Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 66:23 - ಕನ್ನಡ ಸತ್ಯವೇದವು J.V. (BSI)

23 ಪ್ರತಿಯೊಂದು ಅಮಾವಾಸ್ಯೆಯಲ್ಲಿಯೂ ಒಂದೊಂದು ಸಬ್ಬತ್ ದಿನದಲ್ಲಿಯೂ ಸಕಲ ನರಜನ್ಮದವರೂ ನನ್ನ ಸನ್ನಿಧಿಯಲ್ಲಿ ಎರಗುವದಕ್ಕೆ ಬರುವರು; ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಪ್ರತಿಯೊಂದು ಅಮಾವಾಸ್ಯೆಯಲ್ಲಿಯೂ, ಒಂದೊಂದು ಸಬ್ಬತ್ ದಿನದಲ್ಲಿಯೂ, ಸಕಲ ನರಜನ್ಮದವರೂ ನನ್ನ ಸನ್ನಿಧಿಯಲ್ಲಿ ಆರಾಧಿಸುವುದಕ್ಕೆ ಬರುವರು” ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಅಮವಾಸ್ಯೆಯಿಂದ ಅಮವಾಸ್ಯೆಯವರೆಗೆ ಸಬ್ಬತ್‍ದಿನದಿಂದ ಸಬ್ಬತ್‍ದಿನದವರೆಗೆ ಮನುಜರೆಲ್ಲರು ಬರುವರು ನನ್ನನ್ನು ಆರಾಧಿಸಲಿಕ್ಕೆ.” ಇದು ಸರ್ವೇಶ್ವರ ಸ್ವಾಮಿಯ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಪ್ರತಿಯೊಂದು ಆರಾಧನಾ ದಿನದಲ್ಲಿ ಪ್ರತಿಯೊಬ್ಬರೂ ಬಂದು ನನ್ನನ್ನು ಆರಾಧಿಸುವರು. ಪ್ರತಿಯೊಂದು ಸಬ್ಬತ್ ದಿನದಲ್ಲೂ ತಿಂಗಳ ಮೊದಲ ದಿನದಲ್ಲೂ ಅವರು ನನ್ನ ಬಳಿಗೆ ಬರುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಇದಾದ ಮೇಲೆ, “ಪ್ರತಿಯೊಂದು ಅಮಾವಾಸ್ಯೆಯಲ್ಲಿಯೂ ಒಂದೊಂದು ಸಬ್ಬತ್ ದಿನದಲ್ಲಿಯೂ ಮನುಷ್ಯರೆಲ್ಲಾ ನನ್ನ ಮುಂದೆ ಆರಾಧಿಸುವುದಕ್ಕೆ ಬರುವರು” ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 66:23
25 ತಿಳಿವುಗಳ ಹೋಲಿಕೆ  

ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ವಾರದೊಳಗೆ ಕೆಲಸನಡೆಯುವ ಆರು ದಿವಸಗಳಲ್ಲಿ ಒಳಗಣ ಪ್ರಾಕಾರದ ಮೂಡಲ ಹೆಬ್ಬಾಗಿಲು ಮುಚ್ಚಿರಬೇಕು; ಆದರೆ ಸಬ್ಬತ್ ದಿನದಲ್ಲಿಯೂ ಅಮಾವಾಸ್ಯೆಯಲ್ಲಿಯೂ ತೆರೆದಿರಬೇಕು.


ಅನಂತರ ಯೆರೂಸಲೇವಿುನ ಮೇಲೆ ಬಿದ್ದ ಸಕಲ ಜನಾಂಗಗಳಲ್ಲಿ ಉಳಿದವರೆಲ್ಲರೂ ಸೇನಾಧೀಶ್ವರ ಯೆಹೋವನೆಂಬ ರಾಜಾಧಿರಾಜನನ್ನು ಆರಾಧಿಸುವದಕ್ಕೂ ಪರ್ಣಶಾಲೆಗಳ ಹಬ್ಬವನ್ನು ಆಚರಿಸುವದಕ್ಕೂ ಪ್ರತಿವರುಷವು ಹೊರಟುಬರುವರು.


ಅಮಾವಾಸ್ಯೆಯಲ್ಲಿ ಅವನು ಪೂರ್ಣಾಂಗವಾದ ಒಂದು ಹೋರಿಯನ್ನೂ ಆರು ಕುರಿಗಳನ್ನೂ ಒಂದು ಟಗರನ್ನೂ ಒಪ್ಪಿಸತಕ್ಕದ್ದು; ಅದು ಪೂರ್ಣಾಂಗವಾಗಿಯೇ ಇರಬೇಕು;


ಕರ್ತನೇ, ನಿನ್ನಿಂದುಂಟಾದ ಎಲ್ಲಾ ಜನಾಂಗಗಳು ಬಂದು ನಿನಗೆ ಅಡ್ಡಬಿದ್ದು ನಿನ್ನ ನಾಮವನ್ನು ಘನಪಡಿಸುವವು.


ಕರ್ತನೇ, ನಿನ್ನ ನಾಮಕ್ಕೆ ಭಯಪಡದವರೂ ಅದನ್ನು ಘನವಾದದ್ದೆಂದು ಒಪ್ಪಿಕೊಳ್ಳದವರೂ ಯಾರಾದರೂ ಇದ್ದಾರೇ? ನೀನೊಬ್ಬನೇ ಪರಿಶುದ್ಧನು; ನಿನ್ನ ನೀತಿಯುಳ್ಳ ಕೃತ್ಯಗಳು ಪ್ರಕಾಶಕ್ಕೆ ಬಂದದರಿಂದ ಎಲ್ಲಾ ಜನಾಂಗಗಳು ಬಂದು ನಿನ್ನ ಸನ್ನಿಧಾನದಲ್ಲಿ ನಮಸ್ಕಾರ ಮಾಡುವರು ಎಂದು ಹೇಳಿದರು.


ಅದಿರಲಿ; ಸತ್ಯಭಾವದಿಂದ ದೇವಾರಾಧನೆ ಮಾಡುವವರು ಆತ್ಮೀಯ ರೀತಿಯಲ್ಲಿ ಸತ್ಯಕ್ಕೆ ತಕ್ಕ ಹಾಗೆ ತಂದೆಯನ್ನು ಆರಾಧಿಸುವ ಕಾಲ ಬರುತ್ತದೆ; ಅದು ಈಗಲೇ ಬಂದಿದೆ; ತಂದೆಯು ತನ್ನನ್ನು ಆರಾಧಿಸುವವರು ಇಂಥವರೇ ಆಗಿರಬೇಕೆಂದು ಅಪೇಕ್ಷಿಸುತ್ತಾನಲ್ಲವೇ.


ಸೂರ್ಯನು ಮೂಡುವ ದಿಕ್ಕಿನಿಂದ ಮುಣುಗುವ ದಿಕ್ಕಿನವರೆಗೂ ನನ್ನ ನಾಮವು ಅನ್ಯಜನಾಂಗಗಳಲ್ಲಿ ಘನವಾಗಿದೆ; ಒಂದೊಂದು ಸ್ಥಳದಲ್ಲಿಯೂ ನನ್ನ ನಾಮಕ್ಕೆ ಧೂಪವನ್ನೂ ಶುದ್ಧನೈವೇದ್ಯವನ್ನೂ ಅರ್ಪಿಸುತ್ತಾರೆ; ಹೌದು, ಅನ್ಯಜನಾಂಗಗಳಲ್ಲಿಯೇ ನನ್ನ ನಾಮವು ಘನವಾಗಿದೆ; ಇದು ಸೇನಾಧೀಶ್ವರ ಯೆಹೋವನ ನುಡಿ.


ಯೆಹೂದವೂ ಯೆರೂಸಲೇವಿುನ ಪರವಾಗಿ ಯುದ್ಧಮಾಡುವದು; ಸುತ್ತಣ ಸಕಲ ಜನಾಂಗಗಳ ಆಸ್ತಿಯು ಅಂದರೆ ಬೆಳ್ಳಿಬಂಗಾರಬಟ್ಟೆಗಳು ರಾಶಿರಾಶಿಯಾಗಿ ಬಾಚಲ್ಪಡುವವು.


ಪ್ರಾರ್ಥನೆಯನ್ನು ಕೇಳುವವನೇ, ನರರೆಲ್ಲರು ನಿನ್ನ ಬಳಿಗೆ ಬರುವರು.


ಅದಕ್ಕೆ ಅವನು - ಇಂದು ಅಮಾವಾಸ್ಯೆಯಲ್ಲ, ಸಬ್ಬತ್ತಲ್ಲ, ಈಹೊತ್ತು ಯಾಕೆ ಹೋಗುತ್ತೀ ಅಂದನು.


ಮತ್ತು ಯೆಹೋವನು ತನ್ನನ್ನು ಐಗುಪ್ತ್ಯರಿಗೆ ತಿಳಿಯಪಡಿಸಲು ಅವರು ಆ ದಿನದಲ್ಲಿ ಯೆಹೋವನನ್ನು ತಿಳಿದುಕೊಳ್ಳುವರು; ಹೌದು, ಯಜ್ಞನೈವೇದ್ಯಗಳ ಸೇವೆಯನ್ನಾಚರಿಸಿ ಯೆಹೋವನಿಗೆ ಹರಕೆಮಾಡಿಕೊಂಡು ಅದನ್ನು ನೆರವೇರಿಸುವರು.


ಆ ದಿನದಲ್ಲಿ ಐಗುಪ್ತದಿಂದ ಅಶ್ಶೂರಕ್ಕೆ ಹೋಗುವ ರಾಜಮಾರ್ಗವಿರುವದು; ಅಶ್ಶೂರ್ಯರು ಐಗುಪ್ತಕ್ಕೂ ಐಗುಪ್ತ್ಯರು ಅಶ್ಶೂರಕ್ಕೂ ಹೋಗಿಬರುತ್ತಿರುವರು; ಐಗುಪ್ತ್ಯರು ಅಶ್ಶೂರ್ಯರೊಂದಿಗೆ [ಯೆಹೋವನನ್ನು] ಸೇವಿಸುವರು.


ಆ ದಿನದಲ್ಲಿ ದೊಡ್ಡ ಕೊಂಬನ್ನೂದಲು ಅಶ್ಶೂರ ದೇಶದಲ್ಲಿ ಹಾಳಾದವರೂ ಐಗುಪ್ತ ಸೀಮೆಯಲ್ಲಿನ ದೇಶಭ್ರಷ್ಟರಾದವರೂ ಬಂದು ಪರಿಶುದ್ಧಪರ್ವತದ ಯೆರೂಸಲೇವಿುನಲ್ಲಿ ಯೆಹೋವನ ಮುಂದೆ ಅಡ್ಡಬೀಳುವರು.


ಮನಃಪೂರ್ವಕವಾಗಿ ತಿರಸ್ಕರಿಸಲ್ಪಟ್ಟವನೂ ಅನ್ಯಜನಾಂಗಕ್ಕೆ ಅಸಹ್ಯನೂ ಜನದೊಡೆಯರ ಸೇವಕನೂ ಆದವನಿಗೆ ಇಸ್ರಾಯೇಲಿನ ವಿಮೋಚಕನೂ ಸದಮಲಸ್ವಾವಿುಯೂ ಆದ ಯೆಹೋವನು ಹೀಗೆ ಹೇಳುತ್ತಾನೆ - ಯೆಹೋವನ ಪ್ರಾಮಾಣಿಕತೆಯನ್ನೂ ಇಸ್ರಾಯೇಲಿನ ಸದಮಲಸ್ವಾವಿುಯು ನಿನ್ನನ್ನು ಪರಿಗ್ರಹಿಸಿರುವದನ್ನೂ ಅರಸರು ನೋಡಿ ಎದ್ದು ನಿಲ್ಲುವರು, ಅಧಿಪತಿಗಳು ಅಡ್ಡಬೀಳುವರು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ದೇಶದಲ್ಲಿ ಇಸ್ರಾಯೇಲ್ ವಂಶದವರೆಲ್ಲರೂ ನನ್ನ ಪರಿಶುದ್ಧವಾದ ಬೆಟ್ಟದಲ್ಲಿ, ಇಸ್ರಾಯೇಲಿನ ಪರ್ವತಾಗ್ರದಲ್ಲಿ ನನ್ನನ್ನು ಸೇವಿಸುವರು; ಅಲ್ಲೇ ಅವರಿಗೆ ಪ್ರಸನ್ನನಾಗುವೆನು, ಅಲ್ಲೇ ನಿಮ್ಮ ಕಾಣಿಕೆಗಳನ್ನೂ ಉತ್ತಮ ನೈವೇದ್ಯಗಳನ್ನೂ ಮೀಸಲಾದದೆಲ್ಲವನ್ನೂ ಬರಮಾಡಿಕೊಳ್ಳುವೆನು.


ಉತ್ಸವಗಳಲ್ಲಿಯೂ ಅಮಾವಾಸ್ಯೆಗಳಲ್ಲಿಯೂ ಸಬ್ಬತ್ತುಗಳಲ್ಲಿಯೂ ಇಸ್ರಾಯೇಲ್ ವಂಶದವರಿಗೆ ನೇಮಕವಾದ ಎಲ್ಲಾ ಹಬ್ಬಗಳಲ್ಲಿಯೂ ಸರ್ವಾಂಗಹೋಮಪಶು, ಧಾನ್ಯನೈವೇದ್ಯ, ಪಾನನೈವೇದ್ಯ, ಇವುಗಳನ್ನು ಒದಗಿಸುವದು ಪ್ರಭುವಿನ ಕರ್ತವ್ಯ; ಇಸ್ರಾಯೇಲ್ ವಂಶದ ದೋಷನಿವಾರಣೆಗಾಗಿ ಅವನು ದೋಷಪರಿಹಾರಕಯಜ್ಞಪಶು, ಧಾನ್ಯನೈವೇದ್ಯ, ಸರ್ವಾಂಗಹೋಮಪಶು, ಸಮಾಧಾನಯಜ್ಞಪಶು, ಇವುಗಳನ್ನು ಒಪ್ಪಿಸತಕ್ಕದ್ದು.


ರಾಜ್ಯವು ಯೆಹೋವನದೇ; ಎಲ್ಲಾ ಜನಾಂಗಗಳಿಗೂ ಆತನೇ ಒಡೆಯನು.


ನನ್ನ ಪಾಪಗಳನ್ನು ನಿವಾರಿಸಲು ನನ್ನಿಂದಾಗುವದಿಲ್ಲ. ಆದರೆ ನಮ್ಮ ದೋಷಪರಿಹಾರಕನು ನೀನೇ.


ಅಂತ್ಯಕಾಲದಲ್ಲಿ ಯೆಹೋವನ ಮಂದಿರದ ಬೆಟ್ಟವು ಗುಡ್ಡಬೆಟ್ಟಗಳಿಗಿಂತ ಉನ್ನತೋನ್ನತವಾಗಿ ಬೆಳೆದು ನೆಲೆಗೊಳ್ಳುವದು; ಆಗ ಸಕಲದೇಶಗಳವರು ಅದರ ಕಡೆಗೆ ಪ್ರವಾಹಗಳಂತೆ ಬರುವರು.


ಐಗುಪ್ತ ಕುಲದವರು ಹೊರಟು ಬಾರದಿದ್ದರೆ ಪರ್ಣಶಾಲೆಗಳ ಹಬ್ಬವನ್ನು ಆಚರಿಸುವದಕ್ಕೆ ಬಾರದಿರುವ ಜನಾಂಗಗಳಿಗೆ ಯೆಹೋವನು ತಗಲಿಸುವ ಬಾಧೆಯು ಅವರಿಗೂ ತಗಲುವದು.


ಐಗುಪ್ತಕ್ಕೂ ಪರ್ಣಶಾಲೆಗಳ ಹಬ್ಬವನ್ನು ಆಚರಿಸುವದಕ್ಕೆ ಬಾರದಿರುವ ಸಕಲ ಜನಾಂಗಗಳಿಗೂ ಸಂಭವಿಸುವ ದಂಡನೆಯು ಇದೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು