Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 63:13 - ಕನ್ನಡ ಸತ್ಯವೇದವು J.V. (BSI)

13 ಸಾಗರದ ಅಡಿಯಲ್ಲಿ ಅವರನ್ನು ಕುದುರೆಯು ಮೈದಾನದಲ್ಲಿ ನಡೆಯುವ ಪ್ರಕಾರ ಮುಗ್ಗರಿಸದಂತೆ ನಡೆಯಿಸಿದಾತನು ಎಲ್ಲಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಸಾಗರದ ತಳಕ್ಕೆ ಅವರನ್ನು ನಡೆಸಿದಾತನು ಎಲ್ಲಿ? ಕುದುರೆಯು ಮೈದಾನದಲ್ಲಿ ನಡೆಯುವ ಪ್ರಕಾರ ಅವರು ಮುಗ್ಗರಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಬಯಲಿನಲ್ಲಿ ಸರಾಗವಾಗಿ ನಡೆವ ಕುದುರೆಯಂತೆ ಆ ಜನರನ್ನು ಜಲದ ಮೇಲೆ ನಡೆಸಿದ ಸ್ವಾಮಿ ಎಲ್ಲಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆಳವಾದ ಸಮುದ್ರದೊಳಗಿಂದ ಯೆಹೋವನು ತನ್ನ ಜನರನ್ನು ನಡೆಸಿದನು. ಕುದುರೆಯು ಮರುಭೂಮಿಯಲ್ಲಿ ನಡೆಯುವಂತೆ ಜನರು ಎಡವಿಬೀಳದೆ ನಡೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಅಡವಿಯಲ್ಲಿ ಕುದುರೆಯಂತೆ ಅಗಾಧಗಳಲ್ಲಿ ಅವರನ್ನು ಎಡವದ ಹಾಗೆ ನಡೆಸಿದವನು ಎಲ್ಲಿ?”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 63:13
8 ತಿಳಿವುಗಳ ಹೋಲಿಕೆ  

ಅವರು ಅಳುತ್ತಾ ನಡೆದು ಬರುವರು, ಅವರ ವಿಜ್ಞಾಪನೆಗಳಿಂದಲೇ ಅವರನ್ನು ಮುಂದರಿಸುವೆನು; ಎಡವದ ಸಮಮಾರ್ಗದಲ್ಲಿ ನಡಿಸುತ್ತಾ ತುಂಬಿದ ತೊರೆಗಳ ಬಳಿಗೆ ಬರಮಾಡುವೆನು; ನಾನು ಇಸ್ರಾಯೇಲಿಗೆ ತಂದೆ, ಎಫ್ರಾಯೀಮು ನನ್ನ ಹಿರಿಯ ಮಗನಲ್ಲವೆ.


ನಿನ್ನ ಅಶ್ವಗಳನ್ನು ಏರಿದವನಾಗಿ ಸಮುದ್ರವನ್ನು ತುಳಿಯುತ್ತಾ ಮಹಾಜಲರಾಶಿಯನ್ನು ಹಾದುಹೋಗಿದ್ದೀ.


ಆತನು ಗದರಿಸಲು ಕೆಂಪು ಸಮುದ್ರವು ಒಣಗಿ ಹೋಯಿತು; ಅಡವಿಯನ್ನೋ ಎಂಬಂತೆ ಸಾಗರವನ್ನು ದಾಟಿಸಿದನು.


ಮೋಶೆ ಸಮುದ್ರದ ಮೇಲೆ ಕೈಚಾಚಿದಾಗ ಯೆಹೋವನು ಆ ರಾತ್ರಿಯೆಲ್ಲಾ ಮೂಡಣ ದಿಕ್ಕಿನಿಂದ ಬಲವಾದ ಬಿರುಗಾಳಿಯನ್ನು ಬೀಸುವಂತೆ ಮಾಡಿ ಸಮುದ್ರದ ನೀರನ್ನು ಒಂದು ಕಡೆಗೆ ನೂಕಿ ಅದರ ತಳದಲ್ಲಿ ಒಣನೆಲವು ಕಾಣಿಸುವಂತೆ ಮಾಡಿದನು. ನೀರು ವಿಭಾಗವಾಯಿತು.


ನಿನ್ನ ಧರ್ಮಶಾಸ್ತ್ರವನ್ನು ಪ್ರೀತಿಸುವವರಿಗೆ ಸಂಪೂರ್ಣ ಸಮಾಧಾನವಿರುತ್ತದೆ; ಅಂಥವರಿಗೆ ವಿಘ್ನಕರವಾದದ್ದೇನೂ ಇರುವದಿಲ್ಲ.


ಆಗ ನೀನು ಎಡವದೆ ನಿನ್ನ ಮಾರ್ಗದಲ್ಲಿ ನಿರ್ಭಯವಾಗಿ ನಡೆಯುವಿ.


ಮ್ಲೇಚ್ಫರ ಧಿಕ್ಕಾರವನ್ನು ಇನ್ನು ನಿನ್ನ ಕಿವಿಗೆ ಬೀಳಿಸೆನು; ನೀನು ಜನಾಂಗಗಳಿಂದ ಇನ್ನು ಅವಮಾನವನ್ನು ಅನುಭವಿಸದಿರುವಿ; ನಿನ್ನ ಪ್ರಜೆಯು ಮುಗ್ಗರಿಸುವದಕ್ಕೆ ಇನ್ನು ನೀನು ಕಾರಣನಾಗುವದಿಲ್ಲ; ಇದು ಕರ್ತನಾದ ಯೆಹೋವನ ನುಡಿ.


ಇಸ್ರಾಯೇಲ್ಯರನ್ನು ಬೆಳ್ಳಿಬಂಗಾರಗಳ ಸಹಿತವಾಗಿ ಹೊರಗೆ ಬರಮಾಡಿದನು; ಅವರ ಕುಲಗಳಲ್ಲಿ ಒಬ್ಬನಾದರೂ ಎಡವುವವನಿರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು