Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 66:12 - ಕನ್ನಡ ಸತ್ಯವೇದವು J.V. (BSI)

12 ಯೆಹೋವನು ಹೀಗನ್ನುತ್ತಾನೆ - ಇಗೋ, ನಾನು ಆಕೆಗೆ ಸುಖವನ್ನು ನದಿಯಂತೆ ದಯಪಾಲಿಸಿ ತುಂಬಿ ತುಳುಕುವ ತೊರೆಯನ್ನೋ ಎಂಬಂತೆ ಜನಾಂಗಗಳ ವೈಭವವನ್ನು ನೀಡುವೆನು; ನೀವು ಪಾನಮಾಡುವಿರಿ; ನಿಮ್ಮನ್ನು ಕಂಕುಳಲ್ಲಿ ಎತ್ತಿಕೊಂಡು ಹೋಗುವರು, ತೊಡೆಯ ಮೇಲೆ ನಲಿದಾಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಯೆಹೋವನು ಹೀಗೆನ್ನುತ್ತಾನೆ, “ಇಗೋ, ನಾನು ಆಕೆಗೆ ಸುಖವನ್ನು ನದಿಯಂತೆ ದಯಪಾಲಿಸಿ, ತುಂಬಿ ತುಳುಕುವ ತೊರೆಯನ್ನೋ ಎಂಬಂತೆ ಜನಾಂಗಗಳ ವೈಭವವನ್ನು ನೀಡುವೆನು; ನೀವು ಪಾನಮಾಡುವಿರಿ; ನಿಮ್ಮನ್ನು ಕಂಕುಳಲ್ಲಿ ಎತ್ತಿಕೊಂಡು ಹೋಗುವರು, ತೊಡೆಯ ಮೇಲೆ ನಲಿದಾಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ : “ಇಗೋ, ಆಕೆಗೆ ಹರಿಯಮಾಡುವೆನು ಸುಖಶಾಂತಿಯನು ನದಿಯಂತೆ ನೀಡುವೆ ರಾಷ್ಟ್ರಗಳ ವೈಭವವನು ತುಂಬಿತುಳುಕುವ ತೊರೆಯಂತೆ ನೀವಿರುವಿರಿ ಹಾಲುಕುಡಿವ ಹಸುಳೆಯಂತೆ ಎತ್ತಿಕೊಳ್ಳಲಾಗುವುದು ನಿಮ್ಮನ್ನು ತಾಯ ಕಂಕುಳಲಿ ನಲಿದಾಡುವಿರಿ ನೀವು ಆಕೆಯ ಮಡಿಲಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಯೆಹೋವನು ಹೇಳುವುದೇನೆಂದರೆ: “ಇಗೋ, ನಾನು ನಿನಗೆ ಸಮಾಧಾನವನ್ನು ಕೊಡುತ್ತೇನೆ. ಒಂದು ದೊಡ್ಡ ಹೊಳೆಯು ಹರಿಯುವಂತೆ ನಿನಗೆ ಸಮಾಧಾನವು ಹರಿದುಕೊಂಡು ಬರುವದು. ಭೂಮಿಯ ಮೇಲಿರುವ ಎಲ್ಲಾ ದೇಶಗಳ ಐಶ್ವರ್ಯವು ನಿನ್ನ ಬಳಿಗೆ ಹರಿದುಬರುವದು. ಅದು ಪ್ರವಾಹದಂತೆ ಹರಿದುಬರುವದು. ನೀವು ಸಣ್ಣ ಮಕ್ಕಳಂತೆ ಆ ಹಾಲನ್ನು ಕುಡಿಯುವಿರಿ. ನಾನು ನಿಮ್ಮನ್ನೆತ್ತಿ ಕೈಗಳಲ್ಲಿ ಅಪ್ಪಿಕೊಳ್ಳುವೆನು. ನನ್ನ ತೊಡೆಯ ಮೇಲೆ ನಿಮ್ಮನ್ನು ಕುಳ್ಳಿರಿಸಿ ಆಟವಾಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಏಕೆಂದರೆ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ನಾನು ನದಿಯಂತೆ ಸಮಾಧಾನವನ್ನೂ, ಹರಿಯುವ ಹಳ್ಳದಂತೆ ಜನಾಂಗಗಳ ವೈಭವವನ್ನೂ ಆಕೆಯ ಕಡೆಗೆ ಬರಮಾಡುವೆನು. ಆಗ ನೀವು ಪಾನ ಮಾಡುವಿರಿ; ನಿಮ್ಮನ್ನು ಆಕೆಯ ಪಕ್ಕೆಯಲ್ಲಿ ಎತ್ತಿಕೊಂಡುಹೋಗುವರು. ನೀವು ಆಕೆಯ ಮಡಿಲಲ್ಲಿ ನಲಿದಾಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 66:12
19 ತಿಳಿವುಗಳ ಹೋಲಿಕೆ  

ನೀನು ಜನಾಂಗಗಳ ಮೊಲೆಕೂಸಾಗುವಿ, ರಾಜರು ನಿನಗೆ ಮೊಲೆಯೂಡಿಸುವರು; ಆಗ ಯೆಹೋವನಾದ ನಾನೇ ನಿನ್ನ ರಕ್ಷಕನು, ನಿನ್ನ ವಿಮೋಚಕನು, ಯಾಕೋಬ್ಯರ ಶೂರನು ಎಂದು ನೀನು ತಿಳಿದುಕೊಳ್ಳುವಿ.


ನೀನು ನನ್ನ ಆಜ್ಞೆಗಳನ್ನು ಕೇಳಿದ್ದರೆ ಎಷ್ಟೋ ಚೆನ್ನಾಗಿತ್ತು! ನಿನ್ನ ಸುಖವು ದೊಡ್ಡ ನದಿಯಂತೆಯೂ ನಿನ್ನ ಕ್ಷೇಮವು ಸಮುದ್ರದ ಅಲೆಗಳ ಹಾಗೂ ಇರುತ್ತಿದ್ದವು;


ಯೆಹೋವನ ಈ ಮಾತನ್ನು ಕೇಳಿರಿ - ಐಗುಪ್ತದ ಆದಾಯವೂ ಕೂಷಿನ ವ್ಯಾಪಾರವೂ ಎತ್ತರದ ಮನುಷ್ಯರಾದ ಸೆಬಾಯರೂ ನಿಮ್ಮಲ್ಲಿಗೆ ಸೇರಿ ನಿಮ್ಮವರಾಗಿ ನಿಮ್ಮನ್ನು ಅನುಸರಿಸುವರು; ಸಂಕೋಲೆಗಳನ್ನು ಕಟ್ಟಿಕೊಂಡು ಬಂದು ನಿಮ್ಮ ಮುಂದೆ ಅಡ್ಡಬಿದ್ದು ಹೀಗೆ ಅರಿಕೆಮಾಡುವರು - ದೇವರು ನಿಜವಾಗಿ ನಿಮ್ಮಲ್ಲಿದ್ದಾನೆ. ಇನ್ನು ಯಾವ ದೇವರೂ ಇಲ್ಲವೇ ಇಲ್ಲ.


ಆಕೆಯ ನಿವಿುತ್ತ ದುಃಖಿಸುವವರೇ, ನೀವೆಲ್ಲರೂ - ಆಕೆಯ ಸಮಾಧಾಯಕ ಸ್ತನ್ಯವನ್ನು ಕುಡಿದು ತೃಪ್ತಿಗೊಳ್ಳುವೆವು. ಹೌದು, ಆಕೆಯ ವೈಭವದ ಸಮೃದ್ಧಿಯನ್ನು ಹೀರುತ್ತಾ ಹಿಗ್ಗುವೆವು ಎಂದು ಆಕೆಯೊಂದಿಗೆ ಉತ್ಸಾಹದಿಂದ ಉಲ್ಲಾಸಿಸಿರಿ.


ನೀವೋ ಯೆಹೋವನ ಯಾಜಕರೆಂಬ ಬಿರುದನ್ನು ಹೊಂದುವಿರಿ, ಜನರು ನಿಮ್ಮನ್ನು ನಮ್ಮ ದೇವರ ಸೇವಕರು ಎಂದು ಕರೆಯುವರು; ಜನಾಂಗಗಳ ಆಸ್ತಿಯನ್ನನುಭವಿಸುವಿರಿ, ಅವುಗಳ ವೈಭವವನ್ನು ಪಡೆದು ಹೊಗಳಿಕೊಳ್ಳುವಿರಿ.


ನೀನು ಎಲ್ಲಾ ಕಡೆಗಳಲ್ಲಿಯೂ ಹಬ್ಬಿಕೊಳ್ಳುವಿ; ನಿನ್ನ ಸಂತಾನದವರು ಜನಾಂಗಗಳನ್ನು ವಶಮಾಡಿಕೊಂಡು ಹಾಳು ಪಟ್ಟಣಗಳನ್ನು ಜನಭರಿತವಾಗುವಂತೆ ಮಾಡುವರು.


ಅವನ ಮುಖಾಂತರ ದಾವೀದನ ಸಿಂಹಾಸನದ ಆಡಳಿತವು ಅಭಿವೃದ್ಧಿಯಾಗುವದು, ದಾವೀದನ ರಾಜ್ಯದಲ್ಲಿ ನಿತ್ಯ ಸಮಾಧಾನವಿರುವದು, ಆ ರಾಜ್ಯವು ಇಂದಿನಿಂದ ಯಾವಾಗಲೂ ನೀತಿನ್ಯಾಯಗಳ ಮೂಲಕ ಸ್ಥಾಪಿತವಾಗಿ ಸ್ಥಿರಗೊಳ್ಳುವದು; ಸೇನಾಧೀಶ್ವರನಾದ ಯೆಹೋವನ ಆಗ್ರಹವು ಇದನ್ನು ನೆರವೇರಿಸುವದು.


ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ವರದ ಮಗನು ನಮಗೆ ದೊರೆತನು; ಆಡಳಿತವು ಅವನ ಬಾಹುವಿನ ಮೇಲಿರುವದು; ಅದ್ಭುತಸ್ವರೂಪನು, ಆಲೋಚನಾಕರ್ತನು, ಪರಾಕ್ರವಿುಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂಬವು ಅವನ ಹೆಸರು.


ಸ್ಥಿರಚಿತ್ತನನ್ನು ಶಾಂತಿಯಲ್ಲಿ ನೆಲೆಗೊಳಿಸಿ ಕಾಯುವಿ; ಅವನಿಗೆ ನಿನ್ನಲ್ಲಿ ಭರವಸವಿದೆ.


ಅಲ್ಲಿ ಯೆಹೋವನು ಘನಹೊಂದಿದವನಾಗಿ ಹುಟ್ಟುಗೋಲಿನ ದೋಣಿ ಹೋಗದ, ಘನನಾವೆಯೂ ಸಂಚರಿಸದ ವಿಸ್ತೀರ್ಣನದೀನದಗಳಂತೆ ನಮ್ಮೊಂದಿಗಿರುವನು.


ನಿನ್ನ ಮಕ್ಕಳೆಲ್ಲರೂ ಯೆಹೋವನಿಂದ ಶಿಕ್ಷಿತರಾಗಿರುವರು, ಅವರಿಗೆ ಅಧಿಕ ಸುಕ್ಷೇಮವಾಗುವದು.


ಹೀಗಿರಲು ಪಡುವಣವರು ಯೆಹೋವನ ನಾಮಕ್ಕೆ ಹೆದರುವರು, ಮೂಡಣವರು ಆತನ ಮಹಿಮೆಗೆ ಅಂಜುವರು; ಬಿರುಗಾಳಿಯಿಂದ ಹೊಡೆಯಲ್ಪಟ್ಟು ಇಕ್ಕಟ್ಟಿನಲ್ಲಿ ಹರಿಯುವ ತೊರೆಯ ಹಾಗೆ ಆತನು ರಭಸದಿಂದ ಬರುವನಷ್ಟೆ;


ಇಗೋ, ನಾನು ಈ ಪಟ್ಟಣವನ್ನು ಜೀರ್ಣೋದ್ಧಾರಮಾಡಿ ಅದಕ್ಕೆ ಸೌಖ್ಯವನ್ನು ಕೊಟ್ಟು ನಿವಾಸಿಗಳನ್ನು ಗುಣಪಡಿಸುವೆನು; ಸ್ಥೈರ್ಯಸಮಾಧಾನಗಳನ್ನು ಸಮೃದ್ಧಿಯಾಗಿ ಅವರ ಅನುಭವಕ್ಕೆ ತರುವೆನು;


ಈ ಆಲಯದ ಮುಂದಿನ ವೈಭವವು ಹಿಂದಿನ ವೈಭವಕ್ಕಿಂತ ವಿಶೇಷವಾಗಿರುವದು; ಇದು ಸೇನಾಧೀಶ್ವರ ಯೆಹೋವನ ನುಡಿ; ಈ ಸ್ಥಳದಲ್ಲಿ ಸಮಾಧಾನವನ್ನು ಅನುಗ್ರಹಿಸುವೆನು, ಇದು ಸೇನಾಧೀಶ್ವರ ಯೆಹೋವನ ನುಡಿ.


ಜನಾಂಗದವರು ಅವರನ್ನು ಕರತಂದು ಸ್ವಸ್ಥಳಕ್ಕೆ ಸೇರಿಸುವರು; ಆಗ ಇಸ್ರಾಯೇಲಿನ ಮನೆತನದವರು ಯೆಹೋವನ ದೇಶದಲ್ಲಿ ಆ ಜನಾಂಗದವರನ್ನು ಗಂಡುಹೆಣ್ಣಾಳುಗಳನ್ನಾಗಿ ಇಟ್ಟುಕೊಳ್ಳುವರು; ಯಾರಿಗೆ ಸೆರೆಯಾಗಿದ್ದರೋ ಅವರನ್ನು ಸೆರೆಹಿಡಿಯುವರು; ತಮ್ಮನ್ನು ಹಿಂಸಿಸಿದವರ ಮೇಲೆ ಅಧಿಕಾರ ನಡಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು