Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 62:2 - ಕನ್ನಡ ಸತ್ಯವೇದವು J.V. (BSI)

2 ಜನಾಂಗಗಳು ನಿನ್ನ ಧರ್ಮವನ್ನು, ಸಕಲ ರಾಜರು ನಿನ್ನ ವೈಭವವನ್ನು ನೋಡುವರು; ಯೆಹೋವನ ಬಾಯಿ ನೇವಿುಸಿದ ಹೊಸ ಹೆಸರು ನಿನಗೆ ದೊರೆಯುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಜನಾಂಗಗಳು ನಿನ್ನ ಧರ್ಮವನ್ನು, ಸಕಲ ರಾಜರು ನಿನ್ನ ವೈಭವವನ್ನು ನೋಡುವರು; ಯೆಹೋವನ ಬಾಯಿ ನೇಮಿಸಿದ ಹೊಸ ಹೆಸರು ನಿನಗೆ ದೊರೆಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ನೋಡುವರು ಜನಾಂಗಗಳು ನಿನ್ನ ಸದ್ಧರ್ಮವನು ಕಾಣುವರು ಸಕಲ ರಾಜರು ನಿನ್ನ ವೈಭವವನು ಪಡೆಯುವೆ ನೀನು ಸರ್ವೇಶ್ವರನೇ ಕೊಟ್ಟ ಹೊಸ ಹೆಸರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆಗ ಎಲ್ಲಾ ಜನಾಂಗದವರು ಆಕೆಯ ನ್ಯಾಯವನ್ನು ನೋಡುವರು. ಎಲ್ಲಾ ಅರಸರುಗಳು ಆಕೆಯ ಮಹಿಮೆಯನ್ನು ನೋಡುವರು. ಆಗ ನಿನಗೊಂದು ಹೊಸ ಹೆಸರನ್ನು ಕೊಡುವೆನು; ಯೆಹೋವನು ತಾನೇ ಆ ಹೆಸರನ್ನು ಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆಗ ಇತರ ಜನಾಂಗಗಳು ನಿನ್ನ ವಿಮೋಚನೆಯನ್ನೂ, ಅರಸರೆಲ್ಲರು ನಿನ್ನ ಮಹಿಮೆಯನ್ನೂ ನೋಡುವರು. ಯೆಹೋವ ದೇವರ ಬಾಯಿ ನೇಮಿಸುವ ಹೊಸ ಹೆಸರು ನಿನಗೆ ದೊರೆಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 62:2
33 ತಿಳಿವುಗಳ ಹೋಲಿಕೆ  

ನಿನ್ನ ಜನರು ಪರಿಶುದ್ಧಜನರು, ಯೆಹೋವನು ವಿಮೋಚಿಸಿದವರು ಎಂದು ಅನ್ನಿಸಿಕೊಳ್ಳುವರು, ನಿನಗೋ ಪತಿಯು ವರಿಸಿ ತ್ಯಜಿಸದ ಪುರಿ ಎಂದು ಹೆಸರು ಬರುವದು.


ಇನ್ನು ಮುಂದೆ ನಿನಗೆ ಅಬ್ರಾಮ ಎಂದು ಹೆಸರಿರುವದಿಲ್ಲ. ನಿನ್ನನ್ನು ಅನೇಕ ಜನಾಂಗಗಳಿಗೆ ಮೂಲ ಪಿತೃವಾಗಿ ನೇವಿುಸಿರುವದರಿಂದ ನಿನಗೆ ಅಬ್ರಹಾಮನೆಂದು ಹೆಸರಿರುವದು.


ದೇವರಾತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ. ಯಾವನು ಜಯಹೊಂದುತ್ತಾನೋ ಅವನಿಗೆ ಬಚ್ಚಿಟ್ಟಿರುವ ಮನ್ನವೆಂಬ ಆಹಾರವನ್ನು ಕೊಡುವೆನು; ಇದಲ್ಲದೆ ಅವನಿಗೆ ಬಿಳೀ ಕಲ್ಲನ್ನೂ ಆ ಕಲ್ಲಿನ ಮೇಲೆ ಕೆತ್ತಿದ ಹೊಸ ಹೆಸರನ್ನೂ ಕೊಡುವೆನು; ಆ ಹೆಸರನ್ನು ಹೊಂದಿದವನಿಗೇ ಹೊರತು ಅದು ಇನ್ನಾರಿಗೂ ತಿಳಿಯದು.


ಯೆಹೋವನು ಹೀಗನ್ನುತ್ತಾನೆ - ಇಗೋ, ನಾನು ಆಕೆಗೆ ಸುಖವನ್ನು ನದಿಯಂತೆ ದಯಪಾಲಿಸಿ ತುಂಬಿ ತುಳುಕುವ ತೊರೆಯನ್ನೋ ಎಂಬಂತೆ ಜನಾಂಗಗಳ ವೈಭವವನ್ನು ನೀಡುವೆನು; ನೀವು ಪಾನಮಾಡುವಿರಿ; ನಿಮ್ಮನ್ನು ಕಂಕುಳಲ್ಲಿ ಎತ್ತಿಕೊಂಡು ಹೋಗುವರು, ತೊಡೆಯ ಮೇಲೆ ನಲಿದಾಡಿಸುವರು.


ಕರ್ತನಾದ ಯೆಹೋವನು ನಿಮ್ಮನ್ನು ಕೊಂದುಹಾಕುವನು, ನಿಮ್ಮ ಹೆಸರು ನನ್ನ ಆಪ್ತಜನರು ಶಪಿಸುವ ಶಾಪದ ಮಾತಾಗಿಯೇ ಉಳಿಯುವದು; ನಾನು ನನ್ನ ಸೇವಕರಿಗೆ ಹೊಸ ಹೆಸರನ್ನು ಕೊಡುವೆನು.


ರಾಜರು ನಿನಗೆ ಸಾಕುತಂದೆಗಳು, ಅವರ ರಾಣಿಗಳು ನಿನಗೆ ಸಾಕುತಾಯಿಯರು ಆಗುವರು; ನಿನಗೆ ಸಾಷ್ಟಾಂಗವಾಗಿ ಅಡ್ಡಬಿದ್ದು ನಿನ್ನ ಪಾದಧೂಳಿಯನ್ನು ನೆಕ್ಕುವರು; ನಾನೇ ಯೆಹೋವನು. ನನ್ನನ್ನು ನಿರೀಕ್ಷಿಸಿಕೊಂಡವರು ಆಶಾಭಂಗಪಡರು ಎಂದು ನಿನಗೆ ಗೊತ್ತಾಗುವದು.


ಇದಲ್ಲದೆ ದೇವರು ಅಬ್ರಹಾಮನಿಗೆ - ನೀನು ಇನ್ನು ಮುಂದೆ ನಿನ್ನ ಪತ್ನಿಯನ್ನು ಸಾರಯಳೆಂದು ಕರೆಯದೆ ಸಾರಾ ಎಂದು ಕರೆಯಬೇಕು.


ನೀನು ಇನ್ನು ಮೇಲೆ ಗಂಡಬಿಟ್ಟವಳು ಎನಿಸಿಕೊಳ್ಳೆ, ನಿನ್ನ ಸೀಮೆಗೆ ಬಂಜೆ ಎಂಬ ಹೆಸರು ಇನ್ನಿರದು; ನೀನು ಎನ್ನುಲ್ಲಾಸಿನಿ ಎನಿಸಿಕೊಳ್ಳುವಿ, ನಿನ್ನ ಸೀಮೆಗೆ ವಿವಾಹಿತೆ ಎಂಬ ಹೆಸರಾಗುವದು; ಏಕಂದರೆ ಯೆಹೋವನು ನಿನ್ನಲ್ಲಿ ಉಲ್ಲಾಸಗೊಳ್ಳುತ್ತಾನೆ, ನಿನ್ನ ಸೀಮೆಗೆ ವಿವಾಹವಾಗುವದು,


ಅವನನ್ನು ಕಂಡು ಅಂತಿಯೋಕ್ಯಕ್ಕೆ ಕರೆದುಕೊಂಡು ಬಂದನು. ಆಮೇಲೆ ಅವರು ಪೂರಾ ಒಂದು ವರುಷ ಸಭೆಯವರ ಸಂಗಡ ಕೂಡಿದ್ದು ಬಹು ಜನರಿಗೆ ಉಪದೇಶಮಾಡಿದರು. ಅಂತಿಯೋಕ್ಯದಲ್ಲಿಯೇ ಶಿಷ್ಯರಿಗೆ ಕ್ರೈಸ್ತರೆಂಬ ಹೆಸರು ಮೊದಲು ಬಂತು.


ಅವರ ಮಧ್ಯದಲ್ಲಿ ಒಂದು ಸೂಚಕಕಾರ್ಯವನ್ನು ಮಾಡುವೆನು; ನನ್ನ ಸುದ್ದಿಯನ್ನು ಕೇಳದೆಯೂ ನನ್ನ ಮಹಿಮೆಯನ್ನು ನೋಡದೆಯೂ ಇರುವ ತಾರ್ಷೀಷ್, ಪೂಲ್, ಬಿಲ್ಲುಗಾರರಿಗೆ ಪ್ರಸಿದ್ಧಸ್ಥಳವಾದ ಲೂದ್, ತೂಬಲ್, ಯಾವಾನ್ ಎಂಬ ಜನಾಂಗಗಳು ಮತ್ತು ದೂರವಾದ ದ್ವೀಪ ನಿವಾಸಿಗಳು ಇವರೆಲ್ಲರ ಬಳಿಗೆ ಹತಶೇಷರನ್ನು ಕಳುಹಿಸುವೆನು; ಇವರು ಜನಾಂಗಗಳಲ್ಲಿ ನನ್ನ ಮಹಿಮೆಯನ್ನು ಪ್ರಕಟಿಸುವರು.


ಇವರ ಸಂತಾನವು ಜನಾಂಗಗಳಲ್ಲಿ ಪ್ರಖ್ಯಾತವಾಗುವದು, ಇವರ ಸಂತತಿಯು ಅನ್ಯದೇಶೀಯರಲ್ಲಿ ಹೆಸರುಗೊಳ್ಳುವದು; ಇವರನ್ನು ನೋಡುವವರೆಲ್ಲರು ಯೆಹೋವನು ಆಶೀರ್ವದಿಸಿದ ವಂಶವು ಇದೇ ಎಂದು ಒಪ್ಪಿಕೊಳ್ಳುವರು.


ಯೆಹೋವನು ಸಕಲ ಜನಾಂಗಗಳ ಕಣ್ಣೆದುರಿನಲ್ಲಿ ತನ್ನ ದಿವ್ಯಬಾಹುವನ್ನು ತೆರೆದು ತೋರಿಸಿದ್ದಾನೆ; ಭೂವಿುಯ ಎಲ್ಲಾ ದಿಕ್ಕಿನವರೂ ನಮ್ಮ ದೇವರ ರಕ್ಷಣಕಾರ್ಯವನ್ನು ನೋಡುವರು.


ಆತನೇ ಈಗ ಹೀಗನ್ನುತ್ತಾನೆ - ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬಿನ ಕುಲಗಳನ್ನು ಉನ್ನತಪಡಿಸುವದೂ ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರಿಗಿ ಬರಮಾಡುವದೂ ಅಲ್ಪಕಾರ್ಯವೇ ಸರಿ; ನನ್ನ ರಕ್ಷಣೆಯು ಲೋಕದ ಕಟ್ಟಕಡೆಯವರೆಗೆ ವ್ಯಾಪಿಸುವಂತೆ ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ದಯಪಾಲಿಸುವೆನು.


ಅವನು ಯಾಕೋಬನಿಗೆ - ಇನ್ನು ಮೇಲೆ ನೀನು ಯಾಕೋಬನೆನ್ನಿಸಿಕೊಳ್ಳುವದಿಲ್ಲ; ದೇವರ ಸಂಗಡಲೂ ಮನುಷ್ಯರ ಸಂಗಡಲೂ ಹೋರಾಡಿ ಗೆದ್ದವನಾದ್ದರಿಂದ ನಿನಗೆ ಇಸ್ರಾಯೇಲೆಂದು ಹೆಸರುಂಟಾಗುವದು ಎಂದು ಹೇಳಿದನು.


ಅಲ್ಲದೆ ಸಿಂಹವು ಕಾಡುಮೃಗಗಳನ್ನು, ಪ್ರಾಯದ ಸಿಂಹವು ಕುರಿಹಿಂಡುಗಳನ್ನು ಹಾದುಹೋಗುವಾಗೆಲ್ಲಾ ಅವುಗಳನ್ನು ಯಾರೂ ರಕ್ಷಿಸಲಾರದಂತೆ ತುಳಿದು ಸೀಳಿಹಾಕುವ ಹಾಗೆ ಯಾಕೋಬಿನ ಜನಶೇಷವು ದೇಶದೇಶಗಳೊಳಗೆ ಬಹುಜನಾಂಗಗಳ ಮಧ್ಯದಲ್ಲಿ ನಾಶಕರವಾಗಿರುವದು.


ಆಗ ಯೆಹೂದ್ಯರು ಸುರಕ್ಷಿತವಾಗಿರುವರು, ಯೆರೂಸಲೇವಿುನವರು ನೆಮ್ಮದಿಯಾಗಿ ವಾಸಿಸುವರು; ಯೆಹೋವ ಚಿದ್ಕೇನು [ಅಂದರೆ ಯೆಹೋವನೇ ನಮ್ಮ ಸದ್ಧರ್ಮ] ಎಂಬ ಹೆಸರು ಈ ಪಟ್ಟಣಕ್ಕೆ ಸಲ್ಲುವದು.


ನೀನು ಜನಾಂಗಗಳ ಮೊಲೆಕೂಸಾಗುವಿ, ರಾಜರು ನಿನಗೆ ಮೊಲೆಯೂಡಿಸುವರು; ಆಗ ಯೆಹೋವನಾದ ನಾನೇ ನಿನ್ನ ರಕ್ಷಕನು, ನಿನ್ನ ವಿಮೋಚಕನು, ಯಾಕೋಬ್ಯರ ಶೂರನು ಎಂದು ನೀನು ತಿಳಿದುಕೊಳ್ಳುವಿ.


ನೀವು ಕೇಳಿದಂಥ ಆಕಾಶದ ಕೆಳಗಿರುವ ಸರ್ವಸೃಷ್ಟಿಗೆ ಸಾರಲ್ಪಟ್ಟಂಥ ಸುವಾರ್ತೆಯಿಂದ ಉಂಟಾದ ನಿರೀಕ್ಷೆಯನ್ನು ಬಿಟ್ಟು ತೊಲಗಿಹೋಗದೆ ಅಸ್ತಿವಾರದ ಮೇಲೆ ನಿಂತು ಸ್ಥಿರವಾಗಿದ್ದು ನಂಬಿಕೆಯಲ್ಲಿ ನೆಲೆಗೊಂಡಿರುವದಾದರೆ ಆ ಪದವಿ ನಿಮಗೆ ಪ್ರಾಪ್ತವಾಗುವದು.


ಆ ಸಂಗತಿಗಳು ಏನಂದರೆ - ಕ್ರಿಸ್ತನು ಬಾಧೆಪಟ್ಟು ಸಾಯಬೇಕಾದವನು ಮತ್ತು ಆತನು ಸತ್ತವರೊಳಗಿಂದ ಮೊದಲನೆಯವನಾಗಿ ಎದ್ದು ಯೆಹೂದ್ಯರಿಗೂ ಅನ್ಯಜನರಿಗೂ ಬೆಳಕನ್ನು ಪ್ರಸಿದ್ಧಿಪಡಿಸುವವನಾಗಿರುವನು ಎಂಬದೇ.


ಕರ್ತನು ಅವನಿಗೆ - ನೀನು ಹೋಗು; ಆ ಮನುಷ್ಯನು ಅನ್ಯಜನರಿಗೂ ಅರಸುಗಳಿಗೂ ಇಸ್ರಾಯೇಲ್ಯರಿಗೂ ನನ್ನ ಹೆಸರನ್ನು ತಿಳಿಸುವದಕ್ಕಾಗಿ ನಾನು ಆರಿಸಿಕೊಂಡ ಸಾಧನವಾಗಿದ್ದಾನೆ.


ಜನಾಂಗಗಳ ಐಶ್ವರ್ಯವನ್ನು ನಿನ್ನಲ್ಲಿಗೆ ತರುತ್ತಿರುವರು, ಅವುಗಳ ಅರಸರು ಮೆರವಣಿಗೆಯಾಗಿ ಬರುತ್ತಿರುವರು; ಇದರಿಂದ ನಿನ್ನ ಬಾಗಿಲುಗಳು ಹಗಲಿರುಳೂ ಮುಚ್ಚದೆ ಸದಾ ತೆರೆದಿರುವವು.


ಯಾವನು ಜಯ ಹೊಂದುತ್ತಾನೋ ಅವನನ್ನು ನನ್ನ ದೇವರ ಆಲಯದಲ್ಲಿ ಸ್ತಂಭವಾಗಿ ನಿಲ್ಲಿಸುವೆನು; ಅವನು ಇನ್ನು ಮುಂದೆ ಅದರೊಳಗಿಂದ ಹೋಗುವದೇ ಇಲ್ಲ. ಇದಲ್ಲದೆ ನನ್ನ ದೇವರ ಹೆಸರನ್ನೂ ನನ್ನ ದೇವರ ಬಳಿಯಿಂದ ಪರಲೋಕದೊಳಗಿಂದ ಇಳಿದುಬರುವ ಹೊಸ ಯೆರೂಸಲೇಮ್ ಪಟ್ಟಣವೆಂಬ ನನ್ನ ದೇವರ ಪಟ್ಟಣದ ಹೆಸರನ್ನೂ ನನ್ನ ಹೊಸ ಹೆಸರನ್ನೂ ಅವನ ಮೇಲೆ ಬರೆಯುವೆನು.


ಯೆಹೋವನು ತನ್ನ ರಕ್ಷಣೆಯನ್ನು ಪ್ರಕಟಿಸಿದ್ದಾನೆ; ಜನಾಂಗಗಳೆದುರಿಗೆ ತನ್ನ ನೀತಿಯನ್ನು ತೋರ್ಪಡಿಸಿದ್ದಾನೆ.


ಪೂರ್ವದಲ್ಲಿ ನಿನಗಿದ್ದಂಥ ನ್ಯಾಯಾಧಿಪತಿಗಳನ್ನೂ ಮಂತ್ರಾಲೋಚಕರನ್ನೂ ಪುನಃ ಒದಗಿಸಿಕೊಡುವೆನು; ಆಮೇಲೆ ನೀನು ಧರ್ಮಪುರಿ ಎಂತಲೂ ಸುವ್ರತನಗರಿ ಎಂತಲೂ ಅನ್ನಿಸಿಕೊಳ್ಳುವಿ.


ಬಾಗಿಲುಗಳನ್ನು ತೆರೆಯಿರಿ! ಧರ್ಮಸತ್ಯಗಳನ್ನು ಕೈಕೊಳ್ಳುವ ಜನಾಂಗವು ಪ್ರವೇಶಿಸಲಿ!


ನನ್ನ ಮಹಿಮೆಗಾಗಿ ನಾನು ಸೃಷ್ಟಿಸಿ ರೂಪಿಸಿ ಉಂಟುಮಾಡಿದ ನನ್ನ ಹೆಸರಿನವರೆಲ್ಲರನ್ನೂ ಬರಮಾಡಬೇಕೆಂದು ಅಪ್ಪಣೆಕೊಡುವೆನು.


ನನ್ನ ಪ್ರಾಕಾರಗಳೊಳಗೆ ನನ್ನ ಆಲಯದಲ್ಲಿ ಅವರ ಜ್ಞಾಪಕಾರ್ಥವಾಗಿ ಶಿಲೆಯನ್ನಿಟ್ಟು ಹೆಣ್ಣುಗಂಡು ಮಕ್ಕಳಿಗಿಂತ ಮೇಲಾದ ಹೆಸರುವಾಸಿಯನ್ನು ದಯಪಾಲಿಸುವೆನು; ಹೌದು, ಎಂದಿಗೂ ಅಳಿಯದ ಶಾಶ್ವತ ನಾಮವನ್ನು ಅನುಗ್ರಹಿಸುವೆನು.


ಆಕೆಯ ನಿವಿುತ್ತ ದುಃಖಿಸುವವರೇ, ನೀವೆಲ್ಲರೂ - ಆಕೆಯ ಸಮಾಧಾಯಕ ಸ್ತನ್ಯವನ್ನು ಕುಡಿದು ತೃಪ್ತಿಗೊಳ್ಳುವೆವು. ಹೌದು, ಆಕೆಯ ವೈಭವದ ಸಮೃದ್ಧಿಯನ್ನು ಹೀರುತ್ತಾ ಹಿಗ್ಗುವೆವು ಎಂದು ಆಕೆಯೊಂದಿಗೆ ಉತ್ಸಾಹದಿಂದ ಉಲ್ಲಾಸಿಸಿರಿ.


ನಾನು ಈ ಜನರಿಗೆ ಅನುಗ್ರಹಿಸುವ ಎಲ್ಲಾ ಮೇಲುಗಳ ಸುದ್ದಿಯನ್ನು ಕೇಳಿ ನಾನು ಈ ಪಟ್ಟಣಕ್ಕೆ ಉಂಟುಮಾಡುವ ಸುಖಸಮಾಧಾನಗಳನ್ನು ನೋಡಿ ಹೆದರಿ ನಡುಗುವ ಸಕಲ ಭೂರಾಜ್ಯಗಳ ಮುಂದೆ ಈ ಪಟ್ಟಣವು ನನ್ನ ಕೀರ್ತಿಯೂ ಮಹಿಮೆಯೂ ಆನಂದದ ಬಿರುದೂ ಆಗುವದು.


ಭೂವಿುಯು ತನ್ನೊಳಗಿಂದ ಮೊಳಿಕೆಯನ್ನು ಹೊರಡಿಸುವಂತೆಯೂ ತೋಟವು ತನ್ನಲ್ಲಿ ಬಿತ್ತಿದ್ದನ್ನು ಮೊಳೆಯಿಸುವ ಹಾಗೂ ಕರ್ತನಾದ ಯೆಹೋವನು ಎಲ್ಲಾ ಜನಾಂಗಗಳ ಎದುರಿನಲ್ಲಿ ಧರ್ಮವನ್ನೂ ಸ್ತೋತ್ರವನ್ನೂ ಮೊಳೆಯಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು