ಯೆಶಾಯ 66:18 - ಕನ್ನಡ ಸತ್ಯವೇದವು J.V. (BSI)18 ಅವರ ಕೃತ್ಯಗಳಿಗೂ ಆಲೋಚನೆಗಳಿಗೂ [ತಕ್ಕದ್ದನ್ನು ಮಾಡುವೆನು]; ನಾನು ಇನ್ನು ಮುಂದೆ ಸಮಸ್ತಜನಾಂಗಗಳನ್ನೂ ಸಕಲಭಾಷೆಯವರನ್ನೂ ಒಟ್ಟಿಗೆ ಬರಮಾಡುವೆನು; ಅವರು ಬಂದು ನನ್ನ ಮಹಿಮೆಯನ್ನು ನೋಡುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 “ಅವರ ಕೃತ್ಯಗಳಿಗೂ, ಆಲೋಚನೆಗಳಿಗೂ ತಕ್ಕದ್ದನ್ನು ಮಾಡುವೆನು; ನಾನು ಇನ್ನು ಮುಂದೆ ಸಮಸ್ತ ಜನಾಂಗಗಳನ್ನೂ ಸಕಲ ಭಾಷೆಯವರನ್ನೂ ಒಟ್ಟಿಗೆ ಬರಮಾಡುವೆನು; ಅವರು ಬಂದು ನನ್ನ ಮಹಿಮೆಯನ್ನು ನೋಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 “ಅವರ ಕೃತ್ಯಗಳೂ ಆಲೋಚನೆಗಳೂ ನನಗೆ ತಿಳಿದಿವೆ. ಸಮಸ್ತ ರಾಷ್ಟ್ರಗಳನ್ನೂ ಸಕಲ ಭಾಷೆಯವರನ್ನೂ ಒಟ್ಟಿಗೆ ಬರಮಾಡುವೆನು. ಅವರು ಬಂದು ನನ್ನ ಮಹಿಮೆಯ ಪ್ರಕಾಶವನ್ನು ಕಾಣುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 “ಆ ಜನರಲ್ಲಿ ಕೆಟ್ಟ ಯೋಜನೆಗಳು ಇದ್ದು ಕೆಟ್ಟದ್ದನ್ನೇ ಮಾಡುವವರಾಗಿದ್ದಾರೆ. ಅದಕ್ಕಾಗಿ ನಾನು ಅವರನ್ನು ಶಿಕ್ಷಿಸಲು ಬರುತ್ತಿದ್ದೇನೆ. ನಾನು ಎಲ್ಲಾ ಜನಾಂಗಗಳನ್ನೂ ಎಲ್ಲಾ ಜನರನ್ನೂ ಒಟ್ಟುಗೂಡಿಸುವೆನು. ಎಲ್ಲಾ ಜನರು ಒಟ್ಟುಗೂಡಿ ನನ್ನ ಸಾಮರ್ಥ್ಯವನ್ನು ನೋಡುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 “ನಾನು ಅವರ ಕ್ರಿಯೆಗಳನ್ನೂ ಅವರ ಆಲೋಚನೆಗಳನ್ನೂ ಬಲ್ಲೆನು. ಎಲ್ಲಾ ಜನಾಂಗಗಳನ್ನೂ ಭಾಷೆಯವರನ್ನೂ ಇನ್ನು ಮುಂದೆ ಒಟ್ಟಿಗೆ ಬರಮಾಡುವೆನು. ಆಗ ಅವರು ಬಂದು ನನ್ನ ಮಹಿಮೆಯನ್ನು ನೋಡುವರು. ಅಧ್ಯಾಯವನ್ನು ನೋಡಿ |
ಹದವಾದ ಇಬ್ಬಾಯಿಕತ್ತಿಯನ್ನು ಹಿಡಿದಾತನು ಹೇಳುವದೇನಂದರೆ - ನೀನು ವಾಸಮಾಡುವ ಸ್ಥಳವನ್ನು ಬಲ್ಲೆನು; ಅದು ಸೈತಾನನ ಸಿಂಹಾಸನವಿರುವ ಸ್ಥಳವಾಗಿದೆ. ನೀನು ನನ್ನ ಹೆಸರನ್ನು ಬಿಡದೇ ಹಿಡಿದುಕೊಂಡಿದ್ದೀ; ನೀನು ಇರುವ ಸೈತಾನನ ನಿವಾಸದಲ್ಲಿ ನನಗೆ ನಂಬಿಗಸ್ತನೂ ಸಾಕ್ಷಿಯೂ ಆದ ಅಂತಿಪನು ಕೊಲ್ಲಲ್ಪಟ್ಟ ದಿನಗಳಲ್ಲಿಯಾದರೂ ನನ್ನಲ್ಲಿಟ್ಟಿರುವ ನಂಬಿಕೆಯನ್ನು ನೀನು ಮರೆಮಾಡಲಿಲ್ಲ.