Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 60:22 - ಕನ್ನಡ ಸತ್ಯವೇದವು J.V. (BSI)

22 ಚಿಕ್ಕವನಿಂದ ಒಂದು ಕುಲವಾಗುವದು, ಅಲ್ಪನಿಂದ ಬಲವಾದ ಜನಾಂಗವಾಗುವದು; ಯೆಹೋವನೆಂಬ ನಾನು ಕ್ಲುಪ್ತಕಾಲದಲ್ಲಿ ಇದನ್ನು ಬಲುಬೇಗನೆ ಉಂಟುಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಚಿಕ್ಕವನಿಂದ ಒಂದು ಕುಲವಾಗುವುದು, ಅಲ್ಪನಿಂದ ಬಲವಾದ ಜನಾಂಗವಾಗುವುದು. ಯೆಹೋವನೆಂಬ ನಾನು ಕ್ಲುಪ್ತಕಾಲದಲ್ಲಿ ಇದನ್ನು ಬಲುಬೇಗನೆ ಉಂಟುಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ದೊಡ್ಡ ಕುಲವಾಗಿಸುವೆನು ಚಿಕ್ಕವನಿಂದ ಬಲಿಷ್ಠ ರಾಷ್ಟ್ರವಾಗಿಸುವೆನು ದುರ್ಬಲನಿಂದ. ಸಾಧಿಸುವೆನು ಇದನು ಕ್ಲುಪ್ತಕಾಲದೊಳು ಸರ್ವೇಶ್ವರನಾದ ನಾನು, ಶೀಘ್ರದೊಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಅತ್ಯಂತ ಚಿಕ್ಕ ಕುಟುಂಬವು ದೊಡ್ಡ ಕುಲವಾಗುವದು. ಅತ್ಯಂತ ಎಳೆಯ ಕುಟುಂಬವು ಬಲಾಢ್ಯವಾದ ಜನಾಂಗವಾಗುವದು. ತಕ್ಕ ಕಾಲದಲ್ಲಿ ಯೆಹೋವನಾದ ನಾನು ಬೇಗನೆ ಬರುವೆನು. ಇವುಗಳೆಲ್ಲಾ ನೆರವೇರುವಂತೆ ಮಾಡುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಕನಿಷ್ಠನು ಸಾವಿರವಾಗುವನು, ಅಲ್ಪನಿಂದ ಬಲವಾದ ಜನಾಂಗವಾಗುವುದು. ಯೆಹೋವನೆಂಬ ನಾನು ಕ್ಲುಪ್ತ ಕಾಲದಲ್ಲಿ ಇದನ್ನು ಬಹು ಬೇಗನೆ ಉಂಟುಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 60:22
15 ತಿಳಿವುಗಳ ಹೋಲಿಕೆ  

ಅದು ಕ್ಲುಪ್ತಕಾಲದಲ್ಲಿ ನೆರವೇರತಕ್ಕದ್ದು, ಆದರೆ ಪರಿಣಾಮಕ್ಕೆ ತ್ವರೆಪಡುತ್ತದೆ, ಮೋಸಮಾಡದು; ತಡವಾದರೂ ಅದಕ್ಕೆ ಕಾದಿರು; ಅದು ಬಂದೇ ಬರುವದು, ತಾಮಸವಾಗದು.


ದೇವರ ಚಿತ್ತವನ್ನು ನೆರವೇರಿಸಿ ವಾಗ್ದಾನದ ಫಲವನ್ನು ಹೊಂದಬೇಕಾದರೆ ನಿಮಗೆ ತಾಳ್ಮೆಬೇಕು.


ದೇವರಾದುಕೊಂಡವರು ಆತನಿಗೆ ಹಗಲು ರಾತ್ರಿ ಮೊರೆಯಿಡುವಲ್ಲಿ ಆತನು ಅವರ ವಿಷಯದಲ್ಲಿ ತಡಮಾಡಿದರೂ ಅವರ ನ್ಯಾಯವನ್ನು ತೀರಿಸದೆ ಇರುವನೇ? ಅವರಿಗೆ ಬೇಗ ನ್ಯಾಯ ತೀರಿಸುವನೆಂದು ನಿಮಗೆ ಹೇಳುತ್ತೇನೆ.


ಪ್ರಿಯರೇ, ಕರ್ತನ ಎಣಿಕೆಯಲ್ಲಿ ಒಂದು ದಿನವು ಸಾವಿರ ವರುಷಗಳಂತೆಯೂ ಸಾವಿರ ವರುಷಗಳು ಒಂದು ದಿನದಂತೆಯೂ ಅವೆ ಎಂಬದನ್ನು ಮಾತ್ರ ಮರೆಯಬೇಡಿರಿ.


ಇಂಥಾ ಸುದ್ದಿಯನ್ನು ಯಾರು ಕೇಳಿದ್ದಾರೆ? ಇಂಥಾ ಸಂಗತಿಯನ್ನು ಕಂಡವರಾರು? ಒಂದು ದಿನದಲ್ಲಿ ರಾಷ್ಟ್ರವು ಹುಟ್ಟೀತೇ? ಕ್ಷಣಮಾತ್ರದಲ್ಲಿ ಜನಾಂಗವನ್ನು ಹೆರಲಿಕ್ಕಾದೀತೇ? ಹೌದು, ಚೀಯೋನೆಂಬಾಕೆಯು ಬೇನೆ ತಿಂದು ತನಗಾಗಿ ಮಕ್ಕಳನ್ನು ಹಡೆದಿದ್ದಾಳೆ.


ಇವುಗಳಾದ ಮೇಲೆ ಇಗೋ, ಯಾರಿಂದಲೂ ಎಣಿಸಲಾಗದಂಥ ಮಹಾ ಸಮೂಹವು ಸಿಂಹಾಸನದ ಮುಂದೆಯೂ ಯಜ್ಞದ ಕುರಿಯಾದಾತನ ಮುಂದೆಯೂ ನಿಂತಿರುವದನ್ನು ಕಂಡೆನು. ಅವರು ಸಕಲ ಜನಾಂಗಕುಲ ಪ್ರಜೆಗಳವರೂ ಸಕಲ ಭಾಷೆಗಳನ್ನಾಡುವವರೂ ಆಗಿದ್ದರು. ಅವರು ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡು ತಮ್ಮ ಕೈಗಳಲ್ಲಿ ಖರ್ಜೂರದ ಗರಿಗಳನ್ನು ಹಿಡಿದುಕೊಂಡಿದ್ದರು.


ನಾವು ಆತನ ಕೆಲಸವನ್ನು ನೋಡಬೇಕು, ಅದನ್ನು ಬೇಗನೆ ನಡಿಸಲಿ, ಇಸ್ರಾಯೇಲ್ಯರ ಸದಮಲಸ್ವಾವಿುಯ ಉದ್ದೇಶವನ್ನು ನಾವು ತಿಳಿಯಬೇಕು. ಅದು ಸಮೀಪಿಸಿ ಬರಲಿ ಎಂದು ನುಡಿಯುವವರ ದುರವಸ್ಥೆಯನ್ನು ಏನು ಹೇಳಲಿ!


ಆ ರಾಜರ ಕಾಲದಲ್ಲಿ ಪರಲೋಕದೇವರು ಒಂದು ರಾಜ್ಯವನ್ನು ಸ್ಥಾಪಿಸುವನು; ಅದು ಎಂದಿಗೂ ಅಳಿಯದು, ಅದರ ಪ್ರಾಬಲ್ಯವು ಬೇರೆ ಜನಾಂಗಕ್ಕೆ ಕದಲಿಹೋಗದು, ಆ ರಾಜ್ಯಗಳನ್ನೆಲ್ಲಾ ಭಂಗಪಡಿಸಿ ನಿರ್ನಾಮ ಮಾಡಿ ಶಾಶ್ವತವಾಗಿ ನಿಲ್ಲುವದು.


ಮತ್ತು ಇನ್ನು ಎಷ್ಟೋ ಮಂದಿ ಗಂಡಸರೂ ಹೆಂಗಸರೂ ಕರ್ತನಲ್ಲಿ ನಂಬಿಕೆಯಿಡುವವರಾಗಿ ಅವರ ಮಂಡಲಿಯಲ್ಲಿ ಸೇರಿಕೊಳ್ಳುತ್ತಿದ್ದರು.


ಅವನ ಮಾತಿಗೆ ಒಪ್ಪಿಕೊಂಡವರು ದೀಕ್ಷಾಸ್ನಾನ ಮಾಡಿಸಿಕೊಂಡರು. ಆ ದಿವಸ ಸುಮಾರು ಮೂರುಸಾವಿರ ಜನರು ಅವರಲ್ಲಿ ಸೇರಿದರು.


ಆಗ ಕಬ್ಬಿಣಮಣ್ಣು ತಾಮ್ರಬೆಳ್ಳಿಬಂಗಾರಗಳೆಲ್ಲವೂ ಪುಡಿಪುಡಿಯಾಗಿ ಸುಗ್ಗಿಯ ಕಣಗಳ ಹೊಟ್ಟಿನಂತಾದವು; ಗಾಳಿಯು ತೂರಿಕೊಂಡು ಹೋಗಲು ಅವುಗಳಿಗೆ ನೆಲೆಯೇ ಇಲ್ಲವಾಯಿತು; ಪ್ರತಿಮೆಗೆ ಬಡಿದ ಆ ಬಂಡೆಯು ಮಹಾ ಪರ್ವತವಾಗಿ ಲೋಕದಲ್ಲೆಲ್ಲಾ ತುಂಬಿಕೊಂಡಿತು.


ಇಸ್ರಾಯೇಲೇ, ನಿನ್ನ ಜನರು ಸಮುದ್ರದ ಉಸುಬಿನಂತೆ ಅಸಂಖ್ಯವಾಗಿದ್ದರೂ ಅವರಲ್ಲಿ ಉಳಿದ ಒಂದು ಶೇಷ ಮಾತ್ರ ತಿರುಗಿಕೊಳ್ಳುವದು; ತುಂಬಿತುಳುಕುವ ನ್ಯಾಯಪ್ರವಾಹದ ಪ್ರಲಯ ನಿಶ್ಚಿತವಾಗಿದೆ.


ನಿಮ್ಮ ಪಿತೃವಾದ ಅಬ್ರಹಾಮನನ್ನೂ ನಿಮ್ಮನ್ನು ಹೆತ್ತ ಸಾರಳನ್ನೂ ದೃಷ್ಟಿಸಿರಿ; ಅಬ್ರಹಾಮನು ಒಬ್ಬನೇ ಇದ್ದಾಗ ನಾನು ಅವನನ್ನು ಕರೆದು ಆಶೀರ್ವದಿಸಿ ಸಂತಾನದಿಂದ ಹೆಚ್ಚಿಸಿದೆನಲ್ಲವೆ.


ಆ ಕುಂಟುಜನವನ್ನು ಉಳಿಸಿ ಕಾಪಾಡುವೆನು, ದೂರತಳ್ಳಲ್ಪಟ್ಟ ಪ್ರಜೆಯನ್ನು ಪ್ರಬಲ ಜನಾಂಗವನ್ನಾಗಿ ಮಾಡುವೆನು; ಯೆಹೋವನು ಚೀಯೋನ್ ಪರ್ವತದಲ್ಲಿ ಇಂದಿನಿಂದ ಎಂದೆಂದಿಗೂ ಅವರ ರಾಜನಾಗಿರುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು