ಯೆಶಾಯ 65:25 - ಕನ್ನಡ ಸತ್ಯವೇದವು J.V. (BSI)25 ತೋಳವು ಕುರಿಯ ಸಂಗಡ ಮೇಯುವದು, ಸಿಂಹವು ಎತ್ತಿನಂತೆ ಹುಲ್ಲು ತಿನ್ನುವದು. ಹಾವಿಗೆ ದೂಳೇ ಆಹಾರವಾಗುವದು. ನನ್ನ ಪರಿಶುದ್ಧ ಪರ್ವತದಲ್ಲೆಲ್ಲಾ ಯಾರೂ ಕೇಡುಮಾಡುವದಿಲ್ಲ, ಯಾರೂ ಹಾಳುಮಾಡುವದಿಲ್ಲ ಎಂದು ಯೆಹೋವನು ಅನ್ನುತ್ತಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ತೋಳವು ಕುರಿಯ ಸಂಗಡ ಮೇಯುವುದು, ಸಿಂಹವು ಎತ್ತಿನಂತೆ ಹುಲ್ಲು ತಿನ್ನುವುದು, ಹಾವಿಗೆ ಧೂಳೇ ಆಹಾರವಾಗುವುದು. ನನ್ನ ಪರಿಶುದ್ಧ ಪರ್ವತದಲ್ಲೆಲ್ಲಾ ಯಾರೂ ಕೇಡು ಮಾಡುವುದಿಲ್ಲ, ಯಾರೂ ಹಾಳು ಮಾಡುವುದಿಲ್ಲ” ಎಂದು ಯೆಹೋವನು ಅನ್ನುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ತೋಳವೂ ಕುರಿಮರಿಯೂ ಒಂದಾಗಿ ಮೇಯುವುವು; ಸಿಂಹವು ಗೋವಿನಂತೆ ಹುಲ್ಲು ತಿನ್ನುವುದು; ಹಾವಿಗೆ ಮಣ್ಣೇ ಆಹಾರವಾಗುವುದು. ನನ್ನ ಪವಿತ್ರಪರ್ವತದೊಳೆಲ್ಲೂ ಅವು ಯಾವ ಕೇಡು ಮಾಡವು, ಹಾಳುಮಾಡವು.” ಇದು ಸರ್ವೇಶ್ವರ ಸ್ವಾಮಿಯ ನುಡಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ತೋಳಗಳೂ ಕುರಿಮರಿಗಳೂ ಒಟ್ಟಾಗಿ ಮೇಯುವವು. ಸಿಂಹಗಳು ದನಕುರಿಗಳಂತೆ ಹುಲ್ಲನ್ನು ಮೇಯುತ್ತವೆ. ವಿಷದ ಹಾವುಗಳು ಕೇವಲ ಮಣ್ಣನ್ನೇ ತಿನ್ನುತ್ತವೆ. ನನ್ನ ಪವಿತ್ರಪರ್ವತದಲ್ಲಿ ಅವು ಯಾರಿಗೂ ಕೇಡುಮಾಡುವುದಿಲ್ಲ; ಯಾರಿಗೂ ಭಯ ಹುಟ್ಟಿಸುವುದಿಲ್ಲ.” ಇವು ಯೆಹೋವನ ನುಡಿಗಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ತೋಳವೂ ಕುರಿಮರಿಯೂ ಒಂದಾಗಿ ಮೇಯುವುವು; ಸಿಂಹವು ಎತ್ತಿನ ಹಾಗೆ ಹುಲ್ಲು ತಿನ್ನುವುದು; ಹಾವಿಗೆ ಮಣ್ಣೇ ಆಹಾರವಾಗುವುದು; ಅವು ನನ್ನ ಪರಿಶುದ್ಧ ಪರ್ವತದಲ್ಲೆಲ್ಲಾ ಯಾವ ಕೇಡೂ ಮಾಡುವುದಿಲ್ಲ, ನಾಶವೂ ಮಾಡುವುದಿಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿ |