Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 60:5 - ಕನ್ನಡ ಸತ್ಯವೇದವು J.V. (BSI)

5 ನೀನು ನೋಡಿ ಕಳೆಗೊಳ್ಳುವಿ, ನಿನ್ನ ಹೃದಯವು ಅದರುತ್ತಾ ಉಬ್ಬುವದು; ಏಕಂದರೆ ಸಮುದ್ರವ್ಯಾಪಾರ ಸಮೃದ್ಧಿಯು ನಿನ್ನ ಕಡೆಗೆ ತಿರುಗುವದು, ಜನಾಂಗಗಳ ಐಶ್ವರ್ಯವು ನಿನಗೆ ದೊರೆಯುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನೀನು ಅವರನ್ನು ನೋಡಿ ಸಂತೋಷ ಸಂಭ್ರಮ ಪಡುವೆ, ನಿನ್ನ ಹೃದಯವು ಹರ್ಷಿಸಿ ಉಲ್ಲಾಸಿಸುವುದು; ಏಕೆಂದರೆ ಸಮುದ್ರ ವ್ಯಾಪಾರದ ಸಮೃದ್ಧಿಯು ನಿನಗೆ ಅತಿಯಾದ ಲಾಭತರುವುದು. ಕಡೆಗೆ ತಿರುಗುವುದು, ಜನಾಂಗಗಳ ಐಶ್ವರ್ಯವು ನಿನಗೆ ದೊರೆಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಇದನ್ನು ನೋಡಿ ನೀ ಬೆಳಗುವೆ ಕಾಂತಿಯಿಂದ ಉಬ್ಬುವುದು ನಿನ್ನ ಎದೆ ಆನಂದದಿಂದ. ಹರಿಯುವುದು ನಿನ್ನೆಡೆಗೆ ಸಮುದ್ರ ವ್ಯಾಪಾರ ಸಮೃದ್ಧಿ ದೊರಕುವುದು ನಿನಗೆ ಅನ್ಯಜನಾಂಗಗಳ ಆಸ್ತಿಪಾಸ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 “ಆಗ ನೀನು ನಿನ್ನ ಜನರನ್ನು ನೋಡುವೆ. ನಿನ್ನ ಮುಖವು ಸಂತೋಷದಿಂದ ಪ್ರಕಾಶಿಸುವದು. ಮೊದಲು ನೀನು ಭಯಪಡುವೆ. ಆ ಬಳಿಕ ನೀನು ಉತ್ಸಾಹಪಡುವೆ. ಸಮುದ್ರದಾಚೆ ಇರುವ ಐಶ್ವರ್ಯವು ನಿನ್ನ ಮುಂದೆ ರಾಶಿ ಹಾಕಲ್ಪಡುವದು. ಜನಾಂಗಗಳ ನಿಕ್ಷೇಪವು ನಿನಗೆ ದೊರೆಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನೀನು ನೋಡಿ ಕಳೆಗೊಳ್ಳುವಿ, ನಿನ್ನ ಹೃದಯವು ಅದರುತ್ತಾ ಉಬ್ಬುವುದು, ಏಕೆಂದರೆ ಸಮುದ್ರದ ಸಮೃದ್ಧಿಯು ನಿನ್ನ ಕಡೆಗೆ ತಿರುಗಿಕೊಳ್ಳುವುದು. ಇತರ ಜನಾಂಗಗಳ ಆಸ್ತಿಯು ನಿನ್ನ ಬಳಿಗೆ ಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 60:5
25 ತಿಳಿವುಗಳ ಹೋಲಿಕೆ  

ನೀವೋ ಯೆಹೋವನ ಯಾಜಕರೆಂಬ ಬಿರುದನ್ನು ಹೊಂದುವಿರಿ, ಜನರು ನಿಮ್ಮನ್ನು ನಮ್ಮ ದೇವರ ಸೇವಕರು ಎಂದು ಕರೆಯುವರು; ಜನಾಂಗಗಳ ಆಸ್ತಿಯನ್ನನುಭವಿಸುವಿರಿ, ಅವುಗಳ ವೈಭವವನ್ನು ಪಡೆದು ಹೊಗಳಿಕೊಳ್ಳುವಿರಿ.


ಅವಳ ವ್ಯಾಪಾರವೂ ಆದಾಯವೂ ಅವಳಿಗೆ ನಿಧಿನಿಕ್ಷೇಪವಾಗದೆ ಯೆಹೋವನಿಗೇ ಮೀಸಲಾಗುವದು; ಆ ವ್ಯಾಪಾರವು ಯೆಹೋವನ ಸನ್ನಿಧಾನದಲ್ಲಿ ವಾಸಿಸುವವರಿಗೆ ಬೇಕಾದಷ್ಟು ಅನ್ನವನ್ನೂ ಶ್ರೇಷ್ಠವಾದ ಉಡುಪನ್ನೂ ಒದಗಿಸಲು ಅನುಕೂಲಿಸುವದು.


ದೇವರು ಕರ್ತನಾಗಿರುವ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಟ್ಟ ನಮಗೆ ಕೊಟ್ಟ ವರಕ್ಕೆ ಸರಿಯಾದ ವರವನ್ನು ಅವರಿಗೂ ಕೊಟ್ಟಿರಲಾಗಿ ದೇವರನ್ನು ತಡೆಯುವದಕ್ಕೆ ನಾನು ಶಕ್ತನೋ?


ಅವರು ನಾನಾ ಭಾಷೆಗಳನ್ನಾಡುತ್ತಾ ದೇವರನ್ನು ಕೊಂಡಾಡುತ್ತಾ ಇರುವದನ್ನು ಪೇತ್ರನ ಸಂಗಡ ಬಂದಿದ್ದ ಯೆಹೂದ್ಯರಾದ ವಿಶ್ವಾಸಿಗಳು ಕೇಳಿದಾಗ - ಅನ್ಯಜನಗಳಿಗೂ ಪವಿತ್ರಾತ್ಮ ದಾನ ಮಾಡಲ್ಪಟ್ಟಿದೆಯಲ್ಲಾ ಎಂದು ಅತ್ಯಾಶ್ಚರ್ಯಪಟ್ಟರು. ನಡೆದ ಸಂಗತಿಯನ್ನು ಪೇತ್ರನು ನೋಡಿ -


ಹನ್ನಳ ವಿಜ್ಞಾಪನೆ - ನನ್ನ ಹೃದಯವು ಯೆಹೋವನಲ್ಲಿ ಉಲ್ಲಾಸಿಸುತ್ತದೆ; ನನ್ನ ಕೊಂಬು ಯೆಹೋವನಿಂದ ಎತ್ತಲ್ಪಟ್ಟಿದೆ. ಶತ್ರುಗಳ ಮುಂದೆ ನನ್ನ ಬಾಯಿ ತೆರೆದಿರುವದು. ನಿನ್ನ ರಕ್ಷಣೆಯಲ್ಲಿ ಆನಂದಿಸುತ್ತೇನೆ.


ಯಾಕಂದರೆ ಯೆರೂಸಲೇವಿುನಲ್ಲಿರುವ ದೇವಜನರೊಳಗೆ ಬಡವರಿಗೋಸ್ಕರ ಸ್ವಲ್ಪ ಹಣದ ಸಹಾಯವನ್ನು ಮಾಡಬೇಕೆಂಬದಾಗಿ ಮಕೆದೋನ್ಯ ಅಖಾಯ ಸೀಮೆಗಳವರು ಇಷ್ಟಪಟ್ಟಿದ್ದಾರೆ.


ಸಹೋದರರೇ, ನಿಮ್ಮನ್ನು ನೀವೇ ಬುದ್ಧಿವಂತರೆಂಬದಾಗಿ ಎಣಿಸಿಕೊಳ್ಳದಂತೆ ಇದುವರೆಗೆ ಗುಪ್ತವಾಗಿದ್ದ ಒಂದು ಸಂಗತಿ ನಿಮಗೆ ತಿಳಿದಿರಬೇಕೆಂದು ಅಪೇಕ್ಷಿಸುತ್ತೇನೆ; ಅದೇನಂದರೆ ಇಸ್ರಾಯೇಲ್ಯರಲ್ಲಿ ಒಂದು ಪಾಲು ಜನರಿಗೆ ಉಂಟಾದ ಮೊಂಡತನವು ಯಾವಾಗಲೂ ಇರದೆ ಅನ್ಯಜನಗಳ ಸಮುದಾಯವು ದೇವರ ರಾಜ್ಯದಲ್ಲಿ ಸೇರುವ ತನಕ ಮಾತ್ರ ಇರುವದು;


ಕೆಲವು ವರುಷಗಳಾದ ಮೇಲೆ ನಾನು ನನ್ನ ಸ್ವದೇಶದವರಿಗೆ ಧರ್ಮದ್ರವ್ಯಗಳನ್ನು ತರುವದಕ್ಕೂ ಕಾಣಿಕೆಗಳನ್ನು ಒಪ್ಪಿಸುವದಕ್ಕೂ ಬಂದೆನು.


ಅನಂತರ ಅವರು ತಮ್ಮ ದೇವರಾದ ಯೆಹೋವನನ್ನೂ ತಮ್ಮ ರಾಜನಾದ ದಾವೀದನನ್ನೂ ಪುನಃ ಆಶ್ರಯಿಸುವರು; ಹೌದು, ಅಂತ್ಯಕಾಲದಲ್ಲಿ ಯೆಹೋವನನ್ನೂ ಆತನ ದಯೆಯನ್ನೂ ಭಯಭಕ್ತಿಯಿಂದ ಮರೆಹೊಗುವರು.


ನಾನು ಈ ಜನರಿಗೆ ಅನುಗ್ರಹಿಸುವ ಎಲ್ಲಾ ಮೇಲುಗಳ ಸುದ್ದಿಯನ್ನು ಕೇಳಿ ನಾನು ಈ ಪಟ್ಟಣಕ್ಕೆ ಉಂಟುಮಾಡುವ ಸುಖಸಮಾಧಾನಗಳನ್ನು ನೋಡಿ ಹೆದರಿ ನಡುಗುವ ಸಕಲ ಭೂರಾಜ್ಯಗಳ ಮುಂದೆ ಈ ಪಟ್ಟಣವು ನನ್ನ ಕೀರ್ತಿಯೂ ಮಹಿಮೆಯೂ ಆನಂದದ ಬಿರುದೂ ಆಗುವದು.


ಜನಾಂಗಗಳ ಐಶ್ವರ್ಯವನ್ನು ನಿನ್ನಲ್ಲಿಗೆ ತರುತ್ತಿರುವರು, ಅವುಗಳ ಅರಸರು ಮೆರವಣಿಗೆಯಾಗಿ ಬರುತ್ತಿರುವರು; ಇದರಿಂದ ನಿನ್ನ ಬಾಗಿಲುಗಳು ಹಗಲಿರುಳೂ ಮುಚ್ಚದೆ ಸದಾ ತೆರೆದಿರುವವು.


ನಿನ್ನ ಗುಡಾರದ ಸ್ಥಳವನ್ನು ವಿಸ್ತರಿಸು, ನಿನ್ನ ನಿವಾಸದ ಪರದೆಗಳು ಹರಡಲಿ, ಸಂಕೋಚಪಡಬೇಡ; ನಿನ್ನ ಹಗ್ಗಗಳನ್ನು ಉದ್ದಮಾಡಿ ಗೂಟಗಳನ್ನು ಬಲಪಡಿಸು.


ಆತನನ್ನೇ ದೃಷ್ಟಿಸಿದವರು ಪ್ರಕಾಶವನ್ನು ಹೊಂದಿದರು; ಅವರ ಮುಖವು ಲಜ್ಜೆಯಿಂದ ಕೆಡುವದೇ ಇಲ್ಲ.


ಜನಾಂಗಗಳ ವೈಭವವೂ ಘನವೂ ಅಲ್ಲಿಗೆ ಬರುವವು.


ನಾವು ಮೇರೆದಪ್ಪಿ ಮತ್ತೊಬ್ಬರ ಪ್ರಯಾಸದ ಫಲಗಳನ್ನು ತಕ್ಕೊಂಡು ಇವು ನಮ್ಮವು ಎಂದು ಹಿಗ್ಗುವವರಲ್ಲ; ಆದರೆ ನಿಮ್ಮ ನಂಬಿಕೆಯು ಹೆಚ್ಚಿದ ಹಾಗೆಲ್ಲಾ ನಿಮ್ಮ ಮೂಲಕ ನಮ್ಮ ಮೇರೆಯೊಳಗೆ ಇನ್ನೂ ಅಭಿವೃದ್ಧಿಹೊಂದಿ


ಅದರ ಬೆಳಕಿನಿಂದ ಸರ್ವಜನಾಂಗದವರು ಸಂಚಾರಮಾಡುವರು; ಭೂರಾಜರು ತಮ್ಮ ವೈಭವವನ್ನು ಅಲ್ಲಿಗೆ ತರುವರು.


ಅವರು ಸಮುದ್ರದಿಂದ ಐಶ್ವರ್ಯವನ್ನು ಹೊಂದಿ ಉಸುಬಿನಲ್ಲಿ ಅಡಗಿರುವ ಸಂಪತ್ತನ್ನು ಪಡೆಯುವರು. ಅನ್ಯಜನಗಳನ್ನು ತಮ್ಮ ಬೆಟ್ಟದ ಸೀಮೆಗೆ ಕರಿಸಿ ಅಲ್ಲಿ ನ್ಯಾಯವಾದ ಯಜ್ಞಗಳನ್ನು ಸಮರ್ಪಿಸುವರು.


ನೀನು ನನ್ನ ಅಂತರಾತ್ಮವನ್ನು ಬಿಡುಗಡೆಮಾಡು; ಆಗ ಆಸಕ್ತಿಯಿಂದ ನಿನ್ನ ಆಜ್ಞಾಮಾರ್ಗವನ್ನು ಅನುಸರಿಸುವೆನು.


ಯೆಹೋವನು ಹೀಗನ್ನುತ್ತಾನೆ - ಇಗೋ, ನಾನು ಆಕೆಗೆ ಸುಖವನ್ನು ನದಿಯಂತೆ ದಯಪಾಲಿಸಿ ತುಂಬಿ ತುಳುಕುವ ತೊರೆಯನ್ನೋ ಎಂಬಂತೆ ಜನಾಂಗಗಳ ವೈಭವವನ್ನು ನೀಡುವೆನು; ನೀವು ಪಾನಮಾಡುವಿರಿ; ನಿಮ್ಮನ್ನು ಕಂಕುಳಲ್ಲಿ ಎತ್ತಿಕೊಂಡು ಹೋಗುವರು, ತೊಡೆಯ ಮೇಲೆ ನಲಿದಾಡಿಸುವರು.


ಐದು ತಲಾಂತು ಹೊಂದಿದವನು ಹೋಗಿ ಅದನ್ನು ವ್ಯಾಪಾರಕ್ಕೆ ಹಾಕಿ ಇನ್ನೂ ಐದು ತಲಾಂತು ಗಳಿಸಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು