ಯೆಶಾಯ 63:16 - ಕನ್ನಡ ಸತ್ಯವೇದವು J.V. (BSI)16 ನೀನೇ ನಮ್ಮ ಪಿತೃವಾಗಿದ್ದೀಯಲ್ಲಾ; ಅಬ್ರಹಾಮನು ನಮ್ಮನ್ನರಿಯನು, ಇಸ್ರಾಯೇಲನು ನಮ್ಮನ್ನು ಗುರುತಿಸನು; ಯೆಹೋವಾ, ನೀನೇ ನಮ್ಮ ಪಿತೃ; ಆದಿಯಿಂದಲೂ ನಮ್ಮ ವಿಮೋಚಕನು ಅನ್ನಿಸಿಕೊಂಡಿದ್ದೀ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ನೀನೇ ನಮ್ಮ ಪಿತೃವಾಗಿದ್ದೀಯಲ್ಲಾ; ಅಬ್ರಹಾಮನು ನಮ್ಮನ್ನರಿಯನು, ಇಸ್ರಾಯೇಲನು ನಮ್ಮನ್ನು ಗುರುತಿಸನು; ಯೆಹೋವನೇ, ನೀನೇ ನಮ್ಮ ಪಿತೃ; ನೀನು ಆದಿಯಿಂದಲೂ ‘ನಮ್ಮ ವಿಮೋಚಕನು’ ಅನ್ನಿಸಿಕೊಂಡಿದ್ದಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ನೀವೇ ನಮ್ಮ ತಂದೆ. ಅಬ್ರಹಾಮನು ನಮ್ಮನ್ನು ಅರಿಯದೆ ಇರಬಹುದು, ಇಸ್ರಯೇಲನು ನಮ್ಮನ್ನು ಗುರುತಿಸದೆ ಇರಬಹುದು, ಆದರೆ ಸರ್ವೇಶ್ವರಾ, ನೀವೇ ನಮ್ಮ ತಂದೆ, ನಮ್ಮ ಉದ್ಧಾರಕ; ಆದಿಯಿಂದ ಇರಲು ಅದುವೇ ನಿಮ್ಮ ನಾಮಾಂಕಿತ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ನೀನು ನಮ್ಮ ತಂದೆಯಾಗಿರುವೆ. ಅಬ್ರಹಾಮನಿಗೆ ನಮ್ಮ ಪರಿಚಯವಿಲ್ಲ. ಇಸ್ರೇಲನು ನಮ್ಮನ್ನು ಗುರುತಿಸುವುದಿಲ್ಲ. ಯೆಹೋವನೇ, ನೀನೇ ನಮ್ಮ ತಂದೆ. ನೀನೇ ನಮ್ಮನ್ನು ಯಾವಾಗಲೂ ರಕ್ಷಿಸಿದಾತನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಅಬ್ರಹಾಮನು ನಮ್ಮನ್ನು ತಿಳಿಯದಿದ್ದರೂ, ಇಸ್ರಾಯೇಲನು ನಮ್ಮನ್ನು ಗುರುತಿಸದಿದ್ದರೂ ಯೆಹೋವ ದೇವರಾದ ನೀವೇ ನಮ್ಮ ತಂದೆಯೂ, ನಮ್ಮ ವಿಮೋಚಕರೂ ಆಗಿದ್ದೀರಿ. ನಿಮ್ಮ ಹೆಸರು ಸದಾಕಾಲವೂ ಇದೆ ಅಧ್ಯಾಯವನ್ನು ನೋಡಿ |