ಯೆಶಾಯ 64:6 - ಕನ್ನಡ ಸತ್ಯವೇದವು J.V. (BSI)6 ನಾವೆಲ್ಲರು ಅಶುದ್ಧನ ಹಾಗಿದ್ದೇವೆ, ನಮ್ಮ ಧರ್ಮಕಾರ್ಯಗಳೆಲ್ಲಾ ಹೊಲೆಯ ಬಟ್ಟೆಯಂತಿವೆ; ನಾವೆಲ್ಲರೂ ತರಗೆಲೆಯೋಪಾದಿಯಲ್ಲಿ ಒಣಗಿ ಹೋಗಿದ್ದೇವೆ; ನಮ್ಮ ಅಪರಾಧಗಳು ಬಿರುಗಾಳಿಯ ಪ್ರಕಾರ ನಮ್ಮನ್ನು ಬಡಿದುಕೊಂಡು ಹೋಗಿವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ನಾವೆಲ್ಲರು ಅಶುದ್ಧನ ಹಾಗಿದ್ದೇವೆ, ನಮ್ಮ ಧರ್ಮಕಾರ್ಯಗಳೆಲ್ಲಾ ಹೊಲೆಯ ಬಟ್ಟೆಯಂತಿವೆ; ನಾವೆಲ್ಲರೂ ಎಲೆಗಳೋಪಾದಿಯಲ್ಲಿ ಒಣಗಿಹೋಗಿದ್ದೇವೆ; ನಮ್ಮ ಅಪರಾಧಗಳು ಬಿರುಗಾಳಿಯ ಪ್ರಕಾರ ನಮ್ಮನ್ನು ಬಡಿದುಕೊಂಡು ಹೋಗಿವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ನಾವೆಲ್ಲರೂ ಅಶುದ್ಧರು, ನಮ್ಮ ಸತ್ಕಾರ್ಯಗಳೆಲ್ಲ ಕೊಳಕು, ತರಗೆಲೆಯಂತೆ ಒಣಗಿಹೋಗಿದ್ದೇವೆ. ಬಿರುಗಾಳಿಯಂತೆ ನಮ್ಮನ್ನು ತಳ್ಳಿಕೊಂಡು ಬಂದಿವೆ, ನಮ್ಮ ಅಪರಾಧಗಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ನಾವೆಲ್ಲರೂ ಪಾಪದಿಂದ ಮಲಿನರಾಗಿದ್ದೇವೆ. ನಮ್ಮ ಸುಕಾರ್ಯಗಳೆಲ್ಲಾ ಹಳೇ ಕೊಳಕು ಬಟ್ಟೆಯಂತಿವೆ. ನಾವೆಲ್ಲಾ ಒಣಗಿಹೋದ ಎಲೆಗಳಂತಿದ್ದೇವೆ. ನಮ್ಮ ಪಾಪಗಳು ಬಿರುಗಾಳಿಯಂತೆ ನಮ್ಮನ್ನು ಬಡಿದುಕೊಂಡುಹೋಗಿವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ನಾವೆಲ್ಲರೂ ಅಶುದ್ಧನ ಹಾಗೆ ಇದ್ದೇವೆ. ನಮ್ಮ ನೀತಿ ಕಾರ್ಯಗಳೆಲ್ಲಾ ಮೈಲಿಗೆ ವಸ್ತ್ರದ ಹಾಗೆ ಇವೆ. ನಾವೆಲ್ಲರೂ ಎಲೆಯ ಹಾಗೆ ಒಣಗಿಹೋಗಿದ್ದೇವೆ. ನಮ್ಮ ಪಾಪಗಳು ಗಾಳಿಯಂತೆ ನಮ್ಮನ್ನು ಬಡಿದುಕೊಂಡು ಹೋಗಿವೆ. ಅಧ್ಯಾಯವನ್ನು ನೋಡಿ |