ಯೆಶಾಯ 64:7 - ಕನ್ನಡ ಸತ್ಯವೇದವು J.V. (BSI)7 ಈಗ ನಿನ್ನ ಹೆಸರೆತ್ತಿ ಪ್ರಾರ್ಥಿಸಿ ನಿನ್ನನ್ನು ಆಶ್ರಯಿಸಲು ತ್ರಾಣ ತಂದುಕೊಳ್ಳುವವನು ಎಲ್ಲಿಯೂ ಇಲ್ಲ; ನೀನು ನಮಗೆ ವಿಮುಖನಾಗಿ ನಮ್ಮನ್ನು ನಮ್ಮ ಅಪರಾಧಗಳಿಗೆ ವಶಮಾಡಿದ್ದೀಯಲ್ಲಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಈಗ ನಿನ್ನ ಹೆಸರೆತ್ತಿ ಪ್ರಾರ್ಥಿಸಿ, ನಿನ್ನನ್ನು ಆಶ್ರಯಿಸಲು ತ್ರಾಣ ತಂದುಕೊಳ್ಳುವವನು ಎಲ್ಲಿಯೂ ಇಲ್ಲ; ನೀನು ನಮಗೆ ವಿಮುಖನಾಗಿ ನಮ್ಮನ್ನು ನಮ್ಮ ಅಪರಾಧಗಳಿಗೆ ವಶಮಾಡಿದ್ದಿಯಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ನಿಮ್ಮ ನಾಮಸ್ಮರಣೆ ಮಾಡುವವನು ಯಾರೂ ಇಲ್ಲ. ನಿಮ್ಮ ಆಶ್ರಯ ಕೋರುವ ಆಸಕ್ತನು ಎಲ್ಲಿಯೂ ಇಲ್ಲ. ಏಕೆಂದರೆ ನೀವು ನಮಗೆ ವಿಮುಖರಾಗಿದ್ದೀರಿ. ನಮ್ಮ ಪಾಪಗಳ ವಶಕ್ಕೆ ನಮ್ಮನ್ನು ಬಿಟ್ಟುಬಿಟ್ಟಿದ್ದೀರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ನಿನ್ನ ಹೆಸರನ್ನು ಯಾರೂ ಕರೆಯುವದಿಲ್ಲ. ನಿನ್ನನ್ನು ಹಿಂಬಾಲಿಸಲು ಯಾರಿಗೂ ಇಷ್ಟವಿಲ್ಲ; ಯಾಕೆಂದರೆ ನೀನು ನಮಗೆ ವಿಮುಖನಾಗಿರುವೆ ಮತ್ತು ನಮ್ಮನ್ನು ನಮ್ಮ ಪಾಪಗಳ ದೋಷಕ್ಕೆ ಒಪ್ಪಿಸಿಕೊಟ್ಟಿರುವಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ನಿನ್ನ ಹೆಸರನ್ನು ಕರೆಯುವವನೂ, ನಿನ್ನನ್ನು ಹಿಡಿದುಕೊಳ್ಳುವುದಕ್ಕೆ ಎಚ್ಚರಗೊಳ್ಳುವವನು ಒಬ್ಬನೂ ಇಲ್ಲ. ಏಕೆಂದರೆ ನಿನ್ನ ಮುಖವನ್ನು ನಮಗೆ ಮರೆಮಾಡಿದ್ದೀ. ನಮ್ಮ ಪಾಪಗಳಿಗಾಗಿ ನಮ್ಮನ್ನು ಬಿಟ್ಟುಬಿಟ್ಟಿದ್ದೀರಿ. ಅಧ್ಯಾಯವನ್ನು ನೋಡಿ |
ಐಗುಪ್ತ್ಯರು ನಿನ್ನ ವಿಷಯದಲ್ಲಿ - ಯೆಹೋವನು ಕೇಡುಮಾಡಬೇಕೆಂಬ ಅಭಿಪ್ರಾಯದಿಂದಲೇ ಇಸ್ರಾಯೇಲ್ಯರನ್ನು ಇಲ್ಲಿಂದ ಕರಕೊಂಡು ಹೋದನಲ್ಲಾ; ಅವರನ್ನು ಬೆಟ್ಟಗಳಲ್ಲಿ ಸಾಯಿಸಿ ಭೂವಿುಯಲ್ಲಿ ಉಳಿಯದಂತೆ ನಿರ್ಮೂಲ ಮಾಡುವದಕ್ಕೇನೇ ಅವರನ್ನು ಕರಕೊಂಡು ಹೋದನೆಂದು ಹೇಳುವದಕ್ಕೆ ಆಸ್ಪದವಾಗಬೇಕೇ? ನೀನು ರೋಷಾಗ್ನಿಯನ್ನು ಬಿಟ್ಟು ನಿನ್ನ ಪ್ರಜೆಗಳಿಗೆ ಕೆಡುಕನ್ನು ಮಾಡದೆ ಮನಸ್ಸನ್ನು ಬೇರೆ ಮಾಡಿಕೋ.