Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 63:3 - ಕನ್ನಡ ಸತ್ಯವೇದವು J.V. (BSI)

3 ನಾನೊಬ್ಬನಾಗಿಯೇ ದ್ರಾಕ್ಷೆಯನ್ನು ತೊಟ್ಟಿಯಲ್ಲಿ ತುಳಿದಿದ್ದೇನೆ, ಜನಾಂಗದವರಲ್ಲಿ ಯಾರೂ ನನ್ನೊಂದಿಗಿರಲಿಲ್ಲ. ನನ್ನ ಕೋಪದಿಂದ ಶತ್ರುಗಳನ್ನು ತುಳಿದೆನು, ರೋಷವೇರಿದವನಾಗಿ ಅವರನ್ನು ಕಾಲಿನಿಂದ ಹೊಸಗಿದೆನು; ಅವರ ಸಾರವು ನನ್ನ ವಸ್ತ್ರಗಳ ಮೇಲೆ ಸಿಡಿದಿದೆ, ನನ್ನ ಉಡುಪನ್ನೆಲ್ಲಾ ಮಾಸಿಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನಾನೊಬ್ಬನೇ ದ್ರಾಕ್ಷಿಯನ್ನು ತೊಟ್ಟಿಯಲ್ಲಿ ತುಳಿದಿದ್ದೇನೆ, ಜನಾಂಗದವರಲ್ಲಿ ಯಾರೂ ನನ್ನೊಂದಿಗಿರಲಿಲ್ಲ. ನನ್ನ ಕೋಪದಿಂದ ಶತ್ರುಗಳನ್ನು ತುಳಿದೆನು, ರೋಷವೇರಿದವನಾಗಿ ಅವರನ್ನು ತುಳಿದುಹಾಕಿದೆನು; ಅವರ ಜೀವಸತ್ವ ನನ್ನ ವಸ್ತ್ರಗಳ ಮೇಲೆ ಸಿಡಿದಿದೆ, ನನ್ನ ಉಡುಪನ್ನೆಲ್ಲಾ ಮಲಿನ ಮಾಡಿಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 “ದ್ರಾಕ್ಷಿಹಣ್ಣನು ತುಳಿವಂತೆ ತುಳಿದಿದ್ದೇನೆ ರಾಷ್ಟ್ರಗಳನು ಒಬ್ಬಂಟಿಗನಾಗೇ ಯಾರು ಇರಲಿಲ್ಲ ನನಗೆ ಸಹಾಯಕ್ಕೆ. ಅವರನ್ನು ತುಳಿದೆ ಕೋಪದಿಂದ ರೋಷಾವೇಶದಿಂದ ಹೊಸಕಿದೆ ಕಾಲಿನಿಂದ. ಅವರ ರಕ್ತ ನನ್ನ ಬಟ್ಟೆಗಳ ಮೇಲೆ ಸಿಡಿದಿದೆ. ನನ್ನ ಉಡುಪಿಗೆಲ್ಲಾ ಆ ಬಿಸಿರಕ್ತ ಮೆತ್ತಿಕೊಂಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಅವನ ಉತ್ತರ: “ದ್ರಾಕ್ಷಿತೊಟ್ಟಿಯಲ್ಲಿ ನಾನೊಬ್ಬನೇ ತುಳಿದೆನು. ಯಾರೂ ನನಗೆ ಸಹಾಯ ಮಾಡಲಿಲ್ಲ. ನಾನು ಕೋಪಗೊಂಡು ದ್ರಾಕ್ಷಿಹಣ್ಣಿನ ಮೇಲೆ ತುಳಿದೆನು. ಅದರ ರಸ ನನ್ನ ಬಟ್ಟೆಯ ಮೇಲೆ ಹಾರಿತು. ಆದ್ದರಿಂದ ನನ್ನ ಬಟ್ಟೆಗಳು ಮಲಿನವಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 “ದ್ರಾಕ್ಷಿಯನ್ನು ತೊಟ್ಟಿಯಲ್ಲಿ ನಾನೊಬ್ಬನೇ ತುಳಿದಿದ್ದೇನೆ. ಜನಾಂಗಗಳಲ್ಲಿ ಒಬ್ಬನಾದರೂ ನನ್ನ ಸಂಗಡ ಇರಲಿಲ್ಲ. ನನ್ನ ಕೋಪದಲ್ಲಿ ಅವರನ್ನು ತುಳಿದಿದ್ದೇನೆ, ನನ್ನ ಉರಿಯಲ್ಲಿ ಅವರನ್ನು ಜಜ್ಜಿದ್ದೇನೆ. ಆದ್ದರಿಂದ ಅವರ ರಕ್ತವು ನನ್ನ ಬಟ್ಟೆಗಳ ಮೇಲೆ ಸಿಡಿದು, ನನ್ನ ವಸ್ತ್ರಕ್ಕೆ ಮೆತ್ತಿಕೊಂಡಿದೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 63:3
18 ತಿಳಿವುಗಳ ಹೋಲಿಕೆ  

ದುಷ್ಟರನ್ನು ತುಳಿದುಬಿಡುವಿರಿ; ನಾನು ಕಾರ್ಯಸಾಧಿಸುವ ದಿನದಲ್ಲಿ ಅವರು ನಿಮ್ಮ ಅಂಗಾಲುಗಳ ಕೆಳಗೆ ಬೂದಿಯಾಗಿ ಬಿದ್ದಿರುವರು; ಇದು ಸೇನಾಧೀಶ್ವರ ಯೆಹೋವನ ನುಡಿ.


ನಿನ್ನ ದೇವರಾದ ಯೆಹೋವನು ಎಲ್ಲಿ ಎಂದು ನನ್ನನ್ನು ಜರೆದ ಶತ್ರುಗಳು ಇದನ್ನು ನೋಡುವಾಗ ನಾಚಿಕೆಯು ಅವರನ್ನು ಕವಿದುಕೊಳ್ಳುವದು; ನಾನು ಅವರನ್ನು ಕಣ್ಣಾರೆ ನೋಡುವೆನು. ಈಗಲೇ ಬೀದಿಗಳ ಕೆಸರಂತೆ ತುಳಿತಕ್ಕೀಡಾಗುವರು.


ಇವರು ವೀರರಾಗಿ ರಣದೊಳಗೆ [ಶತ್ರುಗಳನ್ನು] ಬೀದಿಗಳ ಕೆಸರಿನಲ್ಲಿ ತುಳಿದುಬಿಡುವರು; ಯೆಹೋವನು ತಮ್ಮ ಸಂಗಡ ಇದ್ದಾನೆಂದು ಯುದ್ಧಮಾಡುವರು; ಎದುರಿಸುವ ಸವಾರರು ಭಂಗಪಡುವರು.


ಕರ್ತನು ನನ್ನ ಶೂರರನ್ನೆಲ್ಲಾ ನನ್ನ ಕಣ್ಣೆದುರಿಗೆ ತೃಣೀಕರಿಸಿದ್ದಾನೆ; ನನ್ನ ಯುವಕರನ್ನು ಭಂಗಪಡಿಸಬೇಕೆಂದು ನನ್ನ ಕೇಡಿಗಾಗಿಯೇ ಮಹೋತ್ಸವವನ್ನು ಏರ್ಪಡಿಸಿದ್ದಾನೆ; ಕರ್ತನು ಯೆಹೂದವೆಂಬ ಯುವತಿಯನ್ನು ತೊಟ್ಟಿಯಲ್ಲಿನ ದ್ರಾಕ್ಷೆಯ ಹಾಗೆ ತುಳಿದಿದ್ದಾನೆ.


ನನ್ನ ಕೋಪದಿಂದ ಜನಾಂಗಗಳನ್ನು ತುಳಿದು ರೋಷವೇರಿದವನಾಗಿ ಅವುಗಳನ್ನು ಚೂರುಚೂರು ಮಾಡಿ ನೆಲದ ಮೇಲೆ ಅವುಗಳ ಸಾರವನ್ನು ಸುರಿಸಿದೆನು.


ಸೇನಾಧೀಶ್ವರನಾದ ಯೆಹೋವನೆಂಬ ಕರ್ತನಿಂದ ದಿವ್ಯದರ್ಶನದ ತಗ್ಗಿಗೆ ಗಲಿಬಿಲಿಯ ದಿನ, ತುಳಿದಾಟದ ದಿನ, ಭ್ರಾಂತಿಯ ದಿನ, ಕೋಟೆಯು ಒಡೆದುಹೋಗಲು ಕೂಗು ಬೆಟ್ಟವನ್ನು ಮುಟ್ಟುವ ದಿನ ಬಂದಿದೆ.


ಏಕೆಂದರೆ ಯೆಹೋವನ ಹಸ್ತವು ಈ ಪರ್ವತದಲ್ಲಿ ನೆಲೆಯಾಗಿರುವದು; ಮೋವಾಬಾದರೋ ತಿಪ್ಪೆಗುಂಡಿಯ ರೊಚ್ಚಿನಲ್ಲಿ ಒಣಹುಲ್ಲು ತುಳಿಯಲ್ಪಡುವ ಹಾಗೆ ತಾನಿದ್ದಲ್ಲೇ ತುಳಿಯಲ್ಪಡುವದು.


ಅವನು ಅವರಿಗೆ - ಆಕೆಯನ್ನು ಕೆಳಗೆ ದೊಬ್ಬಿರಿ ಎಂದು ಆಜ್ಞಾಪಿಸಲು ಅವರು ದೊಬ್ಬಿದರು. ಆಕೆಯ ರಕ್ತವು ಗೋಡೆಗೂ ಕುದುರೆಗಳಿಗೂ ಸಿಡಿಯಿತು. ಅವನು ಆಕೆಯ ಶವವನ್ನು ತುಳಿಸಿಬಿಟ್ಟನು.


ಪ್ರತಿಯೊಬ್ಬ ಗರ್ವಿಷ್ಠನ ಮೇಲೆ ಕಣ್ಣಿಟ್ಟು ಕುಗ್ಗಿಸಿ ದುಷ್ಟರನ್ನು ತಟ್ಟನೆ ಕೆಡವಿಬಿಡು.


ದೇವರಿಂದ ಶೂರಕೃತ್ಯಗಳನ್ನು ನಡಿಸುವೆವು; ನಮ್ಮ ವೈರಿಗಳನ್ನು ತುಳಿದುಬಿಡುವವನು ಆತನೇ.


ಕುಡುಕರಾದ ಎಫ್ರಾಯೀಮ್ಯರ ಮಹಿಮೆಯ ಕಿರೀಟವು ಕಾಲಿನಿಂದ ತುಳಿಯಲ್ಪಡುವದು.


ಧರ್ಮವನ್ನು ವಜ್ರ ಕವಚವನ್ನಾಗಿ ತೊಟ್ಟು ರಕ್ಷಣೆಯೆಂಬ ಶಿರಸ್ತ್ರಾಣವನ್ನು ಧರಿಸಿಕೊಂಡನು; ರೋಷವೆಂಬ ವಸ್ತ್ರವನ್ನು ಉಡುಪುಮಾಡಿಕೊಂಡು ಆಗ್ರಹವನ್ನು ನಿಲುವಂಗಿಯನ್ನಾಗಿ ಹಾಕಿಕೊಂಡನು.


[ಯೆಹೋವನ ಶೂರರೇ,] ಕುಡುಗೋಲನ್ನು ಹಾಕಿರಿ, ಫಲವು ಪಕ್ವವಾಗಿದೆ; ಬನ್ನಿರಿ, ತುಳಿಯಿರಿ; ದ್ರಾಕ್ಷೆಯ ಆಲೆಯು ಭರ್ತಿಯಾಗಿದೆ, ತೊಟ್ಟಿಗಳು ತುಂಬಿತುಳುಕುತ್ತಿವೆ; ಜನಾಂಗಗಳ ದುಷ್ಟತನವು ವಿಪರೀತವೇ ಸರಿ.


ಅವನು ತನ್ನ ವಾಹನಪಶುವನ್ನು ದ್ರಾಕ್ಷಾಲತೆಗೆ ಕಟ್ಟುವನು, ರಾಜದ್ರಾಕ್ಷೆಗೆ ತನ್ನ ಕತ್ತೆಯನ್ನು ಬಿಗಿಯುವನು; ದ್ರಾಕ್ಷಾರಸದಲ್ಲಿ ತನ್ನ ಬಟ್ಟೆಗಳನ್ನು ಒಗೆಯುವನು, ದ್ರಾಕ್ಷಾರಸದಲ್ಲಿಯೇ ತನ್ನ ವಸ್ತ್ರಗಳನ್ನು ಅದ್ದಿ ತೊಳೆಯುವನು:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು