Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 60:8 - ಕನ್ನಡ ಸತ್ಯವೇದವು J.V. (BSI)

8 ಆಹಾ, ದ್ವೀಪನಿವಾಸಿಗಳೂ ನನ್ನನ್ನು ನಿರೀಕ್ಷಿಸುವವರಾಗಿದ್ದಾರೆ! ಮೇಘದೋಪಾದಿಯಲ್ಲಿಯೂ ಗೂಡುಗಳಿಗೆ ತ್ವರೆಪಡುವ ಪಾರಿವಾಳಗಳಂತೆಯೂ ಹಾರಿಬರುತ್ತಿರುವ ಇವರು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆಹಾ, ದ್ವೀಪನಿವಾಸಿಗಳೂ ನನ್ನನ್ನು ನಿರೀಕ್ಷಿಸುವವರಾಗಿದ್ದಾರೆ! ಮೇಘದೋಪಾದಿಯಲ್ಲಿ ಗೂಡುಗಳಿಗೆ ತ್ವರೆಪಡುವ ಪಾರಿವಾಳಗಳಂತೆ ಹಾರಿ ಬರುತ್ತಿರುವ ಇವರು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಹಾರಿಬರುತ್ತಿರುವ ಇವರಾರು ಮೇಘಗಳಂತೆ? ಗೂಡುಗಳಿಗೆ ತ್ವರೆಮಾಡುವ ಪಾರಿವಾಳಗಳಂತೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಜನರನ್ನು ನೋಡು! ಆಕಾಶದ ಮೋಡವು ಹಾರಿಹೋಗುವಂತೆ ಅವರು ನಿನ್ನ ಬಳಿಗೆ ತ್ವರಿತವಾಗಿ ಬರುತ್ತಿದ್ದಾರೆ. ತಮ್ಮ ಗೂಡುಗಳಿಗೆ ಹಾರುವ ಪಾರಿವಾಳಗಳಂತೆ ಅವರಿರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಮೇಘದಂತೆಯೂ, ತಮ್ಮ ಗೂಡುಗಳಿಗೆ ಹೋಗುವ ಪಾರಿವಾಳಗಳಂತೆಯೂ ಹಾರುವ ಇವರು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 60:8
8 ತಿಳಿವುಗಳ ಹೋಲಿಕೆ  

ಇವುಗಳಾದ ಮೇಲೆ ಇಗೋ, ಯಾರಿಂದಲೂ ಎಣಿಸಲಾಗದಂಥ ಮಹಾ ಸಮೂಹವು ಸಿಂಹಾಸನದ ಮುಂದೆಯೂ ಯಜ್ಞದ ಕುರಿಯಾದಾತನ ಮುಂದೆಯೂ ನಿಂತಿರುವದನ್ನು ಕಂಡೆನು. ಅವರು ಸಕಲ ಜನಾಂಗಕುಲ ಪ್ರಜೆಗಳವರೂ ಸಕಲ ಭಾಷೆಗಳನ್ನಾಡುವವರೂ ಆಗಿದ್ದರು. ಅವರು ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡು ತಮ್ಮ ಕೈಗಳಲ್ಲಿ ಖರ್ಜೂರದ ಗರಿಗಳನ್ನು ಹಿಡಿದುಕೊಂಡಿದ್ದರು.


ಇದಲ್ಲದೆ ಪೂರ್ವ ಪಶ್ಚಿಮ ಉತ್ತರ ದಕ್ಷಿಣ ದಿಕ್ಕುಗಳಿಂದಲೂ ಜನರು ಬಂದು ದೇವರ ರಾಜ್ಯದಲ್ಲಿ ಊಟಕ್ಕೆ ಕೂಡ್ರುವರು.


ಆದಕಾರಣ ಇಷ್ಟುಮಂದಿ ಸಾಕ್ಷಿಯವರು ಮೇಘದೋಪಾದಿಯಲ್ಲಿ ನಮ್ಮ ಸುತ್ತಲು ಇರುವದರಿಂದ ನಮಗೆ ಅಭ್ಯಂತರ ಮಾಡುವ ಎಲ್ಲಾ ಭಾರವನ್ನೂ ಹತ್ತಿಕೊಳ್ಳುವ ಪಾಪವನ್ನೂ ನಾವು ಸಹ ತೆಗೆದಿಟ್ಟು


ಕಣ್ಣೆತ್ತಿ ಸುತ್ತಲು ನೋಡು, ನಿನ್ನ ಮಕ್ಕಳೆಲ್ಲರೂ ಗುಂಪುಕೂಡಿ ನಿನ್ನ ಬಳಿಗೆ ಸೇರುತ್ತಿದ್ದಾರೆ; ಗಂಡು ಮಕ್ಕಳು ದೂರದಿಂದ ಸಮೀಪಿಸುತ್ತಾರೆ, ಹೆಣ್ಣುಮಕ್ಕಳು ಕಂಕುಳಿನಲ್ಲಿ ಕುಳಿತು ಬರುತ್ತಾರೆ.


ಆಗ ನೀನು ನಿನ್ನ ಮನದೊಳಗೆ - ನನಗೋಸ್ಕರ ಇವರನ್ನು ಯಾರು ಹೆತ್ತರು? ನಾನೋ ಮಕ್ಕಳನ್ನು ಕಳೆದುಕೊಂಡವಳು, ಪುತ್ರಹೀನಳು, ದೇಶಭ್ರಷ್ಟಳು, ತಿರುಕಳು; ಇವರನ್ನು ಸಾಕಿದವರು ಯಾರು? ಆಹಾ, ನಾನು ಒಂಟಿಯಾಗಿ ಉಳಿದಿದ್ದೆನಲ್ಲಾ; ಇವರೆಲ್ಲಿದ್ದರು? ಅಂದುಕೊಳ್ಳುವಿ.


ಎಲ್ಲಾ ದಿಗಂತಗಳವರೇ, ನನ್ನ ಕಡೆಗೆ ತಿರುಗಿಕೊಳ್ಳಿರಿ, ರಕ್ಷಣೆಯನ್ನು ಹೊಂದಿಕೊಳ್ಳಿರಿ; ನಾನೇ ದೇವರು, ಇನ್ನು ಯಾರೂ ಇಲ್ಲ.


ಗುಬ್ಬಿಗಳಂತೆ ಐಗುಪ್ತದಿಂದಲೂ ಪಾರಿವಾಳಗಳಂತೆ ಅಶ್ಶೂರದಿಂದಲೂ ಅದರುತ್ತಾ ತ್ವರೆಪಡುವರು; ಅವರು ತಮ್ಮ ತಮ್ಮ ನಿವಾಸಗಳಲ್ಲಿ ವಾಸಿಸುವಂತೆ ಮಾಡುವೆನು; ಇದು ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು