Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 63:6 - ಕನ್ನಡ ಸತ್ಯವೇದವು J.V. (BSI)

6 ನನ್ನ ಕೋಪದಿಂದ ಜನಾಂಗಗಳನ್ನು ತುಳಿದು ರೋಷವೇರಿದವನಾಗಿ ಅವುಗಳನ್ನು ಚೂರುಚೂರು ಮಾಡಿ ನೆಲದ ಮೇಲೆ ಅವುಗಳ ಸಾರವನ್ನು ಸುರಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನನ್ನ ಕೋಪದಿಂದ ಜನಾಂಗಗಳನ್ನು ತುಳಿದು ರೋಷವೇರಿದವನಾಗಿ, ಅವುಗಳನ್ನು ಚೂರುಚೂರು ಮಾಡಿ ನೆಲದ ಮೇಲೆ ಅವುಗಳ ಸಾರವನ್ನು ಸುರಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ರಾಷ್ಟ್ರಗಳನು ತುಳಿದೆ ಕುಪಿತನಾಗಿ ಅವುಗಳನು ನುಚ್ಚುನೂರುಮಾಡಿದೆ ರೋಷಾವಿಷ್ಟನಾಗಿ ಅವುಗಳ ರಕ್ತವನು ನೆಲದಲಿ ಹರಿಸಿದೆ ಪ್ರವಾಹವಾಗಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನಾನು ಕೋಪಗೊಂಡಾಗ ಜನಾಂಗಗಳ ಮೇಲೆ ತುಳಿದಾಡಿದೆನು. ನಾನು ಸಿಟ್ಟುಗೊಂಡಾಗ ಅವರನ್ನು ಶಿಕ್ಷಿಸಿದೆನು. ಅವರ ರಕ್ತವನ್ನು ನೆಲದ ಮೇಲೆ ಚೆಲ್ಲಿದೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನನ್ನ ಕೋಪದಲ್ಲಿ ಜನಾಂಗಗಳನ್ನು ತುಳಿದುಬಿಟ್ಟೆನು. ನನ್ನ ಉರಿಯಲ್ಲಿ ಅವರನ್ನು ಕುಡಿಯುವಂತೆ ಮಾಡಿದೆನು. ಅವರ ರಕ್ತವನ್ನು ಭೂಮಿಗೆ ಸುರಿಸಿದೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 63:6
24 ತಿಳಿವುಗಳ ಹೋಲಿಕೆ  

ಮಹಾ ಪಟ್ಟಣವು ಮೂರು ಭಾಗವಾಯಿತು; ಜನಾಂಗಗಳ ಪಟ್ಟಣಗಳು ಬಿದ್ದವು. ಇದಲ್ಲದೆ ದೇವರು ದೊಡ್ಡ ಬಾಬೆಲನ್ನು ಜ್ಞಾಪಿಸಿಕೊಂಡು ತನ್ನ ಉಗ್ರಕೋಪವೆಂಬ ದ್ರಾಕ್ಷಾರಸದ ಪಾತ್ರೆಯನ್ನು ಅವಳಿಗೆ ಕುಡಿಯಲು ಕೊಟ್ಟನು.


ಅವನು ಸಹ ದೇವರ ಕೋಪವೆಂಬ ಪಾತ್ರೆಯಲ್ಲಿ ಏನೂ ಬೆರಸದೆ ಹಾಕಿದ ದೇವರ ರೌದ್ರವೆಂಬ ದ್ರಾಕ್ಷಾರಸವನ್ನು ಕುಡಿಯುವನು; ಪರಿಶುದ್ಧ ದೇವದೂತರ ಮುಂದೆಯೂ ಯಜ್ಞದ ಕುರಿಯಾದಾತನ ಮುಂದೆಯೂ ಬೆಂಕಿಯಿಂದಲೂ ಗಂಧಕದಿಂದಲೂ ಯಾತನೆಪಡುವನು.


ನಿನ್ನ ಹಿಂಸಕರು ಸ್ವಮಾಂಸವನ್ನು ತಿನ್ನುವಂತೆ ಮಾಡುವೆನು; ದ್ರಾಕ್ಷಾರಸವನ್ನು ಕುಡಿಯುವ ಹಾಗೆ ಅವರು ಸ್ವಂತ ರಕ್ತವನ್ನು ಕುಡಿದು ಅಮಲೇರುವರು; ಆಗ ಯೆಹೋವನಾದ ನಾನೇ ನಿನ್ನ ರಕ್ಷಕನು, ನಿನ್ನ ವಿಮೋಚಕನು, ಯಾಕೋಬ್ಯರ ಶೂರನು ಎಂದು ನರಜನ್ಮದವರೆಲ್ಲರಿಗೂ ಗೊತ್ತಾಗುವದು.


ಆಗ ಬಲಿಷ್ಠನಾದ ಒಬ್ಬ ದೇವದೂತನು ದೊಡ್ಡ ಬೀಸುವ ಕಲ್ಲಿನಂತಿರುವ ಒಂದು ಕಲ್ಲನ್ನು ಎತ್ತಿ ಸಮುದ್ರದೊಳಗೆ ಹಾಕಿ - ಮಹಾ ಪಟ್ಟಣವಾದ ಬಾಬೆಲು ಹೀಗೆಯೇ ದಡದಡನೆ ಕೆಡವಲ್ಪಟ್ಟು ಇನ್ನೆಂದಿಗೂ ಕಾಣಿಸುವದಿಲ್ಲ.


ಅವರು ದೇವಜನರ ಮತ್ತು ಪ್ರವಾದಿಗಳ ರಕ್ತವನ್ನು ಸುರಿಸಿದರು; ನೀನು ಅವರಿಗೆ ರಕ್ತವನ್ನೇ ಕುಡಿಯುವದಕ್ಕೆ ಕೊಟ್ಟಿದ್ದೀ; ಇದಕ್ಕೆ ಅವರು ಪಾತ್ರರು ಎಂದು ಹೇಳುವದನ್ನು ಕೇಳಿದೆನು.


ಆತನು ನನಗೆ ಕಹಿಯಾದ ಆಹಾರವನ್ನು ಅಡಚಿ ವಿಷಪದಾರ್ಥದಿಂದ ನನ್ನನ್ನು ತಣಿಸಿದ್ದಾನೆ.


ನಿಮ್ಮನ್ನು ನೀವೇ ಬೆರಗುಮಾಡಿಕೊಂಡು ಬೆರಗಾಗಿರಿ, ಕುರುಡುಮಾಡಿಕೊಂಡು ಕುರುಡರಾಗಿರಿ; ಇವರು ಅಮಲೇರಿದ್ದಾರೆ, ದ್ರಾಕ್ಷಾರಸದಿಂದಲ್ಲ; ಓಲಾಡುತ್ತಾರೆ, ಮದ್ಯದಿಂದಲ್ಲ.


ಯೆಹೋವನ ಕೈಯಲ್ಲಿ ಪಾತ್ರೆಯದೆ; ಅದು ಔಷಧಿವಿುಶ್ರವಾಗಿ ಉಕ್ಕುವ ದ್ರಾಕ್ಷಾರಸದಿಂದ ತುಂಬಿದೆ. ಅದರಿಂದ ಹೊಯ್ದು ಹಂಚುತ್ತಾನೆ. ಲೋಕದ ದುಷ್ಟರೆಲ್ಲರೂ ಅದರೊಳಗಿನ ಮಡ್ಡಿಯನ್ನು ಸಹ ಕುಡಿದು ಮುಗಿಸಬೇಕು.


ನಿನ್ನ ಜನರನ್ನು ಸಂಕಟಕ್ಕೆ ಗುರಿಪಡಿಸಿದ್ದೀ; ನೀನು ನಮಗೆ ಭ್ರಮಣಮದ್ಯವನ್ನು ಕುಡಿಸಿದ್ದೀ.


ಅವನು ತನ್ನ ನಾಶವನ್ನು ಕಣ್ಣಾರೆ ಕಾಣಲಿ, ಸರ್ವಶಕ್ತನ ರೌದ್ರರಸವನ್ನು ಪಾನಮಾಡಲಿ.


ಸೇನಾಧೀಶ್ವರನಾದ ಯೆಹೋವನೆಂಬ ಕರ್ತನಿಂದ ದಿವ್ಯದರ್ಶನದ ತಗ್ಗಿಗೆ ಗಲಿಬಿಲಿಯ ದಿನ, ತುಳಿದಾಟದ ದಿನ, ಭ್ರಾಂತಿಯ ದಿನ, ಕೋಟೆಯು ಒಡೆದುಹೋಗಲು ಕೂಗು ಬೆಟ್ಟವನ್ನು ಮುಟ್ಟುವ ದಿನ ಬಂದಿದೆ.


ಯೆಹೋವನು ಸಕಲ ಜನಾಂಗಗಳಲ್ಲಿ ಕೋಪಮಾಡಿ ಅವುಗಳ ಸೈನ್ಯದ ಮೇಲೆ ರೋಷಗೊಂಡು ಅವರನ್ನು ಕೊಲೆಗೆ ಈಡುಮಾಡಿ ನಿಶ್ಶೇಷವಾಗಿ ಸಂಹರಿಸಿದ್ದಾನಷ್ಟೆ.


ಈ ಯಜ್ಞಪಶುಗಳೊಂದಿಗೆ ಕಾಡುಕೋಣಗಳೂ ಹೋರಿಗೂಳಿಗಳೂ ಬರುವವು; ಆ ದೇಶವು ರಕ್ತದಿಂದ ನೆನೆಯುವದು, ಅಲ್ಲಿನ ದೂಳು ಕೊಬ್ಬಿನಿಂದ ಜಿಡ್ಡಾಗುವದು.


ಯೆಹೋವನು ತನ್ನ ರೋಷವನ್ನು ತುಂಬಿಕೊಟ್ಟ ಪಾತ್ರೆಯಿಂದ ಕುಡಿದ ಯೆರೂಸಲೇಮೇ, ಎಚ್ಚತ್ತುಕೋ, ಎಚ್ಚತ್ತುಕೋ, ಎದ್ದು ನಿಲ್ಲು! ಭ್ರಮಣಗೊಳಿಸುವ ಆ ಪಾನದ ಪಾತ್ರೆಯಲ್ಲಿ ಒಂದು ತೊಟ್ಟನ್ನೂ ಉಳಿಸದೆ ಕುಡಿದು ಬಿಟ್ಟಿದ್ದೀ.


ನೀವೆಲ್ಲರೂ ಕೊಲೆಗೊಳಗಾಗಿ ಬೀಳುವಿರಿ; ಏಕಂದರೆ ನಾನು ಕೂಗಲು ನೀವು ಉತ್ತರಕೊಡಲಿಲ್ಲ. ನಾನು ಹೇಳಲು ನೀವು ಕೇಳಲಿಲ್ಲ; ನನ್ನ ಚಿತ್ತಕ್ಕೆ ವಿರುದ್ಧವಾದದ್ದನ್ನು ನಡಿಸಿ ನನಗೆ ಇಷ್ಟವಲ್ಲದ್ದನ್ನು ಆರಿಸಿಕೊಂಡಿರಿ.


ಆಗ ನೀನು ಅವರಿಗೆ - ಯೆಹೋವನ ಈ ಮಾತನ್ನು ಕೇಳಿರಿ, ದಾವೀದನ ಸಿಂಹಾಸನವನ್ನೇರಿದ ಅರಸರನ್ನೂ ಯಾಜಕರನ್ನೂ ಪ್ರವಾದಿಗಳನ್ನೂ ಯೆರೂಸಲೇವಿುನ ಸಕಲ ನಿವಾಸಿಗಳನ್ನೂ ಅಂತು ದೇಶದ ಜನರೆಲ್ಲರನ್ನೂ ನಾನು ಅಮಲಿನಿಂದ ತುಂಬಿಸಿ


ಯೆಹೋವನು ಇಂತೆನ್ನುತ್ತಾನೆ - ಹೀಗಿರಲು ನನ್ನನ್ನು ಕಾದುಕೊಂಡಿರ್ರಿ, ನಾನು ಬೇಟೆಹಿಡಿಯಲಿಕ್ಕೆ ಏಳುವ ದಿನವನ್ನು ಎದುರುನೋಡಿರಿ; ಜನಾಂಗರಾಜ್ಯಗಳ ಮೇಲೆ ನನ್ನ ರೌದ್ರವನ್ನು, ಹೌದು, ನನ್ನ ಉಗ್ರಕೋಪವನ್ನೆಲ್ಲಾ ಹೊಯ್ದುಬಿಡುವದಕ್ಕಾಗಿ ಆ ಜನಾಂಗಗಳನ್ನು ಸೇರಿಸಿ ಆ ರಾಜ್ಯಗಳನ್ನು ಕೂಡಿಸಬೇಕೆಂದು ತೀರ್ಮಾನಿಸಿಕೊಂಡಿದ್ದೇನೆ; ಲೋಕವೆಲ್ಲಾ ನನ್ನ ರೋಷಾಗ್ನಿಗೆ ತುತ್ತಾಗುವದಷ್ಟೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು