ಯೆಶಾಯ 64:3 - ಕನ್ನಡ ಸತ್ಯವೇದವು J.V. (BSI)3 ನಮ್ಮ ನಿರೀಕ್ಷೆಗೆ ಮೀರಿದ ಭಯಂಕರಕೃತ್ಯಗಳನ್ನು ನಡಿಸಿ ನಿನ್ನ ನಾಮಮಹತ್ತನ್ನು ನಿನ್ನ ಶತ್ರುಗಳಿಗೆ ತಿಳಿಯಪಡಿಸಿ ಜನಾಂಗಗಳನ್ನು ನಿನ್ನ ದರ್ಶನದಿಂದ ನಡುಗಿಸಬಾರದೇ! ಹೌದು, ನೀನು ಇಳಿದು ಬಂದು ಪರ್ವತಗಳು ನಿನ್ನ ದರ್ಶನದಿಂದ ಅಲುಗಿದರೆ ಎಷ್ಟೋ ಲೇಸು! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಹೌದು, ನೀನು ಮೊದಲಿನಂತೆ ನಮ್ಮ ನಿರೀಕ್ಷೆಗೆ ಮೀರಿದ ಭಯಂಕರ ಕೃತ್ಯಗಳನ್ನು ನಡೆಸಿ ಇಳಿದು ಬಂದು, ಪರ್ವತಗಳು ನಿನ್ನ ದರ್ಶನದಿಂದ ನಡುಗಿದರೆ ಎಷ್ಟೋ ಲೇಸು! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ನಮ್ಮ ನಿರೀಕ್ಷೆಗೆ ಮೀರಿದ ಮಹತ್ಕಾರ್ಯಗಳನ್ನು ನಡೆಸಿ, ನಿಮ್ಮ ನಾಮಮಹಿಮೆಯನ್ನು ನಿಮ್ಮ ಶತ್ರುಗಳಿಗೆ ಪ್ರದರ್ಶಿಸಿ, ಅನ್ಯರಾಷ್ಟ್ರಗಳನ್ನು ನಡುಗಿಸಲಾರಿರಾ? ಹೌದು, ನೀವು ಇಳಿದುಬಂದು, ಬೆಟ್ಟಗುಡ್ಡಗಳು ನಡುಗಿದರೆ ಎಷ್ಟೋ ಲೇಸು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಆದರೆ ನೀನು ಹೀಗೆ ಮಾಡುವುದು ನಿಜವಾಗಿಯೂ ನಮಗಿಷ್ಟವಿಲ್ಲ. ಪರ್ವತಗಳು ನಿನ್ನೆದುರು ಕರಗಿಹೋದರೂ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ನಾವು ಎದುರು ನೋಡದೆ ಇದ್ದ ಭಯಂಕರವಾದವುಗಳನ್ನು ನೀನು ಮಾಡಿದಾಗ ಇಳಿದು ಬಂದೆ, ಬೆಟ್ಟಗಳು ನಿನ್ನ ಸಮ್ಮುಖಕ್ಕೆ ಕರಗಿ ಹೋದವು. ಅಧ್ಯಾಯವನ್ನು ನೋಡಿ |