ಯೆಶಾಯ 65:20 - ಕನ್ನಡ ಸತ್ಯವೇದವು J.V. (BSI)20 ಕೆಲವು ದಿವಸ ಮಾತ್ರ ಬದುಕತಕ್ಕ ಕೂಸಾಗಲಿ ವಯಸ್ಸಾಗದೆ ಮುದುಕನಾದವನಾಗಲಿ ಅಲ್ಲಿ ಇರುವದಿಲ್ಲ; ಯುವಕನು ನೂರು ವರುಷದೊಳಗೆ ಸಾಯನು, ಪಾಪಿಷ್ಠನಿಗೂ ನೂರು ವರುಷದೊಳಗೆ ಶಾಪತಗಲದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಕೆಲವು ದಿನ ಮಾತ್ರ ಬದುಕತಕ್ಕ ಕೂಸಾಗಲಿ, ವೃದ್ಧನಾಗಲಿ ಅಲ್ಲಿ ಇರುವುದಿಲ್ಲ; ಯುವಕನು ನೂರು ವರ್ಷದೊಳಗೆ ಸಾಯನು, ಪಾಪಿಷ್ಠನಿಗೂ ನೂರು ವರ್ಷದೊಳಗೆ ಶಾಪ ತಗಲದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಕೆಲವೇ ದಿನ ಬದುಕುವ ಮಗುವಾಗಲಿ, ಆಯುಸ್ಸು ಮುಗಿಸದ ಮುದುಕನಾಗಲಿ ಇನ್ನು ಇಲ್ಲಿರನು. ನೂರು ವರ್ಷ ಬಾಳುವವನು ‘ಯುವಕ’ ಎನಿಸಿಕೊಳ್ಳುವನು; ನೂರರೊಳಗೆ ಸಾಯುವ ಪಾಪಿಯು ‘ಶಾಪಗ್ರಸ್ತ’ ಎನಿಸಿಕೊಳ್ಳುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಆ ಪಟ್ಟಣದಲ್ಲಿ ಹುಟ್ಟಿದ ಶಿಶುಗಳೆಲ್ಲಾ ಜೀವಿಸುವವು. ಯಾವ ಮಗುವೇ ಆಗಲಿ ಹುಟ್ಟಿದ ಕೂಡಲೇ ಸಾಯುವದಿಲ್ಲ. ಆ ಪಟ್ಟಣದ ನಿವಾಸಿಗಳಲ್ಲಿ ಯಾರೂ ಕಡಿಮೆ ಆಯುಷ್ಯದಿಂದ ಸಾಯುವದಿಲ್ಲ. ಪ್ರತಿಯೊಂದು ಮಗುವೂ ದೀರ್ಘಾಯುಷ್ಯವನ್ನು ಹೊಂದುವದು. ಪ್ರತಿಯೊಬ್ಬ ಯುವಕನೂ ಬಹಳ ಕಾಲ ಜೀವಿಸುವನು. ಆಗ ನೂರು ವರ್ಷ ಪ್ರಾಯದವನು ಸಹ ಯೌವನಸ್ಥನೆಂದು ಕರೆಯಲ್ಪಡುವನು. ಒಬ್ಬನು ನೂರು ವರ್ಷವಾದರೂ ಬಾಳದಿದ್ದರೆ, ಜನರು ಅವನನ್ನು ಶಾಪ ಹೊಂದಿದವನೆಂದು ಹೇಳುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 “ಅಲ್ಲಿ ಕೆಲವು ದಿನಗಳು ಮಾತ್ರ ಬದುಕತಕ್ಕ ಕೂಸೂ, ವೃದ್ಧನೂ ಇರುವುದಿಲ್ಲ. ಮಗುವು ನೂರು ವರುಷದವನಾಗಿ ಸಾಯುವುದು. ಆದರೆ ನೂರು ವರುಷವನ್ನು ತಲುಪಲು ವಿಫಲನಾದವನನ್ನು ಶಾಪಗ್ರಸ್ತ ಎಂದು ಪರಿಗಣಿಸಲಾಗುತ್ತದೆ. ಅಧ್ಯಾಯವನ್ನು ನೋಡಿ |