತಿವಿಸ್ತಾರವಾದ ಸ್ವದೇಶವನ್ನು ಕಣ್ಣು ತುಂಬಾ ನೋಡುವಿರಿ.


ಅದು ನನಗೆ ಕೇಳಿಸಲು ನನ್ನ ಹೊಟ್ಟೆಯು ತಳಮಳಗೊಂಡಿತು, ಆ ಶಬ್ದಕ್ಕೆ ನನ್ನ ತುಟಿಗಳು ಅದರಿದವು. ವಿಪತ್ಕಾಲವು ಜನರನ್ನು ಎದುರಾಯಿಸಿ ಅವರ ಮೇಲೆ ಬೀಳುವಾಗ ನಾನು ಅದನ್ನು ತಾಳ್ಮೆಯಿಂದ ಕಾದಿರಬೇಕೆಂದು ನನಗೆ ತಿಳಿಯಲು ಕ್ಷಯವು ನನ್ನ ಎಲುಬುಗಳಲ್ಲಿ ಸೇರಿತು, ನಾನು ನಿಂತ ಹಾಗೆಯೇ ನಡುಗಿದೆನು.


ಅವರಿಗೆ ಇಸ್ರಾಯೇಲ್ಯರ ದೇವರ ದರ್ಶನವಾಯಿತು. ಆಕಾಶಮಂಡಲದಂತೆ ಅತಿ ನಿರ್ಮಲವಾದ ಇಂದ್ರನೀಲಮಣಿಯ ನೆಲಗಟ್ಟು ಆತನ ಪಾದಪೀಠವಾಗಿತ್ತು.


ಇಸ್ರಾಯೇಲ್ಯರು ಮೋಶೆಯ ಬಳಿಗೆ ಬಂದು ಅವನಿಗೆ - ನಾವು ಪ್ರಾಣಕಳಕೊಳ್ಳುವವರಾದೆವಲ್ಲಾ; ಇಲ್ಲದೆ ಹೋಗುತ್ತೇವೆ; ನಾವು ನಿಶ್ಶೇಷವಾಗಿ ಇಲ್ಲದೆ ಹೋಗುವ ಹಾಗೆ ಕಾಣುತ್ತದೆ;


ನಿಮ್ಮ ಕೈಗಳು ರಕ್ತದಿಂದ ಹೊಲಸಾಗಿವೆ, ನಿಮ್ಮ ಬೆರಳುಗಳು ಅಪರಾಧದಿಂದ ಅಶುದ್ಧವಾಗಿವೆ; ನಿಮ್ಮ ತುಟಿಗಳು ಸುಳ್ಳಾಡುತ್ತವೆ, ನಿಮ್ಮ ನಾಲಿಗೆಯು ಕೆಡುಕನ್ನು ನುಡಿಯುತ್ತದೆ.


ನಾವೆಲ್ಲರು ಅಶುದ್ಧನ ಹಾಗಿದ್ದೇವೆ, ನಮ್ಮ ಧರ್ಮಕಾರ್ಯಗಳೆಲ್ಲಾ ಹೊಲೆಯ ಬಟ್ಟೆಯಂತಿವೆ; ನಾವೆಲ್ಲರೂ ತರಗೆಲೆಯೋಪಾದಿಯಲ್ಲಿ ಒಣಗಿ ಹೋಗಿದ್ದೇವೆ; ನಮ್ಮ ಅಪರಾಧಗಳು ಬಿರುಗಾಳಿಯ ಪ್ರಕಾರ ನಮ್ಮನ್ನು ಬಡಿದುಕೊಂಡು ಹೋಗಿವೆ.


ನರಪುತ್ರನೇ, ನೀನು ದ್ರೋಹಿವಂಶದ ಮಧ್ಯದಲ್ಲಿ ವಾಸಿಸುತ್ತೀ, ಆ ವಂಶದವರು ದ್ರೋಹಿಗಳಾಗಿರುವದರಿಂದ ಕಣ್ಣಿದ್ದರೂ ಕಾಣರು, ಕಿವಿಯಿದ್ದರೂ ಕೇಳರು.


ನಾನು ಬಾಯಿಬಿಟ್ಟು, ಬೇಡಿಕೊಂಡು ನನ್ನ ಮತ್ತು ನನ್ನ ಜನರಾದ ಇಸ್ರಾಯೇಲ್ಯರ ಪಾಪವನ್ನು ಅರಿಕೆಮಾಡುತ್ತಾ ನನ್ನ ದೇವರ ಪವಿತ್ರಪರ್ವತದ ವಿಷಯವಾಗಿ ನನ್ನ ದೇವರಾದ ಯೆಹೋವನಿಗೆ ಬಿನ್ನವಿಸಿ ಪ್ರಾರ್ಥಿಸುತ್ತಿರುವಾಗಲೇ


ಅವನು ಪೆನೂವೇಲನ್ನು ದಾಟುತ್ತಿರುವಾಗ ಸೂರ್ಯೋದಯವಾಯಿತು. ಅವನು ತೊಡೆಯ ನಿವಿುತ್ತ ಕುಂಟಿಕೊಂಡು ನಡೆದನು.


ಅದಲ್ಲದೆ ಆತನು - ನಾನು ನಿನ್ನ ತಂದೆಯ ದೇವರು, ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು ಅಂದಾಗ ಮೋಶೆ ದೇವರನ್ನು ನೋಡುವದಕ್ಕೆ ಭಯಪಟ್ಟು ಮುಖವನ್ನು ಮುಚ್ಚಿಕೊಂಡನು.


ಮಹಾಪ್ರಭಾವವುಳ್ಳ ಈ ಅರಸನು ಯಾರು? ಸೇನಾಧೀಶ್ವರನಾದ ಯೆಹೋವನೇ; ಮಹಾಪ್ರಭಾವವುಳ್ಳ ಅರಸನು ಈತನೇ. ಸೆಲಾ.


ಸದ್ಧರ್ಮಿಗಳಿಗೆ ಮಾನವಾಗಲೆಂಬ ಗೀತಗಳು ಭೂಮಂಡಲದ ಕಟ್ಟಕಡೆಯಿಂದ ನಮಗೆ ಕೇಳಬಂದಿವೆ. ನಾನಾದರೋ - ಕ್ಷಯಿಸೇ ಕ್ಷಯಿಸುತ್ತೇನೆ, ನನ್ನ ಗತಿಯನ್ನು ಏನು ಹೇಳಲಿ! ಬಾಧಕರು ಬಾಧಿಸುತ್ತಾರೆ, ಹೌದು, ಬಾಧಕರು ಬಾಧಿಸೇ ಬಾಧಿಸುತ್ತಾರೆ ಎಂದುಕೊಂಡೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು