Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 60:20 - ಕನ್ನಡ ಸತ್ಯವೇದವು J.V. (BSI)

20 ನಿನ್ನ ಸೂರ್ಯನು ಇನ್ನು ಮುಣುಗನು, ನಿನ್ನ ಚಂದ್ರನು ತೊಲಗನು; ಯೆಹೋವನೇ ನಿನಗೆ ನಿತ್ಯಪ್ರಕಾಶವಾಗಿರುವನು, ನೀನು ದುಃಖಿಸುವ ದಿನಗಳು ಕೊನೆಗಾಣುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ನಿನ್ನ ಸೂರ್ಯನು ಇನ್ನು ಮುಳುಗನು, ನಿನ್ನ ಚಂದ್ರನು ತೊಲಗನು; ಯೆಹೋವನೇ ನಿನಗೆ ನಿತ್ಯಪ್ರಕಾಶವಾಗಿರುವನು, ನೀನು ದುಃಖಿಸುವ ದಿನಗಳು ಕೊನೆಯಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ನಿನ್ನ ಸೂರ್ಯನು ಇನ್ನು ತೊಲಗನು. ನಿನ್ನ ಚಂದ್ರನು ಬಿಟ್ಟು ತೊಲಗನು. ಸರ್ವೇಶ್ವರನೇ ನಿನಗೆ ನಿತ್ಯಜ್ಯೋತಿ ನಿನ್ನ ದುಃಖ ದಿನಗಳಿಗಿದೆ ಸಮಾಪ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ನಿನ್ನ ಸೂರ್ಯನು ಮತ್ತೆ ಅಸ್ತಮಾನವಾಗುವದಿಲ್ಲ. ನಿನ್ನ ಚಂದ್ರನು ಮತ್ತೆಂದಿಗೂ ಕಪ್ಪಾಗುವದಿಲ್ಲ. ಯಾಕೆಂದರೆ ಯೆಹೋವನು ನಿನ್ನ ನಿರಂತರದ ಬೆಳಕಾಗಿರುವನು. ನಿನ್ನ ದುಃಖದ ಕಾಲವು ಅಂತ್ಯವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ನಿನ್ನ ಸೂರ್ಯನು ಅಸ್ತಮಿಸುವುದಿಲ್ಲ. ನಿನ್ನ ಚಂದ್ರನು ಕಾಣದೆ ಹೋಗುವುದಿಲ್ಲ. ಏಕೆಂದರೆ ಯೆಹೋವ ದೇವರು ನಿನಗೆ ನಿತ್ಯವಾದ ಬೆಳಕಾಗಿರುವರು. ನೀನು ದುಃಖಿಸುವ ದಿನಗಳು ಸಮಾಪ್ತಿಯಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 60:20
19 ತಿಳಿವುಗಳ ಹೋಲಿಕೆ  

ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು. ಇನ್ನು ಮರಣವಿರುವದಿಲ್ಲ, ಇನ್ನು ದುಃಖವಾಗಲಿ ಗೋಳಾಟವಾಗಲಿ ಕಷ್ಟವಾಗಲಿ ಇರುವದಿಲ್ಲ; ಮೊದಲಿದ್ದದ್ದೆಲ್ಲಾ ಇಲ್ಲದೆ ಹೋಯಿತು ಎಂದು ಹೇಳಿತು.


ಯೆಹೋವದೇವರು ಸೂರ್ಯನೂ ಗುರಾಣಿಯೂ ಆಗಿದ್ದಾನಲ್ಲಾ. ಯೆಹೋವನು ಕೃಪೆಯನ್ನೂ ಘನವನ್ನೂ ಅನುಗ್ರಹಿಸುವನು; ಆತನು ಸದ್ಭಕ್ತರಿಗೆ ಯಾವ ಶುಭವನ್ನು ದಯಪಾಲಿಸದೆ ಇದ್ದಾನು?


ಯೆಹೋವನು ವಿಮೋಚಿಸಿದವರು ಹಿಂದಿರುಗಿ ಶಾಶ್ವತಸಂತೋಷವೆಂಬ ಕಿರೀಟವನ್ನು ಧರಿಸಿಕೊಂಡು ಉತ್ಸಾಹಧ್ವನಿಯೊಡನೆ ಚೀಯೋನಿಗೆ ಸೇರುವರು; ಹರ್ಷಾನಂದಗಳನ್ನು ಅನುಭವಿಸುವರು, ಮೊರೆಯೂ ಕರಕರೆಯೂ ತೊಲಗಿಹೋಗುವವು.


ಮರಣವನ್ನು ಶಾಶ್ವತವಾಗಿ ನಿರ್ನಾಮ ಮಾಡುವನು; ಕರ್ತನಾದ ಯೆಹೋವನು ಎಲ್ಲರ ಮುಖದಲ್ಲಿನ ಕಣ್ಣೀರನ್ನು ಒರಸಿಬಿಡುವನು; ತನ್ನ ಪ್ರಜೆಯ ಅವಮಾನವನ್ನು ಭೂಮಂಡಲದಿಂದಲೇ ತೊಲಗಿಸುವನು; ಯೆಹೋವನೇ ಇದನ್ನು ನುಡಿದಿದ್ದಾನೆ.


ನನ್ನ ನಾಮದಲ್ಲಿ ಭಯಭಕ್ತಿಯಿಟ್ಟಿರುವ ನಿಮಗೋ [ದೇವರ] ಧರ್ಮವೆಂಬ ಸೂರ್ಯನು ಸ್ವಸ್ಥತೆಯನ್ನುಂಟುಮಾಡುವ ಕಿರಣಗಳುಳ್ಳವನಾಗಿ ಮೂಡುವನು; ಕೊಟ್ಟಿಗೆಯಿಂದ ಬಿಟ್ಟ ಕರುಗಳಂತೆ ನೀವು ಹೊರಟು ಬಂದು ಕುಣಿದಾಡುವಿರಿ;


ಯೆಹೋವನು ನನಗೆ ಬೆಳಕೂ ರಕ್ಷಕನೂ ಆಗಿದ್ದಾನೆ; ನಾನು ಯಾರಿಗೆ ಭಯಪಟ್ಟೇನು? ಯೆಹೋವನು ನನ್ನ ಪ್ರಾಣದ ಆಧಾರವು; ನಾನು ಯಾರಿಗೆ ಹೆದರೇನು?


ಯೆರೂಸಲೇವಿುನಲ್ಲಿ ವಾಸಿಸುವ ಚೀಯೋನಿನ ಜನರೇ, ನೀವು ಇನ್ನು ಅಳುವದೇ ಇಲ್ಲ; ನೀವು ಕೂಗಿಕೊಂಡ ಶಬ್ದವನ್ನು ಆತನು ಕೇಳಿ ನಿಮಗೆ ಕೃಪೆತೋರಿಸೇ ತೋರಿಸುವನು; ಕೇಳಿದ ಕೂಡಲೆ ನಿಮಗೆ ಸದುತ್ತರವನ್ನು ದಯಪಾಲಿಸುವನು.


ನಾನೂ ಯೆರೂಸಲೇಮನ್ನು ದೃಷ್ಟಿಸುತ್ತಾ ಉಲ್ಲಾಸಿಸುವೆನು, ಅದರ ಜನರನ್ನು ಈಕ್ಷಿಸುತ್ತಾ ಹರ್ಷಗೊಳ್ಳುವೆನು. ರೋದನಶಬ್ದವೂ ಪ್ರಲಾಪಧ್ವನಿಯೂ ಅಲ್ಲಿ ಇನ್ನು ಕೇಳಿಸವು.


ಇದಲ್ಲದೆ ಯೆಹೋವನು ತನ್ನ ಜನರ ವ್ರಣವನ್ನು ಕಟ್ಟಿ ಅವರ ಪೆಟ್ಟಿನ ಗಾಯವನ್ನು ಗುಣಮಾಡುವ ದಿವಸದಲ್ಲಿ ಚಂದ್ರನ ಬೆಳಕು ಸೂರ್ಯನ ಬೆಳಕಿನಂತಿರುವದು, ಮತ್ತು ಸೂರ್ಯನ ಬೆಳಕು ಏಳರಷ್ಟು ಹೆಚ್ಚಿ ಏಳು ದಿನಗಳ ಬೆಳಕಿನಂತಾಗುವದು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಆ ದಿನದಲ್ಲಿ ಸೂರ್ಯನನ್ನು ಮಧ್ಯಾಹ್ನಕ್ಕೆ ಮುಣುಗಿಸುವೆನು, ಭೂವಿುಯನ್ನು ಹಗಲಿನಲ್ಲೇ ಮೊಬ್ಬುಮಾಡುವೆನು.


ಪಟ್ಟಣಕ್ಕೆ ಬೆಳಕನ್ನು ಕೊಡುವದಕ್ಕಾಗಿ ಸೂರ್ಯನಾಗಲಿ ಚಂದ್ರನಾಗಲಿ ಬೇಕಾಗಿಲ್ಲ. ಅದಕ್ಕೆ ದೇವರ ಪ್ರಭಾವವೇ ಬೆಳಕನ್ನು ಕೊಟ್ಟಿತು; ಯಜ್ಞದ ಕುರಿಯಾದಾತನೇ ಅದರ ದೀಪವು.


ಮತ್ತು ಚಂದ್ರನು ನಾಚಿಕೆಪಡುವನು, ಸೂರ್ಯನು ಲಜ್ಜೆಗೊಳ್ಳುವನು; ಸೇನಾಧೀಶ್ವರನಾದ ಯೆಹೋವನು ಚೀಯೋನ್ ಪರ್ವತದಲ್ಲಿ ಯೆರೂಸಲೇವಿುನೊಳಗೆ ಆಳುವನಷ್ಟೆ. ಆತನ [ಪರಿವಾರದ] ಹಿರಿಯರ ಮುಂದೆ ಪ್ರಭಾವವು ಪ್ರತ್ಯಕ್ಷವಾಗುವದು.


ಯೆಹೋವನು ವಿಮೋಚಿಸಿದವರು ಹಿಂದಿರುಗಿ ಶಾಶ್ವತ ಸಂತೋಷವೆಂಬ ಕಿರೀಟವನ್ನು ಧರಿಸಿಕೊಂಡು ಉತ್ಸಾಹಧ್ವನಿಯೊಡನೆ ಚೀಯೋನಿಗೆ ಸೇರುವರು; ಹರ್ಷಾನಂದಗಳನ್ನು ಅನುಭವಿಸುವರು, ಮೊರೆಯೂ ಕರಕರೆಯೂ ತೊಲಗಿಹೋಗುವವು.


ಏಳು, ಪ್ರಕಾಶಿಸು, ನಿನಗೆ ಬೆಳಕು ಬಂತು, ಯೆಹೋವನ ತೇಜಸ್ಸು ನಿನ್ನ ಮೇಲೆ ಉದಯಿಸಿದೆ.


ದುಃಖಿತರೆಲ್ಲರನ್ನು ಸಂತೈಸುವದಕ್ಕೂ ಚೀಯೋನಿನಲ್ಲಿ ಶೋಕಿಸುವವರಿಗೆ ಬೂದಿಗೆ ಬದಲಾಗಿ ಶಿರೋಭೂಷಣ, ದುಃಖವಿದ್ದಲ್ಲಿ ಆನಂದತೈಲ, ಕುಂದಿದ ಮನಕ್ಕೆ ಪ್ರತಿಯಾಗಿ ಉತ್ಸಾಹಸ್ತೋತ್ರದ ವಸ್ತ್ರ ಇವುಗಳನ್ನು ಒದಗಿಸಿಕೊಡುವದಕ್ಕೂ ಆತನು ನನ್ನನ್ನು ಕಳುಹಿಸಿದ್ದಾನೆ. ಯೆಹೋವನು ತನ್ನ ಪ್ರಭಾವಕ್ಕೋಸ್ಕರ ಹಾಕಿದ ನೀತಿವೃಕ್ಷಗಳು ಎಂಬ ಬಿರುದು ಇವರಿಗಾಗುವದು.


ಅವರು ಬಂದು ಚೀಯೋನ್ ಶಿಖರದಲ್ಲಿ ಹಾಡುವರು; ಧಾನ್ಯ, ದ್ರಾಕ್ಷಾರಸ, ಎಣ್ಣೆ, ಕರು, ಕುರಿಮರಿ, ಅಂತು ಯೆಹೋವನು ಅನುಗ್ರಹಿಸುವ ಎಲ್ಲಾ ಮೇಲುಗಳನ್ನು ಅನುಭವಿಸಲು ಪ್ರವಾಹ ಪ್ರವಾಹವಾಗಿ ಬರುವರು; ಅವರ ಆತ್ಮವು ಹದವಾಗಿ ನೀರು ಹಾಯಿಸಿದ ತೋಟದಂತಿರುವದು; ಅವರು ಇನ್ನು ಕಳೆಗುಂದರು.


ಯೆಹೋವನೇ, ನೀನು ನಮ್ಮ ಮೇಲೆ ಬಲು ಸಿಟ್ಟುಗೊಂಡು ನಮ್ಮನ್ನು ಸಂಪೂರ್ಣವಾಗಿ ತ್ಯಜಿಸಿಬಿಟ್ಟಿಯೋ, ಏನೋ?


ಅದು ಯೆಹೋವನಿಗೆ ಗೊತ್ತು, ಅದು ಹಗಲೂ ಅಲ್ಲ, ಇರುಳೂ ಅಲ್ಲ, ಆದರೆ ಸಂಜೆಯ ವೇಳೆಯಲ್ಲಿ ಬೆಳಕಾಗುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು