Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 6:6 - ಕನ್ನಡ ಸತ್ಯವೇದವು J.V. (BSI)

6 ಸೆರಾಫಿಯರಲ್ಲಿ ಒಬ್ಬನು ಯಜ್ಞವೇದಿಯಿಂದ ತಾನು ತಂಡಸದಲ್ಲಿ ತೆಗೆದ ಕೆಂಡವನ್ನು ಕೈಯಲ್ಲಿ ಹಿಡಿದುಕೊಂಡು ನನ್ನ ಬಳಿಗೆ ಹಾರಿ ಬಂದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆಗ ಸೆರಾಫಿಯರಲ್ಲಿ ಒಬ್ಬನು ಯಜ್ಞವೇದಿಯಿಂದ ತಾನು ಉರಿಯುವ ಕೆಂಡವನ್ನು ಕೈಯಲ್ಲಿ ಹಿಡಿದುಕೊಂಡು ನನ್ನ ಬಳಿಗೆ ಹಾರಿ ಬಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆಗ ಸೆರಾಫಿಯರಲ್ಲಿ - ತೇಜಸ್ವಿಯೊಬ್ಬನು ಬಲಿಪೀಠದಿಂದ, ಉರಿಯುವ ಕೆಂಡವೊಂದನ್ನು ಇಕ್ಕಳದಿಂದ ಹಿಡಿದುಕೊಂಡು ನನ್ನತ್ತ ಹಾರಿಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಯಜ್ಞವೇದಿಕೆಯ ಮೇಲೆ ಬೆಂಕಿ ಇತ್ತು. ಸೆರಾಫಿಯರಲ್ಲೊಬ್ಬನು ಇಕ್ಕುಳಿಯಲ್ಲಿ ಬೆಂಕಿಯೊಳಗಿಂದ ಉರಿಯುವ ಕೆಂಡವನ್ನು ತೆಗೆದು ನನ್ನ ಬಳಿಗೆ ಹಾರಿಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆಗ ಸೆರಾಫಿಯರಲ್ಲಿ ಒಬ್ಬನು ಬಲಿಪೀಠದಿಂದ ತಾನು ಉರಿಯುವ ಕೆಂಡವನ್ನು ತನ್ನ ಕೈಯಲ್ಲಿ ಹಿಡಿದುಕೊಂಡು ಹಾರಿ ಬಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 6:6
14 ತಿಳಿವುಗಳ ಹೋಲಿಕೆ  

ಆತನು ನಾರಿನ ಬಟ್ಟೆಯನ್ನು ಹೊದ್ದುಕೊಂಡ ಆ ಪುರುಷನಿಗೆ - ನೀನು ಗರಗರನೆ ತಿರುಗುವ ಗಾಲಿಗಳ ನಡುವೆ ಕೆರೂಬಿಯ ಕೆಳಗೆ ಪ್ರವೇಶಿಸಿ ಕೆರೂಬಿಗಳ ಮಧ್ಯದೊಳಗಿಂದ ಬೊಗಸೆಯಲ್ಲಿ ಕೆಂಡಗಳನ್ನು ತುಂಬಿತಂದು ಪಟ್ಟಣದ ಮೇಲೆ ಎರಚು ಎಂದು ಅಪ್ಪಣೆಕೊಡಲು ಅವನು ನನ್ನ ಕಣ್ಣೆದುರಿಗೆ ಹೋಗಿ ಅಲ್ಲಿ ಪ್ರವೇಶಿಸಿದನು.


ನಮಗೊಂದು ಯಜ್ಞವೇದಿ ಉಂಟು, ಈ ವೇದಿಯ ಪದಾರ್ಥಗಳನ್ನು ತಿನ್ನುವದಕ್ಕೆ ಯೆಹೂದ್ಯರ ಗುಡಾರದಲ್ಲಿ ಸೇವೆಯನ್ನು ನಡಿಸುವವರಿಗೆ ಹಕ್ಕಿಲ್ಲ.


ದೂತರ ವಿಷಯದಲ್ಲಿ ಹೇಳುವದೇನೆಂದರೆ - ದೇವರು ತನ್ನ ದೂತರನ್ನು ಗಾಳಿಗಳನ್ನಾಗಿಯೂ ತನ್ನ ಸೇವಕರನ್ನು ಅಗ್ನಿಜ್ವಾಲೆಯನ್ನಾಗಿಯೂ ಮಾಡುತ್ತಾನೆ ಎಂಬದು.


ಆತನ ಸುತ್ತ ಸೆರಾಫಿಯರು ಇದ್ದರು; ಪ್ರತಿಯೊಬ್ಬನು ಆರಾರು ರೆಕ್ಕೆಯುಳ್ಳವನಾಗಿ ಎರಡರಿಂದ ತನ್ನ ಮುಖವನ್ನು, ಎರಡರಿಂದ ತನ್ನ ಕಾಲುಗಳನ್ನು ಮುಚ್ಚಿಕೊಂಡು ಎರಡನ್ನು ಬಡಿಯುತ್ತಾ ನೆಲಸೋಕದೆ ನಿಂತಿದ್ದನು.


ಅವನು ತನಗೋಸ್ಕರವಾದ ಹೋರಿಯನ್ನು ವಧಿಸಿದ ಮೇಲೆ ಯೆಹೋವನ ಸನ್ನಿಧಿಯಲ್ಲಿರುವ ವೇದಿಯಿಂದ ಕೆಂಡಗಳನ್ನು ಧೂಪಾರತಿಯಲ್ಲಿ ತುಂಬಿಸಿ ಪರಿಮಳಧೂಪದ್ರವ್ಯದ ಚೂರ್ಣದಲ್ಲಿ ಎರಡು ಹಿಡಿ ತೆಗೆದುಕೊಂಡು ತೆರೆಯನ್ನು ದಾಟಿ


ಇವರೆಲ್ಲರು ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿಸಲ್ಪಡುವ ಊಳಿಗದ ಆತ್ಮಗಳಲ್ಲವೋ?


ಅದಲ್ಲದೆ ಉರಿಯಂತಿದ್ದ ನಾಲಿಗೆಗಳು ವಿಂಗಡಿಸಿಕೊಳ್ಳುವ ಹಾಗೆ ಅವರಿಗೆ ಕಾಣಿಸಿ ಅವರಲ್ಲಿ ಒಬ್ಬೊಬ್ಬರ ಮೇಲೆ ಒಂದೊಂದಾಗಿ ಕೂತುಕೊಂಡವು.


ನಾನಂತೂ ನಿಮ್ಮ ಮನಸ್ಸು ತಿರುಗಿಕೊಳ್ಳಬೇಕೆಂಬದಕ್ಕೆ ನಿಮಗೆ ನೀರಿನಲ್ಲಿ ಸ್ನಾನಮಾಡಿಸುತ್ತೇನೆ. ಆದರೆ ನನ್ನ ಹಿಂದೆ ಬರುವವನು ನನಗಿಂತ ಶಕ್ತನು; ಆತನ ಕೆರಗಳನ್ನು ಹೊರಲಿಕ್ಕೂ ನಾನು ಯೋಗ್ಯನಲ್ಲ; ಆತನು ಪವಿತ್ರಾತ್ಮನಲ್ಲಿಯೂ ಬೆಂಕಿಯಲ್ಲಿಯೂ ನಿಮಗೆ ಸ್ನಾನಮಾಡಿಸುವನು.


ಯೆಹೋವನಿಗೆ ಕೋಪವುಂಟಾಗಿ ಈ ಜನರೊಳಗೆ ಘೋರವ್ಯಾಧಿ ಪ್ರಾರಂಭವಾಯಿತು; ನೀನು ಧೂಪಾರತಿಯನ್ನು ತೆಗೆದುಕೊಂಡು ಅದರಲ್ಲಿ ಯಜ್ಞವೇದಿಯಿಂದ ಕೆಂಡಗಳನ್ನು ಇಟ್ಟು ಧೂಪ ಹಾಕಿ ಸಮೂಹದವರ ಬಳಿಗೆ ಬೇಗ ಹೋಗಿ ಅವರಿಗೋಸ್ಕರ ದೋಷಪರಿಹಾರವನ್ನು ಮಾಡಬೇಕು ಎಂದು ಹೇಳಿದನು.


ಅದರ ಕತ್ತರಿಗಳನ್ನೂ ದೀಪದ ಕುಡಿ ತೆಗೆಯುವ ಬಟ್ಟಲುಗಳನ್ನೂ ಚೊಕ್ಕಬಂಗಾರದಿಂದ ಮಾಡಿಸಬೇಕು.


ಆಗ ಯೆಹೋವನು ಕೈಚಾಚಿ ನನ್ನ ಬಾಯನ್ನು ಮುಟ್ಟಿ - ಇಗೋ, ನಿನ್ನ ಬಾಯಲ್ಲಿ ನನ್ನ ಮಾತುಗಳನ್ನು ಇಟ್ಟಿದ್ದೇನೆ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು