Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 6:8 - ಕನ್ನಡ ಸತ್ಯವೇದವು J.V. (BSI)

8 ಆಗ, ಯಾವನನ್ನು ಕಳುಹಿಸಲಿ, ಯಾವನು ನಮಗೋಸ್ಕರ ಹೋಗುವನು ಎಂಬ ಕರ್ತನ ನುಡಿಯನ್ನು ಕೇಳಿ, ಇಗೋ, ನಾನಿದ್ದೇನೆ, ನನ್ನನ್ನು ಕಳುಹಿಸು ಅಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆಗ, “ಯಾರನ್ನು ಕಳುಹಿಸಲಿ? ಯಾರು ನಮಗೋಸ್ಕರ ಹೋಗುವನು?” ಎಂಬ ಕರ್ತನ ನುಡಿಯನ್ನು ಕೇಳಿ, “ಇಗೋ, ನಾನಿದ್ದೇನೆ, ನನ್ನನ್ನು ಕಳುಹಿಸು” ಎಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆಗ, “ಯಾರನ್ನು ಕಳುಹಿಸಲಿ? ನಮ್ಮ ಪರವಾಗಿ ಹೋಗುವವರು ಯಾರು?” ಎಂಬ ನುಡಿ ಕೇಳಿಸಿತು. ಅದಕ್ಕೆ ನಾನು, “ಇಗೋ, ನಾನು ಸಿದ್ಧ, ನನ್ನನ್ನು ಕಳುಹಿಸಿ” ಎಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆಗ ನಾನು ನನ್ನ ಒಡೆಯನಾದ ಯೆಹೋವನ ಸ್ವರವನ್ನು ಕೇಳಿದೆನು. ಆತನು, “ನಾನು ಯಾರನ್ನು ಕಳುಹಿಸಲಿ? ನಮಗೋಸ್ಕರ ಯಾರು ಹೋಗುವರು?” ಎಂದು ಕೇಳಿದನು. ಆಗ ನಾನು, “ನಾನಿದ್ದೇನೆ, ನನ್ನನ್ನು ಕಳುಹಿಸು” ಎಂದು ಹೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆಗ, “ಯಾರನ್ನು ಕಳುಹಿಸಲಿ, ಯಾರು ನಮಗೋಸ್ಕರ ಹೋಗುವರು?” ಎಂಬ ಯೆಹೋವ ದೇವರ ನುಡಿಯನ್ನು ನಾನು ಕೇಳಿ, “ಇಗೋ, ನಾನು ಸಿದ್ಧ, ನನ್ನನ್ನು ಕಳುಹಿಸಿರಿ,” ಎಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 6:8
23 ತಿಳಿವುಗಳ ಹೋಲಿಕೆ  

ನಾನು ಕ್ರಿಸ್ತನ ಅಪ್ರಮೇಯವಾದ ಐಶ್ವರ್ಯದ ವಿಷಯವಾದ ಶುಭಸಮಾಚಾರವನ್ನು ಅನ್ಯಜನರಿಗೆ ಪ್ರಸಿದ್ಧಿಪಡಿಸುವ ಹಾಗೆಯೂ ಸಮಸ್ತವನ್ನು ಸೃಷ್ಟಿಸಿದ ದೇವರಲ್ಲಿ ಆದಿಯಿಂದ ಮರೆಯಾಗಿದ್ದ ಮರ್ಮವು ಪ್ರಕಟವಾಗುವ ವಿಧ ಎಂಥದೆಂದು ತಿಳಿಸುವ ಹಾಗೆಯೂ ದೇವಜನರೊಳಗೆ ಅತ್ಯಲ್ಪನಾದ ನನಗೆ ಅನುಗ್ರಹಿಸೋಣವಾಯಿತು.


ಆತನು - ನೀನು ಹೋಗು, ನಾನು ನಿನ್ನನ್ನು ದೂರಕ್ಕೆ ಅನ್ಯಜನರ ಬಳಿಗೆ ಕಳುಹಿಸುತ್ತೇನೆಂದು ಹೇಳಿದನು.


ವಿಜ್ಞಾಪಿಸಿಕೊಳ್ಳದವರಿಗೂ ಪ್ರಸನ್ನನಾಗಿದ್ದೆನು, ನನ್ನನ್ನು ಹುಡುಕದವರಿಗೂ ಸಿಕ್ಕಿದೆನು, ನನ್ನ ನಾಮವನ್ನೆತ್ತಿ ಪ್ರಾರ್ಥಿಸದ ಜನಾಂಗಕ್ಕೂ - ಇಗೋ, ನಾನಿದ್ದೇನೆ ನಾನಿದ್ದೇನೆ ಎನ್ನುತ್ತಿದ್ದೆನು.


ಆದರೆ ಪ್ರಾಣವನ್ನು ಉಳಿಸಿಕೊಳ್ಳುವದೇ ವಿಶೇಷವೆಂದು ನಾನು ಎಣಿಸುವದಿಲ್ಲ. ದೇವರ ಕೃಪೆಯ ವಿಷಯವಾದ ಸುವಾರ್ತೆಯನ್ನು ಆಸಕ್ತಿಯಿಂದ ಪ್ರಕಟಿಸಬೇಕೆಂಬದಾಗಿ ಕರ್ತನಾದ ಯೇಸುವಿನಿಂದ ನಾನು ಹೊಂದಿರುವ ಸೇವೆಯೆಂಬ ಓಟವನ್ನು ಕಡೆಗಾಣಿಸುವದೊಂದೇ ನನ್ನ ಅಪೇಕ್ಷೆ.


ಆಮೇಲೆ ದೇವರು - ನಮ್ಮ ಸ್ವರೂಪದಲ್ಲಿ ನಮ್ಮ ಹೋಲಿಕೆಗೆ ಸರಿಯಾಗಿ ಮನುಷ್ಯರನ್ನು ಉಂಟುಮಾಡೋಣ; ಅವರು ಸಮುದ್ರದಲ್ಲಿರುವ ಮೀನುಗಳ ಮೇಲೆಯೂ ಅಂತರಿಕ್ಷದಲ್ಲಿ ಹಾರಾಡುವ ಪಕ್ಷಿಗಳ ಮೇಲೆಯೂ ಪಶುಗಳ ಮೇಲೆಯೂ ನೆಲದ ಮೇಲೆ ಹರಿದಾಡುವ ಎಲ್ಲಾ ಕ್ರಿವಿುಕೀಟಗಳ ಮೇಲೆಯೂ ಎಲ್ಲಾ ಭೂವಿುಯ ಮೇಲೆಯೂ ದೊರೆತನಮಾಡಲಿ ಅಂದನು.


ನಾವು ಇಳಿದು ಇವರಲ್ಲಿ ಒಬ್ಬರ ಮಾತು ಒಬ್ಬರಿಗೆ ತಿಳಿಯದಂತೆ ಇವರ ಭಾಷೆಯನ್ನು ತಾರುಮಾರುಮಾಡೋಣ ಬನ್ನಿ ಅಂದನು.


ಅವು ಮುಂದರಿಯುವಾಗ ಅವುಗಳ ರೆಕ್ಕೆಗಳ ಶಬ್ದವು ಜಲಪ್ರವಾಹದ ಘೋಷದಂತೆ, ಸರ್ವಶಕ್ತನ ಧ್ವನಿಯ ಹಾಗೆ, ಆರ್ಭಟಿಸುವ ಸೈನ್ಯದ ಕೋಲಾಹಲದೋಪಾದಿಯಲ್ಲಿ ನನಗೆ ಕೇಳಿಸಿತು; ಅವು ನಿಂತಾಗ ರೆಕ್ಕೆಗಳನ್ನು ಮುದುರಿಕೊಂಡವು.


ಯೆಹೋವನು ತನ್ನ ಹತ್ತಿರ ನಿಂತವರನ್ನು - ಅಹಾಬನು ಹತನಾಗಿ ಬೀಳುವಂತೆ ಅವನನ್ನು ರಾಮೋತ್‍ಗಿಲ್ಯಾದಿನ ಯುದ್ಧಕ್ಕೆ ಯಾರು ಪ್ರೇರಿಸುವಿರಿ ಎಂದು ಕೇಳಿದಾಗ ಒಬ್ಬನು ಈ ತರವಾಗಿಯೂ ಇನ್ನೊಬ್ಬನು ಆ ತರವಾಗಿಯೂ ಉತ್ತರ ಕೊಟ್ಟರು.


ಆಗ ಕೆರೂಬಿಗಳ ರೆಕ್ಕೆಗಳ ಶಬ್ದವು ಸರ್ವಶಕ್ತನಾದ ದೇವರು ಮಾತಾಡುವ ಧ್ವನಿಯಷ್ಟು ಗಂಭೀರವಾಗಿ ಹೊರಗಣ ಪ್ರಾಕಾರದ ಪರ್ಯಂತವೂ ಕೇಳಿಸಿತು.


ಮತ್ತು ಯೆಹೋವದೇವರು - ಈ ಮನುಷ್ಯನು ಒಳ್ಳೇದರ ಕೆಟ್ಟದ್ದರ ಭೇದವನ್ನರಿತು ನಮ್ಮಲ್ಲಿ ಒಬ್ಬನಂತಾದನಲ್ಲಾ. ಇದರಿಂದ ಇವನು ಕೈಚಾಚಿ ಜೀವವೃಕ್ಷದ ಫಲವನ್ನು ಸಹ ತೆಗೆದು ತಿಂದು ಶಾಶ್ವತವಾಗಿ ಬದುಕುವವನಾಗಬಾರದು ಅಂದುಕೊಂಡು


ಅವನು ನೆಲಕ್ಕೆ ಬಿದ್ದು - ಸೌಲನೇ, ಸೌಲನೇ, ನನ್ನನ್ನು ಯಾಕೆ ಹಿಂಸೆ ಪಡಿಸುತ್ತೀ ಎಂದು ಹೇಳುವ ವಾಣಿಯನ್ನು ಕೇಳಿದನು.


ಆದಕಾರಣ ಅಗ್ರಿಪ್ಪರಾಜನೇ, ಪರಲೋಕದಿಂದ ನನಗೆ ಉಂಟಾದ ಆ ದರ್ಶನಕ್ಕೆ ನಾನು ಅವಿಧೇಯನಾಗದೆ


ಯೆಹೋವನು ಸಮುವೇಲನನ್ನು ಕರೆದನು; ಸಮುವೇಲನು ಬಂದೆನೆಂದು ಉತ್ತರಕೊಟ್ಟು ಒಡನೆ ಏಲಿಯ ಬಳಿಗೆ ಹೋಗಿ -


ಆಮೇಲೆ ಆತನು - ಪಟ್ಟಣವನ್ನು ದಂಡಿಸತಕ್ಕವರೇ, ನೀವೆಲ್ಲರೂ ನಿಮ್ಮ ಹತ್ಯದ ಆಯುಧಗಳನ್ನು ಹಿಡಿದವರಾಗಿ ಸಮೀಪಿಸಿರಿ ಎಂದು ಗಟ್ಟಿಯಾಗಿ ಕೂಗಿ ಹೇಳಿದ ಮಾತು ನನ್ನ ಕಿವಿಗೆ ಬಿತ್ತು.


ಈ ಸಂಗತಿಗಳು ಆದ ಮೇಲೆ ದೇವರು ಅಬ್ರಹಾಮನನ್ನು ಪರಿಶೋಧಿಸಿದನು. ಹೇಗಂದರೆ ಆತನು ಅವನನ್ನು - ಅಬ್ರಹಾಮನೇ ಎಂದು ಕರೆಯಲು ಅವನು - ಇಗೋ, ಇದ್ದೇನೆ ಅಂದನು.


ಕೈಚಾಚಿ ಕತ್ತಿಯನ್ನು ಹಿಡಿದುಕೊಳ್ಳಲು ಯೆಹೋವನ ದೂತನು ಆಕಾಶದೊಳಗಿಂದ - ಅಬ್ರಹಾಮನೇ, ಅಬ್ರಹಾಮನೇ ಎಂದು ಅವನನ್ನು ಕರೆದನು. ಅದಕ್ಕೆ ಅಬ್ರಹಾಮನು - ಇಗೋ, ಇದ್ದೇನೆ ಅಂದನು.


ಅವನು ತಿರುಗಿಕೊಂಡು ನನ್ನನ್ನು ಕಂಡು ಕರೆದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು