ಯೆಶಾಯ 64:8 - ಕನ್ನಡ ಸತ್ಯವೇದವು J.V. (BSI)8 ಈಗಲಾದರೋ ಯೆಹೋವನೇ, ನೀನು ನಮ್ಮ ತಂದೆಯಾಗಿದ್ದೀ; ನಾವು ಜೇಡಿಮಣ್ಣು, ನೀನು ಕುಂಬಾರ, ನಾವೆಲ್ಲರೂ ನಿನ್ನ ಕೈಕೆಲಸವೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಈಗಲಾದರೋ ಯೆಹೋವನೇ, ನೀನು ನಮ್ಮ ತಂದೆಯಾಗಿದ್ದಿ; ನೀನು ಕುಂಬಾರನು, ನಾವು ಜೇಡಿಮಣ್ಣು, ನಾವೆಲ್ಲರೂ ನಿನ್ನ ಕೈಕೆಲಸವೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಆದರೂ ಸ್ವಾಮಿ ಸರ್ವೇಶ್ವರಾ, ನೀವು ನಮ್ಮ ತಂದೇ. ನಾವು ಜೇಡಿಮಣ್ಣು, ನೀವೇ ಕುಂಬಾರ; ನಾವೆಲ್ಲರು ನಿಮ್ಮ ಕೈಯ ಕೃತಿಗಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಯೆಹೋವನೇ, ನೀನು ನಮ್ಮ ತಂದೆಯಾಗಿರುವೆ. ನಾವು ಜೇಡಿಮಣ್ಣಿನಂತಿದ್ದೇವೆ. ನೀನಾದರೋ ಕುಂಬಾರನಾಗಿರುವೆ. ನಿನ್ನ ಕೈಗಳು ನಮ್ಮನ್ನು ನಿರ್ಮಿಸಿದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಆದರೆ ಈಗ ಯೆಹೋವ ದೇವರೇ, ನಮ್ಮ ತಂದೆಯು ನೀನೇ, ನಾವು ಮಣ್ಣು. ನೀನು ನಮ್ಮ ಕುಂಬಾರನು. ನಾವೆಲ್ಲರೂ ನಿನ್ನ ಕೈಕೆಲಸಗಳು. ಅಧ್ಯಾಯವನ್ನು ನೋಡಿ |
ಐಗುಪ್ತ್ಯರು ನಿನ್ನ ವಿಷಯದಲ್ಲಿ - ಯೆಹೋವನು ಕೇಡುಮಾಡಬೇಕೆಂಬ ಅಭಿಪ್ರಾಯದಿಂದಲೇ ಇಸ್ರಾಯೇಲ್ಯರನ್ನು ಇಲ್ಲಿಂದ ಕರಕೊಂಡು ಹೋದನಲ್ಲಾ; ಅವರನ್ನು ಬೆಟ್ಟಗಳಲ್ಲಿ ಸಾಯಿಸಿ ಭೂವಿುಯಲ್ಲಿ ಉಳಿಯದಂತೆ ನಿರ್ಮೂಲ ಮಾಡುವದಕ್ಕೇನೇ ಅವರನ್ನು ಕರಕೊಂಡು ಹೋದನೆಂದು ಹೇಳುವದಕ್ಕೆ ಆಸ್ಪದವಾಗಬೇಕೇ? ನೀನು ರೋಷಾಗ್ನಿಯನ್ನು ಬಿಟ್ಟು ನಿನ್ನ ಪ್ರಜೆಗಳಿಗೆ ಕೆಡುಕನ್ನು ಮಾಡದೆ ಮನಸ್ಸನ್ನು ಬೇರೆ ಮಾಡಿಕೋ.