Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 65:8 - ಕನ್ನಡ ಸತ್ಯವೇದವು J.V. (BSI)

8 ಯೆಹೋವನು ಹೀಗನ್ನುತ್ತಾನೆ - ರಸ ದೊರೆಯಬಹುದಾದ ದ್ರಾಕ್ಷೆಯ ಗೊಂಚಲನ್ನು ಒಬ್ಬನು ನೋಡಿ - ಹಾಳುಮಾಡಬೇಡ, ಅದರಲ್ಲಿ ಪ್ರಯೋಜನವಿದೆ ಎನ್ನುವಂತೆ ನಾನು ನನ್ನ ಸೇವಕರನ್ನು ಲಕ್ಷ್ಯಕ್ಕೆ ತಂದು ಇವರನ್ನೆಲ್ಲಾ ಹಾಳುಮಾಡಬಾರದು ಎಂದು ಅಂದುಕೊಳ್ಳುವೆನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಯೆಹೋವನು ಹೀಗನ್ನುತ್ತಾನೆ, “ರಸ ದೊರೆಯಬಹುದಾದ ದ್ರಾಕ್ಷಿಯ ಗೊಂಚಲನ್ನು ಒಬ್ಬನು ನೋಡಿ, ‘ಹಾಳುಮಾಡಬೇಡ, ಅದರಲ್ಲಿ ಪ್ರಯೋಜನವಿದೆ’ ಎನ್ನುವಂತೆ, ನಾನು ನನ್ನ ಸೇವಕರನ್ನು ಲಕ್ಷ್ಯಕ್ಕೆ ತಂದು, ಇವರನ್ನೆಲ್ಲಾ ಹಾಳುಮಾಡಬಾರದು ಎಂದು ಅಂದುಕೊಳ್ಳುವೆನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ : “ದ್ರಾಕ್ಷಿಯ ಗೊಂಚಲಿನಲ್ಲಿ ರಸವಿರುವ ತನಕ, ‘ಅದನ್ನು ಹಾಳುಮಾಡಬೇಡ, ಅದೊಂದು ಪ್ರಸಾದ,’ ಎನ್ನುತ್ತಾರೆ ಜನ. ಅಂತೆಯೇ ನಾನು ನನ್ನ ಭಕ್ತಾದಿಗಳನ್ನು ಲಕ್ಷ್ಯಕ್ಕೆ ತಂದುಕೊಂಡು ಜನರೆಲ್ಲರನ್ನು ಹಾಳುಮಾಡಬಾರದು ಎಂದುಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಯೆಹೋವನು ಹೇಳುವುದೇನೆಂದರೆ: “ದ್ರಾಕ್ಷಿಹಣ್ಣಿನಲ್ಲಿ ಹೊಸ ರಸವು ಇರುವಾಗ ಜನರು ಅದನ್ನು ಹಿಂಡಿ ರಸವನ್ನು ತೆಗೆಯುವರು. ಯಾಕೆಂದರೆ ಆ ಹಣ್ಣನ್ನು ಮತ್ತೆ ಉಪಯೋಗಿಸಬೇಕೆಂಬ ಉದ್ದೇಶದಿಂದ ಅದನ್ನು ಸಂಪೂರ್ಣವಾಗಿ ಹಾಳು ಮಾಡುವದಿಲ್ಲ. ಅದೇ ರೀತಿ ನಾನು ನನ್ನ ಸೇವಕರಿಗೂ ಮಾಡುವೆನು. ಅವರನ್ನು ನಾನು ಸಂಪೂರ್ಣವಾಗಿ ನಾಶಮಾಡುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಯೆಹೋವ ದೇವರು ಹೀಗೆನ್ನುತ್ತಾರೆ: “ರಸ ದೊರೆಯಬಹುದಾದ ದ್ರಾಕ್ಷಿ ಗೊಂಚಲನ್ನು ಒಬ್ಬನು ನೋಡಿ, ‘ಹಾಳು ಮಾಡಬೇಡ, ಅದರಲ್ಲಿ ಪ್ರಯೋಜನವಿದೆ,’ ಎನ್ನುವಂತೆ ನಾನು ನನ್ನ ಸೇವಕರನ್ನು ಲಕ್ಷ್ಯಕ್ಕೆ ತಂದು ಇವರನ್ನೆಲ್ಲಾ ಹಾಳುಮಾಡಬಾರದು ಎಂದುಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 65:8
14 ತಿಳಿವುಗಳ ಹೋಲಿಕೆ  

ಕರ್ತನು ಆ ದಿನಗಳನ್ನು ಕಡಿಮೆಮಾಡದಿದ್ದರೆ ಒಂದು ನರಪ್ರಾಣಿಯಾದರೂ ಉಳಿಯದು; ಆದರೆ ತಾನು ಆದುಕೊಂಡವರಿಗೋಸ್ಕರ ಆ ದಿನಗಳನ್ನು ಕಡಿಮೆಮಾಡಿದ್ದಾನೆ.


ಯಾರೂ ಅದನ್ನು ಹೆದರಿಸರು. ಯೆಹೋವನು ಇಂತೆನ್ನುತ್ತಾನೆ - ನಾನು ನಿನ್ನನ್ನು ರಕ್ಷಿಸಲು ನಿನ್ನೊಂದಿಗಿದ್ದೇನೆ; ನಾನು ಯಾವ ಜನಾಂಗಗಳಲ್ಲಿಗೆ ನಿನ್ನನ್ನು ಅಟ್ಟಿ ಚದರಿಸಿದೆನೋ ಆ ಜನಾಂಗಗಳನ್ನೆಲ್ಲಾ ನಿರ್ಮೂಲಮಾಡುವೆನು, ನಿನ್ನನ್ನೋ ನಿರ್ಮೂಲಮಾಡೆನು; ನಿನ್ನನ್ನು ವಿುತಿಮೀರಿ ಶಿಕ್ಷಿಸೆನು. ಆದರೆ ಶಿಕ್ಷಿಸದೆ ಬಿಡುವದಿಲ್ಲ.


ಆಗ ದೇಶದಲ್ಲಿ ಹತ್ತನೆಯ ಒಂದು ಭಾಗ ಉಳಿದಿದ್ದರೂ ಅದೂ ಕೂಡಾ ನಾಶವಾಗುವದು; ಏಲಾ ಅಲ್ಲೋನ್ ಮರಗಳನ್ನೂ ಕಡಿದ ಮೇಲೆ ಅವುಗಳ ಬುಡವು ನಿಲ್ಲುವ ಹಾಗೆ ದೇವಕುಲವು ಮೋಟುಬುಡವಾಗಿ ನಿಲ್ಲುವದು ಅಂದನು.


[ಕರ್ತನು] ಆ ದಿನಗಳನ್ನು ಕಡಿಮೆಮಾಡದಿದ್ದರೆ ಒಂದು ನರಪ್ರಾಣಿಯಾದರೂ ಉಳಿಯದು; ಆದರೆ ತಾನು ಆದುಕೊಂಡವರಿಗೋಸ್ಕರ ಆ ದಿನಗಳನ್ನು ಕಡಿಮೆಮಾಡುವನು.


ಆತನು ಒಂದು ವೇಳೆ ಪಶ್ಚಾತ್ತಾಪಪಟ್ಟು ಹಿಂದಿರುಗಿ ನಿಮ್ಮ ದೇವರಾದ ಯೆಹೋವನ ಧಾನ್ಯಪಾನನೈವೇದ್ಯಗಳಿಗೆ ಅನುಕೂಲವಾದ ಸುವರಗಳನ್ನು ದಯಪಾಲಿಸಿ ಹೋದಾನು.


ಸೇನಾಧೀಶ್ವರನಾದ ಯೆಹೋವನು ನಮಗೆ ಕೊಂಚ ಜನವನ್ನೂ ಉಳಿಸದೆ ಹೋಗಿದ್ದರೆ ಸೊದೋವಿುನ ಗತಿಯೇ ನಮಗಾಗುತ್ತಿತ್ತು. ಗೊಮೋರದ ದುರ್ದಶೆಯೇ ಸಂಭವಿಸುತ್ತಿತ್ತು.


ಜನಶೇಷವು, ಅಂದರೆ ಯಾಕೋಬ್ಯರಲ್ಲಿ ಉಳಿದದ್ದು, ಪರಾಕ್ರವಿುಯಾದ ದೇವರ ಕಡೆಗೆ ತಿರುಗಿಕೊಳ್ಳುವದು.


ಇಸ್ರಾಯೇಲೇ, ನಿನ್ನ ಜನರು ಸಮುದ್ರದ ಉಸುಬಿನಂತೆ ಅಸಂಖ್ಯವಾಗಿದ್ದರೂ ಅವರಲ್ಲಿ ಉಳಿದ ಒಂದು ಶೇಷ ಮಾತ್ರ ತಿರುಗಿಕೊಳ್ಳುವದು; ತುಂಬಿತುಳುಕುವ ನ್ಯಾಯಪ್ರವಾಹದ ಪ್ರಲಯ ನಿಶ್ಚಿತವಾಗಿದೆ.


ನನ್ನ ಹೆಸರು ಕೆಡದಂತೆ ನಿನ್ನ ಮೇಲಣ ಕೋಪವನ್ನು ತಡೆದು ನನ್ನ ಕೀರ್ತಿಗೆ ಕಳಂಕಬಾರದಂತೆ ನಿನ್ನನ್ನು ನಿರ್ಮೂಲಮಾಡದೆ ತಾಳಿಕೊಳ್ಳುವೆನು.


ಸೊದೋವಿುನಲ್ಲಿ ಐವತ್ತು ಮಂದಿ ನೀತಿವಂತರು ನನಗೆ ಸಿಕ್ಕಿದರೆ ಅವರ ನಿವಿುತ್ತ ಊರನ್ನೆಲ್ಲಾ ಉಳಿಸುವೆನು ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು