Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 61:11 - ಕನ್ನಡ ಸತ್ಯವೇದವು J.V. (BSI)

11 ಭೂವಿುಯು ತನ್ನೊಳಗಿಂದ ಮೊಳಿಕೆಯನ್ನು ಹೊರಡಿಸುವಂತೆಯೂ ತೋಟವು ತನ್ನಲ್ಲಿ ಬಿತ್ತಿದ್ದನ್ನು ಮೊಳೆಯಿಸುವ ಹಾಗೂ ಕರ್ತನಾದ ಯೆಹೋವನು ಎಲ್ಲಾ ಜನಾಂಗಗಳ ಎದುರಿನಲ್ಲಿ ಧರ್ಮವನ್ನೂ ಸ್ತೋತ್ರವನ್ನೂ ಮೊಳೆಯಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಭೂಮಿಯು ತನ್ನೊಳಗಿಂದ ಮೊಳಕೆಯನ್ನು ಹೊರಡಿಸುವಂತೆ, ತೋಟವು ತನ್ನಲ್ಲಿ ಬಿತ್ತಿದ್ದನ್ನು ಮೊಳೆಯಿಸುವ ಹಾಗೆ, ಕರ್ತನಾದ ಯೆಹೋವನು ಎಲ್ಲಾ ಜನಾಂಗಗಳ ಎದುರಿನಲ್ಲಿ ಧರ್ಮವನ್ನೂ ಮತ್ತು ಸ್ತೋತ್ರವನ್ನೂ ಮೊಳೆತು ಅಭಿವೃದ್ಧಿ ಹೊಂದುವಂತೆ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಬುವಿಯು ತನ್ನಿಂದ ಬೀಜವನು ಮೊಳೆಯಿಸುವಂತೆ ತೋಟವು ತನ್ನೊಳು ಸಸಿಯನು ಬೆಳೆಸುವಂತೆ ಸ್ವಾಮಿ ಸರ್ವೇಶ್ವರ, ಸಮಸ್ತ ರಾಷ್ಟ್ರಗಳ ಮುಂದೆ ವೃದ್ಧಿಗೊಳಿಸುವನು ಸದ್ಧರ್ಮವನೆ, ಸ್ತುತಿಸ್ತೋತ್ರವನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಭೂಮಿಯು ಸಸಿಗಳನ್ನು ಬೆಳೆಸುತ್ತದೆ. ಜನರು ತೋಟದಲ್ಲಿ ಬೀಜ ಬಿತ್ತುವರು. ತೋಟವು ಬೀಜವನ್ನು ಬೆಳೆಸುತ್ತದೆ. ಅದೇ ರೀತಿಯಲ್ಲಿ ಯೆಹೋವನು ಎಲ್ಲಾ ಜನಾಂಗಗಳಲ್ಲಿ ನೀತಿಯನ್ನೂ ಸ್ತೋತ್ರವನ್ನೂ ಬೆಳೆಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಏಕೆಂದರೆ ಭೂಮಿಯು ತನ್ನ ಮೊಳಕೆಯನ್ನು ಹೇಗೆ ಹೊರಡಿಸುವುದೋ, ತೋಟವು ತನ್ನಲ್ಲಿ ಬಿತ್ತಿದ್ದನ್ನು ಹೇಗೆ ಮೊಳೆಯಿಸುವುದೋ, ಹಾಗೆಯೇ ಸಾರ್ವಭೌಮ ಯೆಹೋವ ದೇವರು ನೀತಿಯನ್ನೂ, ಸ್ತೋತ್ರವನ್ನೂ ಎಲ್ಲಾ ಜನಾಂಗಗಳ ಮುಂದೆ ಮೊಳೆಯಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 61:11
24 ತಿಳಿವುಗಳ ಹೋಲಿಕೆ  

ಮತ್ತು ಯೆಹೋವನು ನಿಮ್ಮನ್ನು ನಿತ್ಯವೂ ನಡಿಸುತ್ತಾ ಮರುಭೂವಿುಯಲ್ಲಿಯೂ ನಿಮ್ಮ ಆತ್ಮವನ್ನು ತೃಪ್ತಿಗೊಳಿಸಿ ನಿಮ್ಮ ಎಲುಬುಗಳನ್ನು ಸಸಾರಮಾಡುವನು; ನೀವು ತಂಪಾದ ತೋಟಕ್ಕೂ ನೀರಿಗೆ ಮೋಸವಿಲ್ಲದ ಬುಗ್ಗೆಗೂ ಸಮಾನವಾಗುವಿರಿ.


ನೀವಾದರೋ ನಿಮ್ಮನ್ನು ಕತ್ತಲೆಯೊಳಗಿಂದ ಕರೆದು ತನ್ನ ಆಶ್ಚರ್ಯಕರವಾದ ಬೆಳಕಿನಲ್ಲಿ ಸೇರಿಸಿದಾತನ ಗುಣಾತಿಶಯಗಳನ್ನು ಪ್ರಚಾರಮಾಡುವವರಾಗುವಂತೆ ದೇವರಾದುಕೊಂಡ ಜನಾಂಗವೂ ರಾಜವಂಶಸ್ಥರಾದ ಯಾಜಕರೂ ಮೀಸಲಾದ ಜನವೂ ದೇವರ ಸ್ವಕೀಯ ಪ್ರಜೆಯೂ ಆಗಿದ್ದೀರಿ.


ಯೆಹೋವನಿಗೆ ಜ್ಞಾಪಿಸುವವರೇ, ಆತನು ಯೆರೂಸಲೇಮನ್ನು ಭದ್ರಪಡಿಸಿ ಲೋಕಪ್ರಸಿದ್ಧಿಗೆ ತರುವ ತನಕ ನಿಮಗೆ ವಿರಾಮವಿಲ್ಲದಿರಲಿ, ಆತನಿಗೂ ವಿರಾಮಕೊಡದಿರಿ.


ಚೀಯೋನಿನ ಧರ್ಮವು ಪ್ರಕಾಶಗೊಳ್ಳುವ ತನಕ, ಯೆರೂಸಲೇವಿುನ ರಕ್ಷಣೆಯು ದೀವಿಟಿಗೆಯಂತೆ ಪ್ರಜ್ವಲಿಸುವವರೆಗೆ ನಾನು ಮೌನವಾಗಿರದೆ ಚೀಯೋನಿನ ಹಿತವನ್ನು ಲಕ್ಷಿಸುತ್ತಿರುವೆನು; ಸುಮ್ಮನಿರದೆ ಯೆರೂಸಲೇವಿುನ ಕ್ಷೇಮವನ್ನು ಚಿಂತಿಸುತ್ತಿರುವೆನು.


ಆಕಾಶಮಂಡಲವೇ, ಮೇಲಿನಿಂದ ಧರ್ಮರಸವನ್ನು ವರ್ಷಿಸು, ಗಗನವು ಸುರಿಸಲಿ; ಭೂವಿುಯು ಒಡೆದು ರಕ್ಷಣೆಯನ್ನು ಮೊಳೆಯಿಸಿ ಅದರೊಡನೆ ನೀತಿಫಲವನ್ನು ಬೆಳೆಯಿಸಲಿ, ಯೆಹೋವನೆಂಬ ನಾನೇ ಇದಕ್ಕೆಲ್ಲಾ ಕರ್ತನು.


ಬಡಗಣ ಗಾಳಿಯೇ ಬೀಸು, ತೆಂಕಣ ಗಾಳಿಯೇ ಬಾ! ನನ್ನ ತೋಟದ ಸುಗಂಧಗಳು ಹರಡುವ ಹಾಗೆ ಅದರ ಮೇಲೆ ಸುಳಿದಾಡು. ಎನ್ನಿನಿಯನು ತನ್ನ ತೋಟದೊಳಗೆ ಸೇರಿ ತನ್ನ ಉತ್ತಮ ಫಲಗಳನ್ನು ತಾನೇ ಭುಜಿಸಲಿ.


ಸತ್ಯತೆಯು ಭೂವಿುಯಿಂದ ಹುಟ್ಟುವದು; ನೀತಿಯು ಆಕಾಶದಿಂದ ಕೆಳಗೆ ದೃಷ್ಟಿಸುವದು.


ಒಬ್ಬನು ವಾಕ್ಯವನ್ನು ಕೇಳಿ ತಿಳುಕೊಂಡು ಫಲವಂತನಾಗಿ ನೂರರಷ್ಟಾಗಲಿ ಅರುವತ್ತರಷ್ಟಾಗಲಿ ಮೂವತ್ತರಷ್ಟಾಗಲಿ ಫಲವನ್ನು ಕೊಡುತ್ತಾನೆ; ಇವನೇ ಒಳ್ಳೆಯ ನೆಲವಾಗಿರುವವನು ಎಂದು ಹೇಳಿದನು.


ಆಗ ಆತನು ಅವರಿಗೆ ಸಾಮ್ಯರೂಪವಾಗಿ ಅನೇಕ ಸಂಗತಿಗಳನ್ನು ಹೇಳಿದನು. ಹೇಗಂದರೆ -


ನಿನ್ನ ದೇಶದಲ್ಲಿ ಬಲಾತ್ಕಾರದ ಸುದ್ದಿಯೇ ಕಿವಿಗೆ ಬೀಳದು, ನಿನ್ನ ಪ್ರಾಂತಗಳೊಳಗೆ ಭಂಗನಾಶನಗಳ ವಾರ್ತೆಯೇ ಕೇಳಬರುವದಿಲ್ಲ; ಆಗ ದೇವರಕ್ಷಣೆಯು ನನ್ನ ಪೌಳಿಗೋಡೆಗಳು, ದೇವಸ್ತೋತ್ರವು ನನ್ನ ಬಾಗಿಲುಗಳು ಎಂದು ಅಂದುಕೊಳ್ಳುವಿ.


ದೇಶದಲ್ಲಿ ಬೆಟ್ಟಗಳ ಮೇಲೆಲ್ಲಾ ಬೆಳೆಯು ಸಮೃದ್ಧಿಯಾಗಲಿ; ಪೈರುಗಳ ಶಬ್ದವು ಲೆಬನೋನಿನ ಮರಗಳ ಸಪ್ಪಳದಂತಿರಲಿ. ಹೊಲದಲ್ಲಿ ಕಾಯಿಪಲ್ಯದಂತೆ ಪಟ್ಟಣಗಳಲ್ಲಿ ಜನರು ಹೆಚ್ಚಲಿ.


ಗುಡ್ಡದಿನ್ನೆಗಳೆಲ್ಲವು ನಿನ್ನ ಜನರಿಗೋಸ್ಕರ ನೀತಿಗನುಸಾರವಾಗಿ ಸುಕ್ಷೇಮವನ್ನು ಫಲಿಸಲಿ.


ಇನ್ನು ಕೆಲವು ಒಳ್ಳೆಯ ನೆಲದಲ್ಲಿ ಬಿದ್ದು ಒಂದು ನೂರರಷ್ಟು, ಒಂದು ಅರುವತ್ತರಷ್ಟು, ಒಂದು ಮೂವತ್ತರಷ್ಟು ಫಲವನ್ನು ಕೊಟ್ಟವು.


ಆ ದಿನದಲ್ಲಿ ಯೆಹೋವನು ದಯಪಾಲಿಸುವ ಬೆಳೆಯಿಂದ ಇಸ್ರಾಯೇಲ್ಯರಲ್ಲಿ ಉಳಿದವರಿಗೆ ಸೌಂದರ್ಯವೂ ಮಹಿಮೆಯೂ ಉಂಟಾಗುವವು, ದೇಶದ ಫಲದಿಂದ ಉನ್ನತಿಯೂ ಭೂಷಣವೂ ಲಭಿಸುವವು.


ಎಲ್ಲರೂ ನನಗೆ ಅಡ್ಡಬೀಳುವರು, ಎಲ್ಲರೂ ನನ್ನನ್ನು ದೇವರೆಂದು ಪ್ರತಿಜ್ಞೆಮಾಡುವರು ಎಂಬ ನುಡಿ ನನ್ನ ಸತ್ಯದ ಬಾಯಿಂದ ಹೊರಟಿದೆ, ಅದನ್ನು ಹಿಂತೆಗೆಯೆನು, ನನ್ನ ಮೇಲೆ ಆಣೆಯಿಟ್ಟಿದ್ದೇನೆ.


ಯೆಹೋವನಲ್ಲಿ ಮಾತ್ರ ಸತ್ಯಕಾರ್ಯಗಳೂ ಶಕ್ತಿಯೂ ಉಂಟು; ಆತನ ಮೇಲೆ ಉರಿಗೊಂಡವರೆಲ್ಲರೂ ನಾಚಿಕೆಪಟ್ಟು ಆತನನ್ನು ಮರೆಹೊಗುವರು;


ನನ್ನ ಧರ್ಮವನ್ನು ಹತ್ತಿರಕ್ಕೆ ಬರಮಾಡುವೆನು, ಅದು ಇನ್ನು ದೂರವಾಗಿರದು, ನನ್ನ ರಕ್ಷಣೆಯು ತಡವಾಗದು; ಚೀಯೋನಿನಲ್ಲಿ ರಕ್ಷಣಾಕಾರ್ಯವನ್ನು ನಡಿಸಿ ಇಸ್ರಾಯೇಲಿಗೆ ನನ್ನ ಮಹಿಮೆಯನ್ನು ದಯಪಾಲಿಸುವೆನು.


ನೀನು ನನ್ನ ಆಜ್ಞೆಗಳನ್ನು ಕೇಳಿದ್ದರೆ ಎಷ್ಟೋ ಚೆನ್ನಾಗಿತ್ತು! ನಿನ್ನ ಸುಖವು ದೊಡ್ಡ ನದಿಯಂತೆಯೂ ನಿನ್ನ ಕ್ಷೇಮವು ಸಮುದ್ರದ ಅಲೆಗಳ ಹಾಗೂ ಇರುತ್ತಿದ್ದವು;


ನಿನ್ನ ಜನರೆಲ್ಲಾ ಸದ್ಧರ್ಮಿಗಳಾಗಿರುವರು; ನನ್ನ ಪ್ರಭಾವಕ್ಕೋಸ್ಕರ ನಾನು ನೆಟ್ಟ ಸಸಿಯಾಗಿಯೂ ನನ್ನ ಕೈ ಸೃಷ್ಟಿಸಿದ ಪ್ರಜೆಯಾಗಿಯೂ ದೇಶವನ್ನು ಸದಾ ಅನುಭವಿಸುವರು.


ತರುವಾಯ ದೇವರು - ಭೂವಿುಯು ಹುಲ್ಲನ್ನೂ ಬೀಜಬಿಡುವ ಕಾಯಿಪಲ್ಯದ ಗಿಡಗಳನ್ನೂ ಬೆಳೆಸಲಿ; ಮತ್ತು ಬೀಜವುಳ್ಳ ಹಣ್ಣಿನ ಮರಗಳನ್ನೂ ಅವುಗಳ ಜಾತಿಗನುಸಾರವಾಗಿ ಹುಟ್ಟಿಸಲಿ ಎಂದು ಹೇಳಿದನು; ಹಾಗೆಯೇ ಆಯಿತು.


ಜನಾಂಗಗಳು ನಿನ್ನ ಧರ್ಮವನ್ನು, ಸಕಲ ರಾಜರು ನಿನ್ನ ವೈಭವವನ್ನು ನೋಡುವರು; ಯೆಹೋವನ ಬಾಯಿ ನೇವಿುಸಿದ ಹೊಸ ಹೆಸರು ನಿನಗೆ ದೊರೆಯುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು