ಯೆಶಾಯ 63:11 - ಕನ್ನಡ ಸತ್ಯವೇದವು J.V. (BSI)11 ಆಗ ಆತನ ಜನರು ಪುರಾತನವಾದ ಮೋಶೆಯ ಕಾಲವನ್ನು ಜ್ಞಾಪಕಮಾಡಿಕೊಂಡು ಹೀಗಂದರು - ತನ್ನ ಜನವೆಂಬ ಮಂದೆಯನ್ನು ಕುರುಬರ ಸಹಿತ ಸಮುದ್ರದೊಳಗಿಂದ ಮೇಲಕ್ಕೆ ಬರಮಾಡಿದಾತನು ಎಲ್ಲಿ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಆಗ ಆತನ ಜನರು ಪುರಾತನವಾದ ಮೋಶೆಯ ಕಾಲವನ್ನು ಜ್ಞಾಪಕಮಾಡಿಕೊಂಡು ಹೀಗೆಂದರು, “ತನ್ನ ಜನವೆಂಬ ಮಂದೆಯನ್ನು ಕುರುಬರ ಸಹಿತ ಸಮುದ್ರದೊಳಗಿಂದ ಮೇಲಕ್ಕೆ ಬರಮಾಡಿದಾತನು ಎಲ್ಲಿ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಆಗ ಆ ಜನರು ಪುರಾತನ ಮೋಶೆಯ ಕಾಲವನ್ನು ನೆನಪಿಗೆ ತಂದುಕೊಂಡು ಹೀಗೆಂದರು : “ತನ್ನ ಜನರೆಂಬ ಮಂದೆಯನ್ನು, ಅದರ ಕುರುಬನ ಸಮೇತ ಸಮುದ್ರದಿಂದ ಸುರಕ್ಷಿತವಾಗಿ ಬರಮಾಡಿದ ಸ್ವಾಮಿ ಎಲ್ಲಿ? ಆ ಜನರಿಗೆ ತಮ್ಮ ಪವಿತ್ರಾತ್ಮನನ್ನು ಪ್ರದಾನಮಾಡಿದ ಸ್ವಾಮಿ ಎಲ್ಲಿ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಆದರೆ ಯೆಹೋವನು ಬಹಳ ಕಾಲದ ಹಿಂದೆ ನಡೆದುದನ್ನು ಇನ್ನೂ ಜ್ಞಾಪಕದಲ್ಲಿಟ್ಟುಕೊಂಡಿದ್ದಾನೆ. ಆತನು ಮೋಶೆಯನ್ನೂ ಅವನ ಜನರನ್ನೂ ನೆನಪುಮಾಡಿಕೊಳ್ಳುತ್ತಾನೆ. ಆ ಜನರನ್ನು ಸಮುದ್ರದ ಮೂಲಕ ಬರಮಾಡಿದವನು ಯೆಹೋವನೇ. ಆತನು ತನ್ನ ಕುರಿಮಂದೆಯನ್ನು ನಡೆಸಲು ತನ್ನ ಕುರುಬರನ್ನು ಉಪಯೋಗಿಸಿದನು. ಆದರೆ ಈಗ ಯೆಹೋವನೆಲ್ಲಿ? ಮೋಶೆಯಲ್ಲಿ ತನ್ನ ಪವಿತ್ರಾತ್ಮನನ್ನು ಇಟ್ಟ ಯೆಹೋವನೆಲ್ಲಿ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಆಗ ಆತನು ಪೂರ್ವಕಾಲದ ದಿವಸಗಳನ್ನೂ, ಮೋಶೆಯನ್ನೂ, ಅವನ ಜನರನ್ನೂ ಜ್ಞಾಪಕಮಾಡಿಕೊಂಡು “ಅವರನ್ನು ತನ್ನ ಮಂದೆಯ ಕುರುಬನ ಸಂಗಡ ಸಮುದ್ರದೊಳಗಿಂದ ಸುರಕ್ಷಿತವಾಗಿ ಮೇಲಕ್ಕೆ ಬರಮಾಡಿದವನು ಎಲ್ಲಿ? ಅವರ ಮಧ್ಯದಲ್ಲಿ ತನ್ನ ಪರಿಶುದ್ಧಾತ್ಮನನ್ನು ಇಟ್ಟವನು ಎಲ್ಲಿ? ಅಧ್ಯಾಯವನ್ನು ನೋಡಿ |