Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 62:4 - ಕನ್ನಡ ಸತ್ಯವೇದವು J.V. (BSI)

4 ನೀನು ಇನ್ನು ಮೇಲೆ ಗಂಡಬಿಟ್ಟವಳು ಎನಿಸಿಕೊಳ್ಳೆ, ನಿನ್ನ ಸೀಮೆಗೆ ಬಂಜೆ ಎಂಬ ಹೆಸರು ಇನ್ನಿರದು; ನೀನು ಎನ್ನುಲ್ಲಾಸಿನಿ ಎನಿಸಿಕೊಳ್ಳುವಿ, ನಿನ್ನ ಸೀಮೆಗೆ ವಿವಾಹಿತೆ ಎಂಬ ಹೆಸರಾಗುವದು; ಏಕಂದರೆ ಯೆಹೋವನು ನಿನ್ನಲ್ಲಿ ಉಲ್ಲಾಸಗೊಳ್ಳುತ್ತಾನೆ, ನಿನ್ನ ಸೀಮೆಗೆ ವಿವಾಹವಾಗುವದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನೀನು ಇನ್ನು ಮೇಲೆ “ತ್ಯಜಿಸಲ್ಪಟ್ಟವಳು” ಎನಿಸಿಕೊಳ್ಳುವುದಿಲ್ಲ, ನಿನ್ನ ಸೀಮೆಗೆ “ನಿರ್ಜನ ಪ್ರದೇಶ” ಎಂಬ ಹೆಸರು ಇನ್ನು ಇರದು; ನೀನು “ನನ್ನ ಉಲ್ಲಾಸಿನಿ” ಎನಿಸಿಕೊಳ್ಳುವಿ, ನಿನ್ನ ಸೀಮೆಗೆ “ವಿವಾಹಿತೆ” ಎಂಬ ಹೆಸರಾಗುವುದು; ಏಕೆಂದರೆ ಯೆಹೋವನು ನಿನ್ನಲ್ಲಿ ಉಲ್ಲಾಸಗೊಳ್ಳುತ್ತಾನೆ, ನಿನ್ನ ಸೀಮೆಗೆ ವಿವಾಹವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 “ಎನ್ನ ಮನದನ್ನೆ” ಎನಿಸಿಕೊಳ್ಳುವೆ ನೀನು “ಸುವಿವಾಹಿತೆ” ಎನಿಸಿಕೊಳ್ಳುವುದು ನಿನ್ನ ನಾಡು. ನಿನ್ನಲ್ಲಿದೆ ಉಲ್ಲಾಸ ಸರ್ವೇಶ್ವರನಿಗೆ ವಿವಾಹವಾಗುವುದಿದೆ ನಿನ್ನ ನಾಡಿಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ದೇವರು ತೊರೆದ ಜನಾಂಗವೆಂದೂ ದೇವರು ನಾಶಮಾಡಿದ ದೇಶವೆಂದೂ ನಿನ್ನನ್ನು ಇನ್ನು ಮುಂದೆ ಯಾರೂ ಕರೆಯುವದಿಲ್ಲ. “ದೇವರ ಪ್ರಿಯ ಜನರು” ಎಂದು ನೀನು ಕರೆಯಲ್ಪಡುವಿ. ನಿನ್ನ ದೇಶವು “ದೇವರ ಮದಲಗಿತ್ತಿ” ಎಂದು ಕರೆಯಲ್ಪಡುವದು. ಯಾಕೆಂದರೆ ಯೆಹೋವನು ನಿನ್ನನ್ನು ಪ್ರೀತಿಸುತ್ತಾನೆ; ನಿನ್ನ ದೇಶವು ಆತನಿಗೆ ಸೇರಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಇನ್ನು ಮೇಲೆ ನೀನು ಗಂಡಬಿಟ್ಟವಳೆಂದು ಎನಿಸಿಕೊಳ್ಳುವುದಿಲ್ಲ ನಿನ್ನ ದೇಶಕ್ಕೆ ಹಾಳಾದದ್ದು ಎಂಬ ಹೆಸರೂ ಇರುವುದಿಲ್ಲ. ಆದರೆ ನೀನು ಹೆಪ್ಸಿಬಾ ಎಂದೂ ನಿನ್ನ ದೇಶಕ್ಕೆ ಬ್ಯೂಲಾ ಎಂದೂ ಹೆಸರಾಗುವುದು. ಏಕೆಂದರೆ ಯೆಹೋವ ದೇವರು ನಿನ್ನನ್ನು ಮೆಚ್ಚುವರು, ನಿನ್ನ ದೇಶಕ್ಕೆ ವಿವಾಹವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 62:4
32 ತಿಳಿವುಗಳ ಹೋಲಿಕೆ  

ನಿನ್ನ ದೇವರಾದ ಯೆಹೋವನು ನಿನ್ನ ಮಧ್ಯದಲ್ಲಿ ಶೂರನಾಗಿದ್ದಾನೆ, ನಿನ್ನನ್ನು ರಕ್ಷಿಸುವನು; ನಿನ್ನಲ್ಲಿ ಉಲ್ಲಾಸಿಸೇ ಉಲ್ಲಾಸಿಸುವನು; ತನ್ನ ಪ್ರೀತಿಯಲ್ಲಿ ಮುಣುಗಿ ಮೌನವಾಗಿರುವನು; ನಿನ್ನಲ್ಲಿ ಆನಂದಿಸಿ ಹರ್ಷಧ್ವನಿಗೈಯುವನು ಎಂದು ಹೇಳೋಣವಾಗುವದು.


ನಿನ್ನ ಜನರು ಪರಿಶುದ್ಧಜನರು, ಯೆಹೋವನು ವಿಮೋಚಿಸಿದವರು ಎಂದು ಅನ್ನಿಸಿಕೊಳ್ಳುವರು, ನಿನಗೋ ಪತಿಯು ವರಿಸಿ ತ್ಯಜಿಸದ ಪುರಿ ಎಂದು ಹೆಸರು ಬರುವದು.


ನಾನು ಅವರ ಹಿತವನ್ನು ಬಯಸುತ್ತಾ ಅವರಲ್ಲಿ ಆನಂದಿಸುವೆನು, ನಿಶ್ಚಯವಾಗಿ ಅವರನ್ನು ಈ ದೇಶದಲ್ಲಿ ನನ್ನ ಪೂರ್ಣವಾದ ಹೃದಯದಿಂದಲೂ ಮನಸ್ಸಿನಿಂದಲೂ ಸ್ಥಾಪಿಸುವೆನು.


ಮೊದಲು ನೀವು ಪ್ರಜೆಯಾಗಿರಲಿಲ್ಲ, ಈಗ ದೇವರ ಪ್ರಜೆಯಾಗಿದ್ದೀರಿ; ಮೊದಲು ವಾತ್ಸಲ್ಯ ಹೊಂದಿರಲಿಲ್ಲ, ಈಗ ವಾತ್ಸಲ್ಯ ಹೊಂದಿದವರಾಗಿದ್ದೀರಿ.


ನಾನು ಯೆಹೋವನಲ್ಲಿ ಪರಮಾನಂದಪಡುವೆನು, ನನ್ನ ಆತ್ಮವು ನನ್ನ ದೇವರಲ್ಲಿ ಹಿಗ್ಗುವದು; ವರನು ಬಾಸಿಂಗವನ್ನು ಧರಿಸಿಕೊಳ್ಳುವಂತೆಯೂ ವಧುವು ತನ್ನನ್ನು ಆಭರಣಗಳಿಂದ ಅಲಂಕರಿಸಿಕೊಳ್ಳುವ ಹಾಗೂ ಆತನು ನನಗೆ ರಕ್ಷಣೆಯೆಂಬ ವಸ್ತ್ರವನ್ನು ಹೊದಿಸಿ ಧರ್ಮವೆಂಬ ನಿಲುವಂಗಿಯನ್ನು ತೊಡಿಸಿದ್ದಾನಲ್ಲಾ.


ಯೆಹೋವನು ತನ್ನ ಪ್ರಜೆಗೆ ಪ್ರಸನ್ನನಾದನು; ದೀನರನ್ನು ರಕ್ಷಣೆಯಿಂದ ಭೂಷಿಸುತ್ತಾನೆ.


ಇದೇ ಯೆಹೋವನ ನುಡಿ - ಭ್ರಷ್ಟರಾದ ಮಕ್ಕಳೇ, ತಿರುಗಿಕೊಳ್ಳಿರಿ, ನಾನು ನಿಮಗೆ ಪತಿ; ಒಂದು ಪಟ್ಟಣಕ್ಕೆ ಒಬ್ಬನಂತೆಯೂ ಗೋತ್ರಕ್ಕೆ ಇಬ್ಬರಂತೆಯೂ ಆರಿಸಿ ಚೀಯೋನಿಗೆ ಕರತರುವೆನು.


ಹೆರದವಳೇ, ಬಂಜೆಯೇ, ಹರ್ಷಧ್ವನಿಗೈ! ಪ್ರಸವವೇದನೆಯನ್ನನುಭವಿಸದವಳೇ, ಆನಂದ ಸ್ವರವೆತ್ತಿ ಕೂಗು! ಗಂಡನುಳ್ಳವಳಿಗಿಂತ ಗಂಡಬಿಟ್ಟವಳಿಗೆ ಮಕ್ಕಳು ಹೆಚ್ಚು ಎಂದು ಯೆಹೋವನು ಹೇಳುತ್ತಾನೆ.


ನಿವಾಸಿಗಳು ಬಿಟ್ಟು ಬಿಟ್ಟ, ದ್ವೇಷಕ್ಕೀಡಾದ, ಯಾರೂ ಹಾದು ಹೋಗದ ನಿನಗೆ ನಾನು ನಿತ್ಯಶ್ರೇಷ್ಠತೆಯನ್ನು ದಯಪಾಲಿಸಿ ನಿನ್ನನ್ನು ತಲತಲಾಂತರಗಳವರಿಗೆ ಉಲ್ಲಾಸಕರವಾಗುವಂತೆ ಮಾಡುವೆನು.


ಯುವಕನು ಯುವತಿಯನ್ನು ವರಿಸುವಂತೆ ನಿನ್ನ ಮಕ್ಕಳು ನಿನ್ನನ್ನು ವರಿಸುವರು; ವರನು ವಧುವಿನಲ್ಲಿ ಆನಂದಿಸುವ ಹಾಗೆ ನಿನ್ನ ದೇವರು ನಿನ್ನಲ್ಲಿ ಆನಂದಿಸುವನು.


ಯಾಕಂದರೆ ದೇವರಲ್ಲಿರುವಂಥ ಚಿಂತೆಯಿಂದಲೇ ನಾನು ನಿಮ್ಮ ವಿಷಯದಲ್ಲಿ ಚಿಂತಿಸುತ್ತೇನೆ. ನಿಮ್ಮನ್ನು ಕ್ರಿಸ್ತನೆಂಬ ಒಬ್ಬನೇ ಪುರುಷನಿಗೆ ಶುದ್ಧ ಕನ್ಯೆಯಂತೆ ಒಪ್ಪಿಸಬೇಕೆಂದು ನಿಮ್ಮನ್ನು ಆತನಿಗೆ ನಿಶ್ಚಯಮಾಡಿದೆನಲ್ಲಾ.


ಚೀಯೋನ್ ನಗರಿಯಾದರೋ - ಯೆಹೋವನು ನನ್ನನ್ನು ಕೈಬಿಟ್ಟಿದ್ದಾನೆ, ಕರ್ತನು ನನ್ನನ್ನು ಮರೆತಿದ್ದಾನಲ್ಲಾ ಅಂದುಕೊಂಡಳು.


ಇದಲ್ಲದೆ ಪರಿಶುದ್ಧ ಪಟ್ಟಣವಾದ ಹೊಸ ಯೆರೂಸಲೇಮು ಪರಲೋಕದಿಂದ ದೇವರ ಬಳಿಯಿಂದ ಇಳಿದುಬರುವದನ್ನು ಕಂಡೆನು; ಅದು ತನ್ನ ಗಂಡನಿಗೋಸ್ಕರ ಅಲಂಕೃತಳಾದ ಮದಲಗಿತ್ತಿಯಂತೆ ಶೃಂಗರಿಸಲ್ಪಟ್ಟಿತ್ತು.


ಮದಲಗಿತ್ತಿಯುಳ್ಳವನೇ ಮದಲಿಂಗನು; ಆದರೂ ಮದಲಿಂಗನ ಗೆಳೆಯನು ಅವನ ಹತ್ತರ ನಿಂತುಕೊಂಡು ಅವನ ಮಾತುಗಳನ್ನು ಕೇಳಿ ಮದಲಿಂಗನ ಧ್ವನಿಗೆ ಬಹು ಸಂತೋಷಪಡುತ್ತಾನಲ್ಲವೇ. ಇದರಂತೆ ನನಗಿರುವ ಸಂತೋಷ; ಅದು ನೆರವೇರಿತು.


ದ್ರವ್ಯಾಶೆಯಿಲ್ಲದವರಾಗಿರಿ; ನಿಮಗಿರುವವುಗಳಲ್ಲಿ ತೃಪ್ತರಾಗಿರಿ; ನಾನು ನಿನ್ನನ್ನು ಎಂದಿಗೂ ಕೈಬಿಡುವದಿಲ್ಲ, ಎಂದಿಗೂ ತೊರೆಯುವದಿಲ್ಲವೆಂದು ದೇವರು ತಾನೇ ಹೇಳಿದ್ದಾನೆ.


ನಿನ್ನ ದೇಶದಲ್ಲಿ ಬಲಾತ್ಕಾರದ ಸುದ್ದಿಯೇ ಕಿವಿಗೆ ಬೀಳದು, ನಿನ್ನ ಪ್ರಾಂತಗಳೊಳಗೆ ಭಂಗನಾಶನಗಳ ವಾರ್ತೆಯೇ ಕೇಳಬರುವದಿಲ್ಲ; ಆಗ ದೇವರಕ್ಷಣೆಯು ನನ್ನ ಪೌಳಿಗೋಡೆಗಳು, ದೇವಸ್ತೋತ್ರವು ನನ್ನ ಬಾಗಿಲುಗಳು ಎಂದು ಅಂದುಕೊಳ್ಳುವಿ.


ಜನಾಂಗಗಳು ನಿನ್ನ ಧರ್ಮವನ್ನು, ಸಕಲ ರಾಜರು ನಿನ್ನ ವೈಭವವನ್ನು ನೋಡುವರು; ಯೆಹೋವನ ಬಾಯಿ ನೇವಿುಸಿದ ಹೊಸ ಹೆಸರು ನಿನಗೆ ದೊರೆಯುವದು.


ನಾನೂ ಯೆರೂಸಲೇಮನ್ನು ದೃಷ್ಟಿಸುತ್ತಾ ಉಲ್ಲಾಸಿಸುವೆನು, ಅದರ ಜನರನ್ನು ಈಕ್ಷಿಸುತ್ತಾ ಹರ್ಷಗೊಳ್ಳುವೆನು. ರೋದನಶಬ್ದವೂ ಪ್ರಲಾಪಧ್ವನಿಯೂ ಅಲ್ಲಿ ಇನ್ನು ಕೇಳಿಸವು.


ನಾನು ಈ ಜನರಿಗೆ ಅನುಗ್ರಹಿಸುವ ಎಲ್ಲಾ ಮೇಲುಗಳ ಸುದ್ದಿಯನ್ನು ಕೇಳಿ ನಾನು ಈ ಪಟ್ಟಣಕ್ಕೆ ಉಂಟುಮಾಡುವ ಸುಖಸಮಾಧಾನಗಳನ್ನು ನೋಡಿ ಹೆದರಿ ನಡುಗುವ ಸಕಲ ಭೂರಾಜ್ಯಗಳ ಮುಂದೆ ಈ ಪಟ್ಟಣವು ನನ್ನ ಕೀರ್ತಿಯೂ ಮಹಿಮೆಯೂ ಆನಂದದ ಬಿರುದೂ ಆಗುವದು.


ಆಗ ಸಕಲ ಜನಾಂಗಗಳವರು ನಿಮ್ಮನ್ನು ಧನ್ಯರೆಂದು ಕೊಂಡಾಡುವರು; ನಿಮ್ಮ ದೇಶವು ಆನಂದವಾಗಿರುವದು; ಇದು ಸೇನಾಧೀಶ್ವರ ಯೆಹೋವನ ನುಡಿ.


ಮತ್ತು ನಿಮ್ಮ ದೇವರಾದ ಯೆಹೋವನು ನಿಮ್ಮ ಸಂತಾನ ಪಶು ವ್ಯವಸಾಯಗಳನ್ನು ಹೆಚ್ಚಿಸಿ ನಿಮ್ಮ ಎಲ್ಲಾ ಪ್ರಯತ್ನಗಳನ್ನು ಸಫಲಪಡಿಸಿ ನಿಮಗೆ ಮೇಲನ್ನುಂಟುಮಾಡುವನು. ನೀವು ನಿಮ್ಮ ದೇವರಾದ ಯೆಹೋವನ ಮಾತಿಗೆ ವಿಧೇಯರಾಗಿ ಈ ಧರ್ಮಶಾಸ್ತ್ರದ ಆಜ್ಞಾವಿಧಿಗಳನ್ನು ಅನುಸರಿಸಿ ಸಂಪೂರ್ಣವಾದ ಹೃದಯದಿಂದಲೂ ಮನಸ್ಸಿನಿಂದಲೂ ಆತನ ಕಡೆಗೆ ತಿರುಗಿಕೊಳ್ಳಲು ಆತನು ನಿಮ್ಮ ಪಿತೃಗಳ ವಿಷಯದಲ್ಲಿ ಸಂತೋಷಪಟ್ಟ ಹಾಗೆಯೇ ನಿಮ್ಮ ವಿಷಯದಲ್ಲಿಯೂ ತಿರಿಗಿ ಸಂತೋಷಪಟ್ಟು ನಿಮಗೆ ಮೇಲನ್ನುಂಟುಮಾಡುವನು.


ಭೂಲೋಕದಲ್ಲಿರುವ ದೇವಜನರ ವಿಷಯದಲ್ಲಿ - ಇವರೇ ಶ್ರೆಷ್ಠರು, ಇವರೇ ನನಗೆ ಇಷ್ಟರಾದವರು ಎಂತಲೂ ಹೇಳುವೆನು.


ಆಗ ಜನರು - ಕಾಡಾಗಿದ್ದ ಈ ದೇಶವು ಏದೆನ್ ಉದ್ಯಾನದಂತೆ ಕಳಕಳಿಸುತ್ತದೆ; ಬಿದ್ದುಹೋಗಿ ಹಾಳುಪಾಳಾದ ಪಟ್ಟಣಗಳು ಕೋಟೆಕೊತ್ತಲಗಳಿಂದ ಕೂಡಿ ಜನಭರಿತವಾಗಿವೆಯಲ್ಲಾ ಎಂದು ಹೇಳುವರು.


ಯೆಹೋವನು ಇಂತೆನ್ನುತ್ತಾನೆ - ಆ ಕಾಲದಲ್ಲಿ ನಾನು ಒಲುಮೆ ತೋರಿಸುವೆನು; ಬೇಡುವ ಆಕಾಶಕ್ಕೆ ನಾನು ಒಲಿಯಲು ಬೇಡುವ ಭೂವಿುಗೆ ಅದು ಒಲಿಯುವದು.


ಬೇಡುವ ಧಾನ್ಯದ್ರಾಕ್ಷಾರಸತೈಲಗಳಿಗೆ ಭೂವಿುಯು ಒಲಿಯುವದು, ಬೇಡುವ ಇಜ್ರೇಲಿಗೆ ಅವು ಒಲಿಯುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು