Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 65:4 - ಕನ್ನಡ ಸತ್ಯವೇದವು J.V. (BSI)

4 ಗುಪ್ತಸ್ಥಳಗಳಲ್ಲಿ ರಾತ್ರಿಕಳೆಯುತ್ತಾ ಹಂದಿಯ ಬಾಡು ತಿನ್ನುತ್ತಾ ಅಸಹ್ಯಪದಾರ್ಥಗಳ ಸಾರನ್ನು ತಮ್ಮ ಗಂಗಳಗಳಲ್ಲಿ ಬಡಿಸಿಕೊಳ್ಳುತ್ತಾ ಅಲ್ಲಿ ನಿಂತಿರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಗೋರಿಗಳಲ್ಲಿ ಕುಳಿತುಕೊಳ್ಳುತ್ತಾ, ಗುಪ್ತಸ್ಥಳಗಳಲ್ಲಿ ರಾತ್ರಿ ಕಳೆಯುತ್ತಾ, ಹಂದಿಯ ಮಾಂಸವನ್ನು ತಿನ್ನುತ್ತಾ, ಅಸಹ್ಯ ಪದಾರ್ಥಗಳ ಸಾರನ್ನು ತಮ್ಮ ಪಾತ್ರೆಗಳಲ್ಲಿ ಬಡಿಸಿಕೊಳ್ಳುತ್ತಾ ಅಲ್ಲಿ ನಿಂತಿರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಗೋರಿಗಳಲ್ಲಿ ಕುಳಿತುಕೊಳ್ಳುತ್ತಾರೆ, ಗುಪ್ತಸ್ಥಳಗಳಲ್ಲಿ ರಾತ್ರಿಯನ್ನು ಕಳೆಯುತ್ತಾರೆ, ಹಂದಿಯ ಮಾಂಸವನ್ನು ತಿನ್ನುತ್ತಾರೆ, ಅಸಹ್ಯ ಪದಾರ್ಥಗಳ ಸಾರವನ್ನು ತಟ್ಟೆಗಳಲ್ಲಿ ಬಡಿಸಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಅವರು ಸತ್ತವರಿಂದ ಸಂದೇಶ ಪಡೆಯಲು ಸಮಾಧಿಗಳ ನಡುವೆ ಕುಳಿತುಕೊಳ್ಳುವರು. ಅವರು ಹಂದಿ ಮಾಂಸವನ್ನು ತಿನ್ನುತ್ತಾರೆ. ಅವರು ತೆಗೆದುಕೊಳ್ಳುವ ಭಕ್ಷ್ಯಗಳು ಕೊಳೆತ ಮಾಂಸದಿಂದ ಮಲಿನವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಸಮಾಧಿಗಳಲ್ಲಿ ಉಳಿದು, ಗವಿಗಳಲ್ಲಿ ತಂಗುವರು. ಹಂದಿಯ ಮಾಂಸವನ್ನು ತಿನ್ನುವರು ತಮ್ಮ ಪಾತ್ರೆಗಳಲ್ಲಿ ಅಶುದ್ಧ ಪದಾರ್ಥಗಳ ಸಾರನ್ನು ಇಟ್ಟುಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 65:4
16 ತಿಳಿವುಗಳ ಹೋಲಿಕೆ  

ತೋಟಗಳೊಳಗೆ ಪ್ರವೇಶಿಸುವದಕ್ಕೆ ತಮ್ಮ ಮಧ್ಯದಲ್ಲಿನ ಒಬ್ಬನ ಅಂಗಾಭಿನಯವನ್ನು ಅನುಸರಿಸಿ ತಮ್ಮನ್ನು ಶುದ್ಧೀಕರಿಸಿ ಪವಿತ್ರಮಾಡಿಕೊಂಡು ಹಂದಿಯ ಮಾಂಸವನ್ನೂ ಅಶುದ್ಧಪದಾರ್ಥವನ್ನೂ ಇಲಿಯನ್ನೂ ತಿನ್ನುವವರು ಒಟ್ಟಿಗೆ ಕೊನೆಗಾಣುವರು ಎಂದು ಯೆಹೋವನು ನುಡಿಯುತ್ತಾನೆ.


ಹಂದಿಯ ಗೊರಸು ಸೀಳಿಯದೆ; ಆದರೂ ಅದು ಮೆಲಕು ಹಾಕುವದಿಲ್ಲವಾದದರಿಂದ ಅದು ನಿಮಗೆ ಅಶುದ್ಧ. ಇವುಗಳ ಮಾಂಸವನ್ನು ನೀವು ತಿನ್ನಬಾರದು;


ಹೋರಿಯನ್ನು ವಧಿಸುವವನು ನರಬಲಿಯನ್ನು ಕೊಡುತ್ತಾನೆ; ಕುರಿಯನ್ನು ಕಡಿಯುವವನು ನಾಯಿಯ ಕತ್ತನ್ನು ಮುರಿಯುತ್ತಾನೆ; ನೈವೇದ್ಯಮಾಡುವವನು ಹಂದಿಯ ರಕ್ತವನ್ನು ಅರ್ಪಿಸುತ್ತಾನೆ; ಧೂಪಹಾಕುವವನು ವಿಗ್ರಹಾರಾಧನೆ ಮಾಡುತ್ತಾನೆ; ಇವರು ಮನಸ್ಸಿಗೆ ಬಂದ ಮಾರ್ಗಗಳನ್ನು ಆರಿಸಿಕೊಂಡು ತಮ್ಮ ಅಸಹ್ಯಕಾರ್ಯಗಳಲ್ಲಿ ಮನಃಪೂರ್ವಕವಾಗಿ ಆನಂದಿಸುತ್ತಾರೆ;


ಆತನು ದಡಕ್ಕೆ ಇಳಿಯುತ್ತಲೇ ಆ ಊರಿನವನಾದ ಒಬ್ಬ ಮನುಷ್ಯನು ಆತನೆದುರಿಗೆ ಬಂದನು. ಅವನಿಗೆ ದೆವ್ವಗಳು ಹಿಡಿದಿದ್ದವು. ಬಹುಕಾಲದಿಂದ ಬಟ್ಟೆಯನ್ನೇ ಹಾಕಿಕೊಳ್ಳದೆ ಯಾವ ಮನೆಯಲ್ಲಿಯೂ ಇರದೆ ಸಮಾಧಿಯ ಗವಿಗಳಲ್ಲಿಯೇ ಇರುತ್ತಿದ್ದನು.


ಆಮೇಲೆ ಆತನು ಆಚೇದಡಕ್ಕೆ ಗದರೇನರ ಸೀಮೆಗೆ ಮುಟ್ಟಿದಾಗ ದೆವ್ವಹಿಡಿದವರಿಬ್ಬರು ಸಮಾಧಿಯ ಗವಿಗಳೊಳಗಿಂದ ಹೊರಟು ಆತನೆದುರಿಗೆ ಬಂದರು. ಅವರು ಬಹು ಉಗ್ರರಾಗಿದ್ದದರಿಂದ ಆ ದಾರಿಯಲ್ಲಿ ಯಾರೂ ತಿರುಗಾಡಲಾರದೆ ಇದ್ದರು.


ಅದಕ್ಕೆ ನಾನು - ಅಯ್ಯೋ, ಕರ್ತನಾದ ಯೆಹೋವನೇ, ನಾನು ಹೊಲಸನ್ನು ಮುಟ್ಟಿದವನಲ್ಲ. ನಾನು ಹುಟ್ಟಿದಂದಿನಿಂದ ಇಂದಿನವರೆಗೂ ಸತ್ತ ಪಶುವಿನ ಮಾಂಸವನ್ನಾಗಲಿ ಕಾಡುಮೃಗವು ಕೊಂದ ಪಶುವಿನ ಮಾಂಸವನ್ನಾಗಲಿ ತಿಂದವನೇ ಅಲ್ಲ; ಯಾವ ಅಸಹ್ಯಪದಾರ್ಥವೂ ನನ್ನ ಬಾಯೊಳಗೆ ಸೇರಲಿಲ್ಲ ಎಂದು ಅರಿಕೆಮಾಡಲು


ಮಾಟಗಾರರು, ತಂತ್ರಗಾರರು, ಸತ್ತವರನ್ನು ವಿಚಾರಿಸುವವರು, ಬೇತಾಳಕರು, ಪ್ರೇತಸಿದ್ಧರು ಇಂಥವರು ಯಾರೂ ನಿಮ್ಮಲ್ಲಿ ಇರಬಾರದು.


ಸತ್ತುಬಿದ್ದದ್ದನ್ನು ನೀವು ತಿನ್ನಕೂಡದು; ನಿಮ್ಮ ಊರಲ್ಲಿರುವ ಪರದೇಶೀಯರಿಗೆ ಅದನ್ನು ತಿನ್ನುವದಕ್ಕೆ ಕೊಡಬಹುದು, ಅನ್ಯರಿಗೆ ಮಾರಬಹುದು; ನೀವಾದರೋ ನಿಮ್ಮ ದೇವರಾದ ಯೆಹೋವನಿಗೆ ಪ್ರತಿಷ್ಠಿತರಾದವರು. ಆಡುಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಕೂಡದು.


ಹಂದಿಯ ಗೊರಸು ಸೀಳಿದ್ದರೂ ಅದು ಮೆಲಕುಹಾಕುವದಿಲ್ಲವಾದದರಿಂದ ಅದು ನಿಮಗೆ ಅಶುದ್ಧ. ಇವುಗಳ ಮಾಂಸವನ್ನು ನೀವು ತಿನ್ನಕೂಡದು; ಇವುಗಳ ಹೆಣವನ್ನು ಮುಟ್ಟಕೂಡದು.


ನಿಷಿದ್ಧವಾಗಿರುವ ಯಾವದನ್ನೂ ನೀವು ತಿನ್ನಕೂಡದು.


ಮನುಷ್ಯನ ಶವ ಸೋಂಕಿದವನು ಏಳು ದಿನಗಳವರೆಗೆ ಅಶುದ್ಧನಾಗಿರಬೇಕು.


ಭೂವಿುಯ ಪ್ರಥಮ ಫಲಗಳಲ್ಲಿ ಶ್ರೇಷ್ಠವಾದದ್ದನ್ನು ನಿಮ್ಮ ದೇವರಾದ ಯೆಹೋವನ ಮಂದಿರಕ್ಕೆ ತರಬೇಕು. ಆಡುಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಕೂಡದು.


ನಿಮ್ಮ ಬೆಳೆಯ ಪ್ರಥಮಫಲದಲ್ಲಿ ಉತ್ಕೃಷ್ಟವಾದದ್ದನ್ನು ನಿಮ್ಮ ದೇವರಾದ ಯೆಹೋವನ ಮಂದಿರಕ್ಕೆ ತರಬೇಕು. ಆಡುಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಬಾರದು.


ಅವರು ಸವಿಯುವ ರಕ್ತವನ್ನು ಬಾಯೊಳಗಿಂದ ತೆಗೆದುಬಿಡುವೆನು; ಅವರು ಕಚ್ಚುವ ಅಸಹ್ಯಪದಾರ್ಥಗಳನ್ನು ಹಲ್ಲುಗಳ ಮಧ್ಯದಿಂದ ಕಿತ್ತುಹಾಕುವೆನು; ಅವರೂ ಇಸ್ರಾಯೇಲಿನ ದೇವರಿಗೆ ಶೇಷಜನವಾಗಿ ನಿಲ್ಲುವರು; ಯೆಹೂದದಲ್ಲಿ ಕುಲಪಾಲಕನಂತಿರುವರು; ಎಕ್ರೋನಿನವರು ಯೆಬೂಸಿಯರ ಹಾಗಿರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು