Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 61:9 - ಕನ್ನಡ ಸತ್ಯವೇದವು J.V. (BSI)

9 ಇವರ ಸಂತಾನವು ಜನಾಂಗಗಳಲ್ಲಿ ಪ್ರಖ್ಯಾತವಾಗುವದು, ಇವರ ಸಂತತಿಯು ಅನ್ಯದೇಶೀಯರಲ್ಲಿ ಹೆಸರುಗೊಳ್ಳುವದು; ಇವರನ್ನು ನೋಡುವವರೆಲ್ಲರು ಯೆಹೋವನು ಆಶೀರ್ವದಿಸಿದ ವಂಶವು ಇದೇ ಎಂದು ಒಪ್ಪಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಇವರ ಸಂತಾನವು ಜನಾಂಗಗಳಲ್ಲಿ ಪ್ರಖ್ಯಾತವಾಗುವುದು, ಇವರ ಸಂತತಿಯು ಅನ್ಯದೇಶೀಯರಲ್ಲಿ ಹೆಸರುಗೊಳ್ಳುವುದು. ಇವರನ್ನು ನೋಡುವವರೆಲ್ಲರು ಯೆಹೋವನು ಆಶೀರ್ವದಿಸಿದ ವಂಶವು ಇದೇ ಎಂದು ಒಪ್ಪಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಪ್ರಖ್ಯಾತವಾಗುವುದು ಇವರ ಸಂತಾನ ವಿಶ್ವದಲ್ಲೆಲ್ಲ ಹೆಸರುವಾಸಿಯಾಗುವುದು ಇವರ ಸಂತತಿ ಅನ್ಯರಾಷ್ಟ್ರಗಳಲ್ಲೆಲ್ಲ. ಲಭಿಸುವುದು ಸರ್ವೇಶ್ವರನ ಆಶೀರ್ವಾದ ಈ ಜನತೆಗೆ ಖಚಿತವಾಗುವುದಿದು ನೋಡುವವರೆಲ್ಲರಿಗೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಎಲ್ಲಾ ಜನಾಂಗಗಳವರು ನನ್ನ ಜನರನ್ನೂ ನನ್ನ ದೇಶದ ಮಕ್ಕಳನ್ನೂ ತಿಳಿದುಕೊಳ್ಳುವರು. ಅವರನ್ನು ಜನರು ನೋಡಿದಾಗ ಯೆಹೋವನು ಅವರನ್ನು ಆಶೀರ್ವದಿಸುತ್ತಿದ್ದಾನೆ ಎಂದು ತಿಳಿಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆಗ ಅವರ ಸಂತಾನವು ಇತರ ಜನಾಂಗಗಳಲ್ಲಿ ಪ್ರಸಿದ್ಧವಾಗುವುದು. ಅವರಿಂದಾದ ಉತ್ಪತ್ತಿ ಜನರ ಮಧ್ಯದಲ್ಲಿ ತಿಳಿಸಲಾಗುವುದು. ಅವರನ್ನು ನೋಡುವವರೆಲ್ಲರೂ, ಅವರೇ ಯೆಹೋವ ದೇವರು ಆಶೀರ್ವದಿಸಿದ ಸಂತಾನ ಎಂದು ಒಪ್ಪಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 61:9
15 ತಿಳಿವುಗಳ ಹೋಲಿಕೆ  

ಬತ್ತಿದ ಭೂವಿುಯಲ್ಲಿ ಮಳೆಗರೆದು ಒಣನೆಲದಲ್ಲಿ ಕಾಲುವೆಗಳನ್ನು ಹರಿಸುವೆನು; ನಿನ್ನ ಸಂತಾನದವರಲ್ಲಿ ನನ್ನ ಆತ್ಮವನ್ನು, ನಿನ್ನ ಸಂತತಿಯವರ ಮೇಲೆ ನನ್ನ ಆಶೀರ್ವಾದವನ್ನು, ಸುರಿಸುವೆನು.


ಯೆಹೋವನು ನಿಮ್ಮನ್ನೂ ನಿಮ್ಮ ಮಕ್ಕಳನ್ನೂ ಅಭಿವೃದ್ಧಿಪಡಿಸಲಿ;


ಮೊದಲು ನಿಮಗಾಗಿಯೇ ದೇವರು ತನ್ನ ಸೇವಕನನ್ನು ಏರ್ಪಡಿಸಿ ಈತನು ನಿಮ್ಮಲ್ಲಿ ಪ್ರತಿಯೊಬ್ಬನನ್ನು ಅವನವನ ಕೆಟ್ಟ ನಡತೆಗಳಿಂದ ತಿರುಗಿಸಿ ನಿಮ್ಮನ್ನು ಆಶೀರ್ವದಿಸಬೇಕೆಂದು ಆತನನ್ನು ಕಳುಹಿಸಿಕೊಟ್ಟಿದ್ದಾನೆ ಎಂದು ಹೇಳಿದನು.


ನೀನು ನನ್ನ ಮಾತನ್ನು ಕೇಳಿದ್ದರಿಂದ ಭೂವಿುಯ ಎಲ್ಲಾ ಜನಾಂಗಗಳಿಗೂ ನಿನ್ನ ಸಂತತಿಯ ಮೂಲಕ ಆಶೀರ್ವಾದವುಂಟಾಗುವದು ಎಂಬದಾಗಿ ಯೆಹೋವನು ತನ್ನಾಣೆಯಿಟ್ಟು ಹೇಳಿದ್ದಾನೆ ಅಂದನು.


ಯೆಹೂದ ಕುಲವೇ, ಇಸ್ರಾಯೇಲ್ ವಂಶವೇ, ನಿಮ್ಮ ಹೆಸರು ಹೇಗೆ ಜನಾಂಗಗಳಲ್ಲಿ ಶಾಪದ ಮಾತಾಗಿ ಸಲ್ಲುತ್ತಿತ್ತೋ ಹಾಗೆಯೇ ನಾನು ನಿಮ್ಮನ್ನು ರಕ್ಷಿಸಿದ ಮೇಲೆ ನಿಮ್ಮ ಹೆಸರು ಹರಕೆಯ ಮಾತಾಗಿ ಸಲ್ಲುವದು; ಹೆದರಬೇಡಿರಿ, ನಿಮ್ಮ ಕೈಗಳು ಬಲಗೊಳ್ಳಲಿ!


ಅವರು ವ್ಯರ್ಥವಾಗಿ ದುಡಿಯರು, ಅವರಿಗೆ ಹುಟ್ಟುವ ಮಕ್ಕಳು ಘೋರ ವ್ಯಾಧಿಗೆ ಗುರಿಯಾಗರು. ಅವರು ಯೆಹೋವನ ಆಶೀರ್ವಾದವನ್ನು ಹೊಂದಿದವರ ಸಂತಾನವಷ್ಟೆ; ಅವರ ಸಂತತಿಯವರು ಅವರೊಂದಿಗೆ ಬಹುದಿನವಿರುವರು.


ಲಾಬಾನನು ಅವನಿಗೆ - ನನ್ನ ಮೇಲೆ ದಯವಿಟ್ಟು ನನ್ನ ಬಳಿಯಲ್ಲೇ ಇರು; ಯೆಹೋವನು ನಿನ್ನ ನಿವಿುತ್ತ ನನ್ನನ್ನು ಅಭಿವೃದ್ಧಿಪಡಿಸಿದ್ದಾನೆಂದು ಚೆನ್ನಾಗಿ ತಿಳಿದಿದ್ದೇನೆ.


ಭಯಪಡಬೇಡ, ನಾನು ನಿನ್ನ ಸಂಗಡ ಇದ್ದೇನೆ; ನಿನ್ನ ಸಂತತಿಯವರನ್ನು ಮೂಡಲಿಂದ ತರುವೆನು; ನಿನ್ನವರನ್ನು ಪಡುವಲಿಂದ ಕೂಡಿಸುವೆನು;


ಅವನನ್ನು ಜಜ್ಜುವದು ಯೆಹೋವನ ಸಂಕಲ್ಪವಾಗಿತ್ತು. ಆತನು ಅವನನ್ನು ವ್ಯಾಧಿಯಿಂದ ಬಾಧಿಸಿ ಹೀಗೆಂದುಕೊಂಡನು; ಇವನು ತನ್ನ ಆತ್ಮವನ್ನು ಪ್ರಾಯಶ್ಚಿತ್ತಯಜ್ಞಕ್ಕಾಗಿ ಒಪ್ಪಿಸಿದ ಮೇಲೆ ತನ್ನ ಸಂತಾನವನ್ನು ನೋಡುವನು, ಚಿರಂಜೀವಿಯಾಗುವನು, ನನ್ನ ಸಂಕಲ್ಪವು ಇವನ ಕೈಯಿಂದ ನೆರವೇರುವದು;


ನಾನು ಸೃಷ್ಟಿಸುವ ನೂತನಾಕಾಶಮಂಡಲವೂ ನೂತನಭೂಮಂಡಲವೂ ನನ್ನ ಮುಂದೆ ಸ್ಥಿರವಾಗಿ ನಿಲ್ಲುವ ಪ್ರಕಾರ ನಿಮ್ಮ ಸಂತತಿಯೂ ನಿಮ್ಮ ಹೆಸರೂ ಸ್ಥಿರವಾಗಿ ನಿಲ್ಲುವವು.


ಯೆಹೋವನು ಇಂತೆನ್ನುತ್ತಾನೆ - ಯಾಕೋಬಿನ ನಿವಿುತ್ತ ಹರ್ಷಧ್ವನಿಗೈಯಿರಿ, ಜನಾಂಗಗಳ ಶಿರೋಮಣಿಯ ವಿಷಯದಲ್ಲಿ ಕೇಕೆಹಾಕಿರಿ; ಯೆಹೋವನೇ, ಇಸ್ರಾಯೇಲಿನ ಶೇಷವಾದ ನಿನ್ನ ಜನವನ್ನು ರಕ್ಷಿಸು ಎಂದು ಘೋಷಿಸಿ ಸ್ತುತಿಸಿರಿ.


ಆಗ ಸಕಲ ಜನಾಂಗಗಳವರು ನಿಮ್ಮನ್ನು ಧನ್ಯರೆಂದು ಕೊಂಡಾಡುವರು; ನಿಮ್ಮ ದೇಶವು ಆನಂದವಾಗಿರುವದು; ಇದು ಸೇನಾಧೀಶ್ವರ ಯೆಹೋವನ ನುಡಿ.


ಅದಕ್ಕೆ ದೇವರು - ನೀನು ಅವರ ಜೊತೆಯಲ್ಲಿ ಹೋಗಬಾರದು; ಆ ಜನಾಂಗದವರು ನನ್ನ ಆಶೀರ್ವಾವಾದವನ್ನು ಹೊಂದಿದವರು; ಅವರನ್ನು ಶಪಿಸಬಾರದು ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು