ಯೆಶಾಯ 64:11 - ಕನ್ನಡ ಸತ್ಯವೇದವು J.V. (BSI)11 ನಮ್ಮ ಪಿತೃಗಳು ನಿನ್ನನ್ನು ಕೀರ್ತಿಸುತ್ತಿದ್ದ ನಮ್ಮ ಸುಂದರ ಪವಿತ್ರಾಲಯವನ್ನು ಬೆಂಕಿಯು ಸುಟ್ಟುಬಿಟ್ಟಿದೆ, ನಮ್ಮ ಅಮೂಲ್ಯವಸ್ತುಗಳೆಲ್ಲಾ ನಾಶವಾಗಿವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ನಮ್ಮ ಪೂರ್ವಿಕರು ನಿನ್ನನ್ನು ಕೀರ್ತಿಸುತ್ತಿದ್ದ ಸುಂದರ ಪವಿತ್ರಾಲಯವನ್ನು ಬೆಂಕಿಯು ಸುಟ್ಟುಬಿಟ್ಟಿದೆ, ನಮ್ಮ ಅಮೂಲ್ಯ ವಸ್ತುಗಳೆಲ್ಲಾ ನಾಶವಾಗಿವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ನಮ್ಮ ಪಿತೃಗಳು ನಿಮ್ಮನ್ನು ಕೀರ್ತಿಸುತ್ತಿದ್ದ ಆ ಸ್ಥಳವೇ, ಆ ನಮ್ಮ ಚೆಲುವ ಪವಿತ್ರಾಲಯವೇ, ಬೆಂಕಿಯ ಪಾಲಾಗಿದೆ. ನಮ್ಮ ಅಮೂಲ್ಯ ವಸ್ತುಗಳೆಲ್ಲ ನಾಶವಾಗಿವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ನಮ್ಮ ಪವಿತ್ರ ಆಲಯವು ಬೆಂಕಿಯಿಂದ ಸುಡಲ್ಪಟ್ಟಿದೆ. ಆ ದೇವಾಲಯವು ನಮಗೆ ಅತ್ಯಂತ ಅಮೂಲ್ಯವಾದದ್ದಾಗಿದೆ. ನಮ್ಮ ಪೂರ್ವಿಕರು ನಿನ್ನನ್ನು ಅಲ್ಲಿ ಆರಾಧಿಸಿದರು. ನಾವು ಹೊಂದಿದಂಥ ಎಲ್ಲಾ ಒಳ್ಳೆಯವುಗಳು ಈಗ ನಾಶವಾದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ನಮ್ಮ ತಂದೆಗಳು ನಿನ್ನನ್ನು ಕೊಂಡಾಡಿದ ನಮ್ಮ ಪರಿಶುದ್ಧ ಶೃಂಗಾರವಾದ ದೇವಾಲಯ ಬೆಂಕಿಯಿಂದ ಸುಟ್ಟುಹೋಯಿತು. ನಮ್ಮ ಅಮೂಲ್ಯ ವಸ್ತುಗಳೆಲ್ಲ ನಾಶವಾದವು. ಅಧ್ಯಾಯವನ್ನು ನೋಡಿ |
ಯಾಜಕರೂ ಲೇವಿಯರೂ ತಮ್ಮ ತಮ್ಮ ಸ್ಥಳಗಳಲ್ಲಿ ನಿಂತರು. ದಾವೀದನು ಯೆಹೋವನ ಗಾಯನಸೇವೆಗೋಸ್ಕರ ಮಾಡಿಸಿದ ವಾದ್ಯಗಳು ಈ ಲೇವಿಯರ ಕೈಯಲ್ಲಿದ್ದವು. ಇವರು ರಾಜ ಸೇವೆಯಲ್ಲಿದ್ದುಕೊಂಡು ದೇವಾರಾಧನೆ ನಡಿಸುತ್ತಾ - ಯೆಹೋವನಿಗೆ ಕೃತಜ್ಞತಾಸ್ತುತಿಯನ್ನು ಸಮರ್ಪಿಸಿರಿ, ಆತನ ಕೃಪೆಯು ಶಾಶ್ವತವಾಗಿದೆ ಎಂಬದಾಗಿ ಆ ವಾದ್ಯಗಳೊಡನೆ ಭಜಿಸುತ್ತಿದ್ದರು. ಯಾಜಕರು ಇವರ ಎದುರಾಗಿ ನಿಂತು ತುತೂರಿಯೂದುತ್ತಿದ್ದರು. ಇಸ್ರಾಯೇಲ್ಯರೆಲ್ಲರೂ ನಿಂತಿದ್ದರು.