Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 64:1 - ಕನ್ನಡ ಸತ್ಯವೇದವು J.V. (BSI)

1 ಆಹಾ, ನೀನು ಆಕಾಶವನ್ನು ಸೀಳಿ ಇಳಿದು ಬರಬಾರದೇ! ನಿನ್ನ ದರ್ಶನವು ಉಂಟಾಗಿ ಪರ್ವತಗಳು ಅಲುಗಿದರೆ ಎಷ್ಟೋ ಒಳ್ಳೇದು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆಹಾ, ನೀನು ಆಕಾಶವನ್ನು ಸೀಳಿ ಇಳಿದು ಬರಬಾರದೇ! ನಿನ್ನ ದರ್ಶನವು ಉಂಟಾಗಿ ಪರ್ವತಗಳು ಅಗಲಿದರೆ ಎಷ್ಟೋ ಒಳ್ಳೆಯದು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 (ಸ್ವಾಮೀ) ಆಕಾಶವನ್ನು ಸೀಳಿ ಇಳಿದು ಬರಲಾರಿರಾ? ನಿಮ್ಮ ದರ್ಶನವನ್ನು ಕಂಡು ಬೆಟ್ಟಗುಡ್ಡಗಳು ಗಡಗಡನೆ ನಡುಗಬಾರದೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ನೀನು ಆಕಾಶವನ್ನು ಹರಿದು ಕೆಳಗೆ ಭೂಮಿಗಿಳಿದು ಬರುವದಾದರೆ ಎಲ್ಲವೂ ಬದಲಾಗುವದು. ಪರ್ವತಗಳು ನಿನ್ನ ಎದುರು ಕರಗಿಹೋಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಆಹಾ, ಆಕಾಶಗಳನ್ನು ಹರಿದುಬಿಟ್ಟು ಇಳಿದು ಬಾ! ನಿಮ್ಮ ದರ್ಶನವನ್ನು ಕಂಡು ಪರ್ವತಗಳು ಗಡಗಡನೆ ನಡುಗುವಂತೆಯೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 64:1
22 ತಿಳಿವುಗಳ ಹೋಲಿಕೆ  

ಮಾಡಿಸಿಕೊಂಡ ಕೂಡಲೆ ಆತನು ನೀರಿನೊಳಗಿಂದ ಮೇಲಕ್ಕೆ ಬರಲು ಆಕಾಶವೊಡೆದು ದೇವರಾತ್ಮವು ಪಾರಿವಾಳದ ಹಾಗೆ ತನ್ನ ಮೇಲೆ ಇಳಿಯುವದನ್ನು ಕಂಡನು.


ಆಮೇಲೆ ಬೆಳ್ಳಗಿರುವ ಮಹಾ ಸಿಂಹಾಸನವನ್ನೂ ಅದರ ಮೇಲೆ ಕೂತಿದ್ದಾತನನ್ನೂ ಕಂಡೆನು. ಆತನೆದುರಿನಿಂದ ಭೂಮ್ಯಾಕಾಶಗಳು ಓಡಿಹೋಗಿ ಇನ್ನು ಕಾಣಿಸದ ಹಾಗಾದವು.


ದೇವರು ಪ್ರತ್ಯಕ್ಷನಾಗಿದ್ದಾನೆಂದು ಭೂವಿುಯು ಕಂಪಿಸಿತು; ಮೇಘಮಂಡಲವು ಮಳೆಗರಿಯಿತು. ಇಸ್ರಾಯೇಲ್ಯರ ದೇವನಾದ ದೇವರು ಪ್ರತ್ಯಕ್ಷನಾಗಿದ್ದಾನೆಂದು ಆ ಸೀನಾಯಿಬೆಟ್ಟವು ಕದಲಿತು.


ಯೆಹೋವನು ಇಂತೆನ್ನುತ್ತಾನೆ - ಆಹಾ, ಮುಂದಿನ ಕಾಲದಲ್ಲಿ ಉಳುವವನು ಕೊಯ್ಯುವವನ ಹಿಂದೆ, ದ್ರಾಕ್ಷೆತುಳಿಯುವವನು ಬಿತ್ತುವವನ ಹಿಂದೆ ಒತ್ತಿಕೊಂಡು ಹೋಗುವರು; ಬೆಟ್ಟಗಳು ದ್ರಾಕ್ಷಾರಸವನ್ನು ಸುರಿಸುವವು, ಎಲ್ಲಾ ಗುಡ್ಡಗಳು ಕರಗುತ್ತವೋ ಎಂಬಂತಿರುವವು.


ಆಕಾಶದಿಂದ ನೋಡು, ಪರಿಶುದ್ಧವೂ ಘನವೂ ಆದ ನಿನ್ನ ಉನ್ನತಸ್ಥಾನದಿಂದ ಲಕ್ಷಿಸು; ನಿನ್ನ ಆಗ್ರಹವೆಲ್ಲಿ, ನಿನ್ನ ಸಾಹಸಕಾರ್ಯಗಳೆಲ್ಲಿ? ನಿನ್ನ ಕರುಳ ಮರುಗಾಟವನ್ನೂ ನಿನ್ನ ಕನಿಕರವನ್ನೂ ನಮ್ಮ ಕಡೆಗೆ ಬಿಗಿಹಿಡಿದಿದ್ದೀ.


ಆದಕಾರಣ ಅವರನ್ನು ಐಗುಪ್ತ್ಯರ ಕೈಯೊಳಗಿಂದ ತಪ್ಪಿಸುವದಕ್ಕೂ ಆ ದೇಶದಿಂದ ಬಿಡಿಸಿ ಹಾಲೂ ಜೇನೂ ಹರಿಯುವ ವಿಸ್ತಾರವಾದ ಒಳ್ಳೇ ದೇಶಕ್ಕೆ ಅಂದರೆ ಕಾನಾನ್ಯರೂ ಹಿತ್ತಿಯರೂ ಅಮೋರಿಯರೂ ಪೆರಿಜೀಯರೂ ಹಿವ್ವಿಯರೂ ಯೆಬೂಸಿಯರೂ ವಾಸವಾಗಿರುವ ದೇಶಕ್ಕೆ ನಡಿಸಿಕೊಂಡು ಹೋಗುವದಕ್ಕೂ ಇಳಿದುಬಂದಿದ್ದೇನೆ.


ಜನಾಂಗಗಳು ಕಳವಳಗೊಂಡವು; ರಾಜ್ಯಗಳು ತತ್ತರಿಸಿದವು. ಆತನು ಗರ್ಜಿಸಲು ಭೂಲೋಕವೆಲ್ಲಾ ಕರಗಿಹೋಯಿತು.


ಅವರು ತಮ್ಮ ಬಟ್ಟೆಗಳನ್ನು ಮಡಿಮಾಡಿಕೊಂಡು ಮೂರನೆಯ ದಿನದಲ್ಲಿ ಸಿದ್ಧರಾಗಿರಬೇಕು. ಮೂರನೆಯ ದಿನದಲ್ಲಿ ಯೆಹೋವನು ಸಮಸ್ತಜನರಿಗೂ ಪ್ರತ್ಯಕ್ಷನಾಗಿ ಸೀನಾಯಿ ಬೆಟ್ಟದ ಮೇಲಕ್ಕೆ ಇಳಿದುಬರುವನು.


ಆಹಾ, ಸೇನಾಧೀಶ್ವರದೇವರಾದ ಕರ್ತನು ಭೂವಿುಯನ್ನು ಮುಟ್ಟಿದ ಮಾತ್ರಕ್ಕೆ ಅದು ಕರಗಿಹೋಗುತ್ತದೆ, ಸಕಲ ನಿವಾಸಿಗಳು ಗೋಳಾಡುತ್ತಾರೆ; ನೆಲವೆಲ್ಲಾ ನೈಲ್ ನದಿಯಂತೆ ಉಬ್ಬಿ ಐಗುಪ್ತದ ನದಿಯ ಹಾಗೆಯೇ ಇಳಿದುಹೋಗುತ್ತದೆ.


ಇಗೋ, ನಾನು ನಿನ್ನನ್ನು ಮಸೆದ ಮೊನೆಹಲ್ಲಿನ ಹೊಸ ಹಂತಿಕುಂಟೆಯನ್ನಾಗಿ ಮಾಡಿದ್ದೇನೆ, ನೀನು ಬೆಟ್ಟಗಳನ್ನು ಒಕ್ಕುತ್ತಾ ಪುಡಿಪುಡಿಗೈದು ಗುಡ್ಡಗಳನ್ನು ಹೊಟ್ಟುಮಾಡುವಿ.


ನಿನ್ನ ದೊರೆತನಕ್ಕೆ ಎಂದಿಗೂ ಒಳಪಡದೆ ನಿನ್ನ ನಾಮವನ್ನು ಧರಿಸದೆ ಇರುವ ಜನರ ಹಾಗಿದ್ದೇವೆ.


ಯೆರೂಸಲೇವಿುಗೆ ಮೂಡಲಲ್ಲಿ ಎದುರಾಗಿರುವ ಎಣ್ಣೆಯ ಮರಗಳ ಗುಡ್ಡದ ಮೇಲೆ ಆತನ ಪಾದಗಳು ನಿಂತಿರಲು ಆ ಗುಡ್ಡವು ಮೂಡಲಿಂದ ಪಡುವಲಿಗೆ ಉದ್ದಕ್ಕೂ ಸೀಳಿಹೋಗಿ ಮಧ್ಯದಲ್ಲಿ ದೊಡ್ಡ ಡೊಂಗರವಾಗುವದು; ಗುಡ್ಡದ ಅರ್ಧಭಾಗವು ಬಡಗಲಿಗೆ, ಅರ್ಧಭಾಗವು ತೆಂಕಲಿಗೆ ಸರಿದುಕೊಳ್ಳುವದು.


ಮ್ಲೇಚ್ಫರು - ಅವರ ದೇವರು ಎಲ್ಲಿ ಎಂದು ಅನ್ನುವದೇಕೆ? ನಿನ್ನ ಸೇವಕರ ರಕ್ತವನ್ನು ಸುರಿಸಿದವರಿಗೆ ನಮ್ಮ ಮುಂದೆಯೇ ದಂಡನೆಯಾದದ್ದು ಜನಾಂಗಗಳಿಗೆ ಗೊತ್ತಾಗಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು