Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 63:9 - ಕನ್ನಡ ಸತ್ಯವೇದವು J.V. (BSI)

9 ಅವರು ಶ್ರಮೆಪಡುತ್ತಿರುವಾಗೆಲ್ಲಾ ಆತನೂ ಶ್ರಮೆಪಟ್ಟನು; ಆತನ ಶ್ರೀಮುಖಸ್ವರೂಪದೂತನು ಅವರನ್ನು ರಕ್ಷಿಸಿದನು; ತನ್ನಲ್ಲಿನ ಮಮತೆಯಿಂದಲೂ ತಾಳ್ಮೆಯಿಂದಲೂ ಅವರನ್ನು ವಿಮೋಚಿಸಿ ಪುರಾತನಕಾಲದಲ್ಲೆಲ್ಲಾ ಎತ್ತಿಕೊಂಡು ಹೊರುತ್ತಾ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅವರು ಶ್ರಮೆಪಡುತ್ತಿರುವಾಗೆಲ್ಲಾ ಆತನೂ ಶ್ರಮೆಪಟ್ಟನು; ಆತನ ಸಮ್ಮುಖದ ದೂತನು ಅವರನ್ನು ರಕ್ಷಿಸಿದನು; ತನ್ನಲ್ಲಿನ ಮಮತೆಯಿಂದಲೂ ತಾಳ್ಮೆಯಿಂದಲೂ ಅವರನ್ನು ವಿಮೋಚಿಸಿ, ಪುರಾತನ ಕಾಲದಲ್ಲೆಲ್ಲಾ ಎತ್ತಿಕೊಂಡು ಹೊರುತ್ತಾ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಆ ಜನರ ಕಷ್ಟದುಃಖಗಳಲ್ಲಿ ಸಂರಕ್ಷಿಸಿದರು. ದಯೆಯಿಂದಲೂ ಪ್ರೀತಿಯಿಂದಲೂ ಅವರಿಗೆ ಬಿಡುಗಡೆ ನೀಡಿದರು. ಪುರಾತನ ಕಾಲದಲ್ಲೆಲ್ಲಾ ಅವರನ್ನು ಎತ್ತಿ ಹೊತ್ತು ಆದರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಜನರಿಗೆ ಅನೇಕ ತೊಂದರೆಗಳು ಪ್ರಾಪ್ತವಾಗಿದ್ದವು. ಆದರೆ ಯೆಹೋವನು ಅವರಿಗೆ ವಿರುದ್ಧನಾಗಿರಲಿಲ್ಲ. ಆತನು ಅವರನ್ನು ಪ್ರೀತಿಸಿ ಅವರಿಗಾಗಿ ಚಿಂತಿಸಿದನು; ತನ್ನ ವಿಶೇಷ ದೂತನನ್ನು ಕಳುಹಿಸಿ ಅವರನ್ನು ರಕ್ಷಿಸಿದನು. ಯೆಹೋವನು ಅವರನ್ನು ನಿತ್ಯಕಾಲಕ್ಕೂ ಸಲಹುವನು. ತನ್ನ ಜನರಿಗೆ ಯೆಹೋವನು ಸಲಹುವದನ್ನು ನಿಲ್ಲಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅವರಿಗೆ ಬಂದ ಎಲ್ಲಾ ಇಕ್ಕಟ್ಟಿನಲ್ಲಿ ಆತನಿಗೆ ಇಕ್ಕಟ್ಟಾಯಿತು. ಆತನ ಸಮ್ಮುಖದ ದೂತನು ಅವರನ್ನು ರಕ್ಷಿಸಿದನು. ತನ್ನ ಪ್ರೀತಿಯಲ್ಲಿಯೂ, ತನ್ನ ಕನಿಕರದಲ್ಲಿಯೂ ಆತನೇ ಅವರನ್ನು ವಿಮೋಚಿಸಿದನು. ಪೂರ್ವಕಾಲದ ದಿವಸಗಳಲ್ಲೆಲ್ಲಾ ಅವರನ್ನು ಎತ್ತಿಕೊಂಡು ಹೊತ್ತುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 63:9
45 ತಿಳಿವುಗಳ ಹೋಲಿಕೆ  

ಅದಕ್ಕೆ ಯೆಹೋವನು - ನಾನೇ ನಿಮ್ಮ ಜೊತೆಯಲ್ಲಿ ಬಂದು ನಿಮಗೆ ವಿಶ್ರಾಂತಿಯನ್ನು ಉಂಟುಮಾಡುವೆನು ಅಂದನು.


ಇಗೋ, ನನ್ನ ದೂತನನ್ನು ಕಳುಹಿಸುತ್ತೇನೆ, ಆತನು ನನ್ನ ಮುಂದೆ ದಾರಿಯನ್ನು ಸರಿಮಾಡುವನು; ನೀವು ಹಂಬಲಿಸುವ ಕರ್ತನು ತನ್ನ ಆಲಯಕ್ಕೆ ಫಕ್ಕನೆ ಬರುವನು; ಆಹಾ, ನಿಮಗೆ ಇಷ್ಟನಾದ ಒಡಂಬಡಿಕೆಯ ದೂತನು ಐತರುತ್ತಾನೆ; ಇದು ಸೇನಾಧೀಶ್ವರ ಯೆಹೋವನ ನುಡಿ.


ಆಗ ಪೇತ್ರನು ಎಚ್ಚರವಾಗಿ - ಕರ್ತನು ತನ್ನ ದೂತನನ್ನು ಕಳುಹಿಸಿ ಹೆರೋದನ ಕೈಯಿಂದಲೂ ಯೆಹೂದ್ಯಜನರು ನನಗೆ ಮಾಡಬೇಕೆಂದಿದ್ದ ಕೇಡಿನಿಂದಲೂ ನನ್ನನ್ನು ಬಿಡಿಸಿದನೆಂದು ನನಗೀಗ ನಿಜವಾಗಿ ತಿಳಿದುಬಂದಿದೆ ಅಂದುಕೊಂಡನು.


ನೀವು ಈ ಸ್ಥಳಕ್ಕೆ ಸೇರಿದ ಪರ್ಯಂತರವೂ ನಿಮ್ಮ ಪ್ರಯಾಣದಲ್ಲೆಲ್ಲಾ ಮಗನನ್ನು ತಂದೆ ಹೇಗೋ ಹಾಗೆಯೇ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಹೊತ್ತನಲ್ಲವೇ ಎಂದು ನಿಮಗೆ ಹೇಳಿದೆನು.


ಏನಂದರೆ - ನಾನು ಐಗುಪ್ತ್ಯರಿಗೆ ಏನು ಮಾಡಿದೆನೋ, ಹದ್ದು ತನ್ನ ಮರಿಗಳನ್ನು ರೆಕ್ಕೆಗಳ ಮೇಲೆ ಹೊತ್ತುಕೊಳ್ಳುವಂತೆ ನಾನು ನಿಮ್ಮನ್ನು ಹೊತ್ತುಕೊಂಡು ನನ್ನ ಸ್ಥಳಕ್ಕೆ ಹೇಗೆ ಸೇರಿಸಿದೆನೋ ಇದನ್ನೆಲ್ಲಾ ನೀವು ನೋಡಿದ್ದೀರಷ್ಟೆ.


ಆಗ ಇಸ್ರಾಯೇಲ್ಯರ ದಂಡಿನ ಮುಂದೆ ಹೋಗುತ್ತಿದ್ದ ದೇವದೂತನು ತನ್ನ ಸ್ಥಳವನ್ನು ಬಿಟ್ಟು ಅವರ ಹಿಂದಕ್ಕೆ ಬಂದನು; ಅವರ ಮುಂದಾಗಿದ್ದ ಮೇಘಸ್ತಂಭವು ಅಲ್ಲಿಂದ ಬಂದು ಅವರ ಹಿಂದೆ ನಿಂತುಕೊಂಡಿತು.


ಆದರೂ ಆತನು ಕರುಣಾಳುವೂ ಅಪರಾಧಿಗಳನ್ನು ಸಂಹರಿಸದೆ ಕ್ಷವಿುಸುವವನೂ ಆಗಿ ತನ್ನ ಸಿಟ್ಟನ್ನೆಲ್ಲಾ ಏರಗೊಡದೆ ಅದನ್ನು ಹಲವು ಸಾರಿ ತಡೆಯುತ್ತಾ ಬಂದನು.


ಆಗ ಆತನ ಮನಸ್ಸು ಇಸ್ರಾಯೇಲ್ಯರ ಸಂಕಟದ ನಿವಿುತ್ತ ಬಲು ನೊಂದಿತು.


ಯಾಕಂದರೆ ನಮಗಿರುವ ಮಹಾಯಾಜಕನು ನಮ್ಮ ನಿರ್ಬಲಾವಸ್ಥೆಯನ್ನು ಕುರಿತು ಅನುತಾಪವಿಲ್ಲದವನಲ್ಲ; ಆತನು ಸರ್ವ ವಿಷಯಗಳಲ್ಲಿ ನಮ್ಮ ಹಾಗೆ ಶೋಧನೆಗೆ ಗುರಿಯಾದನು, ಪಾಪ ಮಾತ್ರ ಮಾಡಲಿಲ್ಲ.


ನನ್ನನ್ನು ಎಲ್ಲಾ ಕೇಡುಗಳಿಂದ ತಪ್ಪಿಸಿ ಕಾಪಾಡುತ್ತಾ ಬಂದ ದೂತನಾಗಿಯೂ ಇರುವಾತನು ಈ ಹುಡುಗರನ್ನು ಆಶೀರ್ವದಿಸಲಿ; ಇವರು ನನ್ನ ಹೆಸರನ್ನೂ ನನ್ನ ಪಿತೃಗಳಾದ ಅಬ್ರಹಾಮ್ ಇಸಾಕರ ಹೆಸರುಗಳನ್ನೂ ಮುಂದಕ್ಕೆ ತರಲಿ; ಇವರು ಭೂವಿುಯ ಮೇಲೆ ಹೆಚ್ಚಿ ಬಹುಸಂತಾನವನ್ನು ಪಡೆಯಲಿ ಅಂದನು.


ಅವರು ಹೊಸ ಹಾಡನ್ನು ಹಾಡುತ್ತಾ - ನೀನು ಸುರುಳಿಯನ್ನು ತೆಗೆದುಕೊಂಡು ಅದರ ಮುದ್ರೆಗಳನ್ನು ಒಡೆಯುವದಕ್ಕೆ ಯೋಗ್ಯನೇ; ನೀನು ಯಜ್ಞಾರ್ಪಿತನಾಗಿ ನಿನ್ನ ರಕ್ತದಿಂದ ಸಕಲ ಕುಲ ಭಾಷೆ ಪ್ರಜೆ ಜನಾಂಗಗಳವರಿಂದ ಮನುಷ್ಯರನ್ನು ದೇವರಿಗಾಗಿ ಕೊಂಡುಕೊಂಡಿ;


ಮತ್ತು ಆತನ ಸಿಂಹಾಸನದ ಮುಂದಿರುವ ಏಳು ಆತ್ಮಗಳಿಂದ ಮತ್ತು ನಂಬತಕ್ಕ ಸಾಕ್ಷಿಯೂ ಸತ್ತವರೊಳಗಿಂದ ಮೊದಲು ಎದ್ದುಬಂದವನೂ ಭೂರಾಜರ ಒಡೆಯನೂ ಆಗಿರುವ ಯೇಸು ಕ್ರಿಸ್ತನಿಂದ ನಿಮಗೆ ಕೃಪೆಯೂ ಶಾಂತಿಯೂ ಆಗಲಿ. ನಮ್ಮನ್ನು ಪ್ರೀತಿಸುವವನೂ ತನ್ನ ರಕ್ತದ ಮೂಲಕ ನಮ್ಮನ್ನು ಪಾಪಗಳಿಂದ ಬಿಡಿಸಿದವನೂ ನಮ್ಮನ್ನು ರಾಜ್ಯವನ್ನಾಗಿಯೂ


ತಾನೇ ಶೋಧಿಸಲ್ಪಟ್ಟು ಬಾಧೆಯನ್ನು ಅನುಭವಿಸಿರುವದರಿಂದ ಶೋಧಿಸಲ್ಪಡುವವರಿಗೆ ಸಹಾಯಮಾಡುವದಕ್ಕೆ ಶಕ್ತನಾಗಿದ್ದಾನೆ.


ಆತನು ನಮ್ಮನ್ನು ಸಕಲ ಅಧರ್ಮದಿಂದ ವಿಮೋಚಿಸುವದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಕೀಯ ಜನರನ್ನು ತನಗಾಗಿ ಪರಿಶುದ್ಧ ಮಾಡುವದಕ್ಕೂ ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು.


ನಿಮ್ಮನ್ನು ತಾಕುವವನು ಯೆಹೋವನ ಕಣ್ಣುಗುಡ್ಡನ್ನು ತಾಕುವವನಾಗಿದ್ದಾನೆ. ಆದಕಾರಣ [ತನ್ನ] ಪ್ರಸಿದ್ಧಿಗಾಗಿ ನನ್ನನ್ನು ಕಳುಹಿಸಿದ ಸೇನಾಧೀಶ್ವರ ಯೆಹೋವನು ನಿಮ್ಮನ್ನು ಸೂರೆಮಾಡಿದ ಜನಾಂಗಗಳ ವಿಷಯವಾಗಿ -


ಅವನೇ ಸೀನಾಯಿಬೆಟ್ಟದಲ್ಲಿ ತನ್ನೊಡನೆ ಮಾತಾಡಿದ ದೂತನಿಗೂ ನಮ್ಮ ಪಿತೃಗಳಿಗೂ ಅಡವಿಯಲ್ಲಿದ್ದ ಸಭೆಯೊಳಗೆ ಮಧ್ಯಸ್ಥನಾಗಿದ್ದು ಜೀವಕರವಾದ ದೇವೋಕ್ತಿಗಳನ್ನು ಹೊಂದಿ ನಮಗೆ ಕೊಟ್ಟವನು.


ಆದರೆ ನಾನು ಯೆಹೂದ ವಂಶದವರಲ್ಲಿ ವಾತ್ಸಲ್ಯವಿಟ್ಟು ಅವರನ್ನು ಉದ್ಧರಿಸುವೆನು; ಬಿಲ್ಲು, ಕತ್ತಿ, ಕಾಳಗ, ಕುದುರೆ, ರಾಹುತ, ಈ ಮೂಲಕದಿಂದಲ್ಲ, ಅವರ ದೇವರಾದ ಯೆಹೋವನ ಬಲದಿಂದಲೇ ಅವರನ್ನು ರಕ್ಷಿಸುವೆನು ಅಂದನು.


ಸಿಕ್ಕಿದ ಮೇಲೆ ಅವನು ಸಂತೋಷಪಡುತ್ತಾ ಅದನ್ನು ತನ್ನ ಹೆಗಲಿನ ಮೇಲೆ ಇಟ್ಟುಕೊಂಡು


ಆಗ ಆತನು - ನೀವು ಈ ಕೇವಲ ಅಲ್ಪವಾದವರಲ್ಲಿ ಒಬ್ಬನಿಗೆ ಏನೇನು ಮಾಡದೆ ಹೋದಿರೋ ಅದನ್ನು ನನಗೂ ಮಾಡದೆ ಹೋದಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ ಅನ್ನುವನು.


ಅದಕ್ಕೆ ಅರಸನು - ಈ ನನ್ನ ಸಹೋದರರಲ್ಲಿ ಕೇವಲ ಅಲ್ಪನಾದವನೊಬ್ಬನಿಗೆ ಏನೇನು ಮಾಡಿದಿರೋ ಅದನ್ನು ನನಗೂ ಮಾಡಿದ ಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ ಅನ್ನುವನು.


ಅವರಲ್ಲಿ ಕೆಲವರು ಕರ್ತನನ್ನು ಪರೀಕ್ಷಿಸಿ ಸರ್ಪಗಳಿಂದ ನಾಶವಾದರು; ನಾವು ಪರೀಕ್ಷಿಸದೆ ಇರೋಣ.


ಅವನು ನೆಲಕ್ಕೆ ಬಿದ್ದು - ಸೌಲನೇ, ಸೌಲನೇ, ನನ್ನನ್ನು ಯಾಕೆ ಹಿಂಸೆ ಪಡಿಸುತ್ತೀ ಎಂದು ಹೇಳುವ ವಾಣಿಯನ್ನು ಕೇಳಿದನು.


ಅದಕ್ಕೆ ಮೋಶೆ - ನೀನೇ ನಮ್ಮಸಂಗಡ ಬಾರದೆ ಹೋದರೆ ನಮ್ಮನ್ನು ಇಲ್ಲಿಂದ ಹೋಗಗೊಡಿಸಬಾರದು.


ಆತನು ನಿಮ್ಮ ಪಿತೃಗಳನ್ನು ಪ್ರೀತಿಸಿ ಅವರ ತರುವಾಯ ಅವರ ಸಂತತಿಯವರಾದ ನಿಮ್ಮನ್ನೂ ಆದುಕೊಂಡು


ಇಂಥ ಸರ್ವಶಕ್ತನನ್ನು ನಾವು ಕಂಡುಹಿಡಿಯಲಾರೆವು; ಆತನ ಪರಾಕ್ರಮವು ಬಹಳ; ಆತನು ನ್ಯಾಯವನ್ನಾಗಲಿ ಪರಿಪೂರ್ಣಧರ್ಮವನ್ನಾಗಲಿ ಕುಂದಿಸುವದಿಲ್ಲ.


ಈಗಲಾದರೋ, ಯಾಕೋಬವಂಶವೇ, ಇಸ್ರಾಯೇಲ್ ಸಂತಾನವೇ, ನಿನ್ನನ್ನು ಸೃಷ್ಟಿಸಿ ರೂಪಿಸಿದವನಾದ ಯೆಹೋವನು ಹೀಗನ್ನುತ್ತಾನೆ - ಭಯಪಡಬೇಡ, ನಾನು ನಿನ್ನನ್ನು ವಿಮೋಚಿಸಿದೆನಲ್ಲಾ, ನಿನ್ನ ಹೆಸರುಹಿಡಿದು ಕರೆದೆನಲ್ಲಾ; ನೀನು ನನ್ನವನೇ.


ನೀನು ನನ್ನ ದೃಷ್ಟಿಯಲ್ಲಿ ಅಮೂಲ್ಯನೂ ಮಾನ್ಯನೂ ಪ್ರಿಯನೂ ಆಗಿರುವದರಿಂದ ನಾನು ನಿನಗೆ ಬದಲಾಗಿ ಮನುಷ್ಯರನ್ನೂ ನಿನ್ನ ಪ್ರಾಣಕ್ಕೆ ಪ್ರತಿಯಾಗಿ ಜನಾಂಗಗಳನ್ನೂ ಕೊಡುವೆನು.


ಬಾಬೆಲಿನಿಂದ ಹೊರಡಿರಿ, ಕಸ್ದೀಯರ ಕಡೆಯಿಂದ ಹಾರಿಹೋಗಿರಿ; ಹರ್ಷಧ್ವನಿಯಿಂದ ಇದನ್ನು ತಿಳಿಸಿರಿ, ಪ್ರಕಟಿಸಿರಿ, ಭೂವಿುಯ ಕಟ್ಟಕಡೆಯವರೆಗೂ ಪ್ರಚಾರಪಡಿಸಿರಿ; ಯೆಹೋವನು ತನ್ನ ಸೇವಕನಾದ ಯಾಕೋಬನನ್ನು ವಿಮೋಚಿಸಿದ್ದಾನೆಂದು ಹೇಳಿರಿ.


ಸಮುದ್ರವನ್ನೂ ಮಹಾಸಾಗರದ ಜಲರಾಶಿಯನ್ನೂ ಬತ್ತಿಸಿ ವಿಮುಕ್ತಜನರು ಹಾದುಹೋಗುವದಕ್ಕೆ ಸಮುದ್ರದ ತಳವನ್ನು ಮಾರ್ಗವನ್ನಾಗಿ ಮಾಡಿದ ಬಾಹು ನೀನೇ ಹೌದು.


ಯೆರೂಸಲೇವಿುನ ಹಾಳುಪ್ರದೇಶಗಳೇ, ತಟ್ಟನೆ ಜಯಘೋಷಮಾಡಿ ಒಟ್ಟಿಗೆ ಹರ್ಷಧ್ವನಿಗೈಯಿರಿ! ಯೆಹೋವನು ಯೆರೂಸಲೇಮನ್ನು ವಿಮೋಚಿಸಿ ತನ್ನ ಜನರನ್ನು ಸಂತೈಸಿದ್ದಾನೆ.


ನನ್ನ ದೇವರು ತನ್ನ ದೂತನನ್ನು ಕಳುಹಿಸಿ ಸಿಂಹಗಳ ಬಾಯಿಗಳನ್ನು ಬಂಧಿಸಿದನು; ಅವುಗಳಿಂದ ನನಗೆ ಯಾವ ಹಾನಿಯೂ ಆಗಲಿಲ್ಲ; ಏಕೆಂದರೆ ಆತನ ದೃಷ್ಟಿಗೆ ನಾನು ನಿರ್ಮಲನಾಗಿ ಕಂಡುಬಂದೆನು, ರಾಜನಾದ ನಿನಗೂ ಯಾವ ದ್ರೋಹವನ್ನೂ ಮಾಡಲಿಲ್ಲ ಎಂದು ಹೇಳಿದನು.


ಆಗ ಯೆಹೋವನು ತನ್ನ ದೇಶಕ್ಕೆ ಅಪಕೀರ್ತಿ ಬರಬಾರದೆಂದು ತನ್ನ ಜನರನ್ನು ಕರುಣಿಸಿ


ನೀನು ಬಿಡುಗಡೆ ಮಾಡಿದ ಪ್ರಜೆಯನ್ನೋ ಪ್ರೀತಿಯಿಂದ ನಡಿಸಿಕೊಂಡು ನಿನ್ನ ಪರಿಶುದ್ಧ ನಿವಾಸಸ್ಥಾನದ ತನಕ ನಿನ್ನ ಶಕ್ತಿಯಿಂದ ಬರಮಾಡಿದಿ.


ದೇವರೇ, ಇಸ್ರಾಯೇಲ್ಯರನ್ನು ಎಲ್ಲಾ ಬಾಧೆಗಳಿಂದ ವಿಮೋಚಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು