Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 66:11 - ಕನ್ನಡ ಸತ್ಯವೇದವು J.V. (BSI)

11 ಆಕೆಯ ನಿವಿುತ್ತ ದುಃಖಿಸುವವರೇ, ನೀವೆಲ್ಲರೂ - ಆಕೆಯ ಸಮಾಧಾಯಕ ಸ್ತನ್ಯವನ್ನು ಕುಡಿದು ತೃಪ್ತಿಗೊಳ್ಳುವೆವು. ಹೌದು, ಆಕೆಯ ವೈಭವದ ಸಮೃದ್ಧಿಯನ್ನು ಹೀರುತ್ತಾ ಹಿಗ್ಗುವೆವು ಎಂದು ಆಕೆಯೊಂದಿಗೆ ಉತ್ಸಾಹದಿಂದ ಉಲ್ಲಾಸಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆಕೆಯ ನಿಮಿತ್ತ ದುಃಖಿಸುವವರೇ, ನೀವೆಲ್ಲರೂ, ಆಕೆಯ ಸಮಾಧಾನದ ಸ್ತನ್ಯವನ್ನು ಕುಡಿದು ತೃಪ್ತಿಗೊಳ್ಳುವೆವು ಎಂದುಕೊಳ್ಳುವಿರಿ. ಹೌದು, ಆಕೆಯ ವೈಭವದ ಸಮೃದ್ಧಿಯನ್ನು ಹೀರುತ್ತಾ ಹಿಗ್ಗುವೆವು ಎಂದು ಆಕೆಯೊಂದಿಗೆ ಉತ್ಸಾಹದಿಂದ ಉಲ್ಲಾಸಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಆಕೆಯ ನಿಮಿತ್ತ ದುಃಖಿಸುವವರೇ, ‘ಸಾಂತ್ವನ ನೀಡುವ ಆಕೆಯ ಸ್ತನ್ಯದಿಂದ ತೃಪ್ತಿಗೊಳ್ಳುವೆವು, ಹೌದು, ಆಕೆಯ ಸಿರಿಸಮೃದ್ಧಿಯನ್ನು ಹೀರುತ್ತಾ ಹಿಗ್ಗುವೆವು,’ ಎಂದು ನೀವೆಲ್ಲರು ಉಲ್ಲಾಸಪಡಿ ಆಕೆಯೊಂದಿಗೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಯಾಕೆಂದರೆ ಆಕೆಯ ಎದೆಯಿಂದ ದೊರಕುವ ಹಾಲಿನಂತೆ ನಿಮಗೆ ಕರುಣೆಯು ದೊರಕುವದು. ಆ ಹಾಲು ನಿಮ್ಮನ್ನು ಪೂರ್ಣವಾಗಿ ತೃಪ್ತಿಗೊಳಿಸುವದು. ನೀವು ಆ ಹಾಲನ್ನು ಕುಡಿದು ಜೆರುಸಲೇಮಿನ ವೈಭವದಲ್ಲಿ ಆನಂದಿಸುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆಕೆಯ ಸಾಂತ್ವನ ಸ್ತನವನ್ನು ಕುಡಿದು ನೀವು ತೃಪ್ತಿಯಾಗಿರುವಿರಿ. ನೀವು ಕುಡಿಯುವಿರಿ ಮತ್ತು ಅದರ ಸಮೃದ್ಧಿಯು ನಿಮ್ಮ ಸಂತೋಷಕ್ಕೆ ಕಾರಣವಾಗಿದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 66:11
9 ತಿಳಿವುಗಳ ಹೋಲಿಕೆ  

ನೀನು ಜನಾಂಗಗಳ ಮೊಲೆಕೂಸಾಗುವಿ, ರಾಜರು ನಿನಗೆ ಮೊಲೆಯೂಡಿಸುವರು; ಆಗ ಯೆಹೋವನಾದ ನಾನೇ ನಿನ್ನ ರಕ್ಷಕನು, ನಿನ್ನ ವಿಮೋಚಕನು, ಯಾಕೋಬ್ಯರ ಶೂರನು ಎಂದು ನೀನು ತಿಳಿದುಕೊಳ್ಳುವಿ.


ಆ ಕಾಲದಲ್ಲಿ ಬೆಟ್ಟಗಳಿಂದ ದ್ರಾಕ್ಷಾರಸವು ಸುರಿಯುವದು, ಗುಡ್ಡಗಳಿಂದ ಹಾಲುಹರಿಯುವದು, ಯೆಹೂದದ ತೊರೆಗಳಲ್ಲೆಲ್ಲಾ ನೀರು ತುಂಬಿರುವದು; ಯೆಹೋವನ ಆಲಯದೊಳಗಿಂದ ಬುಗ್ಗೆಯು ಉಕ್ಕಿಬಂದು ಜಾಲಿಯ ಹಳ್ಳವನ್ನು ತಂಪುಮಾಡುವದು.


ನೀನು ನೋಡಿ ಕಳೆಗೊಳ್ಳುವಿ, ನಿನ್ನ ಹೃದಯವು ಅದರುತ್ತಾ ಉಬ್ಬುವದು; ಏಕಂದರೆ ಸಮುದ್ರವ್ಯಾಪಾರ ಸಮೃದ್ಧಿಯು ನಿನ್ನ ಕಡೆಗೆ ತಿರುಗುವದು, ಜನಾಂಗಗಳ ಐಶ್ವರ್ಯವು ನಿನಗೆ ದೊರೆಯುವದು.


ನಿನ್ನ ಮಂದಿರದ ಸಮೃದ್ಧಿಯಿಂದ ಅವರನ್ನು ಸಂತೃಪ್ತಿಪಡಿಸುತ್ತೀ; ನಿನ್ನ ಸಂಭ್ರಮಪ್ರವಾಹದಲ್ಲಿ ಅವರಿಗೆ ಪಾನಮಾಡಿಸುತ್ತೀ.


ಎಲ್ಲಾ ತರದ ನಿಂದೆಯನ್ನೂ ವಿಸರ್ಜಿಸಿ ಹಸುಮಕ್ಕಳಂತೆ ಪಾರಮಾರ್ಥಿಕವಾದ ಶುದ್ಧ ಹಾಲನ್ನು ಬಯಸಿರಿ; ಅದರಿಂದ ಬೆಳೆಯುತ್ತಾ ರಕ್ಷಣೆಯನ್ನು ಹೊಂದುವಿರಿ; ಕರ್ತನು ದಯಾಳುವೆಂದು ನೀವು ಅನುಭವದಿಂದ ತಿಳಿದುಕೊಂಡಿದ್ದೀರಲ್ಲವೋ?


ರಾಜರು ನಿನಗೆ ಸಾಕುತಂದೆಗಳು, ಅವರ ರಾಣಿಗಳು ನಿನಗೆ ಸಾಕುತಾಯಿಯರು ಆಗುವರು; ನಿನಗೆ ಸಾಷ್ಟಾಂಗವಾಗಿ ಅಡ್ಡಬಿದ್ದು ನಿನ್ನ ಪಾದಧೂಳಿಯನ್ನು ನೆಕ್ಕುವರು; ನಾನೇ ಯೆಹೋವನು. ನನ್ನನ್ನು ನಿರೀಕ್ಷಿಸಿಕೊಂಡವರು ಆಶಾಭಂಗಪಡರು ಎಂದು ನಿನಗೆ ಗೊತ್ತಾಗುವದು.


ಏಳು, ಪ್ರಕಾಶಿಸು, ನಿನಗೆ ಬೆಳಕು ಬಂತು, ಯೆಹೋವನ ತೇಜಸ್ಸು ನಿನ್ನ ಮೇಲೆ ಉದಯಿಸಿದೆ.


ಇಗೋ, ಕತ್ತಲು ಭೂವಿುಯನ್ನು ಆವರಿಸಿದೆ, ಕಾರ್ಗತ್ತಲು ಜನಾಂಗಗಳನ್ನು ಮುಚ್ಚಿದೆ; ನಿನ್ನ ಮೇಲಾದರೋ ಯೆಹೋವನು ಉದಯಿಸುವನು, ಆತನ ತೇಜಸ್ಸು ನಿನ್ನಲ್ಲಿ ಕಾಣಿಸುವದು.


ಜನಾಂಗಗಳು ನಿನ್ನ ಧರ್ಮವನ್ನು, ಸಕಲ ರಾಜರು ನಿನ್ನ ವೈಭವವನ್ನು ನೋಡುವರು; ಯೆಹೋವನ ಬಾಯಿ ನೇವಿುಸಿದ ಹೊಸ ಹೆಸರು ನಿನಗೆ ದೊರೆಯುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು