ಯೆಶಾಯ 60:18 - ಕನ್ನಡ ಸತ್ಯವೇದವು J.V. (BSI)18 ನಿನ್ನ ದೇಶದಲ್ಲಿ ಬಲಾತ್ಕಾರದ ಸುದ್ದಿಯೇ ಕಿವಿಗೆ ಬೀಳದು, ನಿನ್ನ ಪ್ರಾಂತಗಳೊಳಗೆ ಭಂಗನಾಶನಗಳ ವಾರ್ತೆಯೇ ಕೇಳಬರುವದಿಲ್ಲ; ಆಗ ದೇವರಕ್ಷಣೆಯು ನನ್ನ ಪೌಳಿಗೋಡೆಗಳು, ದೇವಸ್ತೋತ್ರವು ನನ್ನ ಬಾಗಿಲುಗಳು ಎಂದು ಅಂದುಕೊಳ್ಳುವಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ನಿನ್ನ ದೇಶದಲ್ಲಿ ಬಲಾತ್ಕಾರದ ಸುದ್ದಿಯೇ ಕಿವಿಗೆ ಬೀಳದು, ನಿನ್ನ ಪ್ರಾಂತ್ಯಗಳೊಳಗೆ ಭಂಗನಾಶನಗಳ ವಾರ್ತೆಯೇ ಕೇಳಿಬರುವುದಿಲ್ಲ; ಆಗ ದೇವರಕ್ಷಣೆಯು ನನ್ನ ಪೌಳಿಗೋಡೆಗಳು, ದೇವಸ್ತೋತ್ರವು ನನ್ನ ಬಾಗಿಲುಗಳು ಎಂದು ಅಂದುಕೊಳ್ಳುವಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಬಲಾತ್ಕಾರದ ಸುದ್ದಿಯೇ ಕಿವಿಗೆ ಬೀಳದು ನಿನ್ನ ದೇಶದಲಿ ನಾಶವಿನಾಶಗಳ ವಾರ್ತೆಯೇ ಕೇಳಿಬರದು ನಿನ್ನ ಪ್ರಾಂತ್ಯಗಳಲಿ. ಆಗ ಹೆಸರಿಡುವೆ ನಿನ್ನ ಪೌಳಿಗೋಡೆಗೆ ‘ದೈವಮುಕ್ತಿ’ ಎಂದು ನಿನ್ನೀ ಪುರದ್ವಾರಗಳಿಗೆ “ದೈವಸ್ತುತಿ’ ಎಂದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಇನ್ನು ಮುಂದೆ ಮತ್ತೆ ಹಿಂಸಾಚಾರದ ವರ್ತಮಾನವು ನಿನ್ನಲ್ಲಿರುವದಿಲ್ಲ. ಜನರು ಇನ್ನೆಂದಿಗೂ ನಿನ್ನ ಮೇಲೆರಗಿ ನಿನ್ನನ್ನು ದೋಚುವದಿಲ್ಲ. ನಿನ್ನ ಗೋಡೆಗಳಿಗೆ ‘ರಕ್ಷಣೆ’ ಎಂದೂ ದ್ವಾರಗಳಿಗೆ ‘ಸ್ತೋತ್ರ’ವೆಂದೂ ಹೆಸರಿಡುವಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಬಲಾತ್ಕಾರವೂ, ನಿನ್ನ ದೇಶದೊಳಗೆ ಹಾಳಾದದ್ದೂ, ನಾಶವೂ, ನಿನ್ನ ಮೇರೆಗಳಲ್ಲಿ ಕೇಳಿಬರುವುದಿಲ್ಲ. ನಿನ್ನ ಗೋಡೆಗಳಿಗೆ ರಕ್ಷಣೆ ಎಂದೂ, ನಿನ್ನ ಬಾಗಿಲುಗಳಿಗೆ ಸ್ತೋತ್ರವೆಂದೂ ಹೆಸರಿಡುವೆ. ಅಧ್ಯಾಯವನ್ನು ನೋಡಿ |