ಯೆಶಾಯ 65:15 - ಕನ್ನಡ ಸತ್ಯವೇದವು J.V. (BSI)15 ಕರ್ತನಾದ ಯೆಹೋವನು ನಿಮ್ಮನ್ನು ಕೊಂದುಹಾಕುವನು, ನಿಮ್ಮ ಹೆಸರು ನನ್ನ ಆಪ್ತಜನರು ಶಪಿಸುವ ಶಾಪದ ಮಾತಾಗಿಯೇ ಉಳಿಯುವದು; ನಾನು ನನ್ನ ಸೇವಕರಿಗೆ ಹೊಸ ಹೆಸರನ್ನು ಕೊಡುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಕರ್ತನಾದ ಯೆಹೋವನು ನಿಮ್ಮನ್ನು ಕೊಂದುಹಾಕುವನು, ನಿಮ್ಮ ಹೆಸರು ನನ್ನ ಆಪ್ತಜನರು ಶಪಿಸುವ ಶಾಪದ ಮಾತಾಗಿಯೇ ಉಳಿಯುವುದು; ನಾನು ನನ್ನ ಸೇವಕರಿಗೆ ಹೊಸ ಹೆಸರನ್ನು ಕೊಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಆಯ್ಕೆಯಾದವರಿಗೆ ನಿಮ್ಮ ಹೆಸರು ಶಾಪದ ಹೆಸರಾಗಿಯೇ ಉಳಿಯುವುದು. ಏಕೆಂದರೆ, ಸ್ವಾಮಿ ಸರ್ವೇಶ್ವರ ಆದ ನಾನು ನಿಮ್ಮನ್ನು ಕೊಲೆಗೀಡುಮಾಡುವೆನು. ನನ್ನ ಭಕ್ತಾದಿಗಳಿಗಾದರೋ ಹೊಸ ಹೆಸರನ್ನು ಕೊಡುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ನಿಮ್ಮ ಹೆಸರುಗಳು ನನ್ನ ಸೇವಕರಿಗೆ ಶಾಪವಾಗಿ ಉಪಯೋಗಿಸಲ್ಪಡುತ್ತವೆ.” ನನ್ನ ಒಡೆಯನಾದ ಯೆಹೋವನು ನಿಮ್ಮನ್ನು ಸಾಯಿಸುವನು. ಆತನು ತನ್ನ ಸೇವಕರನ್ನು ಹೊಸ ಹೆಸರಿನಿಂದ ಕರೆಯುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ನಿಮ್ಮ ಹೆಸರನ್ನು ನಾನು ಆಯ್ದುಕೊಂಡವರಿಗೆ ಶಾಪವಾಗಿ ಉಳಿಸುವಿರಿ. ಹೇಗೆಂದರೆ, ಸಾರ್ವಭೌಮ ಯೆಹೋವ ದೇವರು ಅಪನಂಬಿಗಸ್ತರಾದ ನಿಮ್ಮನ್ನು ಕೊಂದುಹಾಕಿ, ತಮ್ಮ ಸೇವಕರಿಗಾದರೋ ಬೇರೆ ಹೆಸರನ್ನು ನೀಡುವರು. ಅಧ್ಯಾಯವನ್ನು ನೋಡಿ |