Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 61:6 - ಕನ್ನಡ ಸತ್ಯವೇದವು J.V. (BSI)

6 ನೀವೋ ಯೆಹೋವನ ಯಾಜಕರೆಂಬ ಬಿರುದನ್ನು ಹೊಂದುವಿರಿ, ಜನರು ನಿಮ್ಮನ್ನು ನಮ್ಮ ದೇವರ ಸೇವಕರು ಎಂದು ಕರೆಯುವರು; ಜನಾಂಗಗಳ ಆಸ್ತಿಯನ್ನನುಭವಿಸುವಿರಿ, ಅವುಗಳ ವೈಭವವನ್ನು ಪಡೆದು ಹೊಗಳಿಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನೀವೋ ಯೆಹೋವನ ಯಾಜಕರೆಂಬ ಬಿರುದನ್ನು ಹೊಂದುವಿರಿ, ಜನರು ನಿಮ್ಮನ್ನು ನಮ್ಮ ದೇವರ ಸೇವಕರು ಎಂದು ಕರೆಯುವರು; ಜನಾಂಗಗಳ ಆಸ್ತಿಯನ್ನು ಅನುಭವಿಸುವಿರಿ, ಅವುಗಳ ವೈಭವವನ್ನು ಪಡೆದು ಹೊಗಳಿಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 “ಸರ್ವೇಶ್ವರನ ಯಾಜಕರು’ ಎಂಬ ಬಿರುದು ನಿಮ್ಮದಾಗುವುದು “ನಮ್ಮ ದೇವರ ಪರಿಚಾರಕರು” ಎಂಬ ಹೆಸರು ನಿಮಗೆ ಬರುವುದು. ಅನುಭವಿಸುವಿರಿ ಅನ್ಯರಾಷ್ಟ್ರಗಳ ಸಂಪತ್ತನ್ನು ಹೆಮ್ಮೆಪಡುವಿರಿ ಆ ಸಿರಿ ನಿಮ್ಮದಾಯಿತೆಂದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆಗ ನಿಮ್ಮನ್ನು “ಯೆಹೋವನ ಯಾಜಕರು” ಎಂತಲೂ “ದೇವರ ಸಹಾಯಕರು” ಎಂತಲೂ ಕರೆಯುವರು. ಭೂಲೋಕದ ಎಲ್ಲಾ ದೇಶಗಳ ಐಶ್ವರ್ಯವು ನಿಮ್ಮ ಕೈಸೇರುವುದರಿಂದ ನೀವು ಹೆಚ್ಚಳಪಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆದರೆ ನೀವು ಯೆಹೋವ ದೇವರ ಯಾಜಕರೆಂಬ ಬಿರುದನ್ನು ಹೊಂದುವಿರಿ. ನಮ್ಮ ದೇವರ ಸೇವಕರೆಂದು ನಿಮಗೆ ಹೆಸರಾಗುವುದು, ಜನಾಂಗಗಳ ಆಸ್ತಿಯನ್ನು ಅನುಭವಿಸುವಿರಿ. ಅವರ ವೈಭವವನ್ನು ಪಡೆದು ಹೊಗಳಿಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 61:6
25 ತಿಳಿವುಗಳ ಹೋಲಿಕೆ  

ನೀವು ನನಗೆ ಯಾಜಕ ರಾಜ್ಯವೂ ಪರಿಶುದ್ಧ ಜನವೂ ಆಗಿರುವಿರಿ. ಇವೇ ನೀನು ಇಸ್ರಾಯೇಲ್ಯರಿಗೆ ಹೇಳಬೇಕಾದ ಮಾತುಗಳು ಎಂದನು.


ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮ ಸಂಬಂಧವಾದ ಮಂದಿರವಾಗಲಿಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ, ಮತ್ತು ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕವಾದ ಆತ್ಮೀಯಯಜ್ಞಗಳನ್ನು ಸಮರ್ಪಿಸುವದಕ್ಕೆ ಪವಿತ್ರ ಯಾಜಕವರ್ಗದವರಾಗಿದ್ದೀರಿ.


ನೀವಾದರೋ ನಿಮ್ಮನ್ನು ಕತ್ತಲೆಯೊಳಗಿಂದ ಕರೆದು ತನ್ನ ಆಶ್ಚರ್ಯಕರವಾದ ಬೆಳಕಿನಲ್ಲಿ ಸೇರಿಸಿದಾತನ ಗುಣಾತಿಶಯಗಳನ್ನು ಪ್ರಚಾರಮಾಡುವವರಾಗುವಂತೆ ದೇವರಾದುಕೊಂಡ ಜನಾಂಗವೂ ರಾಜವಂಶಸ್ಥರಾದ ಯಾಜಕರೂ ಮೀಸಲಾದ ಜನವೂ ದೇವರ ಸ್ವಕೀಯ ಪ್ರಜೆಯೂ ಆಗಿದ್ದೀರಿ.


ಇದಲ್ಲದೆ ಇವರಲ್ಲಿ ಯಾಜಕರೂ ಲೇವಿಯರೂ ಆಗತಕ್ಕವರನ್ನು ಆರಿಸಿಕೊಳ್ಳುವೆನು ಎಂದು ಯೆಹೋವನು ಹೇಳುತ್ತಾನೆ.


ಪ್ರಥಮ ಪುನರುತ್ಥಾನದಲ್ಲಿ ಸೇರಿರುವವನು ಧನ್ಯನೂ ಪರಿಶುದ್ಧನೂ ಆಗಿದ್ದಾನೆ. ಇಂಥವರ ಮೇಲೆ ಎರಡನೆಯ ಮರಣಕ್ಕೆ ಅಧಿಕಾರವಿಲ್ಲ; ಆದರೆ ಅವರು ದೇವರಿಗೂ ಕ್ರಿಸ್ತನಿಗೂ ಯಾಜಕರಾಗಿ ಕ್ರಿಸ್ತನೊಂದಿಗೆ ಆ ಸಾವಿರ ವರುಷ ಆಳುವರು.


ಅವರನ್ನು ನಮ್ಮ ದೇವರಿಗೋಸ್ಕರ ರಾಜ್ಯವನ್ನಾಗಿಯೂ ಯಾಜಕರನ್ನಾಗಿಯೂ ಮಾಡಿದಿ; ಅವರು ಭೂವಿುಯ ಮೇಲೆ ಆಳುವರು ಎಂದು ಹೇಳಿದರು.


ಅವರು ಕ್ರಿಸ್ತನ ಸೇವಕರೋ ಅವರಿಗಿಂತ ನಾನು ಹೆಚ್ಚಾಗಿ ಸೇವೆಮಾಡುವವನಾಗಿದ್ದೇನೆ. ಬುದ್ಧಿಸ್ವಾಧೀನವಿಲ್ಲದವನಾಗಿ ಮಾತಾಡುತ್ತೇನೆ. ಆತನ ಸೇವೆಯಲ್ಲಿ ಅವರಿಗಿಂತ ಹೆಚ್ಚಾಗಿ ಪ್ರಯಾಸಪಟ್ಟೆನು, ಹೆಚ್ಚಾಗಿ ಸೆರೆಮನೆಗಳೊಳಗೆ ಬಿದ್ದೆನು; ವಿುತಿಮೀರಿ ಪೆಟ್ಟುಗಳನ್ನು ತಿಂದೆನು, ಅನೇಕಸಾರಿ ಮರಣದ ಬಾಯೊಳಗೆ ಸಿಕ್ಕಿಕೊಂಡೆನು.


ಜನರು ನಮ್ಮನ್ನು ಕ್ರಿಸ್ತನ ಕೈಕೆಳಗಿನವರೆಂತಲೂ ದೇವರು ತಿಳಿಸಿರುವ ಸತ್ಯಾರ್ಥಗಳ ವಿಷಯದಲ್ಲಿ ಮನೆವಾರ್ತೆಯವರೆಂತಲೂ ಎಣಿಸಬೇಕು.


ಹಾಗಾದರೆ ಅಪೊಲ್ಲೋಸನು ಏನು? ಪೌಲನು ಏನು? ಅವರು ಸೇವಕರು; ಅವರ ಮುಖಾಂತರ ನೀವು ಕ್ರಿಸ್ತನನ್ನು ನಂಬುವವರಾದಿರಿ; ಕರ್ತನು ಒಬ್ಬೊಬ್ಬನಿಗೆ ದಯಪಾಲಿಸಿದ ಪ್ರಕಾರ ಅವರು ಸೇವೆಮಾಡುವವರಾಗಿದ್ದಾರೆ.


ಆದದರಿಂದ ಸಹೋದರರೇ, ದೇವರ ಕನಿಕರವನ್ನು ನಿಮ್ಮ ನೆನಪಿಗೆ ತಂದು ನಿಮ್ಮನ್ನು ಬೇಡಿಕೊಳ್ಳುವದೇನಂದರೆ - ನೀವು ನಿಮ್ಮ ನಿಮ್ಮ ದೇಹಗಳನ್ನು ದೇವರಿಗೆ ಮೀಸಲಾಗಿಯೂ ಮೆಚ್ಚಿಗೆಯಾಗಿಯೂ ಇರುವ ಸಜೀವಯಜ್ಞವಾಗಿ ಅರ್ಪಿಸಿರಿ; ಇದೇ ನಿಮ್ಮ ವಿವೇಕಪೂರ್ವಕವಾದ ಆರಾಧನೆಯು.


ಹೀಗಾದರೆ ಇಸ್ರಾಯೇಲ್ ವಂಶದವರು ಇನ್ನು ನನ್ನನ್ನು ತೊರೆಯರು, ತಮ್ಮ ಲೆಕ್ಕವಿಲ್ಲದ ದ್ರೋಹಗಳಿಂದ ತಮ್ಮನ್ನು ಹೊಲೆಮಾಡಿಕೊಳ್ಳರು; ಅವರು ನನಗೆ ಪ್ರಜೆಯಾಗಿರುವರು, ನಾನು ಅವರಿಗೆ ದೇವರಾಗಿರುವೆನು, ಇದು ಕರ್ತನಾದ ಯೆಹೋವನ ನುಡಿ.


ಯೆಹೋವನು ಹೀಗನ್ನುತ್ತಾನೆ - ಇಗೋ, ನಾನು ಆಕೆಗೆ ಸುಖವನ್ನು ನದಿಯಂತೆ ದಯಪಾಲಿಸಿ ತುಂಬಿ ತುಳುಕುವ ತೊರೆಯನ್ನೋ ಎಂಬಂತೆ ಜನಾಂಗಗಳ ವೈಭವವನ್ನು ನೀಡುವೆನು; ನೀವು ಪಾನಮಾಡುವಿರಿ; ನಿಮ್ಮನ್ನು ಕಂಕುಳಲ್ಲಿ ಎತ್ತಿಕೊಂಡು ಹೋಗುವರು, ತೊಡೆಯ ಮೇಲೆ ನಲಿದಾಡಿಸುವರು.


ಅವಳ ವ್ಯಾಪಾರವೂ ಆದಾಯವೂ ಅವಳಿಗೆ ನಿಧಿನಿಕ್ಷೇಪವಾಗದೆ ಯೆಹೋವನಿಗೇ ಮೀಸಲಾಗುವದು; ಆ ವ್ಯಾಪಾರವು ಯೆಹೋವನ ಸನ್ನಿಧಾನದಲ್ಲಿ ವಾಸಿಸುವವರಿಗೆ ಬೇಕಾದಷ್ಟು ಅನ್ನವನ್ನೂ ಶ್ರೇಷ್ಠವಾದ ಉಡುಪನ್ನೂ ಒದಗಿಸಲು ಅನುಕೂಲಿಸುವದು.


ತನ್ನ ತಂದೆಯಾದ ದೇವರಿಗೆ ಯಾಜಕರನ್ನಾಗಿಯೂ ಮಾಡಿದವನೂ ಆಗಿರುವಾತನಿಗೆ ಯುಗಯುಗಾಂತರಗಳಲ್ಲಿಯೂ ಘನ ಮಹತ್ವಗಳಿರಲಿ. ಆಮೆನ್.


ಅನ್ಯದೇಶೀಯರಲ್ಲಿ ಯಾರು ಯೆಹೋವನೆಂಬ ನನ್ನನ್ನು ಅವಲಂಬಿಸಿ ಸೇವಿಸಿ ನನ್ನ ನಾಮವನ್ನು ಪ್ರೀತಿಸಿ ನನಗೆ ದಾಸರಾಗಿ ಸಬ್ಬತ್ ದಿನವನ್ನು ಹೊಲೆಮಾಡದೆ ನನ್ನ ದಿನವೆಂದು ಆಚರಿಸಿ ನನ್ನ ಒಡಂಬಡಿಕೆಯನ್ನು ಭದ್ರವಾಗಿ ಹಿಡಿಯುತ್ತಾರೋ


ಸ್ವದೇಶಸ್ಥರೊಂದಿಗೆ ಅವರಿಗೆ ಸ್ವಾಸ್ತ್ಯವು ದೊರೆಯುವದಿಲ್ಲ; ಯೆಹೋವನು ಅವರಿಗೆ ಹೇಳಿದಂತೆ ತಾನೇ ಅವರಿಗೆ ಸ್ವಾಸ್ತ್ಯವು.


ನೀನು ಎಲ್ಲಾ ಕಡೆಗಳಲ್ಲಿಯೂ ಹಬ್ಬಿಕೊಳ್ಳುವಿ; ನಿನ್ನ ಸಂತಾನದವರು ಜನಾಂಗಗಳನ್ನು ವಶಮಾಡಿಕೊಂಡು ಹಾಳು ಪಟ್ಟಣಗಳನ್ನು ಜನಭರಿತವಾಗುವಂತೆ ಮಾಡುವರು.


ನನ್ನ ಸನ್ನಿಧಿಯಲ್ಲಿ ನಿರಂತರವಾಗಿ ಸರ್ವಾಂಗಹೋಮ, ನೈವೇದ್ಯ, ಯಜ್ಞ ಇವುಗಳನ್ನು ಮಾಡಲು ಲೇವಿಯರಾದ ಯಾಜಕರು ಇದ್ದೇ ಇರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು