ಯೆಶಾಯ 66:22 - ಕನ್ನಡ ಸತ್ಯವೇದವು J.V. (BSI)22 ನಾನು ಸೃಷ್ಟಿಸುವ ನೂತನಾಕಾಶಮಂಡಲವೂ ನೂತನಭೂಮಂಡಲವೂ ನನ್ನ ಮುಂದೆ ಸ್ಥಿರವಾಗಿ ನಿಲ್ಲುವ ಪ್ರಕಾರ ನಿಮ್ಮ ಸಂತತಿಯೂ ನಿಮ್ಮ ಹೆಸರೂ ಸ್ಥಿರವಾಗಿ ನಿಲ್ಲುವವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 “ನಾನು ಸೃಷ್ಟಿಸಿದ ನೂತನ ಆಕಾಶಮಂಡಲವೂ ಮತ್ತು ನೂತನ ಭೂಮಂಡಲವೂ ನನ್ನ ಮುಂದೆ ಸ್ಥಿರವಾಗಿ ನಿಲ್ಲುವ ಪ್ರಕಾರ ನಿಮ್ಮ ಸಂತತಿಯೂ ಹಾಗು ನಿಮ್ಮ ಹೆಸರೂ ಸ್ಥಿರವಾಗಿ ನಿಲ್ಲುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 “ನಾ ಸೃಷ್ಟಿಸುವ ಹೊಸ ಆಕಾಶ, ಹೊಸ ಭೂಮಿ, ನಿಲ್ಲುವುವು ನನ್ನ ಮುಂದೆ ಸ್ಥಿರವಾಗಿ; ಅಂತೆಯೇ ನಿಮ್ಮ ಸಂತತಿ, ನಿಮ್ಮ ಹೆಸರು ನಿಲ್ಲುವುವು ಸ್ಥಿರವಾಗಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 “ನಾನು ಹೊಸ ಪ್ರಪಂಚವನ್ನು ಸೃಷ್ಟಿಸುವೆನು; ಹೊಸ ಆಕಾಶವೂ ಹೊಸ ಭೂಮಿಯೂ ಶಾಶ್ವತವಾಗಿರುವವು. ಹಾಗೆಯೇ ನಿಮ್ಮ ಹೆಸರುಗಳು ಯಾವಾಗಲೂ ನನ್ನೊಂದಿಗೆ ಇರುತ್ತವೆ; ನಿಮ್ಮ ಮಕ್ಕಳು ನನ್ನೊಂದಿಗೆ ಯಾವಾಗಲೂ ಇರುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 “ನಾನು ಉಂಟುಮಾಡುವ ಹೊಸ ಆಕಾಶವೂ ಹೊಸ ಭೂಮಿಯೂ ನನ್ನ ಮುಂದೆ ನೆಲೆಯಾಗಿರುವ ಪ್ರಕಾರವೇ, ನಿಮ್ಮ ಸಂತಾನವೂ ನಿಮ್ಮ ಹೆಸರೂ ನೆಲೆಯಾಗುವುದು,” ಎಂದು ಯೆಹೋವ ದೇವರು ಘೋಷಿಸುತ್ತಾರೆ. ಅಧ್ಯಾಯವನ್ನು ನೋಡಿ |