Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 65:5 - ಕನ್ನಡ ಸತ್ಯವೇದವು J.V. (BSI)

5 ಹತ್ತಿರ ಬರಬೇಡ, ನಾನು ಮಡಿವಂತನು, ನೀನು ಸೇರತಕ್ಕವನಲ್ಲ ಎನ್ನುತ್ತಾ ಅಂತು ಪ್ರತಿನಿತ್ಯವೂ ಮುಖದೆದುರಿಗೆ ನನ್ನನ್ನು ಕೆಣಕುತ್ತಾ ನನ್ನ ಮೂಗಿಗೆ ದಿನವೆಲ್ಲಾ ಉರಿಯುವ ಬೆಂಕಿಯ ಹೊಗೆಯಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅವರು, ‘ಹತ್ತಿರ ಬರಬೇಡ, ನಾನು ಮಡಿವಂತನು, ನೀನು ಸೇರತಕ್ಕವನಲ್ಲ’ ಎನ್ನುತ್ತಾ, ಅಂತು ಪ್ರತಿನಿತ್ಯವೂ ಮುಖದೆದುರಿಗೆ ನನ್ನನ್ನು ಕೆಣಕುತ್ತಾ, ನನ್ನ ಮೂಗಿಗೆ ದಿನವೆಲ್ಲಾ ಉರಿಯುವ ಬೆಂಕಿಯ ಹೊಗೆಯಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಬೇರೆಯವರಿಗೆ, ‘ಅಲ್ಲೇ ನಿಲ್ಲು, ಹತ್ತಿರ ಬರಬೇಡ; ನಿನಗಿಂತ ನಾನು ಮಡಿವಂತ’ ಎನ್ನುತ್ತಾರೆ. ಹೀಗೆ ಇವರು ನನಗೆ ಉಸಿರುಕಟ್ಟುವ ಹೊಗೆಯಾಗಿದ್ದಾರೆ; ದಿನವೆಲ್ಲ ಉರಿಯುವ ಬೆಂಕಿಯಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆದರೆ ಅವರು ಇತರರಿಗೆ, ‘ನನ್ನ ಬಳಿಗೆ ಬರಬೇಡ. ನೀನು ನಿನ್ನನ್ನು ಶುದ್ಧಮಾಡುವ ತನಕ ನನ್ನನ್ನು ಮುಟ್ಟದಿರು’ ಎಂದು ಹೇಳುವರು. ಅವರು ನನ್ನ ಕಣ್ಣಿನಲ್ಲಿ ಹೊಗೆಯಂತಿದ್ದಾರೆ; ಅವರ ಬೆಂಕಿಯು ಸದಾ ಉರಿಯುತ್ತಿರುವದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ‘ನಿನ್ನಷ್ಟಕ್ಕೆ ನೀನೇ ನಿಂತುಕೋ, ನನ್ನ ಬಳಿಗೆ ಬರಬೇಡ. ಏಕೆಂದರೆ ನಿನಗಿಂತ ಪರಿಶುದ್ಧನಾಗಿದ್ದೇನೆ,’ ಎಂದು ಹೇಳುವರು. ಇವರು ನನ್ನ ಮೂಗಿನಲ್ಲಿ ಹೊಗೆಯಾಗಿಯೂ, ದಿನವೆಲ್ಲಾ ಉರಿಯುವ ಬೆಂಕಿಯಾಗಿಯೂ ಇದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 65:5
17 ತಿಳಿವುಗಳ ಹೋಲಿಕೆ  

ಆದರೆ ಆತನನ್ನು ಊಟಕ್ಕೆ ಕರೆದ ಫರಿಸಾಯನು ಇದನ್ನು ಕಂಡು - ಇವಳು ದುರಾಚಾರಿ; ಇವನು ಪ್ರವಾದಿಯಾಗಿದ್ದರೆ ತನ್ನನ್ನು ಮುಟ್ಟಿದ ಈ ಹೆಂಗಸು ಇಂಥವಳೆಂದು ತಿಳುಕೊಳ್ಳುತ್ತಿದ್ದನು ಅಂದುಕೊಂಡನು.


ಅಹಂಕಾರಿಗಳೆಲ್ಲಾ ಯೆಹೋವನಿಗೆ ಅಸಹ್ಯ; ಅವರಿಗೆ ದಂಡನೆ ಖಂಡಿತ.


ಅದನ್ನು ಕಂಡು ಫರಿಸಾಯರೂ ಅವರಲ್ಲಿದ್ದ ಶಾಸ್ತ್ರಿಗಳೂ ಆತನ ಶಿಷ್ಯರ ಮೇಲೆ ಗುಣುಗುಟ್ಟುತ್ತಾ - ನೀವು ಸುಂಕದವರ ಮತ್ತು ಪಾಪಿಗಳ ಸಂಗಡ ಊಟ ಮಾಡುವದೇಕೆ ಎಂದು ಕೇಳಿದರು.


ಯೆಹೋವನು ಅಂಥವನನ್ನು ಎಂದಿಗೂ ಕ್ಷವಿುಸದೆ ಬಹಳ ಸಿಟ್ಟುಮಾಡಿಕೊಂಡು ತನ್ನ ಗೌರವವನ್ನು ಕಾಪಾಡಿಕೊಳ್ಳುವವನಾಗಿ ಈ ಗ್ರಂಥದಲ್ಲಿ ಬರೆದಿರುವ ಎಲ್ಲಾ ಶಾಪೋಕ್ತಿಗಳಿಗೂ ಅವನನ್ನು ಗುರಿಪಡಿಸಿ ಅವನ ಹೆಸರನ್ನು ಭೂವಿುಯ ಮೇಲೆ ಇಲ್ಲದಂತೆ ಮಾಡುವನು.


ಇವರು ಭೇದಗಳನ್ನು ಉಂಟುಮಾಡುವವರೂ ಪ್ರಾಕೃತಮನುಷ್ಯರೂ ದೇವರಾತ್ಮವಿಲ್ಲದವರೂ ಆಗಿದ್ದಾರೆ.


ಯೌವನಸ್ಥರೇ, ಅದೇ ರೀತಿಯಾಗಿ ಹಿರಿಯರಿಗೆ ಅಧೀನರಾಗಿರಿ. ನೀವೆಲ್ಲರೂ ದೀನಮನಸ್ಸೆಂಬ ವಸ್ತ್ರದಿಂದ ಸೊಂಟಾಕಟ್ಟಿಕೊಂಡು ಒಬ್ಬರಿಗೊಬ್ಬರು ಸೇವೆಮಾಡಿರಿ. ದೇವರು ಅಹಂಕಾರಿಗಳನ್ನು ಎದುರಿಸುತ್ತಾನೆ, ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ.


ಆತನು ನಮ್ಮ ಮೇಲೆ ಅತಿಶಯವಾದ ಕೃಪೆಯನ್ನು ಇಡುತ್ತಾನೆ. ಆದುದರಿಂದ - ದೇವರು ಅಹಂಕಾರಿಗಳನ್ನು ಎದುರಿಸುತ್ತಾನೆ, ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ ಎಂದು ಶಾಸ್ತ್ರವು ಹೇಳುತ್ತದೆ.


ಫರಿಸಾಯರು ಅದನ್ನು ನೋಡಿ ಆತನ ಶಿಷ್ಯರನ್ನು - ನಿಮ್ಮ ಗುರುವು ಸುಂಕದವರ ಮತ್ತು ಪಾಪಿಗಳ ಸಂಗಡ ಯಾಕೆ ಊಟಮಾಡುತ್ತಾನೆ ಎಂದು ಕೇಳಿದರು.


ಹಲ್ಲುಗಳಿಗೆ ಹುಳಿಯೂ ಕಣ್ಣುಗಳಿಗೆ ಹೊಗೆಯೂ ಹೇಗೋ ಯಜಮಾನನಿಗೆ ಸೋಮಾರಿಯು ಹಾಗೆ.


ಆತನ ಬಳಿಗೆ ಬರುತ್ತಾ ಇರಲು ಫರಿಸಾಯರೂ ಶಾಸ್ತ್ರಿಗಳೂ - ಇವನು ಪಾಪಿಗಳನ್ನು ಸೇರಿಸಿಕೊಂಡು ಅವರ ಜೊತೆಯಲ್ಲಿ ಊಟಮಾಡುತ್ತಾನೆ ಎಂದು ಹೇಳಿಕೊಂಡು ಗುಣುಗುಟ್ಟುತ್ತಿದ್ದರು.


ತಮ್ಮ ಕೊಳೆಯನ್ನು ತೊಳಕೊಳ್ಳದೆ ತಾವೇ ಶುದ್ಧರೆಂದು ಎಣಿಸಿಕೊಳ್ಳುವ ಬೇರೊಂದು ತರದವರುಂಟು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು