Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 66:3 - ಕನ್ನಡ ಸತ್ಯವೇದವು J.V. (BSI)

3 ಹೋರಿಯನ್ನು ವಧಿಸುವವನು ನರಬಲಿಯನ್ನು ಕೊಡುತ್ತಾನೆ; ಕುರಿಯನ್ನು ಕಡಿಯುವವನು ನಾಯಿಯ ಕತ್ತನ್ನು ಮುರಿಯುತ್ತಾನೆ; ನೈವೇದ್ಯಮಾಡುವವನು ಹಂದಿಯ ರಕ್ತವನ್ನು ಅರ್ಪಿಸುತ್ತಾನೆ; ಧೂಪಹಾಕುವವನು ವಿಗ್ರಹಾರಾಧನೆ ಮಾಡುತ್ತಾನೆ; ಇವರು ಮನಸ್ಸಿಗೆ ಬಂದ ಮಾರ್ಗಗಳನ್ನು ಆರಿಸಿಕೊಂಡು ತಮ್ಮ ಅಸಹ್ಯಕಾರ್ಯಗಳಲ್ಲಿ ಮನಃಪೂರ್ವಕವಾಗಿ ಆನಂದಿಸುತ್ತಾರೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಹೋರಿಯನ್ನು ವಧಿಸುವವನು ನರಬಲಿಯನ್ನು ಕೊಡುತ್ತಾನೆ; ಕುರಿಯನ್ನು ಕಡಿಯುವವನು ನಾಯಿಯ ಕತ್ತನ್ನು ಮುರಿಯುತ್ತಾನೆ; ನೈವೇದ್ಯಮಾಡುವವನು ಹಂದಿಯ ರಕ್ತವನ್ನು ಅರ್ಪಿಸುತ್ತಾನೆ; ಧೂಪಹಾಕುವವನು ವಿಗ್ರಹಾರಾಧನೆ ಮಾಡುತ್ತಾನೆ; ಇವರು ಮನಸ್ಸಿಗೆ ಬಂದ ಮಾರ್ಗಗಳನ್ನು ಆರಿಸಿಕೊಂಡು ತಮ್ಮ ಅಸಹ್ಯಕಾರ್ಯಗಳಲ್ಲಿ ಮನಃಪೂರ್ವಕವಾಗಿ ಆನಂದಿಸುತ್ತಾರೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 “ಜನರು ಮನಬಂದ ಮಾರ್ಗವನ್ನು ಅನುಸರಿಸುತ್ತಾರೆ; ತಮ್ಮ ಅಸಹ್ಯಕಾರ್ಯಗಳಲ್ಲಿ ಅತ್ಯಾನಂದಪಡುತ್ತಾರೆ. ಹೋರಿಯನ್ನು ಬಲಿಕೊಡುವವನು ನರಬಲಿಯನ್ನು ಕೊಡುತ್ತಾನೆ; ಕುರಿ ಕಡಿಯುವವನು ನಾಯಿಯ ಕತ್ತನ್ನು ಮುರಿಯುತ್ತಾನೆ. ಕಾಣಿಕೆ ಒಪ್ಪಿಸುವವನು ಹಂದಿಯ ನೆತ್ತರನ್ನು ಅರ್ಪಿಸುತ್ತಾನೆ; ಧೂಪಾರತಿ ಎತ್ತುವವನು ವಿಗ್ರಹಾರಾಧನೆಯನ್ನು ಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಕೆಲವರು ಒಂದು ಕಡೆಯಲ್ಲಿ ಹೋರಿಯನ್ನು ಯಜ್ಞಮಾಡುವರು. ಇನ್ನೊಂದು ಕಡೆಯಲ್ಲಿ ಜನರಿಗೆ ಹಿಂಸೆ ಕೊಡುವರು. ಅವರು ಬಲಿಯರ್ಪಿಸಲು ಕುರಿಗಳನ್ನು ಕೊಯ್ಯುವರು, ಅದೇ ಸಮಯದಲ್ಲಿ ನಾಯಿಗಳ ಕುತ್ತಿಗೆಗಳನ್ನು ಮುರಿಯುವರು. ಅವರು ನನಗೆ ಹಂದಿಗಳ ರಕ್ತವನ್ನು ಅರ್ಪಿಸುವರು. ನನಗೆ ಧೂಪವನ್ನು ಹಾಕಲು ಯಾವಾಗಲೂ ತಯಾರಿರುವರು. ಅದೇ ಸಮಯದಲ್ಲಿ ಅಯೋಗ್ಯವಾದ ತಮ್ಮ ವಿಗ್ರಹಗಳನ್ನು ಪ್ರೀತಿಸುವರು. ಅವರು ನನ್ನ ಮಾರ್ಗವನ್ನು ಅನುಸರಿಸದೆ ತಮ್ಮ ಮಾರ್ಗವನ್ನು ಆರಿಸಿಕೊಳ್ಳುತ್ತಾರೆ. ಅವರು ತಮ್ಮ ಭಯಂಕರವಾದ ವಿಗ್ರಹಗಳನ್ನು ಪೂಜಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಎತ್ತನ್ನು ಕೊಂದುಹಾಕುವವನು ಮನುಷ್ಯನನ್ನು ಹತ್ಯೆ ಮಾಡುವವನ ಹಾಗಿದ್ದಾನೆ. ಕುರಿಮರಿಯನ್ನು ಬಲಿ ಕೊಡುವವನು, ನಾಯಿಯ ಕುತ್ತಿಗೆಯನ್ನು ಕಡಿಯುವವನ ಹಾಗಿದ್ದಾನೆ. ಕಾಣಿಕೆಯನ್ನು ಅರ್ಪಿಸುವವನು, ಹಂದಿಯ ರಕ್ತವನ್ನು ಅರ್ಪಿಸುವವನ ಹಾಗಿದ್ದಾನೆ. ಧೂಪವನ್ನು ಹಾಕುವವನು, ವಿಗ್ರಹವನ್ನು ಪೂಜಿಸುವವನ ಹಾಗಿದ್ದಾನೆ. ಹೀಗೆ, ಅವರು ಸ್ವಂತ ಮಾರ್ಗಗಳನ್ನು ಆಯ್ದುಕೊಂಡಿದ್ದಾರೆ. ಅವರ ಪ್ರಾಣವು ಅವರ ಅಸಹ್ಯಗಳಲ್ಲಿ ಹರ್ಷಿಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 66:3
19 ತಿಳಿವುಗಳ ಹೋಲಿಕೆ  

ದುಷ್ಟರ ಯಜ್ಞ ಯೆಹೋವನಿಗೆ ಅಸಹ್ಯ; ಶಿಷ್ಟರ ಬಿನ್ನಪ ಆತನಿಗೆ ಒಪ್ಪಿತ.


ತೋಟಗಳೊಳಗೆ ಪ್ರವೇಶಿಸುವದಕ್ಕೆ ತಮ್ಮ ಮಧ್ಯದಲ್ಲಿನ ಒಬ್ಬನ ಅಂಗಾಭಿನಯವನ್ನು ಅನುಸರಿಸಿ ತಮ್ಮನ್ನು ಶುದ್ಧೀಕರಿಸಿ ಪವಿತ್ರಮಾಡಿಕೊಂಡು ಹಂದಿಯ ಮಾಂಸವನ್ನೂ ಅಶುದ್ಧಪದಾರ್ಥವನ್ನೂ ಇಲಿಯನ್ನೂ ತಿನ್ನುವವರು ಒಟ್ಟಿಗೆ ಕೊನೆಗಾಣುವರು ಎಂದು ಯೆಹೋವನು ನುಡಿಯುತ್ತಾನೆ.


ನೀವೆಲ್ಲರೂ ಕೊಲೆಗೊಳಗಾಗಿ ಬೀಳುವಿರಿ; ಏಕಂದರೆ ನಾನು ಕೂಗಲು ನೀವು ಉತ್ತರಕೊಡಲಿಲ್ಲ. ನಾನು ಹೇಳಲು ನೀವು ಕೇಳಲಿಲ್ಲ; ನನ್ನ ಚಿತ್ತಕ್ಕೆ ವಿರುದ್ಧವಾದದ್ದನ್ನು ನಡಿಸಿ ನನಗೆ ಇಷ್ಟವಲ್ಲದ್ದನ್ನು ಆರಿಸಿಕೊಂಡಿರಿ.


ಅದನ್ನು ಆರೋನನ ವಂಶದವರಾದ ಯಾಜಕರ ಬಳಿಗೆ ತರಬೇಕು. ಯಾಜಕನು ದೇವರಿಗೆ ನೈವೇದ್ಯವಾದದ್ದನ್ನು ಸೂಚಿಸುವದಕ್ಕಾಗಿ ಆ ಎಣ್ಣೆ ಬೆರಸಿದ ಹಿಟ್ಟಿನಲ್ಲಿ ಒಂದು ಹಿಡಿಯನ್ನೂ ಧೂಪವೆಲ್ಲವನ್ನೂ ತೆಗೆದುಕೊಂಡು ಯಜ್ಞವೇದಿಯ ಮೇಲೆ ಹೋಮ ಮಾಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಸುವಾಸನೆಯನ್ನುಂಟುಮಾಡುವದು.


ದುಷ್ಟರ ಯಜ್ಞವೇ ಅಸಹ್ಯ, ಅದನ್ನು ದುರ್ಬುದ್ಧಿಯಿಂದ ಅರ್ಪಿಸುವದು ಮತ್ತೂ ಅಸಹ್ಯ.


ಸೂಳೆತನದಿಂದಾಗಲಿ ಗುದಮೈಥುನದಿಂದಾಗಲಿ ಸಂಪಾದಿಸಿದ ಹಣವನ್ನು ಹರಕೆಯಾಗಿ ನಿಮ್ಮ ದೇವರಾದ ಯೆಹೋವನ ಮಂದಿರದೊಳಗೆ ತರಲೇಬಾರದು; ಈ ಎರಡೂ ಆತನಿಗೆ ಅಸಹ್ಯ.


ಹಂದಿಯ ಗೊರಸು ಸೀಳಿದ್ದರೂ ಅದು ಮೆಲಕುಹಾಕುವದಿಲ್ಲವಾದದರಿಂದ ಅದು ನಿಮಗೆ ಅಶುದ್ಧ. ಇವುಗಳ ಮಾಂಸವನ್ನು ನೀವು ತಿನ್ನಕೂಡದು; ಇವುಗಳ ಹೆಣವನ್ನು ಮುಟ್ಟಕೂಡದು.


ಹೋಗಿ ನೀವು ಆರಿಸಿಕೊಂಡ ದೇವತೆಗಳಿಗೆ ಮೊರೆಯಿಡಿರಿ; ಅವು ನಿಮ್ಮ ಈ ಇಕ್ಕಟ್ಟಿನಲ್ಲಿ ಸಹಾಯ ಮಾಡಲಿ ಅಂದನು.


ನನ್ನ ಜನರು ಲಾಭವನ್ನು ದೋಚಿಕೊಂಡ ಅನ್ಯಾಯವನ್ನು ನಾನು ನೋಡಿ ಕೋಪಗೊಂಡು ಅವರನ್ನು ಹೊಡೆದೆನು, [ನನ್ನ ಮುಖವನ್ನು] ಮುಚ್ಚಿಕೊಂಡು ರೋಷಭರಿತನಾಗಿದ್ದೆನು; ಅವರೋ ತಿರುಗಿಕೊಂಡು ಮನಸ್ಸಿಗೆ ತೋರಿದ ಹಾಗೆಯೇ ನಡೆಯುತ್ತಾ ಬಂದಿದ್ದಾರೆ.


ಜನರು ಅನ್ಯದೇವತೆಗಳನ್ನು ಆರಿಸಿಕೊಂಡಿದ್ದರು; ಯುದ್ಧವು ಊರುಬಾಗಲವರೆಗೆ ಬಂದಿತ್ತು. ಇಸ್ರಾಯೇಲ್ಯರ ನಾಲ್ವತ್ತು ಸಾವಿರ ಸೈನಿಕರಲ್ಲಿ ಒಬ್ಬನಿಗೂ ಗುರಾಣಿ ಬರ್ಜಿಗಳು ಇದ್ದಿಲ್ಲ.


ನಾನು ಒಂದು ಭಾಗವನ್ನು ಬೆಂಕಿಯಲ್ಲಿ ಉರಿಸಿದೆನು, ಹೌದು, ಅದರ ಕೆಂಡದಲ್ಲಿ ರೊಟ್ಟಿಮಾಡಿ ಮಾಂಸ ಸುಟ್ಟು ತಿಂದೆನಲ್ಲಾ; ವಿುಕ್ಕದ್ದನ್ನು ನಾನು ಬೊಂಬೆ ಮಾಡಲೋ, ಮರದ ತುಂಡಿಗೆ ಅಡ್ಡಬೀಳಬಹುದೋ, ಅಂದುಕೊಳ್ಳುವಷ್ಟು ಜ್ಞಾನ ವಿವೇಕಗಳು ಯಾರಿಗೂ ಇಲ್ಲ, ಯಾರೂ ಇದನ್ನು ಮನಸ್ಸಿಗೆ ತಾರರು.


ನನ್ನನ್ನು ತೊರೆದು ಮನಸ್ಸುಬಂದ ಹಾಗೆ ದುರ್ಮಾರ್ಗದಲ್ಲಿ ನಡೆಯುವ ಜನರನ್ನು ನಾನು ದಿನವೆಲ್ಲಾ ಕೈ ಚಾಚಿ ಕರೆದೆನು.


ನೀವು ಶೆಬದ ಧೂಪವನ್ನೂ ದೂರದೇಶದ ಒಳ್ಳೆ ಬಜೆಯನ್ನೂ ನನಗೆ ಅರ್ಪಿಸುವದರಿಂದ ಏನು ಪ್ರಯೋಜನ? ನಿಮ್ಮ ಹೋಮಗಳು ನನಗೆ ಮೆಚ್ಚಿಕೆಯಲ್ಲ, ನಿಮ್ಮ ಯಜ್ಞಗಳು ನನಗೆ ಇಷ್ಟವಲ್ಲ.


ಆ ಕಾಲದಲ್ಲಿ ಇಸ್ರಾಯೇಲ್ಯರೊಳಗೆ ಅರಸನಿರಲಿಲ್ಲ; ಪ್ರತಿಯೊಬ್ಬನೂ ತನ್ನ ಮನಸ್ಸಿಗೆ ಬಂದಂತೆ ನಡೆಯುತ್ತಿದ್ದನು.


ನಾವೆಲ್ಲರೂ ಕುರಿಗಳಂತೆ ದಾರಿತಪ್ಪಿ ತೊಳಲುತ್ತಿದ್ದೆವು, ಪ್ರತಿಯೊಬ್ಬನೂ ತನ್ನ ತನ್ನ ದಾರಿಯನ್ನು ಹಿಡಿಯುತ್ತಿದ್ದನು; ನಮ್ಮೆಲ್ಲರ ದೋಷಫಲವನ್ನೂ ಯೆಹೋವನು ಅವನ ಮೇಲೆ ಹಾಕಿದನು.


ಆಗ ಹಗ್ಗಾಯನು ಆ ಪ್ರಸ್ತಾಪವೆತ್ತಿ ಹೀಗಂದನು - ಯೆಹೋವನು ಇಂತೆನ್ನುತ್ತಾನೆ - ಅದರಂತೆ ಈ ಪ್ರಜೆಯು, ಅದರಂತೆ ಈ ಜನಾಂಗವು, ಅದರಂತೆ ಇವರು ಕೈ ಹಾಕುವ ಎಲ್ಲಾ ಕೆಲಸವು, ಅಲ್ಲಿ ತಂದಿಡುವ ನ್ಯೆವೇದ್ಯವು ನನಗೆ ಅಶುದ್ಧವೇ ಸರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು