ಯೆಶಾಯ 66:14 - ಕನ್ನಡ ಸತ್ಯವೇದವು J.V. (BSI)14 ನೀವು ಇದನ್ನು ಕಣ್ಣಾರೆ ಕಾಣುವಿರಿ, ನಿಮ್ಮ ಹೃದಯವು ಉಲ್ಲಾಸಿಸುವದು, ನಿಮ್ಮ ಎಲುಬುಗಳು ಹಸಿಹುಲ್ಲಿನಂತೆ ರಸವತ್ತಾಗುವವು; ಆಗ ಯೆಹೋವನು ತನ್ನ ಸೇವಕರ ಮೇಲೆ ಕೃಪಾಹಸ್ತವನ್ನು ವ್ಯಕ್ತಪಡಿಸಿ ತನ್ನ ಶತ್ರುಗಳ ಮೇಲೆ ರೋಷಗೊಳ್ಳುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ನೀವು ಇದನ್ನು ಕಣ್ಣಾರೆ ಕಾಣುವಿರಿ, ನಿಮ್ಮ ಹೃದಯವು ಉಲ್ಲಾಸಿಸುವುದು, ನಿಮ್ಮ ಎಲುಬುಗಳು ಹಸಿ ಹುಲ್ಲಿನಂತೆ ರಸವತ್ತಾಗುವವು; ಆಗ ಯೆಹೋವನು ತನ್ನ ಸೇವಕರ ಮೇಲೆ ಕೃಪಾಹಸ್ತವನ್ನು ವ್ಯಕ್ತಪಡಿಸಿ ತನ್ನ ಶತ್ರುಗಳ ಮೇಲೆ ರೋಷಗೊಳ್ಳುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಇದನ್ನು ಕಂಡಾಗ ನಿಮ್ಮೆದೆ ಸಂತಸದಿಂದ ಉಬ್ಬುವುದು ಚಿಗುರುವುದು ಹಸಿಹುಲ್ಲಂತೆ ನಿಮ್ಮೆಲುಬು. ‘ಸರ್ವೇಶ್ವರನ ಕೃಪಾಹಸ್ತ ತನ್ನ ಭಕ್ತರ ಮೇಲೆ ಆತನ ರೋಷಾವೇಶ ಶತ್ರುಗಳ ಮೇಲೆ’ ಎಂಬುವುದು ವ್ಯಕ್ತವಾಗುವುದು ನಿಮಗೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ನಿಮ್ಮನ್ನು ಹರ್ಷಗೊಳಿಸುವಂಥ ಸಂಗತಿಗಳನ್ನು ನೀವು ನೋಡುವಿರಿ. ನೀವು ಸ್ವತಂತ್ರರಾಗಿದ್ದು ಹುಲ್ಲಿನಂತೆ ಹುಲುಸಾಗಿ ಬೆಳೆಯುವಿರಿ. ಯೆಹೋವನ ಸೇವಕರು ಆತನ ಶಕ್ತಿಯನ್ನು ನೋಡುವರು. ಆದರೆ ಯೆಹೋವನ ವೈರಿಗಳು ಆತನ ಕೋಪವನ್ನು ಕಾಣುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ನೀವು ಅದನ್ನು ಕಾಣುವಾಗ, ನಿಮ್ಮ ಹೃದಯವು ಸಂತೋಷಿಸುವುದು. ನಿಮ್ಮ ಎಲುಬುಗಳು ಹಸಿರು ಹುಲ್ಲಿನ ಹಾಗೆ ಚಿಗುರುವುವು. ಯೆಹೋವ ದೇವರ ಕೈ ತಮ್ಮ ಸೇವಕರ ಮೇಲೆಯೂ, ಅವರ ರೌದ್ರವು ತಮ್ಮ ಶತ್ರುಗಳ ಮೇಲೆ ಕಾಣಬರುವುದು. ಅಧ್ಯಾಯವನ್ನು ನೋಡಿ |