ಯೆಶಾಯ 60:7 - ಕನ್ನಡ ಸತ್ಯವೇದವು J.V. (BSI)7 ಕೇದಾರಿನ ಹಿಂಡುಗಳೆಲ್ಲಾ ನಿನ್ನಲ್ಲಿ ಕೂಡುವವು; ನೆಬಾಯೋತಿನ ಟಗರುಗಳು ನೀನು ಮಾಡುವ ಯಜ್ಞಕ್ಕೆ ಅನುಕೂಲಿಸಿ ನನ್ನ ಯಜ್ಞವೇದಿಯ ಮೇಲೆ ಸಮರ್ಪಕವಾಗಿ ಒಯ್ಯಲ್ಪಡುವವು; ನನ್ನ ಸುಂದರಾಲಯವನ್ನು ಚಂದಗೊಳಿಸುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಕೇದಾರಿನ ಹಿಂಡುಗಳೆಲ್ಲಾ ನಿನ್ನಲ್ಲಿ ಕೂಡುವವು; ನೆಬಾಯೋತಿನ ಟಗರುಗಳು ನೀನು ಮಾಡುವ ಯಜ್ಞಕ್ಕೆ ಅನುಕೂಲಿಸುವವು. ಅವು ನನ್ನ ಯಜ್ಞವೇದಿಯ ಮೇಲೆ ಸಮರ್ಪಕವಾಗಿ ಒಯ್ಯಲ್ಪಡುವವು; ಮಹಿಮೆಯಿಂದ ಕೂಡಿದ ನನ್ನ ಆಲಯವನ್ನು ಘನಪಡಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ನಿನ್ನಲ್ಲಿ ಕೂಡುವುವು ಕೇದಾರಿನ ಸಕಲ ಮಂದೆಗಳು ಬಲಿಯರ್ಪಣೆಗೊದಗುವುವು ನೆಬಾಯೋತಿನ ಟಗರುಗಳು. ಏರುವುವು ನನಗೆ ಸಮರ್ಪಕವಾದ ಹೋಮವಾಗಿ ಬಲಿಪೀಠವನು. ಚಂದಗೊಳಿಸುವೆನು ನನ್ನ ಸುಂದರವಾದ ಆಲಯವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಜನರು ಕೇದಾರಿನ ಎಲ್ಲಾ ಕುರಿಗಳನ್ನು ಒಟ್ಟುಗೂಡಿಸಿ ನಿನಗೆ ಕೊಡುವರು. ನೆಬಾಯೋತಿನಿಂದ ಟಗರುಗಳನ್ನು ನಿನಗೆ ತರುವರು. ನೀನು ನಿನ್ನ ವೇದಿಕೆಯ ಮೇಲೆ ಅವುಗಳನ್ನು ಯಜ್ಞಮಾಡುವೆ. ಆಗ ನಾನು ಸ್ವೀಕರಿಸುವೆನು. ನನ್ನ ಸುಂದರವಾದ ಆಲಯವನ್ನು ಇನ್ನೂ ಸೌಂದರ್ಯಗೊಳಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಕೇದಾರಿನ ಮಂದೆಗಳೆಲ್ಲಾ ನಿನ್ನಲ್ಲಿ ಸೇರಿಬರುವುವು. ನೆಬಾಯೋತಿನ ಟಗರುಗಳು ನಿನ್ನನ್ನು ಸೇವಿಸುವುವು. ನನ್ನ ಬಲಿಪೀಠದ ಮೇಲೆ ಮೆಚ್ಚಿಕೆಯಿಂದ ಏರುವುವು. ನನ್ನ ಮಹಿಮೆಯ ಆಲಯವನ್ನು ಘನಪಡಿಸುವೆನು. ಅಧ್ಯಾಯವನ್ನು ನೋಡಿ |
ಈಗ ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ತೆಗೆದುಕೊಂಡು ನನ್ನ ದಾಸನಾದ ಯೋಬನ ಬಳಿಗೆ ಹೋಗಿ ನಿಮ್ಮ ದೋಷಪರಿಹಾರಕ್ಕಾಗಿ ಹೋಮಮಾಡಿರಿ; ನನ್ನ ದಾಸನಾದ ಯೋಬನು ನಿಮ್ಮ ಪಕ್ಷವಾಗಿ ಪ್ರಾರ್ಥನೆ ಮಾಡುವನು; ನಾನು ಅವನ ವಿಜ್ಞಾಪನೆಯನ್ನು ಲಾಲಿಸಿ ನಿಮ್ಮ ಮೂರ್ಖತನಕ್ಕೆ ತಕ್ಕ ದಂಡನೆಯನ್ನು ನಿಮಗೆ ವಿಧಿಸುವದಿಲ್ಲ. ನನ್ನ ದಾಸನಾದ ಯೋಬನು ನನ್ನ ವಿಷಯವಾಗಿ ಸತ್ಯವನ್ನು ನುಡಿದಂತೆ ನೀವು ನುಡಿಯಲಿಲ್ಲ ಎಂದು ಹೇಳಿದನು.