ಯೆಶಾಯ 65:11 - ಕನ್ನಡ ಸತ್ಯವೇದವು J.V. (BSI)11 ಆದರೆ ಯೆಹೋವನಾದ ನನ್ನನ್ನು ತೊರೆದು ನನ್ನ ಪವಿತ್ರಪರ್ವತವನ್ನು ಮರೆತು ಶುಭದಾಯಕದೇವತೆಗೆ ಔತಣವನ್ನು ಅಣಿಮಾಡಿ ಗತಿದಾಯಕದೇವತೆಗೆ ಮದ್ಯವನ್ನು ತುಂಬಾ ಬೆರಸಿದ ನಿಮಗೆ ಕತ್ತಿಯನ್ನೇ ಗತಿಯಾಗಮಾಡುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಆದರೆ ಯೆಹೋವನಾದ ನನ್ನನ್ನು ತೊರೆದು, ನನ್ನ ಪವಿತ್ರ ಪರ್ವತವನ್ನು ಮರೆತು, ಶುಭದಾಯಕ ದೇವತೆಗೆ ಔತಣವನ್ನು ಏರ್ಪಡಿಸಿ, ಗತಿದಾಯಕ ದೇವತೆಗೆ ಮದ್ಯವನ್ನು ಬೆರಸಿದ ನಿಮಗೆ ಕತ್ತಿಯನ್ನೇ ಗತಿಯಾಗ ಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 “ಆದರೆ ನನ್ನನ್ನು ತೊರೆದು ನನ್ನ ಪವಿತ್ರ ಪರ್ವತವನ್ನು ಮರೆತು, ‘ಗಾದ್’ ಎಂಬ ಅದೃಷ್ಟ ದೇವತೆಗೆ ಔತಣವನ್ನು ಅಣಿಮಾಡುವ, ‘ಮೆನೀ’ ಎಂಬ ಗತಿ ದೇವತೆಗೆ ಬೆರೆತ ಮದ್ಯವನ್ನು ಭರ್ತಿಮಾಡುವ, ನಿಮಗೆ ಕತ್ತಿಯನ್ನೇ ಗತಿಯನ್ನಾಗಿ ಮಾಡುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 “ಆದರೆ ನೀವು ಯೆಹೋವನನ್ನು ತೊರೆದಿರುವದರಿಂದ ಶಿಕ್ಷಿಸಲ್ಪಡುವಿರಿ. ನೀವು ನನ್ನ ಪವಿತ್ರ ಪರ್ವತವನ್ನು ಮರೆತುಬಿಟ್ಟಿದ್ದೀರಿ. ನೀವು ‘ಅದೃಷ್ಟ’ ಎಂಬ ಸುಳ್ಳುದೇವರನ್ನು ಪೂಜಿಸಲಾರಂಭಿಸಿದ್ದೀರಿ. ನೀವು ‘ಗತಿ’ ಎಂಬ ಸುಳ್ಳುದೇವರನ್ನು ಅವಲಂಭಿಸಿಕೊಂಡಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 “ಆದರೆ ಯೆಹೋವನಾದ ನನ್ನನ್ನು ತೊರೆದು, ನನ್ನ ಪವಿತ್ರ ಪರ್ವತವನ್ನು ಮರೆತು, ಶುಭದಾಯಕ ದೇವತೆಗೆ ಔತಣವನ್ನು ಅಣಿಮಾಡಿ, ಗಾದ್ ಎಂಬ ಅದೃಷ್ಟ ದೇವತೆಗೆ ಮದ್ಯವನ್ನು ತುಂಬಾ ಬೆರೆಸಿದ ನಿಮಗೆ ಅಧ್ಯಾಯವನ್ನು ನೋಡಿ |
ನನ್ನ ಮಗನಾದ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಸಂಪೂರ್ಣಹೃದಯದಿಂದಲೂ ಮನಸ್ಸಂತೋಷದಿಂದಲೂ ಆತನನ್ನೇ ಸೇವಿಸು; ಯೆಹೋವನು ಎಲ್ಲಾ ಹೃದಯಗಳನ್ನು ವಿಚಾರಿಸುವವನೂ ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವನೂ ಆಗಿರುತ್ತಾನಲ್ಲಾ. ನೀನು ಆತನನ್ನು ಹುಡುಕುವದಾದರೆ ಆತನು ನಿನಗೆ ಸಿಕ್ಕುವನು. ಆತನನ್ನು ಬಿಟ್ಟರೆ ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವನು.