Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 63:4 - ಕನ್ನಡ ಸತ್ಯವೇದವು J.V. (BSI)

4 ಏಕಂದರೆ ಮುಯ್ಯಿ ತೀರಿಸುವ ದಿನವು ನನ್ನ ಹೃದಯದಲ್ಲಿ ಸಿದ್ಧವಾಗಿತ್ತು, ನನ್ನ ಜನರನ್ನು ವಿಮೋಚಿಸುವ ವರುಷವು ಒದಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಏಕೆಂದರೆ ಮುಯ್ಯಿ ತೀರಿಸುವ ದಿನವು ನನ್ನ ಹೃದಯದಲ್ಲಿ ಸಿದ್ಧವಾಗಿತ್ತು, ನನ್ನ ಜನರನ್ನು ವಿಮೋಚಿಸುವ ವರ್ಷವು ಒದಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಏಕೆಂದರೆ, ನನ್ನ ಜನರನು ಉದ್ಧರಿಸುವ ವರುಷವು ಬಂದಿತ್ತು ಮುಯ್ಯಿತೀರಿಸುವ ದಿನವು ನನ್ನ ಮನದಲ್ಲಿ ನಿಶ್ಚಿತವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಜನರನ್ನು ಶಿಕ್ಷಿಸಲು ನಾನೊಂದು ಸಮಯವನ್ನು ನಿಗದಿ ಮಾಡಿರುತ್ತೇನೆ. ಈಗ ನನ್ನ ಜನರನ್ನು ರಕ್ಷಿಸಿ ಕಾಪಾಡುವ ಸಮಯ ಬಂದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಏಕೆಂದರೆ ಮುಯ್ಯಿಗೆ ಮುಯ್ಯಿ ತೀರಿಸುವ ದಿವಸವು ನನ್ನ ಹೃದಯದಲ್ಲಿದೆ. ನಾನು ವಿಮೋಚಿಸಿದವರ ವರುಷವು ಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 63:4
19 ತಿಳಿವುಗಳ ಹೋಲಿಕೆ  

ಏಕಂದರೆ ಯೆಹೋವನು ಮುಯ್ಯಿತೀರಿಸುವ ದಿನವು ಬಂದಿದೆ; ಚೀಯೋನಿನ ವ್ಯಾಜ್ಯದಲ್ಲಿ [ಎದೋವಿುಗೆ] ದಂಡನೆವಿಧಿಸತಕ್ಕ ವರುಷವು ಒದಗಿದೆ.


ನೀವು ಬಾಬೆಲಿನೊಳಗಿಂದ ಓಡಿಹೋಗಿ ನಿಮ್ಮ ನಿಮ್ಮ ಪ್ರಾಣಗಳನ್ನು ಉಳಿಸಿಕೊಳ್ಳಿರಿ; ಅದಕ್ಕೆ ಉಂಟಾಗುವ ದಂಡನೆಗೆ ಒಳಗಾಗಬೇಡಿರಿ; ಯೆಹೋವನು ಮುಯ್ಯಿತೀರಿಸುವ ಕಾಲ ಬಂದಿದೆ; ಆತನು ಬಾಬೆಲಿಗೆ ಪ್ರತೀಕಾರಮಾಡುವನು.


ಯೆಹೋವನು ನೇವಿುಸಿರುವ ಶುಭವರುಷ, ನಮ್ಮ ದೇವರು ಮುಯ್ಯಿ ತೀರಿಸುವ ದಿನ, ಇವುಗಳನ್ನು ಪ್ರಚುರಗೊಳಿಸುವದಕ್ಕೂ


ಭಯಭ್ರಾಂತಹೃದಯರಿಗೆ - ಬಲಗೊಳ್ಳಿರಿ, ಹೆದರಬೇಡಿರಿ; ಇಗೋ, ನಿಮ್ಮ ದೇವರು ಮುಯ್ಯಿ ತೀರಿಸುವದಕ್ಕೂ ದೈವಿಕ ಪ್ರತಿಫಲವನ್ನು ಕೊಡುವದಕ್ಕೂ ಬರುವನು; ತಾನೇ ಬಂದು ನಿಮ್ಮನ್ನು ರಕ್ಷಿಸುವನು ಎಂದು ಹೇಳಿರಿ.


ಪರಲೋಕವೇ, ಆನಂದಪಡು; ದೇವಜನರೇ, ಅಪೊಸ್ತಲರೇ, ಪ್ರವಾದಿಗಳೇ, ಇವಳು ನಿಮಗೆ ಅನ್ಯಾಯಮಾಡಿದ್ದಕ್ಕಾಗಿ ದೇವರು ಇವಳಿಗೆ ಪ್ರತಿದಂಡನೆಯನ್ನು ಮಾಡಿದ್ದರಿಂದ ಆನಂದಪಡಿರಿ ಎಂದು ಆ ಶಬ್ದ ಹೇಳಿತು.


ಅದೇ ಗಳಿಗೆಯಲ್ಲಿ ಮಹಾಭೂಕಂಪವುಂಟಾಗಿ ಆ ಪಟ್ಟಣದ ಹತ್ತರಲ್ಲೊಂದಂಶವು ಬಿದ್ದುಹೋಯಿತು; ಆ ಭೂಕಂಪದಿಂದ ಏಳು ಸಾವಿರ ಮಂದಿ ಸತ್ತುಹೋದರು. ಉಳಿದವರು ಭಯಗ್ರಸ್ತರಾಗಿ ಪರಲೋಕ ದೇವರನ್ನು ಘನಪಡಿಸಿದರು.


ಯಾಕಂದರೆ ಬರೆದಿರುವದೆಲ್ಲಾ ನೆರವೇರುವದಕ್ಕಾಗಿ ಅವು ದಂಡನೆಯ ದಿವಸಗಳಾಗಿವೆ.


ಮಹಾಯಾಜಕನಾದ ಯೆಹೋಶುವನೇ, ನೀನೂ ನಿನ್ನ ಮುಂದೆ ಕೂತುಕೊಳ್ಳುವ ನಿನ್ನ ಸಹಕಾರಿಗಳೂ ಕೇಳಿರಿ; ಇಗೋ, ಮೊಳಿಕೆ ಎಂಬ ನನ್ನ ಸೇವಕನನ್ನು ಹೊರಡಿಸುತ್ತೇನೆಂಬದಕ್ಕೆ ಇವರೇ ಮುಂಗುರುತು.


ಯೆಹೋವನ ವಿಮುಕ್ತರು ಅಂದರೆ ಆತನು ಶತ್ರುಗಳಿಂದ ಬಿಡಿಸಿ


ಇಂತಿರಲು ಕರ್ತನೂ ಸೇನಾಧೀಶ್ವರನೂ ಇಸ್ರಾಯೇಲ್ಯರ ಶೂರನೂ ಆಗಿರುವ ಯೆಹೋವನು ಹೀಗೆ ನುಡಿಯುತ್ತಾನೆ - ಆಹಾ, ನನ್ನ ವಿರೋಧಿಗಳನ್ನು ಅಡಗಿಸಿ ಶಾಂತನಾಗುವೆನು, ನನ್ನ ಶತ್ರುಗಳಿಗೆ ಮುಯ್ಯಿತೀರಿಸುವೆನು;


ಚೀಯೋನ್ ಪಟ್ಟಣಕ್ಕೆ [ನನ್ನ] ನ್ಯಾಯದ ಮೂಲಕವೂ ದೇಶಾಂತರದಿಂದ ಬಿಡುಗಡೆಯಾಗಿ ಬರುವ ಅದರ ಪ್ರಜೆಗಳಿಗೆ [ನನ್ನ] ಧರ್ಮದ ಮೂಲಕವೂ ವಿಮೋಚನೆಯಾಗುವದು.


ಸಿಂಹವು ಅಲ್ಲಿರದು, ಕ್ರೂರ ಜಂತು ಅಲ್ಲಿ ಸೇರದು, ಕಾಣುವದೇ ಇಲ್ಲ; ಬಿಡುಗಡೆಯಾದವರೇ ಅಲ್ಲಿ ನಡೆಯುವರು;


ನಿನ್ನ ಮಾನವು ಬೈಲಿಗೆ ಬಿದ್ದು ನೀನು ನಾಚಿಕೆಗೀಡಾಗುವಿ, ನಾನು ಯಾರನ್ನೂ ಕರುಣಿಸದೆ ಮುಯ್ಯಿ ತೀರಿಸುವೆನು.


ಯೆಹೋವನ ಈ ಮಾತನ್ನು ಕೇಳಿರಿ, ಲಾಭಪಡೆಯದೆ ನಿಮ್ಮನ್ನು ಮಾರಿದೆನು, ಹಣತಕ್ಕೊಳ್ಳದೆ ನಿಮ್ಮನ್ನು ಬಿಡುಗಡೆ ಮಾಡುವೆನು.


ಅರಚಿಕೊಳ್ಳಿರಿ, ಯೆಹೋವನ ದಿನವು ಸಮೀಪವಾಯಿತು; ಅದು ಸರ್ವಶಕ್ತನಿಂದ ನಾಶರೂಪವಾಗಿ ಬರುವದು.


ಇಗೋ, ಯೆಹೋವನ ದಿನವು ಬರುತ್ತಿದೆ; ಅದು ಭೂವಿುಯನ್ನು ಹಾಳುಮಾಡಿ ಪಾಪಿಗಳನ್ನು ನಿರ್ಮೂಲಪಡಿಸುವದಕ್ಕೆ [ಆತನ] ಕೋಪೋದ್ರೇಕದಿಂದಲೂ ತೀಕ್ಷ್ಣರೋಷದಿಂದಲೂ ಕ್ರೂರವಾಗಿರುವದು.


ಅದರ ಸುತ್ತಲು ಜಯಘೋಷಮಾಡಿರಿ, ಅಧೀನವಾಯಿತು, ಅದರ ಕೊತ್ತಲಗಳು ಬಿದ್ದವು, ಅದರ ಪೌಳಿಗೋಡೆಯು ಕೆಡವಲ್ಪಟ್ಟಿತು; ಯೆಹೋವನು ಅದಕ್ಕೆ ಮುಯ್ಯಿತೀರಿಸಿದ್ದಾನೆ; ಮುಯ್ಯಿತೀರಿಸಿರಿ; ಅದು ಮಾಡಿದಂತೆಯೇ ಅದಕ್ಕೆ ಮಾಡಿರಿ.


ನಾನು ಎದೋವಿುಗೆ ನನ್ನ ಜನರಾದ ಇಸ್ರಾಯೇಲ್ಯರ ಕೈಯಿಂದ ಮುಯ್ಯಿತೀರಿಸುವೆನು; ಅವರು ನನ್ನ ಕೋಪರೋಷಗಳಿಗೆ ತಕ್ಕ ಹಾಗೆ ಅದಕ್ಕೆ ಮಾಡುವರು; ನನ್ನ ಪ್ರತೀಕಾರವು ಎದೋವಿುನ ಅನುಭವಕ್ಕೆ ಬರುವದು; ಇದು ಕರ್ತನಾದ ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು