Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 63:15 - ಕನ್ನಡ ಸತ್ಯವೇದವು J.V. (BSI)

15 ಆಕಾಶದಿಂದ ನೋಡು, ಪರಿಶುದ್ಧವೂ ಘನವೂ ಆದ ನಿನ್ನ ಉನ್ನತಸ್ಥಾನದಿಂದ ಲಕ್ಷಿಸು; ನಿನ್ನ ಆಗ್ರಹವೆಲ್ಲಿ, ನಿನ್ನ ಸಾಹಸಕಾರ್ಯಗಳೆಲ್ಲಿ? ನಿನ್ನ ಕರುಳ ಮರುಗಾಟವನ್ನೂ ನಿನ್ನ ಕನಿಕರವನ್ನೂ ನಮ್ಮ ಕಡೆಗೆ ಬಿಗಿಹಿಡಿದಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆಕಾಶದಿಂದ ನೋಡು, ಪರಿಶುದ್ಧವೂ, ಘನವೂ ಆದ ನಿನ್ನ ಉನ್ನತಸ್ಥಾನದಿಂದ ಲಕ್ಷಿಸು; ನಿನ್ನ ಉತ್ಸಾಹವೆಲ್ಲಿ, ನಿನ್ನ ಸಾಹಸ ಕಾರ್ಯಗಳೆಲ್ಲಿ? ನಿನ್ನ ಕರುಳ ಮರುಗಾಟವನ್ನೂ, ನಿನ್ನ ಕನಿಕರವನ್ನೂ ನಮ್ಮ ಕಡೆಗೆ ಬಿಗಿ ಹಿಡಿದಿದ್ದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಸ್ವಾಮಿ ಸರ್ವೇಶ್ವರಾ, ಆಕಾಶದಿಂದ ನಮ್ಮನು ಈಕ್ಷಿಸಿನೋಡಿ; ಪರಿಶುದ್ಧವೂ ಪೂಜ್ಯವೂ ಆದ ನಿಮ್ಮ ನಿವಾಸದಿಂದ ವೀಕ್ಷಿಸಿನೋಡಿ. ನಿಮ್ಮ ಹುರುಪು ಉತ್ಸಾಹವೆಲ್ಲಿ? ನಿಮ್ಮ ಸಾಹಸಕಾರ್ಯಗಳು ಏನಾದುವು? ನಮ್ಮಿಂದ ಬಿಗಿಹಿಡಿದಿರುವಿರಾ ನಿಮ್ಮ ಕನಿಕರವನು? ನಿಮ್ಮ ಕರುಳ ಕರೆಯನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಯೆಹೋವನೇ, ಈಗ ನಡೆಯುವ ಸಂಗತಿಗಳನ್ನು ಪರಲೋಕದಿಂದ ನೋಡು. ಪರಲೋಕದಲ್ಲಿರುವ ನಿನ್ನ ಪವಿತ್ರಸ್ಥಾನದಿಂದ ನಮ್ಮನ್ನು ದೃಷ್ಟಿಸು. ನಮ್ಮ ಮೇಲಿನ ಗಾಢವಾದ ಪ್ರೀತಿ ಎಲ್ಲಿದೆ? ನಿನ್ನ ಅಂತರಂಗದೊಳಗಿಂದ ಬಂದ ಕಾರ್ಯಗಳೆಲ್ಲಿ? ನಮ್ಮ ಮೇಲೆ ನಿನಗಿರುವ ಕರುಣೆ ಎಲ್ಲಿ? ನಿನ್ನ ದಯಾಪರವಾದ ಪ್ರೀತಿಯನ್ನು ನಮ್ಮಿಂದ ಯಾಕೆ ಅಡಗಿಸುವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆಕಾಶದಿಂದ ಕೆಳಗೆ ನೋಡಿರಿ, ನಿಮ್ಮ ಪವಿತ್ರವೂ ಮಹಿಮೆಯೂ ಆದ ನಿಮ್ಮ ಸಿಂಹಾಸನದಿಂದ ದೃಷ್ಟಿಸಿ ನೋಡಿರಿ. ನಿಮ್ಮ ಆಸಕ್ತಿಯೂ, ನಿಮ್ಮ ಪರಾಕ್ರಮವೂ, ನಿಮ್ಮ ಹೃದಯದ ಘೋಷವೂ, ನಮ್ಮ ವಿಷಯವಾದ ನಿಮ್ಮ ಕರುಣೆ ಕನಿಕರಗಳೂ ಎಲ್ಲಿ? ಬಿಗಿಹಿಡಿದುಕೊಂಡಿದ್ದೀರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 63:15
33 ತಿಳಿವುಗಳ ಹೋಲಿಕೆ  

ಯೆಹೋವನು ಇಂತೆನ್ನುತ್ತಾನೆ - ಎಫ್ರಾಯೀಮು ನನಗೆ ಪ್ರಿಯಪುತ್ರನೋ, ಮುದ್ದುಮಗುವೋ, ಏನೋ? ಅವನ ಹೆಸರೆತ್ತಿದಾಗೆಲ್ಲಾ ಅವನನ್ನು ಜ್ಞಾಪಿಸಿಕೊಳ್ಳುತ್ತಲೇ ಬರುತ್ತೇನೆ; ಇದರಿಂದ ನನ್ನ ಕರುಳು ಅವನಿಗಾಗಿ ಮರುಗುತ್ತದಲ್ಲಾ; ಅವನನ್ನು ಕರುಣಿಸೇ ಕರುಣಿಸುವೆನು.


ನೀನು ನಿನ್ನ ಪರಿಶುದ್ಧವಾಸಸ್ಥಾನವಾಗಿರುವ ಪರಲೋಕದಿಂದ ಕೆಳಗಿರುವ ನಮ್ಮನ್ನು ಕಟಾಕ್ಷಿಸಿ ನಿನ್ನ ಜನರಾದ ಇಸ್ರಾಯೇಲ್ಯರನ್ನೂ ಹಾಲೂ ಜೇನೂ ಹರಿಯುವ ದೇಶವೆಂದು ನೀನು ನಮ್ಮ ಪಿತೃಗಳಿಗೆ ವಾಗ್ದಾನಮಾಡಿದ ಮೇರೆಗೆ ನಮಗೆ ಕೊಟ್ಟಿರುವ ಈ ಭೂವಿುಯನ್ನೂ ಆಶೀರ್ವದಿಸು ದೇವರೇ ಎಂದು ಹೇಳಬೇಕು.


ಎಫ್ರಾಯೀಮೇ, ನಾನು ನಿನ್ನನ್ನು ಹೇಗೆ ತ್ಯಜಿಸಲಿ! ಇಸ್ರಾಯೇಲೇ, ಹೇಗೆ ನಿನ್ನನ್ನು ಕೈಬಿಡಲಿ! ಅಯ್ಯೋ, ನಿನ್ನನ್ನು ಅದ್ಮದ ಗತಿಗೆ ಹೇಗೆ ತರಲಿ! ಚೆಬೋಯೀವಿುನಂತೆ ಹೇಗೆ ನಾಶಮಾಡಲಿ! ನನ್ನೊಳಗೆ ಮನಸ್ಸು ತಿರುಗಿತು, ಕರುಳು ತೀರಾ ಮರುಗಿತು.


ಪರಲೋಕದಲ್ಲಿ ಆಸೀನನಾಗಿರುವಾತನೇ, ನನ್ನ ಕಣ್ಣುಗಳನ್ನು ನಿನ್ನ ಕಡೆಗೆ ಎತ್ತಿದ್ದೇನೆ.


ಸೇನಾಧೀಶ್ವರನಾದ ದೇವರೇ, ಅಭಿಮುಖನಾಗಬೇಕು; ನೀನು ಪರಲೋಕದಿಂದ ಕಟಾಕ್ಷಿಸಿ ಈ ದ್ರಾಕ್ಷಾಲತೆಯನ್ನು ಪರಾಂಬರಿಸು.


ತಾನಿರುವ ಸ್ಥಾನದಿಂದ ಭೂನಿವಾಸಿಗಳೆಲ್ಲರನ್ನು ದೃಷ್ಟಿಸುತ್ತಾನೆ.


ಈ ಲೋಕದ ಸಂಪತ್ತುಳ್ಳ ಯಾವನಾದರೂ ಕೊರತೆಯಲ್ಲಿ ಬಿದ್ದಿರುವ ತನ್ನ ಸಹೋದರನನ್ನು ನೋಡಿ ಕರುಣಿಸದೆ ಬಿಟ್ಟರೆ ದೇವರ ಪ್ರೀತಿಯು ಅವನಲ್ಲಿ ನೆಲೆಗೊಂಡಿರುವದುಂಟೇ?


ಕ್ರಿಸ್ತನಿಂದ ಉತ್ತೇಜನ, ಪ್ರೀತಿಯ ಪ್ರೇರಣೆ, ಪವಿತ್ರಾತ್ಮನ ಅನ್ಯೋನ್ಯತೆ, ಕಾರುಣ್ಯದಯಾರಸಗಳು ಉಂಟಾಗುವವಾದರೆ


ನನ್ನ ನೇತ್ರವು ನಿರಂತರವಾಗಿ ಅಶ್ರುಧಾರೆಯನ್ನು ಸುರಿಸುವದು, ಎಂದಿಗೂ ಬಿಡದು.


ಯೆಹೋವನು ಹೀಗನ್ನುತ್ತಾನೆ - ಆಕಾಶವು ನನಗೆ ಸಿಂಹಾಸನ, ಭೂವಿುಯು ನನಗೆ ಪಾದಪೀಠ. ನೀವು ನನಗೆ ಇನ್ನೆಂಥಾ ಮನೆಯನ್ನು ಕಟ್ಟಿಕೊಡುವಿರಿ? ನನ್ನ ವಿಶ್ರಾಂತಿಗೆ ತಕ್ಕ ಸ್ಥಳವು ಎಂಥದು?


ಅವರು ಶ್ರಮೆಪಡುತ್ತಿರುವಾಗೆಲ್ಲಾ ಆತನೂ ಶ್ರಮೆಪಟ್ಟನು; ಆತನ ಶ್ರೀಮುಖಸ್ವರೂಪದೂತನು ಅವರನ್ನು ರಕ್ಷಿಸಿದನು; ತನ್ನಲ್ಲಿನ ಮಮತೆಯಿಂದಲೂ ತಾಳ್ಮೆಯಿಂದಲೂ ಅವರನ್ನು ವಿಮೋಚಿಸಿ ಪುರಾತನಕಾಲದಲ್ಲೆಲ್ಲಾ ಎತ್ತಿಕೊಂಡು ಹೊರುತ್ತಾ ಬಂದನು.


ಧರ್ಮವನ್ನು ವಜ್ರ ಕವಚವನ್ನಾಗಿ ತೊಟ್ಟು ರಕ್ಷಣೆಯೆಂಬ ಶಿರಸ್ತ್ರಾಣವನ್ನು ಧರಿಸಿಕೊಂಡನು; ರೋಷವೆಂಬ ವಸ್ತ್ರವನ್ನು ಉಡುಪುಮಾಡಿಕೊಂಡು ಆಗ್ರಹವನ್ನು ನಿಲುವಂಗಿಯನ್ನಾಗಿ ಹಾಕಿಕೊಂಡನು.


ಸದಮಲನೆನಿಸಿಕೊಂಡು ಶಾಶ್ವತಲೋಕದಲ್ಲಿ ನಿತ್ಯನಿವಾಸಿಯಾದ ಮಹೋನ್ನತನು ಹೀಗನ್ನುತ್ತಾನೆ - ಉನ್ನತಲೋಕವೆಂಬ ಪವಿತ್ರಾಲಯದಲ್ಲಿ ವಾಸಿಸುವ ನಾನು ಜಜ್ಜಿಹೋದ ದೀನಮನದೊಂದಿಗೆ ಇದ್ದುಕೊಂಡು ದೀನನ ಆತ್ಮವನ್ನೂ ಜಜ್ಜಿಹೋದ ಮನ ಮನಸ್ಸನ್ನೂ ಉಜ್ಜೀವಿಸುವವನಾಗಿದ್ದೇನೆ.


ಒಬ್ಬ ಹೆಂಗಸು ತಾನು ಹೆತ್ತ ಮಗುವಿನ ಮೇಲೆ ಕರುಣೆಯಿಡದೆ ತನ್ನ ಮೊಲೆಕೂಸನ್ನು ಮರೆತಾಳೇ? ಒಂದು ವೇಳೆ ಮರೆತಾಳು, ನಾನಾದರೆ ನಿನ್ನನ್ನು ಮರೆಯೆ.


ಯೆಹೋವನೇ, ನೀನು ಕೈಯೆತ್ತಿದ್ದರೂ ಅವರು ಲಕ್ಷಿಸರು. ಆದರೆ ನಿನ್ನ ಸ್ವಜನಾಭಿಮಾನವನ್ನು ನೋಡಿ ನಾಚಿಕೆಪಡುವರು; ಹೌದು, ಆ ನಿನ್ನ ವಿರೋಧಿಗಳನ್ನು ಅಗ್ನಿಯು ದಹಿಸಿಬಿಡುವದು.


ಅವನ ಮುಖಾಂತರ ದಾವೀದನ ಸಿಂಹಾಸನದ ಆಡಳಿತವು ಅಭಿವೃದ್ಧಿಯಾಗುವದು, ದಾವೀದನ ರಾಜ್ಯದಲ್ಲಿ ನಿತ್ಯ ಸಮಾಧಾನವಿರುವದು, ಆ ರಾಜ್ಯವು ಇಂದಿನಿಂದ ಯಾವಾಗಲೂ ನೀತಿನ್ಯಾಯಗಳ ಮೂಲಕ ಸ್ಥಾಪಿತವಾಗಿ ಸ್ಥಿರಗೊಳ್ಳುವದು; ಸೇನಾಧೀಶ್ವರನಾದ ಯೆಹೋವನ ಆಗ್ರಹವು ಇದನ್ನು ನೆರವೇರಿಸುವದು.


ಕರ್ತನೇ, ನೀನು ನಿನ್ನ ಸತ್ಯತೆಯಲ್ಲಿ ಆಣೆಯಿಟ್ಟು ದಾವೀದನಿಗೆ ವಾಗ್ದಾನಮಾಡಿ ನಡಿಸುತ್ತಿದ್ದ ಮುಂಚಿನ ಕೃಪಾಕಾರ್ಯಗಳು ಎಲ್ಲಿ?


ಯೆಹೋವನೇ, ನೀನು ಆದಿಯಿಂದಲೂ ನನ್ನನ್ನು ಕರುಣಿಸುವವನಾಗಿ ನನಗೆ ಮಾಡಿದ ಮಹೋಪಕಾರಗಳನ್ನು ನೆನಸಿಕೋ.


ಆಮೇಲೆ ಯಾಜಕರಾಗಿದ್ದ ಲೇವಿಯರು ಎದ್ದು ನಿಂತು ಜನರನ್ನು ಆಶೀರ್ವದಿಸಿದರು. ಅವರ ಸ್ವರವು [ದೇವರಿಗೆ] ಕೇಳಿಸಿತು; ಅವರ ಪ್ರಾರ್ಥನೆಯು ಪರಲೋಕದಲ್ಲಿರುವ ಆತನ ಪರಿಶುದ್ಧ ನಿವಾಸಕ್ಕೆ ಮುಟ್ಟಿತು.


ದೇವರು ನಿಜವಾಗಿ ಭೂಲೋಕದಲ್ಲಿ ವಾಸಿಸುವನೋ? ಆಕಾಶವೂ ಉನ್ನತೋನ್ನತವಾದ ಆಕಾಶವೂ ನಿನ್ನ ವಾಸಕ್ಕೆ ಸಾಲವು; ಹೀಗಿರುವಲ್ಲಿ ನಾನು ಕಟ್ಟಿಸಿದ ಈ ಮಂದಿರವು ಹೇಗೆ ಸಾಕಾದೀತು!


ಪರಿಶುದ್ಧ ವಾಸಸ್ಥಾನದಲ್ಲಿರುವ ದೇವರು ದಿಕ್ಕಿಲ್ಲದವರಿಗೆ ತಂದೆಯೂ ವಿಧವೆಯರಿಗೆ ಸಹಾಯಕನೂ ಆಗಿದ್ದಾನೆ.


ಆದದರಿಂದ ಮೋವಾಬಿನ ನಿವಿುತ್ತ ನನ್ನ ಹೃದಯವು, ಕೀರ್‍ಹೆರೆಸಿನ ನಿವಿುತ್ತ ನನ್ನ ಅಂತರಂಗವು, ಕಿನ್ನರಿಯಂತೆ ಅಲುಗಿ ನುಡಿಯುತ್ತದೆ.


ಯೆರೂಸಲೇವಿುನಲ್ಲಿ ಉಳಿದವರು ಹರಡಿಕೊಳ್ಳುವರು; ಚೀಯೋನ್ ಪರ್ವತದಲ್ಲಿ ತಪ್ಪಿಸಿಕೊಂಡವರು ಅಭಿವೃದ್ಧಿಹೊಂದುವರು; ಸೇನಾಧೀಶ್ವರನಾದ ಯೆಹೋವನ ಆಗ್ರಹವು ಇದನ್ನು ನೆರವೇರಿಸುವದು.


ಯೆಹೋವನು ಶೂರನಂತೆ ಹೊರಟು ಯುದ್ಧವೀರನ ಹಾಗೆ ತನ್ನ ರೌದ್ರವನ್ನು ಎಬ್ಬಿಸುವನು; ಆರ್ಭಟಿಸಿ ಗರ್ಜಿಸಿ ಶತ್ರುಗಳ ಮೇಲೆ ಬಿದ್ದು ತನ್ನ ಪರಾಕ್ರಮವನ್ನು ತೋರ್ಪಡಿಸುವನು.


ಯೆಹೋವನೇ, ಇವುಗಳನ್ನು ನೋಡಿಯೂ ನಿನ್ನನ್ನು ಬಿಗಿಹಿಡಿಯುವಿಯೋ? ಸುಮ್ಮನಿರುವಿಯೋ? ನಮ್ಮನ್ನು ಹೆಚ್ಚಾಗಿ ಕುಗ್ಗಿಸುವಿಯೋ?


ಆಗ ಯೆಹೋವನು ತನ್ನ ದೇಶಕ್ಕೆ ಅಪಕೀರ್ತಿ ಬರಬಾರದೆಂದು ತನ್ನ ಜನರನ್ನು ಕರುಣಿಸಿ


ಮತ್ತೂ ನಾನು ಅಂದುಕೊಂಡದ್ದೇನಂದರೆ - ಹೀಗೆ ನೆನಸುವದು ನನ್ನ ಬಲಹೀನತೆಯೇ. ಪರಾತ್ಪರನ ಭುಜಬಲವು ಪ್ರಕಟವಾದ ವರುಷಗಳನ್ನು ಜ್ಞಾಪಿಸಿಕೊಳ್ಳುವೆನು.


ನಿನ್ನ ಬಲಗೈ ನೆಟ್ಟು ಸಾಕಿ ಬೆಳಸಿದ ಸಸಿಯನ್ನು ಕಾಪಾಡು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು