Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 66:24 - ಕನ್ನಡ ಸತ್ಯವೇದವು J.V. (BSI)

24 ಅವರು ಆಚೆ ಹೋಗಿ ನನಗೆ ದ್ರೋಹಮಾಡಿದವರ ಹೆಣಗಳನ್ನು ನೋಡುವರು; ಅವುಗಳನ್ನು ಕಡಿಯುವ ಹುಳವು ಸಾಯುವದಿಲ್ಲ, ಸುಡುವ ಬೆಂಕಿಯು ಆರುವದಿಲ್ಲ; ಅವು ಲೋಕದವರಿಗೆಲ್ಲಾ ಅಸಹ್ಯವಾಗಿರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 “ಅವರು ಹೊರಗೆ ಹೋಗಿ ನನಗೆ ದ್ರೋಹ ಮಾಡಿದವರ ಹೆಣಗಳನ್ನು ನೋಡುವರು; ಅವುಗಳನ್ನು ಕಡಿಯುವ ಹುಳವು ಸಾಯುವುದಿಲ್ಲ, ಸುಡುವ ಬೆಂಕಿಯು ಆರುವುದಿಲ್ಲ; ಅವುಗಳು ಲೋಕದವರಿಗೆಲ್ಲಾ ಅಸಹ್ಯವಾಗಿರುವವು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಅವರು ಹೊರಟುಹೋಗುವಾಗ ನೋಡುವರು ನನಗೆ ದ್ರೋಹವೆಸಗಿದವರ ಹೆಣಗಳನು ಸಾಯುವುದಿಲ್ಲ ಅವುಗಳನ್ನು ಕಡಿಯುವ ಹುಳು ಆರುವುದಿಲ್ಲ ಅವುಗಳನ್ನು ಸುಡುವ ಬೆಂಕಿಯು ಎಲ್ಲ ಮನುಜರಿಗವು ಅಸಹ್ಯವಾಗಿರುವುವು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 “ಅವರು ನನ್ನ ಪವಿತ್ರ ಪಟ್ಟಣದಲ್ಲಿ ವಾಸಿಸುವರು. ಅವರು ಪಟ್ಟಣದಿಂದ ಹೊರಗೆ ಹೋದರೆ ನನಗೆ ವಿರುದ್ಧವಾಗಿ ಪಾಪಮಾಡಿದವರ ಹೆಣಗಳನ್ನು ನೋಡುವರು. ಅವರ ಹೆಣಗಳೊಳಗೆ ಸಾಯದ ಹುಳಗಳಿರುವವು. ಬೆಂಕಿಯು ಆ ಹೆಣಗಳನ್ನು ಸುಟ್ಟುಬಿಡುವುದು. ಆ ಬೆಂಕಿಯು ಆರುವದೇ ಇಲ್ಲ. ಅವು ಜನರ ಮುಂದೆ ಅಸಹ್ಯವಾಗಿರುವವು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 “ಅವರು ಮುಂದೆ ಹೋಗಿ ನನಗೆ ವಿರೋಧವಾಗಿ ದ್ರೋಹಮಾಡಿದ ಮನುಷ್ಯರ ಹೆಣಗಳನ್ನು ನೋಡುವರು. ಅವುಗಳನ್ನು ಕಡಿಯುವ ಹುಳ ಸಾಯುವುದಿಲ್ಲ, ಸುಡುವ ಬೆಂಕಿಯು ಆರುವುದಿಲ್ಲ, ಅವರು ಎಲ್ಲಾ ಮನುಷ್ಯರಿಗೆ ಹೇಸಿಗೆಯಾಗುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 66:24
24 ತಿಳಿವುಗಳ ಹೋಲಿಕೆ  

ನಿನ್ನ ವೈಭವವೂ ವೀಣಾನಾದವೂ ಪಾತಾಳಕ್ಕೆ ತಳ್ಳಲ್ಪಟ್ಟಿವೆ; ನಿನಗೆ ಹುಳಗಳೇ ಹಾಸಿಗೆ, ಕ್ರಿವಿುಗಳೇ ಹೊದಿಕೆ.


ಆದರೆ ಹೇಡಿಗಳು, ನಂಬಿಕೆಯಿಲ್ಲದವರು, ಅಸಹ್ಯವಾದದ್ದರಲ್ಲಿ ಸೇರಿದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳುರಿಯುವ ಕೆರೆಯೇ; ಅದು ಎರಡನೆಯ ಮರಣವು ಎಂದು ನನಗೆ ಹೇಳಿದನು.


ಧೂಳಿನ ನೆಲದೊಳಗೆ ದೀರ್ಘನಿದ್ರೆಮಾಡುವವರಲ್ಲಿ ಅನೇಕರು ಎಚ್ಚತ್ತು ಕೆಲವರು ನಿತ್ಯಜೀವವನ್ನು, ಕೆಲವರು ನಿಂದನ ನಿತ್ಯತಿರಸ್ಕಾರಗಳನ್ನು ಅನುಭವಿಸುವರು.


ಆತನು ಮೊರವನ್ನು ಕೈಯಲ್ಲಿ ಹಿಡಿದಿದ್ದಾನೆ; ತನ್ನ ಕಣದಲ್ಲಿಯ ರಾಶಿಯನ್ನು ತೂರಿ ಹಸನುಮಾಡಿ ತನ್ನ ಗೋದಿಯನ್ನು ಕಣಜದಲ್ಲಿ ತುಂಬಿಕೊಂಡು ಹೊಟ್ಟನ್ನು ಆರದ ಬೆಂಕಿಯಲ್ಲಿ ಸುಟ್ಟುಬಿಡುವನು ಎಂದು ಹೇಳಿದನು.


ಯೆರೂಸಲೇವಿುನ ಮೇಲೆ ಯುದ್ಧಮಾಡಿದ ಸಕಲ ಜನಾಂಗಗಳಿಗೂ ಯೆಹೋವನು ಈ ವ್ಯಾಧಿಯನ್ನು ತಗಲಿಸುವನು - ಹೆಜ್ಜೆಯ ಮೇಲೆ ನಿಂತ ನಿಂತ ಹಾಗೆಯೇ ಅವರ ಮಾಂಸವು ಕೊಳೆತುಹೋಗುವದು, ಕಣ್ಣು ಗುಣಿಯಲ್ಲೇ ಇಂಗುವದು, ನಾಲಿಗೆಯು ಬಾಯಲ್ಲೇ ಕ್ಷಯಿಸುವದು.


ಯೆಹೋವನು ಅಗ್ನಿಯಿಂದಲೂ ತನ್ನ ಖಡ್ಗದಿಂದಲೂ ಎಲ್ಲಾ ನರಜನ್ಮದವರಿಗೂ ನ್ಯಾಯತೀರಿಸುವನು; ಆಗ ಆತನಿಂದ ಹತರಾಗುವವರು ಬಹುಜನ.


ಅದು ಹಗಲಿರುಳೂ ಆರದು, ಅದರ ಹೊಗೆ ನಿರಂತರ ಏರುತ್ತಿರುವದು. ದೇಶವು ತಲತಲಾಂತರಕ್ಕೂ ಹಾಳುಬಿದ್ದಿರುವದು, ಯುಗಯುಗಾಂತರಕ್ಕೂ ಅಲ್ಲಿ ಯಾರೂ ಹಾದು ಹೋಗರು.


ಕರ್ತನಾದ ಯೆಹೋವನು ನಿಮ್ಮನ್ನು ಕೊಂದುಹಾಕುವನು, ನಿಮ್ಮ ಹೆಸರು ನನ್ನ ಆಪ್ತಜನರು ಶಪಿಸುವ ಶಾಪದ ಮಾತಾಗಿಯೇ ಉಳಿಯುವದು; ನಾನು ನನ್ನ ಸೇವಕರಿಗೆ ಹೊಸ ಹೆಸರನ್ನು ಕೊಡುವೆನು.


ನಿಮ್ಮಲ್ಲಿನ ಬಲಿಷ್ಠನೇ ಸಣಬಿನ ಗುಂಜು, ಅವನ ಕಾರ್ಯವೇ ಕಿಡಿ, ಎರಡು ಸೇರಿ ಯಾರೂ ನಂದಿಸಲಾಗದಂತೆ ಸುಟ್ಟುಹೋಗುವವು.


ಆತನು ಜನಾಂಗಗಳಲ್ಲಿ ನ್ಯಾಯಸ್ಥಾಪಿಸುವಾಗ ವಿಸ್ತಾರವಾದ ರಣರಂಗದಲ್ಲಿ ಶತ್ರುಗಳ ಶಿರಸ್ಸನ್ನು ಛೇದಿಸಿ ಹೆಣಗಳಿಂದ ಅದನ್ನು ತುಂಬಿಸುವನು.


ಆದರೆ ದ್ರೋಹಿಗಳೂ ಪಾಪಿಗಳೂ ಒಟ್ಟಾಗಿ ನಾಶನವಾಗುವರು; ಹೌದು, ಯೆಹೋವನನ್ನು ತೊರೆದವರು ನಿರ್ಮೂಲರಾಗುವರು.


ಹೀಗಿರಲು ಯೆಹೋವನು ತನ್ನ ಜನರಲ್ಲಿ ಉರಿಗೊಂಡು ಅವರ ಮೇಲೆ ಕೈಯೆತ್ತಿ ಅವರನ್ನು ಹೊಡೆದು ಬಿಡುವನು; ಆಗ ಬೆಟ್ಟಗಳು ನಡಗುವವು, ಹೆಣಗಳು ಬೀದಿಗಳಲ್ಲಿ ಕಸವಾಗಿ ಬಿದ್ದಿರುವವು. ಇಷ್ಟೆಲ್ಲಾ ನಡೆದರೂ ಆತನ ಕೋಪವು ತೀರದೆ ಕೈಯೆತ್ತಿಯೇ ಇರುವದು.


ಭೂವಿುಯು ಅಮಲೇರಿದವನ ಹಾಗೆ ಓಲಾಡುತ್ತದೆ, ಮಂಚಿಕೆಯಂತೆ ತೂಗಾಡುತ್ತದೆ; ಅದರ ದ್ರೋಹವು ಅದಕ್ಕೆ ಭಾರವಾಗಿದೆ, ಅದು ಬಿದ್ದು ಹೋಗುತ್ತಿದೆ, ತಿರಿಗಿ ಏಳುವದೇ ಇಲ್ಲ.


ಯೆಹೋವನೇ, ನೀನು ಕೈಯೆತ್ತಿದ್ದರೂ ಅವರು ಲಕ್ಷಿಸರು. ಆದರೆ ನಿನ್ನ ಸ್ವಜನಾಭಿಮಾನವನ್ನು ನೋಡಿ ನಾಚಿಕೆಪಡುವರು; ಹೌದು, ಆ ನಿನ್ನ ವಿರೋಧಿಗಳನ್ನು ಅಗ್ನಿಯು ದಹಿಸಿಬಿಡುವದು.


ಅವರಲ್ಲಿ ಹತರಾದವರು ಬಿಸಾಡಲ್ಪಡುವರು, ಅವರ ಶವಗಳ ದುರ್ವಾಸನೆಯು ಮೇಲಕ್ಕೆ ಬಡಿಯುವದು; ಅವರ ರಕ್ತಪ್ರವಾಹದಿಂದ ಗುಡ್ಡಗಳು ಕರಗುವವು.


ನನ್ನ ರಕ್ಷಣ ಧರ್ಮದ ಕಾರ್ಯವೋ ಶಾಶ್ವತವಾಗಿ ನಿಲ್ಲುವದು, ನನ್ನ ವಿಮೋಚನ ಕ್ರಿಯೆಯು ತಲತಲಾಂತರಕ್ಕೂ ನೆಲೆಯಾಗಿರುವದು.


ದುಷ್ಟರಿಗೆ ಸಮಾಧಾನವೇ ಇಲ್ಲ ಎಂದು ಯೆಹೋವನು ನುಡಿಯುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು