ಯೆಶಾಯ 7:13 - ಕನ್ನಡ ಸತ್ಯವೇದವು J.V. (BSI)13 ಅದಕ್ಕೆ [ಯೆಶಾಯನು] ಹೀಗೆ ಹೇಳಿದನು - ದಾವೀದನ ಮನೆತನದವರೇ, ಕೇಳಿರಿ! ಮನುಷ್ಯರನ್ನು ಬೇಸರಗೊಳಿಸುವದು ಅಷ್ಟು ದೊಡ್ಡದಲ್ಲವೆಂದೆಣಿಸಿ ನನ್ನ ದೇವರನ್ನೂ ಬೇಸರಗೊಳಿಸುವಿರಾ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಅದಕ್ಕೆ ಯೆಶಾಯನು ಹೀಗೆ ಹೇಳಿದನು, “ದಾವೀದನ ಮನೆತನದವರೇ ಕೇಳಿರಿ, ಮನುಷ್ಯರನ್ನು ಬೇಸರಗೊಳಿಸುವುದು ಅಷ್ಟು ದೊಡ್ಡದಲ್ಲವೆಂದೆಣಿಸಿ ನನ್ನ ದೇವರನ್ನು ಸಹ ಬೇಸರಗೊಳಿಸುವಿರಾ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಆಗ ಯೆಶಾಯನು: “ದಾವೀದ ವಂಶಜರೇ, ಕೇಳಿರಿ, ಮಾನವರನ್ನು ಕೆಣಕಿದ್ದು ಸಾಲದೆಂದು ದೇವರನ್ನೇ ಕೆಣಕುತ್ತಿರುವಿರಾ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಆಗ ಯೆಶಾಯನು ಹೇಳಿದ್ದೇನೆಂದರೆ, “ದಾವೀದನ ಮನೆತನದವರೇ, ಕಿವಿಗೊಟ್ಟು ಕೇಳಿರಿ. ನೀವು ಜನರ ತಾಳ್ಮೆಯನ್ನು ಪರೀಕ್ಷಿಸುತ್ತೀರಿ. ಆದರೆ ಅದು ನಿಮಗೆ ದೊಡ್ಡ ವಿಷಯವಲ್ಲ. ಆದರೆ ಈಗ ನೀವು ನನ್ನ ದೇವರ ತಾಳ್ಮೆಯನ್ನು ಪರೀಕ್ಷಿಸುತ್ತಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಅದಕ್ಕೆ ಯೆಶಾಯನು, “ದಾವೀದನ ವಂಶದವರೇ! ಈಗ ಕೇಳಿರಿ, ಮನುಷ್ಯರ ತಾಳ್ಮೆಯನ್ನು ಪರೀಕ್ಷಿಸುವುದು ಸಾಕಾಗುವುದಿಲ್ಲವೇ? ನೀವು ನನ್ನ ದೇವರ ತಾಳ್ಮೆಯನ್ನು ಪರೀಕ್ಷಿಸುವಿರಾ? ಅಧ್ಯಾಯವನ್ನು ನೋಡಿ |
ಆಗ ತಪ್ಪಿಸಿಕೊಂಡು ಸೆರೆಗೆ ಒಯ್ಯಲ್ಪಟ್ಟು ಜನಾಂಗಗಳ ಮಧ್ಯೆ ವಾಸಿಸುವ ನಿಮ್ಮವರು ಅನ್ಯದೇವತೆಗಳಲ್ಲಿನ ಮೋಹದಿಂದ ನನ್ನನ್ನು ತೊರೆದ ತಮ್ಮ ಹೃದಯವನ್ನೂ ತಮ್ಮ ಬೊಂಬೆಗಳ ಮೇಲಣ ಕಾಮದಿಂದ ದೇವದ್ರೋಹಮಾಡಿದ ತಮ್ಮ ಕಣ್ಣುಗಳನ್ನೂ ಭಂಗಪಡಿಸಿದವನು ನಾನೇ ಎಂಬದಾಗಿ ನನ್ನನ್ನು ಜ್ಞಾಪಕಮಾಡಿಕೊಂಡು ತಾವು ಬಹಳ ಅಸಹ್ಯಕಾರ್ಯಗಳನ್ನು ನಡಿಸಿ ಕೆಟ್ಟತನವನ್ನು ಮಾಡಿದ್ದೇವೆಂದು ತಮ್ಮನ್ನು ತಾವೇ ಹೇಸಿಕೊಳ್ಳುವರು.